ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024 ರಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ

December 11th, 05:00 pm

ನಾನು ಯಾವಾಗಲೂ ಕೆಂಪು ಕೋಟೆಯಿಂದ ಒಂದು ವಿಷಯವನ್ನು ಉಲ್ಲೇಖಿಸಿದ್ದೇನೆ ಎಂದು ನೀವೆಲ್ಲರೂ ನೆನಪಿನಲ್ಲಿಡಬೇಕು. 'ಸಬ್ ಕಾ ಪ್ರಯಾಸ್ ' (ಎಲ್ಲರ ಪ್ರಯತ್ನ) ಮುಖ್ಯ ಎಂದು ನಾನು ಹೇಳಿದ್ದೇನೆ - ಇಂದಿನ ಭಾರತವು ಎಲ್ಲರ ಸಾಮೂಹಿಕ ಪ್ರಯತ್ನಗಳಿಂದ ಮಾತ್ರ ತ್ವರಿತ ಗತಿಯಲ್ಲಿ ಮುಂದುವರಿಯಬಹುದು. ಇಂದು ಇದೇ ತತ್ವಕ್ಕೆ ಒಂದು ಉದಾಹರಣೆಯಾಗಿದೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ನ ಈ ಗ್ರ್ಯಾಂಡ್ ಫಿನಾಲೆಗಾಗಿ ನಾನು ಕುತೂಹಲದಿಂದ ಕಾಯುತ್ತಿದ್ದೇನೆ. ನಿಮ್ಮಂತಹ ಯುವ ನಾವೀನ್ಯಕಾರರ ನಡುವೆ ಇರಲು ನನಗೆ ಅವಕಾಶ ಸಿಕ್ಕಾಗಲೆಲ್ಲಾ, ಕಲಿಯಲು, ಅರ್ಥಮಾಡಿಕೊಳ್ಳಲು ಮತ್ತು ಹೊಸ ಒಳನೋಟಗಳನ್ನು ಪಡೆಯಲು ನನಗೆ ಅವಕಾಶ ಸಿಗುತ್ತದೆ. ನಿಮ್ಮೆಲ್ಲರಿಂದ ನನಗೆ ಹೆಚ್ಚಿನ ನಿರೀಕ್ಷೆಗಳಿವೆ. ನಿಮ್ಮಂತಹ ಯುವ ನಾವೀನ್ಯಕಾರರು 21ನೇ ಶತಮಾನದ ಭಾರತವನ್ನು ನೋಡುವ ವಿಶಿಷ್ಟ ದೃಷ್ಟಿಕೋನವನ್ನು ಹೊಂದಿದ್ದಾರೆ ಮತ್ತು ಅದಕ್ಕಾಗಿಯೇ ನಿಮ್ಮ ಪರಿಹಾರಗಳು ಸಹ ಅನನ್ಯವಾಗಿವೆ. ನೀವು ಹೊಸ ಸವಾಲುಗಳನ್ನು ಎದುರಿಸಿದಾಗ, ನೀವು ಹೊಸ ಮತ್ತು ಸೃಜನಶೀಲ ಪರಿಹಾರಗಳನ್ನು ಕಂಡುಕೊಳ್ಳುವ ಮೂಲಕ ಪ್ರತಿಕ್ರಿಯಿಸುತ್ತೀರಿ. ನಾನು ಈ ಹಿಂದೆ ಹಲವಾರು ಹ್ಯಾಕಥಾನ್ ಗಳ ಭಾಗವಾಗಿದ್ದೇನೆ ಮತ್ತು ನೀವು ನನ್ನನ್ನು ಎಂದಿಗೂ ನಿರಾಸೆಗೊಳಿಸಿಲ್ಲ. ನೀವು ಯಾವಾಗಲೂ ನಿಮ್ಮ ಮೇಲಿನ ನನ್ನ ನಂಬಿಕೆಯನ್ನು ಬಲಪಡಿಸಿದ್ದೀರಿ. ಈ ಹಿಂದೆ ಭಾಗವಹಿಸಿದ ತಂಡಗಳು ಪರಿಹಾರಗಳನ್ನು ಒದಗಿಸಿವೆ, ಅವುಗಳನ್ನು ಈಗ ವಿವಿಧ ಸಚಿವಾಲಯಗಳಲ್ಲಿ ಪರಿಣಾಮಕಾರಿಯಾಗಿ ಬಳಸಲಾಗುತ್ತಿದೆ. ಈಗ, ಈ ಹ್ಯಾಕಥಾನ್ ನಲ್ಲಿ, ದೇಶದ ವಿವಿಧ ಭಾಗಗಳ ತಂಡಗಳು ಏನು ಕೆಲಸ ಮಾಡುತ್ತಿವೆ ಎಂದು ತಿಳಿಯಲು ನನಗೆ ಕುತೂಹಲವಿದೆ. ನಿಮ್ಮ ಆವಿಷ್ಕಾರಗಳ ಬಗ್ಗೆ ತಿಳಿದುಕೊಳ್ಳಲು ನಾನು ತುಂಬಾ ಉತ್ಸುಕನಾಗಿದ್ದೇನೆ. ಆದ್ದರಿಂದ, ಪ್ರಾರಂಭಿಸೋಣ! ಯಾರು ಮೊದಲು ನಮ್ಮೊಂದಿಗೆ ಮಾತನಾಡಲು ಬಯಸುತ್ತಾರೆ?

