ಫ್ಯಾಕ್ಟ್ ಶೀಟ್: 2024 ಕ್ವಾಡ್ ಲೀಡರ್ಸ್ ಶೃಂಗಸಭೆ

September 22nd, 12:06 pm

ಸೆಪ್ಟೆಂಬರ್ 21, 2024 ರಂದು, ಅಧ್ಯಕ್ಷ ಶ್ರೀ ಜೋಸೆಫ್ ಆರ್. ಬೈಡನ್, ಜೂನಿಯರ್ ಅವರು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಶ್ರೀ ಆಂಥೋನಿ ಅಲ್ಬನೀಸ್, ಜಪಾನ್ ನ ಪ್ರಧಾನಮಂತ್ರಿ ಶ್ರೀ ಕಿಶಿದಾ ಫ್ಯೂಮಿಯೊ ಮತ್ತು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಲವೇರ್ನ ವಿಲ್ಮಿಂಗ್ಟನ್ನಲ್ಲಿ ನಾಲ್ಕನೇ ಕ್ವಾಡ್ ನಾಯಕರುಗಳ ಶೃಂಗಸಭೆಗಾಗಿ ಸಭೆಸೇರಿದರು.

ಆಸ್ಟ್ರೇಲಿಯಾ, ಭಾರತ, ಜಪಾನ್ ಮತ್ತು ಅಮೆರಿಕ ನಾಯಕರಿಂದ ವಿಲ್ಮಿಂಗ್ಟನ್ ಘೋಷಣೆ ಜಂಟಿ ಹೇಳಿಕೆ

September 22nd, 11:51 am

ಇಂದು, ನಾವು-ಆಸ್ಟ್ರೇಲಿಯದ ಪ್ರಧಾನಿ ಆಂಥೋನಿ ಅಲ್ಬನೀಸ್, ಭಾರತದ ಪ್ರಧಾನಿ ನರೇಂದ್ರ ಮೋದಿ, ಜಪಾನ್‌ನ ಪ್ರಧಾನಿ ಕಿಶಿದಾ ಫ್ಯೂಮಿಯೊ ಮತ್ತು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್. ಬಿಡೆನ್, ಅವರು ನಾಲ್ಕನೇ ಕ್ವಾಡ್ ನಾಯಕರ ಶೃಂಗಸಭೆ ಸಂದರ್ಭದಲ್ಲಿ ಭೇಟಿಯಾದರು. ವಿಲ್ಮಿಂಗ್ಟನ್‌ನ ಡೆಲವೇರ್‌ನಲ್ಲಿ ಅಧ್ಯಕ್ಷ ಬಿಡೆನ್ ಈ ಸಭೆಯನ್ನು ಆಯೋಜಿಸಿದ್ದರು.

ಕ್ವಾಡ್ ನಾಯಕರ ಕ್ಯಾನ್ಸರ್‌ ಮೂನ್‌ಶಾಟ್‌ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

September 22nd, 06:25 am

ಈ ಪ್ರಮುಖ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ನಾನು ಅಧ್ಯಕ್ಷ ಬೈಡೆನ್ ಅವರನ್ನು ಅಭಿನಂದಿಸುತ್ತೇನೆ. ಇದು ಕೈಗೆಟುಕುವ, ಸುಲಭವಾಗಿ ಲಭ್ಯವಿರುವ ಮತ್ತು ಗುಣಮಟ್ಟದ ಆರೋಗ್ಯ ರಕ್ಷಣೆಗೆ ನಮ್ಮ ಹಂಚಿಕೆಯ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ, ನಾವು ಇಂಡೋ-ಪೆಸಿಫಿಕ್‌ಗಾಗಿ ಕ್ವಾಡ್ ಲಸಿಕೆ ಉಪಕ್ರಮ ವನ್ನು ಆರಂಭಿಸಿದ್ದೇವೆ. ಮತ್ತು ಕ್ವಾಡ್ ನಲ್ಲಿ ಗರ್ಭಕಂಠದ ಕ್ಯಾನ್ಸರ್‌ ನಂತಹ ಸವಾಲನ್ನು ಎದುರಿಸಲು ನಾವು ಒಟ್ಟಾಗಿ ನಿರ್ಧರಿಸಿರುವುದು ನನಗೆ ಸಂತೋಷ ತಂದಿದೆ.

