ʻಜಿ-20 ಯೂನಿವರ್ಸಿಟಿ ಕನೆಕ್ಟ್ʼ ಫಿನಾಲೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
September 26th, 04:12 pm
ದೇಶದ ವಿವಿಧ ವಿಶ್ವವಿದ್ಯಾಲಯಗಳೇ, ಉಪಕುಲಪತಿಗಳೇ, ಪ್ರಾಧ್ಯಾಪಕರೇ, ವಿವಿಧ ಸಂಸ್ಥೆಗಳ ಪ್ರತಿನಿಧಿಗಳೇ ಮತ್ತು ನನ್ನ ಯುವ ಸ್ನೇಹಿತರೇ! ʻಭಾರತ್ ಮಂಟಪಂʼನಲ್ಲಿ ಇದ್ದುದ್ದಕ್ಕಿಂತ ಹೆಚ್ಚಿನ ಜನರು ಇಂದು ಆನ್‌ಲೈನ್ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ. ನಾನು 'ಜಿ -20 ಯೂನಿವರ್ಸಿಟಿ ಕನೆಕ್ಟ್' ಕಾರ್ಯಕ್ರಮಕ್ಕೆ ಎಲ್ಲರನ್ನೂ ಸ್ವಾಗತಿಸುತ್ತೇನೆ ಮತ್ತು ಎಲ್ಲಾ ಯುವಕರನ್ನು ಅಭಿನಂದಿಸುತ್ತೇನೆ.ಜಿ-20 ವಿಶ್ವವಿದ್ಯಾಲಯ ಸಂಪರ್ಕ ಅಂತಿಮ(ಯೂನಿವರ್ಸಿಟಿ ಕನೆಕ್ಟ್ ಫಿನಾಲೆ) ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 26th, 04:11 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ್ ಮಂಟಪದಲ್ಲಿಂದು ಜಿ-20 ವಿಶ್ವವಿದ್ಯಾಲಯ ಸಂಪರ್ಕ ಕಲ್ಪಿಸುವ ಅಂತಿಮ(ಯುನಿವರ್ಸಿಟಿ ಕನೆಕ್ಟ್ ಫಿನಾಲೆ) ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಿದರು. ಜಿ-20 ವಿಶ್ವವಿದ್ಯಾಲಯ ಸಂಪರ್ಕ ಉಪಕ್ರಮವನ್ನು ಭಾರತದ ಯುವಜನರಲ್ಲಿ ಭಾರತದ ಅಧ್ಯಕ್ಷತೆಯ ಜಿ-20 ಶೃಂಗಸಭೆಯ ಬಗ್ಗೆ ತಿಳುವಳಿಕೆ ಮೂಡಿಸಲು ಮತ್ತು ವಿವಿಧ ಜಿ-20 ಕಾರ್ಯಕ್ರಮಗಳಲ್ಲಿ ಅವರ ಭಾಗವಹಿಸುವಿಕೆ ಹೆಚ್ಚಿಸುವ ಉದ್ದೇಶದಿಂದ ಆಯೋಜಿಸಲಾಗಿದೆ. ಪ್ರಧಾನ ಮಂತ್ರಿ ಅವರು ಈ ಸಂದರ್ಭದಲ್ಲಿ 4 ಪ್ರಕಟಣೆಗಳನ್ನು ಬಿಡುಗಡೆ ಮಾಡಿದರು. ಅವುಗಳೆಂದರೆ ದಿ ಗ್ರ್ಯಾಂಡ್ ಸಕ್ಸಸ್ ಆಫ್ ಜಿ-20 ಭಾರತ್ ಪ್ರೆಸಿಡೆನ್ಸಿ: ದೂರದೃಷ್ಟಿಯ ನಾಯಕತ್ವ, ಅಂತರ್ಗತ ಕಾರ್ಯವಿಧಾನ; ಭಾರತದ ಜಿ-20 ಪ್ರೆಸಿಡೆನ್ಸಿ: ವಸುಧೈವ ಕುಟುಂಬಕಂ; ಜಿ-20 ವಿಶ್ವವಿದ್ಯಾಲಯ ಸಂಪರ್ಕ ಕಾರ್ಯಕ್ರಮದ ಸಂಕಲನ; ಮತ್ತು ಜಿ-20ರಲ್ಲಿ ಭಾರತೀಯ ಸಂಸ್ಕೃತಿಯ ಪ್ರದರ್ಶನ.ಸೆಪ್ಟೆಂಬರ್ 26 ರಂದು ಜಿ20 ಯೂನಿವರ್ಸಿಟಿ ಕನೆಕ್ಟ್ ಫಿನಾಲೆ ಕಾರ್ಯಕ್ರಮವನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಮಂತ್ರಿ
September 25th, 06:47 pm
ನವದೆಹಲಿಯ ಭಾರತ್ ಮಂಟಪದಲ್ಲಿ 26ನೇ ಸೆಪ್ಟೆಂಬರ್ 2023 ರಂದು ನಡೆಯಲಿರುವ ಜಿ20 ಯೂನಿವರ್ಸಿಟಿ ಕನೆಕ್ಟ್ ಫಿನಾಲೆ ಕಾರ್ಯಕ್ರಮವನ್ನು ಉದ್ದೇಶಿಸಿ ಸಂಜೆ ಸುಮಾರು 4 ಗಂಟೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಲಿದ್ದಾರೆ.