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್-2024ರ ಪ್ರತಿನಿಧಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ

December 11th, 04:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024ರ ಗ್ರ್ಯಾಂಡ್ ಫಿನಾಲೆಯ ಯುವ ನವೋದ್ಯಮಿಗಳೊಂದಿಗೆ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕೆಂಪುಕೋಟೆಯಿಂದ ಮಾಡಿದ ಭಾಷಣದಲ್ಲಿ ‘ಸಬ್ಕಾ ಪ್ರಯಾಸ್’ ಪುನರುಚ್ಚಾರವನ್ನು ನೆನಪಿಸಿದರು. ಇಂದಿನ ಭಾರತವು ‘ಸಬ್ಕಾ ಪ್ರಾರ್ಥನೆ’ ಅಥವಾ ಪ್ರತಿಯೊಬ್ಬರ ಪ್ರಯತ್ನದಿಂದ ತ್ವರಿತ ಗತಿಯಲ್ಲಿ ಪ್ರಗತಿ ಹೊಂದಬಹುದು ಎಂಬುದಕ್ಕೆ ಇಂದಿನ ಸಂದರ್ಭವು ಒಂದು ಉದಾಹರಣೆಯಾಗಿದೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್‌ನ ಗ್ರ್ಯಾಂಡ್ ಫಿನಾಲೆಗಾಗಿ ನಾನು ಕುತೂಹಲದಿಂದ ಕಾಯುತ್ತಿದ್ದೇನೆ, ಯುವ ನವೋದ್ಯಮಿಗಳ ನಡುವೆ ಇರುವಾಗ ಹೊಸದನ್ನು ಕಲಿಯಲು ಮತ್ತು ಅರ್ಥ ಮಾಡಿಕೊಳ್ಳಲು ನನಗೆ ಅವಕಾಶ ಸಿಗುತ್ತದೆ. ಯುವ ನವೋದ್ಯಮಿಗಳ ಮೇಲೆ ತಮ್ಮ ನಿರೀಕ್ಷೆಗಳು ಹೆಚ್ಚಾಗಿವೆ ಎಂದ ಪ್ರಧಾನ ಮಂತ್ರಿ, ಅವರು 21ನೇ ಶತಮಾನದ ಭಾರತವನ್ನು ವಿಭಿನ್ನವಾಗಿ ನೋಡುವ ದೃಷ್ಟಿಕೋನ ಹೊಂದಿದ್ದಾರೆ. ಆದ್ದರಿಂದ, ನಿಮ್ಮ ಪರಿಹಾರಗಳು ಸಹ ವಿಭಿನ್ನವಾಗಿವೆ ಮತ್ತು ಹೊಸ ಸವಾಲು ಬಂದಾಗ, ನೀವು ಹೊಸ ಮತ್ತು ಅನನ್ಯ ಪರಿಹಾರಗಳೊಂದಿಗೆ ಬರುತ್ತೀರಿ. ಈ ಹಿಂದೆ ಹ್ಯಾಕಥಾನ್‌ಗಳ ಭಾಗವಾಗಿದ್ದುದನ್ನು ಸ್ಮರಿಸಿದ ಪ್ರಧಾನ ಮಂತ್ರಿ, ಅದರ ಫಲಿತಾಂಶಗಳಿಂದ ಎಂದಿಗೂ ನಿರಾಶೆಗೊಂಡಿಲ್ಲ. ನೀವು ನನ್ನ ನಂಬಿಕೆಯನ್ನು ಮಾತ್ರ ಬಲಪಡಿಸಿದ್ದೀರಿ, ಹಿಂದೆ ಒದಗಿಸಿದ ಪರಿಹಾರಗಳನ್ನು ವಿವಿಧ ಸಚಿವಾಲಯಗಳಲ್ಲಿ ಬಳಸಲಾಗುತ್ತಿದೆ. ಹ್ಯಾಕಥಾನ್ ಪ್ರತಿನಿಧಿಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಉತ್ಸುಕತೆ ಹೊಂದಿರುವುದಾಗಿ ತಿಳಿಸಿದ ಅವರು, ಸಂವಾದ ಪ್ರಾರಂಭಿಸಿದರು.

