ಪ್ರಧಾನಮಂತ್ರಿ ಅವರಿಂದ ಅರ್ಜೆಂಟೀನಾ ಅಧ್ಯಕ್ಷರ ಭೇಟಿ
November 20th, 08:09 pm
ಇದು ಉಭಯ ನಾಯಕರ ನಡುವಿನ ಮೊದಲ ದ್ವಿಪಕ್ಷೀಯ ಸಭೆಯಾಗಿತ್ತು. ಐತಿಹಾಸಿಕ ಮೂರನೇ ಅವಧಿಯ ಅಧಿಕಾರಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಅಧ್ಯಕ್ಷ ಮಿಲೀ ಅವರು ಅಭಿನಂದಿಸಿದರು. ಪ್ರಧಾನಮಂತ್ರಿ ಸಹ ಅಧ್ಯಕ್ಷ ಮೈಲಿ ಅವರು ಅಧಿಕಾರ ವಹಿಸಿಕೊಂಡಿರುವುದಕ್ಕೆ ಶುಭ ಕೋರಿದರು.ಪ್ರಧಾನಮಂತ್ರಿಯವರಿಂದ ಜೋನಾಸ್ ಮಾಸೆಟ್ಟಿ ಮತ್ತು ಅವರ ತಂಡದ ಭೇಟಿ; ವೇದಾಂತ ಮತ್ತು ಗೀತೆಯ ಮೇಲಿನ ಅವರ ಒಲವಿಗೆ ಮೆಚ್ಚುಗೆ
November 20th, 07:54 am
ಜೋನಾಸ್ ಮಾಸೆಟ್ಟಿ ಅವರು ವೇದಾಂತ ಮತ್ತು ಗೀತೆಯ ಬಗ್ಗೆ ಹೊಂದಿರುವ ಅಪಾರ ಆಸಕ್ತಿಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತೀಯ ಸಂಸ್ಕೃತಿಯು ಪ್ರಪಂಚದಾದ್ಯಂತ ಹೇಗೆ ಪ್ರಭಾವ ಬೀರುತ್ತಿದೆ ಎಂಬುದು ಶ್ಲಾಘನೀಯ ಎಂದು ಹೇಳಿದ್ದಾರೆ. ಸಂಸ್ಕೃತದಲ್ಲಿ ರಾಮಾಯಣದ ಪ್ರದರ್ಶನವನ್ನು ವೀಕ್ಷಿಸಿದ ನಂತರ ಜೋನಾಸ್ ಮಾಸೆಟ್ಟಿ ಮತ್ತು ತಂಡವನ್ನು ಪ್ರಧಾನಮಂತ್ರಿಯವರು ಭೇಟಿಯಾದರು.ಡಿಜಿಟಲ್ ಮೂಲಸೌಕರ್ಯ AI ಮತ್ತು ಆಡಳಿತಕ್ಕಾಗಿ ದತ್ತಾಂಶದ ಕುರಿತು ಜಂಟಿ G20 ಘೋಷಣೆ
November 20th, 07:52 am
G20 ಜಂಟಿ ಘೋಷಣೆಯು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು (SDGs) ಸಾಧಿಸುವಲ್ಲಿ ಅಂತರ್ಗತ ಡಿಜಿಟಲ್ ರೂಪಾಂತರದ ಪ್ರಮುಖ ಪಾತ್ರವನ್ನು ಒತ್ತಿಹೇಳುತ್ತದೆ. ಡಿಜಿಟಲ್ ಪಬ್ಲಿಕ್ ಇನ್ಫ್ರಾಸ್ಟ್ರಕ್ಚರ್ (DPI), AI, ಮತ್ತು ಸಮಾನ ಡೇಟಾ ಬಳಕೆಯನ್ನು ನಿಯಂತ್ರಿಸುವುದು ಬೆಳವಣಿಗೆಯನ್ನು ಹೆಚ್ಚಿಸುತ್ತದೆ, ಉದ್ಯೋಗಗಳನ್ನು ಸೃಷ್ಟಿಸುತ್ತದೆ ಮತ್ತು ಆರೋಗ್ಯ ಮತ್ತು ಶಿಕ್ಷಣದ ಫಲಿತಾಂಶಗಳನ್ನು ಸುಧಾರಿಸುತ್ತದೆ. ಈ ತಂತ್ರಜ್ಞಾನಗಳು ಗೌಪ್ಯತೆಯನ್ನು ಗೌರವಿಸಲು, ನಾವೀನ್ಯತೆಯನ್ನು ಉತ್ತೇಜಿಸಲು ಮತ್ತು ಜಾಗತಿಕವಾಗಿ ವೈವಿಧ್ಯಮಯ ಸಮಾಜಗಳಿಗೆ ಪ್ರಯೋಜನವನ್ನು ನೀಡುವುದನ್ನು ಖಚಿತಪಡಿಸಿಕೊಳ್ಳಲು ನ್ಯಾಯೋಚಿತ ಆಡಳಿತ, ಪಾರದರ್ಶಕತೆ ಮತ್ತು ನಂಬಿಕೆ ಅತ್ಯಗತ್ಯ.ಅಂತರ್ಗತ ಬೆಳವಣಿಗೆಯನ್ನು ಸಾಧಿಸಲು ಮತ್ತು ಜಾಗತಿಕವಾಗಿ ಜೀವನವನ್ನು ಪರಿವರ್ತಿಸಲು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ಕೃತಕ ಬುದ್ಧಿಮತ್ತೆ ಮತ್ತು ಆಡಳಿತ ದತ್ತಾಂಶಕ್ಕೆ ಒತ್ತು ನೀಡುವುದು ಪ್ರಮುಖವಾಗಿದೆ: ಪ್ರಧಾನಮಂತ್ರಿ