ಕ್ವಾಡ್ ಕ್ಯಾನ್ಸರ್ ಮೂನ್‌ ಶಾಟ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ

September 22nd, 06:10 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಲವೇರ್‌ ನ ವಿಲ್ಮಿಂಗ್ಟನ್‌ ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯ ಸಂದರ್ಭದಲ್ಲಿ ಅದ್ಯಕ್ಷರಾದ ಶ್ರೀ ಜೋಸೆಫ್ ಆರ್ ಬೈಡನ್ ಜೂನಿಯರ್ ಅವರು ಆಯೋಜಿಸಿದ್ದ ಕ್ವಾಡ್ ಕ್ಯಾನ್ಸರ್ ಮೂನ್‌ ಶಾಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಜಪಾನ್ ಪ್ರಧಾನಮಂತ್ರಿಯೊಂದಿಗೆ ಸಭೆ ನಡೆಸಿದ ಪ್ರಧಾನಮಂತ್ರಿ

September 22nd, 06:01 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಸೆಪ್ಟೆಂಬರ್ 21 ರಂದು ಅಮೆರಿಕದ ಡೆಲವೇರ್‌ನ ವಿಲ್ಮಿಂಗ್‌ಟನ್‌ನಲ್ಲಿ ಕ್ವಾಡ್ ನಾಯಕರ ಶೃಂಗಸಭೆಯ ಹಿನ್ನೆಲೆಯಲ್ಲಿ ಜಪಾನ್‌ನ ಪ್ರಧಾನ ಮಂತ್ರಿ ಶ್ರೀ ಫ್ಯುಮಿಯೊ ಕಿಶಿಡಾ ಅವರೊಂದಿಗೆ ಸಮಾಲೋಚನೆ ನಡೆಸಿದರು.

ಡೆಲಾವೇರ್ ನ ವಿಲ್ಮಿಂಗ್ಟನ್ ನಲ್ಲಿ ನಡೆದ ಆರನೇ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು

September 22nd, 05:21 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಸೆಪ್ಟೆಂಬರ್ 21ರಂದು ಡೆಲಾವೇರ್ ನ ವಿಲ್ಮಿಂಗ್ಟನ್ ನಲ್ಲಿ ನಡೆದ ಆರನೇ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಅಮೆರಿಕದ ಅಧ್ಯಕ್ಷ ಘನತೆವೆತ್ತ ಶ್ರೀ ಜೋಸೆಫ್ ಆರ್. ಬೈಡನ್, ಆಸ್ಟ್ರೇಲಿಯಾದ ಕಿರಿಯ ಪ್ರಧಾನಿ ಗೌರವಾನ್ವಿತ ಶ್ರೀ ಆಂಥೋನಿ ಅಲ್ಬನೀಸ್ ಮತ್ತು ಜಪಾನ್ ಪ್ರಧಾನಿ ಗೌರವಾನ್ವಿತ ಶ್ರೀ ಫ್ಯೂಮಿಯೊ ಕಿಶಿಡಾ ಅವರೂ ಭಾಗವಹಿಸಿದ್ದರು.

ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾಕ್ಕೆ ಭೇಟಿ ನೀಡುವ ಮುನ್ನ ಪ್ರಧಾನ ಮಂತ್ರಿಯವರ ನಿರ್ಗಮನ ಹೇಳಿಕೆ

September 21st, 04:15 am

ಯುಎನ್ ಜನರಲ್ ಅಸೆಂಬ್ಲಿಯಲ್ಲಿ ಭವಿಷ್ಯದ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದೇನೆ.