'ಮನ್ ಕಿ ಬಾತ್' ಕೇಳುಗರು ಈ ಕಾರ್ಯಕ್ರಮದ ನಿಜವಾದ ನಿರೂಪಕರು: ಪ್ರಧಾನಿ ಮೋದಿ

September 29th, 11:30 am

ನನ್ನ ಪ್ರೀತಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ ನಾವೆಲ್ಲರೂ 'ಮನದ ಮಾತಿನ' ಮೂಲಕ ಒಗ್ಗೂಡುವ ಅವಕಾಶ ಲಭಿಸಿದೆ. ಇಂದಿನ ಈ ಕಂತು ನನ್ನನ್ನು ಬಹಳ ಭಾವುಕನನ್ನಾಗಿಸಲಿದೆ, ಅನೇಕ ಹಳೆಯ ನೆನಪುಗಳು ನನ್ನನ್ನು ಮುತ್ತಿವೆ - ಕಾರಣ ಏನೆಂದರೆ 'ಮನದ ಮಾತಿನ' ನಮ್ಮ ಈ ಪಯಣಕ್ಕೆ 10 ವರ್ಷಗಳು ತುಂಬುತ್ತಿದೆ. 10 ವರ್ಷಗಳ ಹಿಂದೆ ಅಕ್ಟೋಬರ್ 3 ರಂದು ವಿಜಯದಶಮಿಯ ದಿನದಂದು 'ಮನದ ಮಾತು’ ಪ್ರಾರಂಭವಾಗಿತ್ತು ಮತ್ತು ಈ ವರ್ಷ ಅಕ್ಟೋಬರ್ 3 ರಂದು 'ಮನದ ಮಾತಿಗೆ ' 10 ವರ್ಷತುಂಬುವ ಸಂದರ್ಭ ನವರಾತ್ರಿಯ ಮೊದಲ ದಿನವಾಗಿದೆ. 'ಮನದ ಮಾತಿನ’ ಈ ಸುದೀರ್ಘ ಪಯಣದಲ್ಲಿ ನಾನು ಎಂದೂ ಮರೆಯಲಾಗದ ಇಂತಹ ಹಲವಾರು ಮೈಲಿಗಲ್ಲುಗಳಿವೆ, ನಮ್ಮ ಈ ಪಯಣದಲ್ಲಿ ನಿರಂತರ ಸಹಯೋಗವನ್ನು ನೀಡಿದಂತಹ ' ಮನದ ಮಾತಿನ' ಕೋಟ್ಯಂತರ ಶ್ರೋತೃ ಬಾಂಧವರಿದ್ದಾರೆ. ದೇಶದ ಮೂಲೆ ಮೂಲೆಗಳಿಂದ ಅವರು ಮಾಹಿತಿಯನ್ನು ಒದಗಿಸಿದರು. ಮನದ ಮಾತಿನ ಶ್ರೋತೃಗಳೇ ಈ ಕಾರ್ಯಕ್ರಮದ ನಿಜವಾದ ರೂವಾರಿಗಳು. ಸಾಮಾನ್ಯವಾಗಿ ಎಲ್ಲಿಯವರೆಗೆ ರೋಚಕ ವಿಷಯಗಳನ್ನು ಮಾತನಾಡುವುದಿಲ್ಲವೋ, ನಕಾರಾತ್ಮಕ ವಿಷಯಗಳನ್ನು ಮಾತನಾಡುವುದಿಲ್ಲವೋ ಅಲ್ಲಿವರೆಗೆ ಅದು ಹೆಚ್ಚಿನ ಗಮನ ಸೆಳೆಯುವುದಿಲ್ಲ ಎನ್ನಲಾಗುತ್ತದೆ. ಆದರೆ ಮನದ ಮಾತು ದೇಶದ ಜನರು ಸಕಾರಾತ್ಮಕ ಮಾಹಿತಿಗಾಗಿ , ಎಷ್ಟು