November 20th, 05:04 am
ಅಂತರ್ಗತ ಬೆಳವಣಿಗೆಯನ್ನು ಸಾಧಿಸಲು ಮತ್ತು ಜಾಗತಿಕವಾಗಿ ಜೀವನವನ್ನು ಪರಿವರ್ತಿಸಲು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ಕೃತಕ ಬುದ್ಧಿಮತ್ತೆ ಮತ್ತು ಆಡಳಿತ ಡೇಟಾ ಪ್ರಮುಖವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಒತ್ತಿ ಹೇಳಿದರು.ತಂತ್ರಜ್ಞಾನವನ್ನು ಸಂಯೋಜಿಸುವ ನಿಟ್ಟಿನಲ್ಲಿ ಹೆಚ್ಚಿನ ಆದ್ಯತೆ ನೀಡುವ ಮೂಲಕ ಭಾರತವು ಆರೋಗ್ಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ: ಪ್ರಧಾನಮಂತ್ರಿ
November 20th, 05:02 am
ಆರೋಗ್ಯಕರ ಪ್ರಪಂಚವು ಉತ್ತಮವಾಗಿದೆ ಎಂಬುದನ್ನು ಒತ್ತಿ ಹೇಳಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ತಂತ್ರಜ್ಞಾನವನ್ನು ಸಂಯೋಜಿಸುವ ನಿಟ್ಟಿನಲ್ಲಿ ಹೆಚ್ಚಿನ ಆದ್ಯತೆ ನೀಡುವ ಮೂಲಕ ಭಾರತವು ಆರೋಗ್ಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸ್ಪಷ್ಟಪಡಿಸಿದರು. ಈ ನಿಟ್ಟಿನಲ್ಲಿ ಭಾರತವು ಜಾಗತಿಕ ಪ್ರಯತ್ನಗಳನ್ನು ಬಲಪಡಿಸುತ್ತದೆ ಎಂದು ಅವರು ಒತ್ತಿ ಹೇಳಿದರು.ಸುಸ್ಥಿರ ಅಭಿವೃದ್ಧಿ ಗುರಿ(SDGs)ಯತ್ತ ಪ್ರಗತಿ ಹೆಚ್ಚಿಸಲು ಮತ್ತು ಜಾಗತಿಕವಾಗಿ ಜೀವನ ಮಟ್ಟ ಸಶಕ್ತಗೊಳಿಸಲು ತಂತ್ರಜ್ಞಾನ ಅಪಾರ ಸಾಮರ್ಥ್ಯ ಹೊಂದಿದೆ: ಪ್ರಧಾನಮಂತ್ರಿ
November 20th, 05:00 am
ಸುಸ್ಥಿರ ಅಭಿವೃದ್ಧಿ ಗುರಿಯತ್ತ(SDGs) ಪ್ರಗತಿ ಹೆಚ್ಚಿಸಲು ಮತ್ತು ಜಾಗತಿಕವಾಗಿ ಜೀವನ ಮಟ್ಟವನ್ನು ಸಶಕ್ತಗೊಳಿಸಲು ತಂತ್ರಜ್ಞಾನವು ಅಪಾರ ಸಾಮರ್ಥ್ಯವನ್ನು ಹೊಂದಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ಇಟಲಿಯ ಮಂತ್ರಿಗಳ ಮಂಡಳಿಯ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
November 19th, 08:34 am
