ಇಂದು, ಪ್ರಪಂಚದಾದ್ಯಂತದ ಜನರು ಭಾರತದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಬಯಸುತ್ತಾರೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ

October 27th, 11:30 am

ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ' ಮನದ ಮಾತಿಗೆ' ಎಲ್ಲರಿಗೂ ಸ್ವಾಗತ. ನನ್ನ ಜೀವನದ ಅವಿಸ್ಮರಣೀಯ ಕ್ಷಣಗಳು ಯಾವುವು ಎಂದು ನನ್ನನ್ನು ನೀವು ಕೇಳಿದರೆ, ಬಹಳಷ್ಟು ಘಟನೆಗಳು ನೆನಪಿಗೆ ಬರುತ್ತವೆ, ಅದರಲ್ಲೂ ಒಂದು ವಿಶೇಷವಾದ ಕ್ಷಣವಿದೆ, ಅದೇ ಕಳೆದ ವರ್ಷ ನವೆಂಬರ್ 15 ರಂದು ನಾನು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮ ಜಯಂತಿಯಂದು ಜಾರ್ಖಂಡ್‌ನ ಅವರ ಜನ್ಮಸ್ಥಳ ಉಲಿಹಾತು ಗ್ರಾಮಕ್ಕೆ ಹೋಗಿದ್ದು. ನನ್ನ ಮೇಲೆ ಈ ಪ್ರವಾಸದ ಪ್ರಭಾವ ಆಗಾಧವಾಗಿತ್ತು. ಈ ಪುಣ್ಯಭೂಮಿಯ ಮಣ್ಣಿನ ಆಶೀರ್ವಾದ ಪಡೆಯುವ ಭಾಗ್ಯವನ್ನು ಪಡೆದ ದೇಶದ ಮೊದಲ ಪ್ರಧಾನಿ ನಾನಾಗಿದ್ದೇನೆ. ಆ ಕ್ಷಣದಲ್ಲಿ ನನಗೆ ಸ್ವಾತಂತ್ರ್ಯ ಹೋರಾಟದ ಶಕ್ತಿಯ ಅನುಭವವಾದುದಲ್ಲದೆ, ಈ ಭೂಮಿಯ ಶಕ್ತಿಯೊಂದಿಗೆ ಬೆರೆಯುವ ಅವಕಾಶವೂ ಲಭಿಸಿತು. ಒಂದು ನಿರ್ಧಾರವನ್ನು ಪೂರೈಸುವ ಧೈರ್ಯ ಹೇಗೆ ದೇಶದ ಕೋಟ್ಯಾಂತರ ಜನರ ಭವಿಷ್ಯವನ್ನು ಬದಲಾಯಿಸುತ್ತದೆ ಎಂಬುದರ ಅನುಭವವೂ ನನಗಾಯಿತು.

78 ನೇ ಸ್ವಾತಂತ್ರ್ಯೋತ್ಸವದಂದು ಕೆಂಪು ಕೋಟೆ ಆವರಣದಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

August 15th, 03:04 pm

ಭಾಷಣದ ಮುಖ್ಯಾಂಶಗಳು ಈ ಕೆಳಕಂಡಂತಿವೆ

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

August 15th, 01:09 pm

ದೇಶಕ್ಕಾಗಿ ತಮ್ಮ ಪ್ರಾಣತ್ಯಾಗ ಮಾಡಿದ ಮತ್ತು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡ ಅಸಂಖ್ಯಾತ ಪೂಜನೀಯ ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ಗೌರವ ಸಲ್ಲಿಸುವ ಶುಭ ದಿನ, ಶುಭ ಕ್ಷಣ ಇದಾಗಿದೆ. ಅವರು ತಮ್ಮ ಜೀವನದುದ್ದಕ್ಕೂ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು, ಭಾರತ್ ಮಾತಾ ಕಿ ಜೈ ಎಂಬ ಘೋಷಣೆಗಳೊಂದಿಗೆ ಧೈರ್ಯದಿಂದ ನೇಣುಗಂಬವನ್ನು ಅಪ್ಪಿಕೊಂಡರು. ಇದು ಅವರ ಧೈರ್ಯ, ಸಂಕಲ್ಪ ಮತ್ತು ದೇಶಭಕ್ತಿ ಸದ್ಗುಣಗಳನ್ನು ಸ್ಮರಿಸುವ ಹಬ್ಬವಾಗಿದೆ. ಈ ವೀರಕಲಿಗಳಿಂದಾಗಿಯೇ ಈ ಸ್ವಾತಂತ್ರ್ಯದ ಹಬ್ಬದಂದು ಮುಕ್ತವಾಗಿ ಉಸಿರಾಡುವ ಸೌಭಾಗ್ಯ ನಮಗೆ ದಕ್ಕದೆ. ದೇಶವು ಅವರಿಗೆ ಬಹಳ ಋಣಿಯಾಗಿದೆ. ಅಂತಹ ಪ್ರತಿಯೊಬ್ಬ ಮಹಾನ್ ವ್ಯಕ್ತಿಯ ಬಗ್ಗೆ ನಮ್ಮ ಗೌರವ ವನ್ನು ವ್ಯಕ್ತಪಡಿಸೋಣ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 78 ನೇ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಭಾರತದ ಭವಿಷ್ಯಕ್ಕಾಗಿ ಮಹತ್ವಾಕಾಂಕ್ಷೆಯ ದೃಷ್ಟಿಕೋನವನ್ನು ಹೊಂದಿದ್ದಾರೆ