ಉತ್ಸುಕರಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಿದೆ. ಸಕಾರಾತ್ಮಕ ಮಾತು, ಪ್ರೇರಣಾತ್ಮಕ ಉದಾಹರಣೆಗಳು, ಸ್ಫೂರ್ತಿದಾಯಕ ಕಥೆಗಳು ಜನರಿಗೆ ಬಹಳ ಇಷ್ಟವಾಗುತ್ತವೆ. ಕೇವಲ ಮಳೆಹನಿಗಳನ್ನು ಮಾತ್ರ ಕುಡಿಯುವಂತಹ ಚಾತಕ ಪಕ್ಷಿಯಂತೆ ಜನರು ದೇಶದ ಸೌಲಭ್ಯಗಳ ಬಗ್ಗೆ, ಜನರ ಸಾಮೂಹಿಕ ಸಾಧನೆಗಳ ಬಗ್ಗೆ ಮನದ ಮಾತಿನ ಮೂಲಕ ಎಷ್ಟು ಹೆಮ್ಮೆಯಿಂದ ಕೇಳುತ್ತಾರೆ. ಮನದ ಮಾತಿನ 10 ವರ್ಷಗಳ ಪಯಣ ಎಷ್ಟು ಅದ್ಭುತವಾದ ಹಾರವನ್ನು ಸಿದ್ಧಗೊಳಿಸಿದೆ ಎಂದರೆ ಪ್ರತಿ ಸಂಚಿಕೆಯೊಂದಿಗೆ ಹೊಸ ಯಶೋಗಾಥೆಗಳು, ಹೊಸ ಕೀರ್ತಿವಂತರು ಮತ್ತು ಹೊಸ ವ್ಯಕ್ತಿತ್ವಗಳನ್ನು ಸೇರಿಸುತ್ತಾ ಸಾಗಿದೆ. ನಮ್ಮ ಸಮಾಜದಲ್ಲಿ ಸಾಮಾಜಿಕ ಹಿತದೃಷ್ಟಿಯ ಭಾವನೆಯಿಂದ ಯಾವುದೇ ಕೆಲಸ ಮಾಡಿದರೂ ಅವರಿಗೆ 'ಮನದ ಮಾತಿನ' ಮೂಲಕ ಗೌರವ ಲಭಿಸುತ್ತದೆ. 'ಮನದ ಮಾತಿ'ಗೆ ಬಂದ ಪತ್ರಗಳನ್ನು ನಾನು ಓದಿದಾಗ ನನ್ನ ಮನವೂ ಹೆಮ್ಮೆಯಿಂದ ಬೀಗುತ್ತದೆ. ನಮ್ಮ ದೇಶದಲ್ಲಿ ಅದೆಷ್ಟೋ ಪ್ರತಿಭಾವಂತರಿದ್ದಾರೆ, ಅವರು ತಮ್ಮ ಇಡೀ ಜೀವನವನ್ನು ಜನರ ನಿಸ್ವಾರ್ಥ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ. ಅವರ ಬಗ್ಗೆ ತಿಳಿಯುವುದು ನನ್ನಲ್ಲಿ ಹೊಸ ಶಕ್ತಿಯನ್ನು ತುಂಬುತ್ತದೆ. 'ಮನದ ಮಾತಿನ' ಈ ಸಂಪೂರ್ಣ ಪ್ರಕ್ರಿಯೆಯು ನನಗೆ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆಯುವಂತಿದೆ. ಮನದ ಮಾತಿನ ಪ್ರತಿ ವಿಷಯ, ಪ್ರತಿ ಘಟನೆ, ಪ್ರತಿ ಪತ್ರವನ್ನು ನೆನಪಿಸಿಕೊಂಡಾಗ, ನನಗೆ ಭಗವಂತನ ರೂಪದಲ್ಲಿರುವ ಜನತಾ ಜನಾರ್ದನನ ದರ್ಶನ ಪಡೆದಂತೆ ಭಾಸವಾಗುತ್ತದೆ.

