ಶ್ರೀನಗರದಲ್ಲಿ ನಡೆದ “ಯುವಜನರ ಸಬಲೀಕರಣ ಮತ್ತು ಜೆ ಅಂಡ್ ಕೆ ಪರಿವರ್ತನೆ’’ ಕಾರ್ಯಕ್ರಮನ್ನುದ್ದೇಶಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
June 20th, 07:00 pm
ಜಮ್ಮು ಮತ್ತು ಕಾಶ್ಮೀರದ ಲೆಫ್ಸಿನೆಂಟ್ ಗೌರ್ನರ್ ಶ್ರೀ ಮನೋಜ್ ಸಿನ್ಹಾಜಿ, ನನ್ನ ಸಂಪುಟದ ಸಹೋದ್ಯೋಗಿ ಶ್ರೀ ಪ್ರತಾಪ್ ರಾವ್ ಜಾದವ್ ಜಿ, ಇತರ ಗಣ್ಯರೇ ಮತ್ತು ಜಮ್ಮು ಮತ್ತು ಕಾಶ್ಮೀರದಾದ್ಯಂತ ಇರುವ ನನ್ನ ಯುವ ಸ್ನೇಹಿತರೇ ಹಾಗೂ ನನ್ನೆಲ್ಲಾ ಸಹೋದರ ಮತ್ತು ಸಹೋದರಿಯರೇ..!ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ 'ಯುವಕರ ಸಬಲೀಕರಣ, ಜಮ್ಮು ಮತ್ತು ಕಾಶ್ಮೀರವನ್ನು ಪರಿವರ್ತಿಸುವುದು' ಕುರಿತ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 20th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್ ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ (ಎಸ್.ಕೆ.ಐ.ಸಿ.ಸಿ.) ನಲ್ಲಿ ನಡೆದ 'ಯುವಕರ ಸಬಲೀಕರಣ, ಜಮ್ಮು ಮತ್ತು ಕಾಶ್ಮೀರವನ್ನು ಪರಿವರ್ತಿಸುವುದು' ಕುರಿತ ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು. ರಸ್ತೆ, ನೀರು ಸರಬರಾಜು ಮತ್ತು ಉನ್ನತ ಶಿಕ್ಷಣದಲ್ಲಿ ಮೂಲಸೌಕರ್ಯ ಕ್ಷೇತ್ರಗಳನ್ನು ಒಳಗೊಂಡ 1,500 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಜಮ್ಮು ಮತ್ತು ಕಾಶ್ಮೀರದಲ್ಲಿ ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. 1,800 ಕೋಟಿ ರೂ.ಗಳ ಕೃಷಿ ಮತ್ತು ಸಂಬಂಧಿತ ವಲಯಗಳ ಯೋಜನೆಯಲ್ಲಿ ಸ್ಪರ್ಧಾತ್ಮಕತೆ ಸುಧಾರಣೆ ಯೋಜನೆಗೆ (ಜೆಕೆಸಿಐಪಿ) ಅವರು ಚಾಲನೆ ನೀಡಿದರು. ಶ್ರೀ ನರೇಂದ್ರ ಮೋದಿ ಅವರು 200 ಹೊಸ ಸರ್ಕಾರಿ ನೇಮಕಾತಿದಾರರಿಗೆ ಉದ್ಯೋಗ ಪತ್ರಗಳನ್ನು ಹಸ್ತಾಂತರಿಸಲು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ವಸ್ತುಪ್ರದರ್ಶನವನ್ನು ವೀಕ್ಷಿಸಿದರು ಮತ್ತು ಕೇಂದ್ರಾಡಳಿತ ಪ್ರದೇಶದ ಯುವ ಸಾಧಕರೊಂದಿಗೆ ಸಂವಾದ ನಡೆಸಿದರು.ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದ ಕಿಸಾನ್ ಸಮ್ಮಾನ್ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
June 18th, 05:32 pm
ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್, ನನ್ನ ಸಂಪುಟ ಸಹೋದ್ಯೋಗಿಗಳಾದ ಶಿವರಾಜ್ ಸಿಂಗ್ ಚೌಹಾಣ್, ಭಾಗೀರಥ್ ಚೌಧರಿ, ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ, ಬ್ರಜೇಶ್ ಪಾಠಕ್, ವಿಧಾನ ಪರಿಷತ್ ಸದಸ್ಯ ಮತ್ತು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಶ್ರೀ. ಭೂಪೇಂದ್ರ ಚೌಧರಿ, ರಾಜ್ಯ ಸರ್ಕಾರದ ಸಚಿವರೆ, ಸಾರ್ವಜನಿಕ ಪ್ರತಿನಿಧಿಗಳೆ, ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ನೆರೆದಿರುವ ನನ್ನ ರೈತ ಬಂಧುಗಳೆ ಮತ್ತು ಕಾಶಿಯ ನನ್ನ ಕುಟುಂಬ ಸದಸ್ಯರೆ!ಉತ್ತರ ಪ್ರದೇಶದ ವಾರಾಣಸಿಯಲ್ಲಿ ಕಿಸಾನ್ ಸಮ್ಮಾನ್ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
June 18th, 05:00 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿಂದು ಕಿಸಾನ್ ಸಮ್ಮಾನ್ ಸಮ್ಮೇಳನ ಉದ್ದೇಶಿಸಿ ಮಾತನಾಡಿದರು. ಸಮಾರಂಭದಲ್ಲಿ ಅವರು ಸುಮಾರು 9.26 ಕೋಟಿ ರೈತ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮೂಲಕ 20,000 ಕೋಟಿ ರೂ. ಮೊತ್ತದ ಪ್ರಧಾನ ಮಂತ್ರಿಗಳ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್)ಯ 17ನೇ ಕಂತು ವಿತರಿಸಿದರು. ಕಾರ್ಯಕ್ರಮದಲ್ಲಿ ಅವರು ಸ್ವಸಹಾಯ ಗುಂಪು(ಎಸ್ಎಚ್ಜಿ)ಗಳ 30,000ಕ್ಕೂ ಹೆಚ್ಚು ಮಹಿಳೆಯರಿಗೆ ‘ಕೃಷಿ ಸಖಿ’ ಪ್ರಮಾಣಪತ್ರಗಳನ್ನು ವಿತರಿಸಿದರು. ದೇಶದೆಲ್ಲೆಡೆಯ ರೈತರನ್ನು ತಂತ್ರಜ್ಞಾನದ ಮೂಲಕ ಕಾರ್ಯಕ್ರಮಕ್ಕೆ ಸಂಪರ್ಕ ಕಲ್ಪಿಸಲಾಗಿತ್ತು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೊಂದಿಗೆ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಾತುಕತೆ
June 17th, 07:44 pm
ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ (ಎನ್ ಎಸ್ ಎ) ಶ್ರೀ.ಜೇಕ್ ಸಲಾವನ್ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದರು.ಜಿ 7 ಶೃಂಗಸಭೆಯ ಭಾಗವಾಗಿ ಜಪಾನ್ ಪ್ರಧಾನಮಂತ್ರಿಯವರೊಂದಿಗೆ ಪ್ರಧಾನಮಂತ್ರಿ ಅವರ ಸಭೆ
June 14th, 11:53 pm
ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ನೀಡಿದ ಅಭಿನಂದನಾ ಹಾರೈಕೆಗಳಿಗಾಗಿ ಪ್ರಧಾನಮಂತ್ರಿ ಮೋದಿ ಅವರು, ಪ್ರಧಾನಮಂತ್ರಿ ಕಿಶಿಡಾ ಅವರಿಗೆ ಧನ್ಯವಾದ ಅರ್ಪಿಸಿದರು. ಜಪಾನ್ ನೊಂದಿಗಿನ ದ್ವಿಪಕ್ಷೀಯ ಸಂಬಂಧಗಳು ತಮ್ಮ ಮೂರನೇ ಅವಧಿಯಲ್ಲಿಯೂ ಆದ್ಯತೆಯನ್ನು ಪಡೆಯುತ್ತದೆ ಎಂದು ಅವರು ದೃಢಪಡಿಸಿದರು. ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಸಹಭಾಗಿತ್ವವು 10ನೇ ವರ್ಷದಲ್ಲಿದೆ ಎಂದು ಇಬ್ಬರೂ ನಾಯಕರು ಗಮನಿಸಿದರು ಮತ್ತು ಸಂಬಂಧದಲ್ಲಿ ಆಗಿರುವ ಪ್ರಗತಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಸಹಕಾರವನ್ನು ಮತ್ತಷ್ಟು ತೀವ್ರಗೊಳಿಸುವ ಮಾರ್ಗಗಳು, ಹೊಸ ಮತ್ತು ಉದಯೋನ್ಮುಖ ಕ್ಷೇತ್ರಗಳನ್ನು ಸೇರಿಸುವುದು ಮತ್ತು ಬಿ 2 ಬಿ ಮತ್ತು ಪಿ 2 ಪಿ ಸಹಕಾರವನ್ನು ಬಲಪಡಿಸುವ ಮಾರ್ಗಗಳ ಬಗ್ಗೆ ಅವರು ಚರ್ಚಿಸಿದರು.ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಇಟಲಿಯ ಪ್ರಧಾನಮಂತ್ರಿಯವರೊಂದಿಗೆ ಭಾರತದ ಪ್ರಧಾನಮಂತ್ರಿಯವರ ಸಭೆ
June 14th, 11:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಟಲಿಯ ಅಪುಲಿಯಾದಲ್ಲಿ ಇಟಲಿ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಶ್ರೀಮತಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿ ಮಾಡಿದರು. ಪ್ರಧಾನಿಯಾಗಿ ಸತತ ಮೂರನೇ ಅವಧಿಗೆ ಆಯ್ಕೆಯಾದ ಪ್ರಧಾನಮಂತ್ರಿಯವರಿಗೆ ಇಟಲಿ ಪ್ರಧಾನಿ ಮೆಲೋನಿ ಅಭಿನಂದನೆ ಸಲ್ಲಿಸಿದರು. ಜಿ 7 ಔಟ್ರೀಚ್ ಶೃಂಗಸಭೆಯಲ್ಲಿ ಭಾಗವಹಿಸಲು ಆಹ್ವಾನಿಸಿದ್ದಕ್ಕಾಗಿ ಪ್ರಧಾನ ಮಂತ್ರಿ ಮೋದಿ ಪ್ರಧಾನ ಮಂತ್ರಿ ಮೆಲೋನಿ ಅವರಿಗೆ ಧನ್ಯವಾದ ಅರ್ಪಿಸಿದರು ಮತ್ತು ಶೃಂಗಸಭೆಯ ಯಶಸ್ವಿ ಸಮಾರೋಪಕ್ಕಾಗಿ ಮೆಚ್ಚುಗೆ ವ್ಯಕ್ತಪಡಿಸಿದರು.ಜಿ 7 ಶೃಂಗಸಭೆಯ ಔಟ್ರೀಚ್ ಅಧಿವೇಶನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಅನುವಾದ
June 14th, 09:54 pm
ಮೊದಲನೆಯದಾಗಿ, ಈ ಶೃಂಗಸಭೆಗೆ ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗೆ ನೀಡಿದ ಆತ್ಮೀಯ ಆತಿಥ್ಯಕ್ಕಾಗಿ ನಾನು ಪ್ರಧಾನಿ ಮೆಲೋನಿ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ನಾನು ಚಾನ್ಸಲರ್ ಒಲಾಫ್ ಶೋಲ್ಜ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರುತ್ತೇನೆ. ಜಿ -7 ಶೃಂಗಸಭೆಯ ಈ ಘಟನೆ ವಿಶೇಷ ಮತ್ತು ಐತಿಹಾಸಿಕವಾಗಿದೆ. ಈ ಗುಂಪಿನ 50ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಜಿ -7 ಯ ಎಲ್ಲಾ ಸಹೋದ್ಯೋಗಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು.ಜಿ 7 ಶೃಂಗಸಭೆಯ ಕೃತಕ ಬುದ್ಧಿಮತ್ತೆ ಮತ್ತು ಇಂಧನ, ಆಫ್ರಿಕಾ ಮತ್ತು ಮೆಡಿಟರೇನಿಯನ್ ಕುರಿತ ಔಟ್ರೀಚ್ ಅಧಿವೇಶನದಲ್ಲಿ ಪ್ರಧಾನಿ ಭಾಗವಹಿಸಿದರು