ರಿಯೊ ಡಿ ಜನೈರೊದಲ್ಲಿ ನಡೆಯುವ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಟಾಲಿಯನ್ ಗಣರಾಜ್ಯದ ಮಂತ್ರಿಗಳ ಪರಿಷತ್ತಿನ ಅಧ್ಯಕ್ಷೆ ಘನತೆವೆತ್ತ ಶ್ರೀಮತಿ ಜಾರ್ಜಿಯಾ ಮೆಲೊನಿ ಅವರನ್ನು ಭೇಟಿಯಾದರು. ಕಳೆದ ಎರಡು ವರ್ಷಗಳಲ್ಲಿ ಉಭಯ ಪ್ರಧಾನಮಂತ್ರಿಗಳ ನಡುವಿನ ಐದನೇ ಭೇಟಿ ಇದಾಗಿದೆ. ಜೂನ್ 2024 ರಲ್ಲಿ ಇಟಲಿಯ ಪುಗ್ಲಿಯಾದಲ್ಲಿ ಪ್ರಧಾನ ಮಂತ್ರಿ ಮೆಲೋ ಶ್ರೀಮತಿ ಜಾರ್ಜಿಯಾ ಮೆಲೊನಿ ಅವರ ಅಧ್ಯಕ್ಷತೆಯಲ್ಲಿ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಉಭಯ ನಾಯಕರು ಕೊನೆಯದಾಗಿ ಭೇಟಿಯಾಗಿದ್ದರು. ಸವಾಲಿನ ಈ ಸಂದರ್ಭದದಲ್ಲಿ ಜಿ7 ಅನ್ನು ಮುನ್ನಡೆಸಿದ್ದಕ್ಕಾಗಿ ಶ್ರೀಮತಿ ಜಾರ್ಜಿಯಾ ಮೆಲೊನಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.ಇಂಡೋನೇಷ್ಯಾದ ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 19th, 06:09 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ ಜಿ 20 ಶೃಂಗಸಭೆಯ ನೇಪಥ್ಯದಲ್ಲಿ ಇಂಡೋನೇಷ್ಯಾದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಗೌರವಾನ್ವಿತ ಪ್ರಬೋವೊ ಸುಬಿಯಾಂಟೊ ಅವರನ್ನು ಭೇಟಿ ಮಾಡಿದರು. ಇದು ಉಭಯ ನಾಯಕರ ಮೊದಲ ಭೇಟಿಯಾಗಿತ್ತುಪೋರ್ಚುಗಲ್ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 19th, 06:08 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆದ G20 ಶೃಂಗಸಭೆಯ ನೇಪಥ್ಯದಲ್ಲಿ ಪೋರ್ಚುಗೀಸ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಲೂಯಿಸ್ ಮಾಂಟೆನೆಗ್ರೊ ಅವರನ್ನು ಭೇಟಿ ಮಾಡಿದ್ದರು. ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ. 2024ರ ಏಪ್ರಿಲ್ ನಲ್ಲಿ ಪ್ರಧಾನಮಂತ್ರಿಯಾಗಿ ಮಾಂಟೆನೆಗ್ರೊ ಅಧಿಕಾರ ಸ್ವೀಕರಿಸಿದ್ದಾಗ ಪ್ರಧಾನಿ ನರೇಂದ್ರ ಮೋದಿ, ಅವರನ್ನು ಅಭಿನಂದಿಸಿದ್ದರು ಮತ್ತು ಭಾರತ ಮತ್ತು ಪೋರ್ಚುಗಲ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಒಗ್ಗೂಡಿ ಕೆಲಸ ಮಾಡುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಗೆ ಪ್ರಧಾನಿ ಮೊಂಟೆನೆಗ್ರೊ ಅವರು ಅಭಿನಂದನೆ ಸಲ್ಲಿಸಿದ್ದರು.ಬ್ರೆಜಿಲ್‌ನ ರಿಯೊ ಡಿ ಜನೈರೊಗೆ ಆಗಮಿಸಿದ ಪ್ರಧಾನಿ ಮೋದಿ
November 18th, 08:38 am