"ಮಾಧ್ಯಮ ಮತ್ತು ಮನರಂಜನಾ ವಲಯವು ಗಮನಾರ್ಹ ಅಭಿವೃದ್ದಿಗೆ ಸಿದ್ಧವಾಗಿದೆ "

September 18th, 04:24 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು, ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್, ಕಾಮಿಕ್ಸ್ ಮತ್ತು ಎಕ್ಸ್ಟೆಂಡೆಡ್ ರಿಯಾಲಿಟಿ (ಎವಿಜಿಸಿ-ಎಕ್ಸ್.ಆರ್) ಗಾಗಿ ನ್ಯಾಷನಲ್ ಸೆಂಟರ್ ಆಫ್ ಎಕ್ಸಲೆನ್ಸ್ (ಎನ್.ಸಿ.ಒ.ಇ) ಅನ್ನು ಕಂಪನಿಗಳ ಕಾಯಿದೆ, 2013 ಅಡಿಯಲ್ಲಿ ಸೆಕ್ಷನ್ 8 ಕಂಪನಿಯಾಗಿ ಸ್ಥಾಪಿಸಲು ಅನುಮೋದನೆ ನೀಡಿದೆ. ಭಾರತದಲ್ಲಿ ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ & ಇಂಡಸ್ಟ್ರಿ ಮತ್ತು ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿಯೊಂದಿಗೆ ಜೊತೆಗೂಡಿ ಭಾರತ ಸರ್ಕಾರದೊಂದಿಗೆ ಪಾಲುದಾರರಾಗಿ ಉದ್ಯಮ ಸಂಸ್ಥೆಗಳನ್ನು ಪ್ರತಿನಿಧಿಸುತ್ತದೆ.

ಭಾರತದ ಟಾಪ್ ಗೇಮರುಗಳು 'ಕೂಲ್' ಪ್ರಧಾನಿ ಮೋದಿಯನ್ನು ಭೇಟಿಯಾದರು

April 13th, 12:33 pm

ಪಿಸಿ ಮತ್ತು ವಿಆರ್ ಗೇಮಿಂಗ್ ಜಗತ್ತಿನಲ್ಲಿ ಮುಳುಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಟಾಪ್ ಗೇಮರ್‌ಗಳೊಂದಿಗೆ ಅನನ್ಯ ಸಂವಾದದಲ್ಲಿ ತೊಡಗಿದ್ದಾರೆ. ಅಧಿವೇಶನದಲ್ಲಿ, ಪ್ರಧಾನಿ ಮೋದಿ ಅವರು ಗೇಮಿಂಗ್ ಸೆಷನ್‌ಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರು, ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಗೇಮಿಂಗ್ ಉದ್ಯಮದ ಬಗ್ಗೆ ತಮ್ಮ ಉತ್ಸಾಹವನ್ನು ಪ್ರದರ್ಶಿಸಿದರು.