June 14th, 09:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಟಲಿಯ ಅಪುಲಿಯಾದಲ್ಲಿ ನಡೆದ ಜಿ 7 ಶೃಂಗಸಭೆಯಲ್ಲಿ ಕೃತಕ ಬುದ್ಧಿಮತ್ತೆ, ಇಂಧನ, ಆಫ್ರಿಕಾ ಮತ್ತು ಮೆಡಿಟರೇನಿಯನ್ ಕುರಿತ ಔಟ್ರೀಚ್ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಸಮೂಹವು 50ನೇ ವಾರ್ಷಿಕೋತ್ಸವದ ಮೈಲಿಗಲ್ಲನ್ನು ಸಾಧಿಸಿರುವುದಕ್ಕೆ ಅವರು ಅಭಿನಂದಿಸಿದರು.ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಉಕ್ರೇನ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿಯವರ ಸಭೆ
June 14th, 04:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜೂನ್ 14ರಂದು ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಉಕ್ರೇನ್ ಅಧ್ಯಕ್ಷ ಘನತೆವೆತ್ತ ಶ್ರೀ ವೊಲೊಡಿಮಿರ್ ಜೆಲೆನ್ಸ್ಕಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಮೂರನೇ ಅವಧಿಗೆ ತಾವು ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಅಧ್ಯಕ್ಷ ಜೆಲೆನ್ಸ್ಕಿ ಅವರು ಆತ್ಮೀಯ ಶುಭಾಶಯಗಳನ್ನು ಕೋರಿದ್ದು, ಅದಕ್ಕಾಗಿ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು.G7 ಶೃಂಗಸಭೆಯ ನೇಪಥ್ಯದಲ್ಲಿ ಯುನೈಟೆಡ್ ಕಿಂಗ್ ಡಮ್ ಪ್ರಧಾನಿ ಜೊತೆಗೆ ಪ್ರಧಾನ ಮಂತ್ರಿ ಮಾತುಕತೆ
June 14th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುನೈಟೆಡ್ ಕಿಂಗ್ಡಮ್ನ ಪ್ರಧಾನಮಂತ್ರಿ ಶ್ರೀ ರಿಷಿ ಸುನಕ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.ಜಿ-7 ಶೃಂಗಸಭೆಯ ಸಂದರ್ಭದಲ್ಲಿ ಫ್ರಾನ್ಸ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಸಭೆ
June 14th, 03:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ಇಟಲಿಯ ಅಪುಲಿಯಾದಲ್ಲಿ ನಡೆದ ಜಿ7 ಶೃಂಗಸಭೆಯ ನೇಪಥ್ಯದಲ್ಲಿ ದ್ವಿಪಕ್ಷೀಯ ಸಭೆ ನಡೆಸಿದರು. ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡಿದ್ದರಿಂದ ಶುಭಾಶಯ ಕೋರಿದ ಅಧ್ಯಕ್ಷ ಮ್ಯಾಕ್ರನ್ ಅವರಿಗೆ ಪ್ರಧಾನಮಂತ್ರಿ ಧನ್ಯವಾದ ತಿಳಿಸಿದರು.ಇಟಲಿಗೆ ಪ್ರಧಾನಿ ಮೋದಿ ಆಗಮನ