ಜಿ 7 ಶೃಂಗಸಭೆಯ ಭಾಗವಾಗಿ ಜಪಾನ್ ಪ್ರಧಾನಮಂತ್ರಿಯವರೊಂದಿಗೆ ಪ್ರಧಾನಮಂತ್ರಿ ಅವರ ಸಭೆ

June 14th, 11:53 pm

ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ನೀಡಿದ ಅಭಿನಂದನಾ ಹಾರೈಕೆಗಳಿಗಾಗಿ ಪ್ರಧಾನಮಂತ್ರಿ ಮೋದಿ ಅವರು, ಪ್ರಧಾನಮಂತ್ರಿ ಕಿಶಿಡಾ ಅವರಿಗೆ ಧನ್ಯವಾದ ಅರ್ಪಿಸಿದರು. ಜಪಾನ್ ನೊಂದಿಗಿನ ದ್ವಿಪಕ್ಷೀಯ ಸಂಬಂಧಗಳು ತಮ್ಮ ಮೂರನೇ ಅವಧಿಯಲ್ಲಿಯೂ ಆದ್ಯತೆಯನ್ನು ಪಡೆಯುತ್ತದೆ ಎಂದು ಅವರು ದೃಢಪಡಿಸಿದರು. ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಸಹಭಾಗಿತ್ವವು 10ನೇ ವರ್ಷದಲ್ಲಿದೆ ಎಂದು ಇಬ್ಬರೂ ನಾಯಕರು ಗಮನಿಸಿದರು ಮತ್ತು ಸಂಬಂಧದಲ್ಲಿ ಆಗಿರುವ ಪ್ರಗತಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಸಹಕಾರವನ್ನು ಮತ್ತಷ್ಟು ತೀವ್ರಗೊಳಿಸುವ ಮಾರ್ಗಗಳು, ಹೊಸ ಮತ್ತು ಉದಯೋನ್ಮುಖ ಕ್ಷೇತ್ರಗಳನ್ನು ಸೇರಿಸುವುದು ಮತ್ತು ಬಿ 2 ಬಿ ಮತ್ತು ಪಿ 2 ಪಿ ಸಹಕಾರವನ್ನು ಬಲಪಡಿಸುವ ಮಾರ್ಗಗಳ ಬಗ್ಗೆ ಅವರು ಚರ್ಚಿಸಿದರು.

PM congratulates Japan for soft Moon landing

January 20th, 11:00 pm

The Prime Minister, Shri Narendra Modi, congratulated Japan Prime Minister Fumio Kishida for JAXA's first soft Moon landing.

ಜಪಾನ್ ಪ್ರಧಾನಿ ಜತೆ ಪ್ರಧಾನ ಮಂತ್ರಿ ಮಾತುಕತೆ

September 09th, 05:40 pm

ಆಯಾ G-20 ಮತ್ತು G-7 ಅಧ್ಯಕ್ಷತೆಯಲ್ಲಿ ತಮ್ಮ ಆದ್ಯತೆಗಳ ಕುರಿತು ವರ್ಷವಿಡೀ ಉಭಯ ದೇಶಗಳ ರಚನಾತ್ಮಕ ಸಂವಾದದ ಕುರಿತು ಸಭೆಯಲ್ಲಿ ಉಭಯ ನಾಯಕರು ಮಾತುಕತೆ ನಡೆಸಿದರು.

ಕ್ವಾಡ್‌ ನಾಯಕರ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿಯವರ ಹೇಳಿಕೆಯ ಕನ್ನಡ ಅನುವಾದ

May 20th, 05:16 pm

ಇಂದು ಈ ಕ್ವಾಡ್ ಶೃಂಗಸಭೆಯಲ್ಲಿ ಸ್ನೇಹಿತರೊಂದಿಗೆ ಭಾಗವಹಿಸಲು ನನಗೆ ಸಂತೋಷವಾಗಿದೆ. ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಖಾತ್ರಿಪಡಿಸುವ ಪ್ರಮುಖ ವೇದಿಕೆಯಾಗಿ ಕ್ವಾಡ್ ಗುಂಪು ತನ್ನನ್ನು ಸ್ಥಾಪಿಸಿಕೊಂಡಿದೆ. ಇಂಡೋ-ಪೆಸಿಫಿಕ್ ಪ್ರದೇಶವು ಜಾಗತಿಕ ವ್ಯಾಪಾರ, ನಾವೀನ್ಯತೆ ಮತ್ತು ಬೆಳವಣಿಗೆಯ ಎಂಜಿನ್ ಎಂಬುದರಲ್ಲಿ ಸಂದೇಹವಿಲ್ಲ. ಇಂಡೋ-ಪೆಸಿಫಿಕ್‌ನ ಭದ್ರತೆ ಮತ್ತು ಯಶಸ್ಸು ಈ ಪ್ರದೇಶಕ್ಕೆ ಮಾತ್ರವಲ್ಲ, ಜಗತ್ತಿಗೆ ಮುಖ್ಯವಾಗಿದೆ ಎಂದು ನಾವು ಸರ್ವಾನುಮತದಿಂದ ಒಪ್ಪುತ್ತೇವೆ. ಹಂಚಿಕೆಯ ಪ್ರಜಾಸತ್ತಾತ್ಮಕ ಮೌಲ್ಯಗಳ ಆಧಾರದ ಮೇಲೆ ರಚನಾತ್ಮಕ ಕಾರ್ಯಸೂಚಿಯೊಂದಿಗೆ, ನಾವು ಮುಂದೆ ಸಾಗುತ್ತಿದ್ದೇವೆ.

ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿ ಭಾಗಿ

May 20th, 05:15 pm

ಈ ಎಲ್ಲಾ ನಾಯಕರು ಇಂಡೋ-ಪೆಸಿಫಿಕ್‌ ವಲಯದ ಬೆಳವಣಿಗೆಗಳ ಬಗ್ಗೆ ಫಲಪ್ರದ ಸಂವಾದ ನಡೆಸಿದರು, ಇದು ಅವರ ಹಂಚಿತ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಕಾರ್ಯತಂತ್ರ ಹಿತಾಸಕ್ತಿಗಳನ್ನು ದೃಢಪಡಿಸಿತು. ಮುಕ್ತ, ನ್ಯಾಯಸಮ್ಮತ ಮತ್ತು ಎಲ್ಲರನ್ನೂ ಒಳಗೊಂಡ ಇಂಡೋ-ಪೆಸಿಫಿಕ್‌ ವಲಯದ ಅಭಿವೃದ್ಧಿಯ ದೃಷ್ಟಿಕೋನದಿಂದ ಮಾರ್ಗದರ್ಶಿಸಲ್ಪಟ್ಟ ಸಂವಾದ ಅದಾಗಿತ್ತು. ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ ಮತ್ತು ವಿವಾದಗಳ ಶಾಂತಿಯುತ ಪರಿಹಾರದ ತತ್ವಗಳನ್ನು ಎತ್ತಿಹಿಡಿಯುವ ಪ್ರಾಮುಖ್ಯತೆಯನ್ನು ಈ ನಾಯಕರು ಪುನರುಚ್ಚರಿಸಿದರು. ಈ ಸಂದರ್ಭದಲ್ಲಿ, ನಾಯಕರು “ಇಂಡೋ-ಪೆಸಿಫಿಕ್‌ ವಲಯದ ಅಭಿವೃದ್ಧಿಗಾಗಿ ಅಸ್ತಿತ್ವದಲ್ಲಿರುವ ಪಾಲುದಾರಿಕೆ - ಕ್ವಾಡ್ ನಾಯಕರ ಮುನ್ನೋಟ ಹೇಳಿಕೆ” ಬಿಡುಗಡೆ ಮಾಡಿದರು, ಇದು ಅವರ ತತ್ವದ ಕಾರ್ಯವಿಧಾನವನ್ನು ಸ್ಪಷ್ಟಪಡಿಸುತ್ತದೆ.

ಜಪಾನ್ ಪ್ರಧಾನಿಯವರೊಂದಿಗೆ ಪ್ರಧಾನ ಮಂತ್ರಿಯವರ ಸಭೆ

May 20th, 08:16 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 20 ಮೇ 2023 ರಂದು ಹಿರೋಷಿಮಾದಲ್ಲಿ ಜಿ-7 ಶೃಂಗಸಭೆಯ ಸಂದರ್ಭದಲ್ಲಿ ಜಪಾನ್ ಪ್ರಧಾನಿ ಘನತೆವೆತ್ತ ಶ್ರೀ ಫುಮಿಯೊ ಕಿಶಿಡಾ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.

PM Modi arrives in Hiroshima, Japan

May 19th, 05:23 pm

Prime Minister Narendra Modi arrived in Hiroshima, Japan. He will attend the G7 Summit as well hold bilateral meetings with PM Kishida of Japan and other world leaders.

ಸಿಡ್ನಿಯಲ್ಲಿ ಮುಂದಿನ ಕ್ವಾಡ್ ಶೃಂಗಸಭೆಯನ್ನು ಆಯೋಜಿಸಿದ್ದಕ್ಕಾಗಿ ಆಸ್ಟ್ರೇಲಿಯನ್ ಪ್ರಧಾನಮಂತ್ರಿ ಶ್ರೀ ಆಂಥೋನಿ ಅಲ್ಬನೀಸ್ ಅವರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಮಂತ್ರಿ

April 26th, 06:46 pm

ಮುಂದಿನ ಕ್ವಾಡ್ ಶೃಂಗಸಭೆಯನ್ನು ಆಯೋಜಿಸಿದ್ದಕ್ಕಾಗಿ ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಶ್ರೀ ಆಂಥೋನಿ ಅಲ್ಬನೀಸ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಧನ್ಯವಾದ ಅರ್ಪಿಸಿದರು.