ಬ್ರೆಜಿಲ್‌ನ ರಿಯೊ ಡಿ ಜನೈರೊಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದರು. ಅವರು ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಮತ್ತು ಭೇಟಿಯ ಸಮಯದಲ್ಲಿ ವಿಶ್ವ ನಾಯಕರನ್ನು ಭೇಟಿಯಾಗಲಿದ್ದಾರೆ.ಜಿ20 ನವದೆಹಲಿ ನಾಯಕರ ಘೋಷಣೆ
September 09th, 05:04 pm
ಇಂದು ಅಂಗೀಕರಿಸಲಾದ ಜಿ20 ನವದೆಹಲಿ ನಾಯಕರ ಘೋಷಣೆಯನ್ನು ಇಲ್ಲಿ ಪಡೆಯಬಹುದು:ಹವಾಮಾನ ಬಿಕ್ಕಟ್ಟಿನೊಂದಿಗೆ ಜಗತ್ತು ಹೋರಾಡುತ್ತಿರುವಾಗ ಪರಿಸರಕ್ಕಾಗಿ ಜೀವನ ಶೈಲಿಯನ್ನು ಪ್ರಾರಂಭಿಸಿದ್ದೇವೆ ಮತ್ತು ದಾರಿ ತೋರಿಸಿದ್ದೇವೆ - ಜೀವನ [ಲೈಫ್ ಮಿಷನ್ ಇನಿಷಿಯೇಟೀವ್] ಅಭಿಯಾನ ಉಪಕ್ರಮ
August 15th, 05:08 pm
ನಾವು ಜಿ20 ಶೃಂಗಸಭೆಗಾಗಿ “ಒಂದು ಪ್ರಪಂಚ, ಒಂದು ಕುಟುಂಬ, ಒಂದು ಭವಿಷ್ಯ” ಎಂಬ ಪರಿಕಲ್ಪನೆಯನ್ನು ಮುಂದಿಟ್ಟಿದ್ದೇವೆ ಮತ್ತು ಅ ದಿಕ್ಕಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.ದಕ್ಷಿಣ ಆಫ್ರಿಕಾ ಅಧ್ಯಕ್ಷರೊಂದಿಗೆ ಸಮಾಲೋಚನೆ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ.
June 10th, 10:13 pm
ದಕ್ಷಿಣ ಆಫ್ರಿಕಾ ಗಣರಾಜ್ಯದ ಅಧ್ಯಕ್ಷ, ಗೌರವಾನ್ವಿತ ಶ್ರೀ ಮಾಟೆಮೆಲ ಸಿರಿಲ್ ರಾಮಪೋಸ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.ಶಿಕ್ಷಣ ಸಚಿವಾಲಯದ ಉಪಕ್ರಮವಾದ ಜಿ20 ಜನಭಾಗಿದಾರಿ ಕಾರ್ಯಕ್ರಮದಲ್ಲಿ ದಾಖಲೆಯ ಪ್ರಮಾಣದಲ್ಲಿ ಭಾಗವಹಿಸುವಿಕೆಗೆ ಪ್ರಧಾನಿ ಶ್ಲಾಘನೆ
June 10th, 07:53 pm
ಶಿಕ್ಷಣ ಸಚಿವಾಲಯದ ಉಪಕ್ರಮವಾದ ಜಿ20 ಜನಭಾಗಿದಾರಿ ಕಾರ್ಯಕ್ರಮದಲ್ಲಿ ದಾಖಲೆಯ ಪ್ರಮಾಣದಲ್ಲಿ ಸಂಬಂಧಪಟ್ಟವರ ಭಾಗವಹಿಸುವಿಕೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.ಜಗತ್ತು ಭಾರತವನ್ನು ಹೊಗಳಿದರೆ ಕೇಂದ್ರದಲ್ಲಿ ಬಹುಮತದ ಸರ್ಕಾರವನ್ನು ಆಯ್ಕೆ ಮಾಡಲು ನಿಮ್ಮ ಮತವೇ ಕಾರಣ: ಮೂಡಬಿದಿರೆಯಲ್ಲಿ ಪ್ರಧಾನಿ ಮೋದಿ
May 03rd, 11:01 am
ಚುನಾವಣಾ ಪ್ರಚಾರದ ಭರಾಟೆಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮೂಡಬಿದಿರೆಯಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೇ 10 ರಂದು ಚುನಾವಣೆಯ ದಿನ ಸಮೀಪಿಸುತ್ತಿದೆ. ಕರ್ನಾಟಕವನ್ನು ಅಗ್ರ ರಾಜ್ಯವನ್ನಾಗಿ ಮಾಡಲು ಬಿಜೆಪಿ ಸಂಕಲ್ಪ ಮಾಡಿದೆ ಮತ್ತು ಕರ್ನಾಟಕವನ್ನು ಉತ್ಪಾದನಾ ಸೂಪರ್ ಪವರ್ ಮಾಡುವ ಬಿಜೆಪಿಯ ಸಂಕಲ್ಪವಾಗಿದೆ. ಇದು ಮುಂಬರುವ ವರ್ಷಗಳಲ್ಲಿ ನಮ್ಮ ಮಾರ್ಗಸೂಚಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.