June 14th, 02:34 am
ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇಟಲಿಗೆ ಆಗಮಿಸಿದ್ದಾರೆ. ಈ ಭೇಟಿಯ ವೇಳೆ ಪ್ರಧಾನಿಯವರು ಹಲವಾರು ವಿಶ್ವ ನಾಯಕರ ಜೊತೆಯೂ ಸಭೆ ನಡೆಸಲಿದ್ದಾರೆ.ಜಿ 7 ಅಪುಲಿಯಾ ಶೃಂಗಸಭೆಗಾಗಿ ಇಟಲಿಗೆ ತೆರಳುವ ಮುನ್ನ ಪ್ರಧಾನಮಂತ್ರಿಯವರ ಹೇಳಿಕೆ
June 13th, 05:51 pm
ಜಿ-7 ಶೃಂಗಸಭೆಗಾಗಿ ಸತತ ಮೂರನೇ ಅವಧಿಯಲ್ಲಿ ನನ್ನ ಮೊದಲ ಭೇಟಿ ಇಟಲಿಗೆ ಆಗಿರುವುದು ನನಗೆ ಸಂತೋಷ ತಂದಿದೆ. 2021 ರಲ್ಲಿ ಜಿ 20 ಶೃಂಗಸಭೆಗಾಗಿ ಇಟೆಲಿಗೆ ಭೇಟಿ ನೀಡಿದ್ದನ್ನು ನಾನು ಆತ್ಮೀಯವಾಗಿ ನೆನಪಿಸಿಕೊಳ್ಳುತ್ತೇನೆ. ಕಳೆದ ವರ್ಷ ಪ್ರಧಾನಿ ಮೆಲೋನಿ ಅವರ ಭಾರತದ ಎರಡು ಭೇಟಿಗಳು ನಮ್ಮ ದ್ವಿಪಕ್ಷೀಯ ಕಾರ್ಯಸೂಚಿಯಲ್ಲಿ ವೇಗ ಮತ್ತು ತೀವ್ರತೆ/ಆಳವನ್ನು ತುಂಬುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ಭಾರತ-ಇಟಲಿ ವ್ಯೂಹಾತ್ಮಕ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ಮತ್ತು ಇಂಡೋ-ಪೆಸಿಫಿಕ್ ಹಾಗು ಮೆಡಿಟರೇನಿಯನ್ ಪ್ರದೇಶಗಳಲ್ಲಿ ಸಹಕಾರವನ್ನು ಹೆಚ್ಚಿಸಲು ನಾವು ಬದ್ಧರಾಗಿದ್ದೇವೆ.ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಮಾತುಕತೆ ನಡೆಸಿದರು
April 25th, 08:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ವಿಮೋಚನಾ ದಿನದ 79 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪಿಎಂ ಮೆಲೋನಿ ಮತ್ತು ಇಟಲಿಯ ಜನತೆಗೆ ಪ್ರಧಾನಮಂತ್ರಿ ತಮ್ಮ ಶುಭಾಶಯಗಳನ್ನು ತಿಳಿಸಿದರು.ಬ್ರೆಜಿಲ್ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿಯವರ ಸಭೆ
May 21st, 09:49 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್ನ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರನ್ನು 21 ಮೇ 2023 ರಂದು ಹಿರೋಶಿಮಾದಲ್ಲಿ ಜಿ-7 ಶೃಂಗಸಭೆಯ ಸಂದರ್ಭದಲ್ಲಿ ಭೇಟಿ ಮಾಡಿದರು.ಯುನೈಟೆಡ್ ಕಿಂಗ್ಡಂ ಪ್ರಧಾನಿಯವರೊಂದಿಗೆ ಪ್ರಧಾನ ಮಂತ್ರಿಯವರ ಸಭೆ
May 21st, 09:42 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 21 ಮೇ 2023 ರಂದು ಹಿರೋಶಿಮಾದಲ್ಲಿ ಜಿ-7 ಶೃಂಗಸಭೆಯ ಸಂದರ್ಭದಲ್ಲಿ ಯುನೈಟೆಡ್ ಕಿಂಗ್ಡಮ್ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ರಿಷಿ ಸುನಕ್ ಅವರನ್ನು ಭೇಟಿಯಾದರು.ಉಕ್ರೇನ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಸಭೆ
May 20th, 07:57 pm
ಪ್ರಧಾನಮಂತ್ರಿ ಅವರು 2023ರ ಮೇ 20ರಂದು ಹಿರೋಷಿಮಾದಲ್ಲಿ ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಉಕ್ರೇನ್ ಅಧ್ಯಕ್ಷ ಘನತೆವೆತ್ತ ಶ್ರೀ ವೊಲೊಡಿಮಿರ್ ಝಲೆನ್ಸ್ಕಿ ಅವರನ್ನು ಭೇಟಿ ಮಾಡಿದ್ದರು.ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿಯವರ ಹೇಳಿಕೆಯ ಕನ್ನಡ ಅನುವಾದ
May 20th, 05:16 pm
ಇಂದು ಈ ಕ್ವಾಡ್ ಶೃಂಗಸಭೆಯಲ್ಲಿ ಸ್ನೇಹಿತರೊಂದಿಗೆ ಭಾಗವಹಿಸಲು ನನಗೆ ಸಂತೋಷವಾಗಿದೆ. ಇಂಡೋ-ಪೆಸಿಫಿಕ್ನಲ್ಲಿ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಖಾತ್ರಿಪಡಿಸುವ ಪ್ರಮುಖ ವೇದಿಕೆಯಾಗಿ ಕ್ವಾಡ್ ಗುಂಪು ತನ್ನನ್ನು ಸ್ಥಾಪಿಸಿಕೊಂಡಿದೆ. ಇಂಡೋ-ಪೆಸಿಫಿಕ್ ಪ್ರದೇಶವು ಜಾಗತಿಕ ವ್ಯಾಪಾರ, ನಾವೀನ್ಯತೆ ಮತ್ತು ಬೆಳವಣಿಗೆಯ ಎಂಜಿನ್ ಎಂಬುದರಲ್ಲಿ ಸಂದೇಹವಿಲ್ಲ. ಇಂಡೋ-ಪೆಸಿಫಿಕ್ನ ಭದ್ರತೆ ಮತ್ತು ಯಶಸ್ಸು ಈ ಪ್ರದೇಶಕ್ಕೆ ಮಾತ್ರವಲ್ಲ, ಜಗತ್ತಿಗೆ ಮುಖ್ಯವಾಗಿದೆ ಎಂದು ನಾವು ಸರ್ವಾನುಮತದಿಂದ ಒಪ್ಪುತ್ತೇವೆ. ಹಂಚಿಕೆಯ ಪ್ರಜಾಸತ್ತಾತ್ಮಕ ಮೌಲ್ಯಗಳ ಆಧಾರದ ಮೇಲೆ ರಚನಾತ್ಮಕ ಕಾರ್ಯಸೂಚಿಯೊಂದಿಗೆ, ನಾವು ಮುಂದೆ ಸಾಗುತ್ತಿದ್ದೇವೆ.ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿ ಭಾಗಿ
May 20th, 05:15 pm
ಈ ಎಲ್ಲಾ ನಾಯಕರು ಇಂಡೋ-ಪೆಸಿಫಿಕ್ ವಲಯದ ಬೆಳವಣಿಗೆಗಳ ಬಗ್ಗೆ ಫಲಪ್ರದ ಸಂವಾದ ನಡೆಸಿದರು, ಇದು ಅವರ ಹಂಚಿತ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಕಾರ್ಯತಂತ್ರ ಹಿತಾಸಕ್ತಿಗಳನ್ನು ದೃಢಪಡಿಸಿತು. ಮುಕ್ತ, ನ್ಯಾಯಸಮ್ಮತ ಮತ್ತು ಎಲ್ಲರನ್ನೂ ಒಳಗೊಂಡ ಇಂಡೋ-ಪೆಸಿಫಿಕ್ ವಲಯದ ಅಭಿವೃದ್ಧಿಯ ದೃಷ್ಟಿಕೋನದಿಂದ ಮಾರ್ಗದರ್ಶಿಸಲ್ಪಟ್ಟ ಸಂವಾದ ಅದಾಗಿತ್ತು. ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ ಮತ್ತು ವಿವಾದಗಳ ಶಾಂತಿಯುತ ಪರಿಹಾರದ ತತ್ವಗಳನ್ನು ಎತ್ತಿಹಿಡಿಯುವ ಪ್ರಾಮುಖ್ಯತೆಯನ್ನು ಈ ನಾಯಕರು ಪುನರುಚ್ಚರಿಸಿದರು. ಈ ಸಂದರ್ಭದಲ್ಲಿ, ನಾಯಕರು “ಇಂಡೋ-ಪೆಸಿಫಿಕ್ ವಲಯದ ಅಭಿವೃದ್ಧಿಗಾಗಿ ಅಸ್ತಿತ್ವದಲ್ಲಿರುವ ಪಾಲುದಾರಿಕೆ - ಕ್ವಾಡ್ ನಾಯಕರ ಮುನ್ನೋಟ ಹೇಳಿಕೆ” ಬಿಡುಗಡೆ ಮಾಡಿದರು, ಇದು ಅವರ ತತ್ವದ ಕಾರ್ಯವಿಧಾನವನ್ನು ಸ್ಪಷ್ಟಪಡಿಸುತ್ತದೆ.