ಜಪಾನಿನ ವಕಾಯಾಮಾ ಸಾರ್ವಜನಿಕ ಕಾರ್ಯಕ್ರಮದಲ್ಲಿ ನಡೆದ ಹಿಂಸಾತ್ಮಕ ಘಟನೆಯನ್ನು ಖಂಡಿಸಿದ ಪ್ರಧಾನಮಂತ್ರಿ

April 15th, 02:50 pm

ಜಪಾನಿನ ಪ್ರಧಾನಮಂತ್ರಿ ಶ್ರೀ ಫ್ಯೂಮಿಯೊ ಕಿಶಿಡಾ ಅವರು ಉಪಸ್ಥಿತರಿದ್ದ ಜಪಾನಿನ ವಕಾಯಾಮಾ ಪ್ರದೇಶದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ನಡೆದ ಹಿಂಸಾತ್ಮಕ ಘಟನೆಯನ್ನು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಖಂಡಿಸಿದ್ದಾರೆ.

ಭಾರತದ ಜಿ-20 ಅಧ್ಯಕ್ಷ ಸ್ಥಾನಕ್ಕೆ ತಮ್ಮ ಬೆಂಬಲವನ್ನು ನೀಡಿರುವ ವಿಶ್ವ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

December 05th, 11:54 am

ಜಿ-20 ಅಧ್ಯಕ್ಷ ಸ್ಥಾನ ವಹಿಸಿಕೊಂಡಿರುವ ಭಾರತಕ್ಕೆ ಬೆಂಬಲ ಸೂಚಿಸಿರುವ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದಾರೆ.

ಜಪಾನ್ ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಅಂತ್ಯಕ್ರಿಯೆಯ ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

September 27th, 04:34 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟೋಕಿಯೋದ ನಿಪ್ಪಾನ್ ಬುಡೋಕನ್ ನಲ್ಲಿ ಜಪಾನಿನ ಮಾಜಿ ಪ್ರಧಾನಮಂತ್ರಿ ಶಿಂಜೊ ಅಬೆ ಅವರ ಅಂತ್ಯಕ್ರಿಯೆಯ ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. 20 ಕ್ಕೂ ಹೆಚ್ಚು ಸರ್ಕಾರಗಳ ಮುಖ್ಯಸ್ಥರು ಸೇರಿದಂತೆ 100 ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಈ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ಜಪಾನ್ ಪ್ರಧಾನಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

September 27th, 09:54 am

ಜಪಾನ್ ಪ್ರಧಾನಿ ಗೌರವಾನ್ವಿತ ಶ್ರೀ ಫುಮಿಯೋ ಕಿಶಿದಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ಮಾಡಿ ದ್ವಿಪಕ್ಷೀಯ ಸಮಾಲೋಚನೆ ನಡೆಸಿದರು. ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು. ಭಾರತ – ಜಪಾನ್ ಸಹಭಾಗಿತ್ವವನ್ನು ಬಲಪಡಿಸುವುದಲ್ಲದೇ ಭಾರತ – ಫೆಸಿಫಿಕ್ ವಲಯದಲ್ಲಿ ಸ್ವಾಯತ್ತ, ಮುಕ್ತ ಮತ್ತು ಎಲ್ಲವನ್ನೊಳಗೊಂಡ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಮಾಜಿ ಪ್ರಧಾನಿ ಅಬೆ ಅವರು ನೀಡಿದ ಕೊಡುಗೆಯನ್ನು ಈ ಸಂದರ್ಭದಲ್ಲಿ ಉಲ್ಲೇಖಿಸಿದರು.

ಪ್ರಧಾನಿ ಮೋದಿ ಜಪಾನ್‌ನ ಟೋಕಿಯೊಗೆ ಆಗಮಿಸಿದರು

September 27th, 03:49 am

ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್‌ನ ಟೋಕಿಯೋಗೆ ಆಗಮಿಸಿದ್ದಾರೆ. ಅವರು ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ರಾಜ್ಯ ಅಂತ್ಯಕ್ರಿಯೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈ ಭೇಟಿಯ ವೇಳೆ ಪ್ರಧಾನಿ ಕಿಶಿದಾ ಅವರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.