ಪ್ರಧಾನಿ ಮೋದಿ ಅವರು ಕರ್ನಾಟಕದ ಮೂಡಬಿದ್ರಿ, ಅಂಕೋಲಾ ಮತ್ತು ಬೈಲಹೊಂಗಲದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
May 03rd, 11:00 am
ಚುನಾವಣಾ ಪ್ರಚಾರದ ಭರಾಟೆಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮೂಡಬಿದಿರೆಯಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೇ 10 ರಂದು ಚುನಾವಣೆಯ ದಿನ ಸಮೀಪಿಸುತ್ತಿದೆ. ಕರ್ನಾಟಕವನ್ನು ಅಗ್ರ ರಾಜ್ಯವನ್ನಾಗಿ ಮಾಡಲು ಬಿಜೆಪಿ ಸಂಕಲ್ಪ ಮಾಡಿದೆ ಮತ್ತು ಕರ್ನಾಟಕವನ್ನು ಉತ್ಪಾದನಾ ಸೂಪರ್ ಪವರ್ ಮಾಡುವ ಬಿಜೆಪಿಯ ಸಂಕಲ್ಪವಾಗಿದೆ. ಇದು ಮುಂಬರುವ ವರ್ಷಗಳಲ್ಲಿ ನಮ್ಮ ಮಾರ್ಗಸೂಚಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.ರಿಪಬ್ಲಿಕ್ ಟಿವಿ ಕಾನ್‌ಕ್ಲೇವ್‌ನಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
April 26th, 08:01 pm
ಅರ್ನಾಬ್ ಗೋಸ್ವಾಮಿ ಅವರೇ, ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಎಲ್ಲಾ ಸಹೋದ್ಯೋಗಿಗಳೇ, ದೇಶ ಮತ್ತು ವಿದೇಶಗಳಲ್ಲಿನ ರಿಪಬ್ಲಿಕ್ ಟಿವಿಯ ಎಲ್ಲಾ ವೀಕ್ಷಕರೇ, ಮಹಿಳೆಯರೇ ಮತ್ತು ಮಹನೀಯರೇ! ನಾನು ಮೊದಲು, ನನ್ನ ಬಾಲ್ಯದಲ್ಲಿ ಕೇಳಿದ ಒಂದು ಹಾಸ್ಯ ಪ್ರಸಂಗವನ್ನು ಹೇಳಲು ಬಯಸುತ್ತೇನೆ. ʼಒಬ್ಬ ಪ್ರಾಧ್ಯಾಪಕರು ಇದ್ದರು, ಅವರ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಳು, ಜೀವನದಿಂದ ಬೇಸತ್ತಿದ್ದೇನೆ, ಇನ್ನು ಮುಂದೆ ಬದುಕಲು ಬಯಸುವುದಿಲ್ಲ ಎಂದು ಬರೆದ ಪತ್ರವಿತ್ತು. ಏನಾದರು ಕುಡಿದು ಕಂಕರಿಯಾ ಕೆರೆಗೆ ಹಾರಿ ಸಾಯುತ್ತೇನೆ ಎಂದು ಆಕೆ ಬರೆದಿದ್ದಳು. ಮರುದಿನ ಬೆಳಿಗ್ಗೆ, ತನ್ನ ಮಗಳು ಮನೆಯಲ್ಲಿ ಇಲ್ಲದಿರುವುದು ಪ್ರಾಧ್ಯಾಪಕರಿಗೆ ತಿಳಿಯಿತು. ಅವರು ಅವಳ ಕೋಣೆಗೆ ಹೋಗಿ ನೋಡದಾಗ ಪತ್ರ ಸಿಕ್ಕಿತು. ಪತ್ರವನ್ನು ಓದಿದ ಅವರಿಗೆ ತುಂಬಾ ಕೋಪ ಬಂತು. ‘ನಾನು ಪ್ರೊಫೆಸರ್ ಆಗಿದ್ದೇನೆ, ನಾನು ಇಷ್ಟು ವರ್ಷ ಕಷ್ಟಪಟ್ಟು ಕೆಲಸ ಮಾಡಿದ್ದೇನೆ ಮತ್ತು ಆತ್ಮಹತ್ಯೆ ಪತ್ರದಲ್ಲಿ ಅವಳು ಕಂಕಾರಿಯಾ ಕಾಗುಣಿತವನ್ನು ತಪ್ಪಾಗಿ ಬರೆದಿದ್ದಾಳೆ.’ ಅರ್ನಾಬ್ ಉತ್ತಮ ಹಿಂದಿ ಮಾತನಾಡಲು ಪ್ರಾರಂಭಿಸಿದ್ದಕ್ಕಾಗಿ ನನಗೆ ಸಂತೋಷವಾಗಿದೆ. ಅವರು ಏನು ಮಾತುನಾಡುತ್ತಿದ್ದಾರೆ ಎಂದು ನಾನು ಕೇಳಿಸಿಕೊಳ್ಳಲಿಲ್ಲ, ಆದರೆ ಅವರ ಹಿಂದಿ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಗಮನಿಸುತ್ತಿದ್ದೆ. ಬಹುಶಃ, ಮುಂಬೈನಲ್ಲಿ ವಾಸಿಸಿದ ನಂತರ ನಿಮ್ಮ ಹಿಂದಿ ಸುಧಾರಿಸಿದೆ.ನವದೆಹಲಿಯಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಪ್ರಧಾನಿ ಭಾಷಣ
April 26th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್‌ನಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಭಾಷಣ ಮಾಡಿದರು.ಭಾರತದ ಜಿ-20 ಅಧ್ಯಕ್ಷತೆಯ ಅಂಶಗಳನ್ನು ಚರ್ಚಿಸಲು ಪ್ರಧಾನ ಮಂತ್ರಿ ಅಧ್ಯಕ್ಷತೆಯಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿಗಳು ಮತ್ತು ಎಲ್.ಜಿ.ಗಳ ವೀಡಿಯೊ ಸಭೆ
December 09th, 08:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತದ ಜಿ 20 ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದ ಅಂಶಗಳನ್ನು ಚರ್ಚಿಸಲು ತಮ್ಮ ಅಧ್ಯಕ್ಷತೆಯಲ್ಲಿ ರಾಜ್ಯಗಳ ರಾಜ್ಯಪಾಲರು ಮತ್ತು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ ಗಳ ವೀಡಿಯೊ ಸಭೆಯನ್ನು ನಡೆಸಿದರು.ಆಕಾಶವೇ ಮಿತಿಯಲ್ಲ: ಮನ್ ಕಿ ಬಾತ್ ವೇಳೆ ಪ್ರಧಾನಿ ಮೋದಿ
November 27th, 11:00 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. 'ಮನದ ಮಾತಿಗೆ' ನಿಮಗೆಲ್ಲರಿಗೂ ಮತ್ತೊಮ್ಮೆ ಸ್ವಾಗತ. ಈ ಕಾರ್ಯಕ್ರಮವು 95 ನೇ ಸಂಚಿಕೆಯಾಗಿದೆ. ನಾವು 'ಮನದ ಮಾತಿನ’ ಶತಕದತ್ತ ಬಹು ವೇಗವಾಗಿ ಸಾಗುತ್ತಿದ್ದೇವೆ. ಈ ಕಾರ್ಯಕ್ರಮವು 130 ಕೋಟಿ ದೇಶವಾಸಿಗಳೊಂದಿಗೆ ಸಂಪರ್ಕ ಸಾಧಿಸಲು ನನಗೆ ಮತ್ತೊಂದು ಮಾಧ್ಯಮವಾಗಿದೆ. ಪ್ರತಿ ಸಂಚಿಕೆಗೂ ಮುನ್ನ ಗ್ರಾಮಗಳು-ನಗರಗಳಿಂದ ಬರುವ ಸಾಕಷ್ಟು ಪತ್ರಗಳನ್ನು ಓದುವುದು, ಮಕ್ಕಳಿಂದ ಹಿರಿಯರವರೆಗೆ ಆಡಿಯೋ ಸಂದೇಶಗಳನ್ನು ಕೇಳುವುದು ನನಗೆ ಒಂದು ಆಧ್ಯಾತ್ಮಿಕ ಅನುಭವದಂತಿದೆ.