August 15th, 10:16 am

ತಮ್ಮ 78ನೇ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಅಭಿವೃದ್ಧಿಯನ್ನು ರೂಪಿಸುವ, ಹೊಸ ಆವಿಷ್ಕಾರಗಳಿಗೆ ಚಾಲನೆ ನೀಡುವ ಮತ್ತು ವಿವಿಧ ಕ್ಷೇತ್ರಗಳಲ್ಲಿ ಭಾರತವನ್ನು ಜಾಗತಿಕ ನಾಯಕನನ್ನಾಗಿಸುವ ತಮ್ಮ ಸರ್ಕಾರದ ಭವಿಷ್ಯದ ಸರಣಿ ಕಾರ್ಯಕ್ರಮಗಳ ಕುರಿತು ವಿವರಿಸಿದರು.

ಭಾರತವು 78 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತದೆ

August 15th, 07:30 am

78 ನೇ ಸ್ವಾತಂತ್ರ್ಯ ದಿನದಂದು, ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ಭಾರತದ ಭವಿಷ್ಯದ ದೃಷ್ಟಿಕೋನವನ್ನು ವಿವರಿಸಿದರು. 2036 ರ ಒಲಂಪಿಕ್ಸ್‌ನ ಆತಿಥ್ಯದಿಂದ ಸೆಕ್ಯುಲರ್ ಸಿವಿಲ್ ಕೋಡ್ ಅನ್ನು ಚಾಂಪಿಯನ್ ಮಾಡುವವರೆಗೆ, ಪಿಎಂ ಮೋದಿ ಅವರು ಭಾರತದ ಸಾಮೂಹಿಕ ಪ್ರಗತಿ ಮತ್ತು ಪ್ರತಿಯೊಬ್ಬ ನಾಗರಿಕನ ಸಬಲೀಕರಣಕ್ಕೆ ಒತ್ತು ನೀಡಿದರು. ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ಹೊಸ ಹುರುಪಿನೊಂದಿಗೆ ಮುಂದುವರಿಸುವ ಕುರಿತು ಮಾತನಾಡಿದರು. ನಾವೀನ್ಯತೆ, ಶಿಕ್ಷಣ ಮತ್ತು ಜಾಗತಿಕ ನಾಯಕತ್ವದ ಮೇಲೆ ಕೇಂದ್ರೀಕರಿಸಿದ ಅವರು 2047 ರ ವೇಳೆಗೆ ಭಾರತವು ವಿಕಸಿತ ಭಾರತವಾಗುವುದನ್ನು ತಡೆಯಲು ಯಾವುದೂ ಸಾಧ್ಯವಿಲ್ಲ ಎಂದು ಅವರು ಪುನರುಚ್ಚರಿಸಿದರು.

ಭಾರತದ ಟಾಪ್ ಗೇಮರುಗಳು 'ಕೂಲ್' ಪ್ರಧಾನಿ ಮೋದಿಯನ್ನು ಭೇಟಿಯಾದರು

April 13th, 12:33 pm

ಪಿಸಿ ಮತ್ತು ವಿಆರ್ ಗೇಮಿಂಗ್ ಜಗತ್ತಿನಲ್ಲಿ ಮುಳುಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಟಾಪ್ ಗೇಮರ್‌ಗಳೊಂದಿಗೆ ಅನನ್ಯ ಸಂವಾದದಲ್ಲಿ ತೊಡಗಿದ್ದಾರೆ. ಅಧಿವೇಶನದಲ್ಲಿ, ಪ್ರಧಾನಿ ಮೋದಿ ಅವರು ಗೇಮಿಂಗ್ ಸೆಷನ್‌ಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರು, ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಗೇಮಿಂಗ್ ಉದ್ಯಮದ ಬಗ್ಗೆ ತಮ್ಮ ಉತ್ಸಾಹವನ್ನು ಪ್ರದರ್ಶಿಸಿದರು.