ಚೆಸ್ ಒಲಿಂಪಿಯಾಡ್ ವಿಜೇತರೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಇಂಗ್ಲಿಷ್ ಅವತರಣಿಕೆ
September 26th, 12:15 pm
ಸರ್, ಭಾರತವು ಎರಡೂ ಚಿನ್ನದ ಪದಕಗಳನ್ನು ಗೆದ್ದಿರುವುದು ಇದೇ ಮೊದಲು, ಮತ್ತು ತಂಡದ ಪ್ರದರ್ಶನ ಗಮನಾರ್ಹವಾಗಿದೆ. ಬಾಲಕರು 22 ರಲ್ಲಿ 21 ಅಂಕಗಳನ್ನು ಗಳಿಸಿದರೆ, ಬಾಲಕಿಯರು 22 ರಲ್ಲಿ 19 ಅಂಕಗಳನ್ನು ಗಳಿಸಿದರು. ಒಟ್ಟಾರೆಯಾಗಿ, ನಾವು 44 ರಲ್ಲಿ 40 ಅಂಕಗಳನ್ನು ಗಳಿಸಿದ್ದೇವೆ. ಇಷ್ಟು ದೊಡ್ಡ ಮತ್ತು ಪ್ರಭಾವಶಾಲಿ ಪ್ರದರ್ಶನವು ಹಿಂದೆಂದೂ ಆಗಿಲ್ಲ.ಪ್ರಧಾನಿ ಮೋದಿಯವರು ನಮ್ಮ ಚೆಸ್ ಚಾಂಪಿಯನ್‌ಗಳನ್ನು ಭೇಟಿಯಾಗಿ ಪ್ರೋತ್ಸಾಹಿಸುತ್ತಾರೆ
September 26th, 12:00 pm
ಭಾರತದ ಚೆಸ್ ತಂಡ ಐತಿಹಾಸಿಕ ಉಭಯ ಚಿನ್ನ ಗೆದ್ದ ನಂತರ ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿದರು. ಚರ್ಚೆಯು ಅವರ ಕಠಿಣ ಪರಿಶ್ರಮ, ಚೆಸ್‌ನ ಹೆಚ್ಚುತ್ತಿರುವ ಜನಪ್ರಿಯತೆ, ಆಟದ ಮೇಲೆ AI ಪ್ರಭಾವ ಮತ್ತು ಯಶಸ್ಸನ್ನು ಸಾಧಿಸುವಲ್ಲಿ ನಿರ್ಣಯ ಮತ್ತು ತಂಡದ ಕೆಲಸಗಳ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿತು.ಗುಜರಾತ್‌ನ ಗಾಂಧಿನಗರದಲ್ಲಿ ರಿ-ಇನ್ವೆಸ್ಟ್ 2024 ಸಮ್ಮೇಳನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 16th, 11:30 am
ಗುಜರಾತ್ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ, ಶ್ರೀ ಭೂಪೇಂದ್ರಭಾಯಿ ಪಟೇಲ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ರಾಜಸ್ಥಾನ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಶರ್ಮಾ ಜಿ, ಮಧ್ಯಪ್ರದೇಶ ಮುಖ್ಯಮಂತ್ರಿ ಶ್ರೀ ಮೋಹನ್ ಯಾದವ್ ಜಿ, ಛತ್ತೀಸ್‌ಗಢ ಮುಖ್ಯಮಂತ್ರಿ ಮತ್ತು ಗೋವಾ ಮುಖ್ಯಮಂತ್ರಿಗಳೆ, ಸಂಪು ಸಹೋದ್ಯೋಗಿಗಳಾದ ಪ್ರಲ್ಹಾದ್ ಜೋಶಿ ಮತ್ತು ಶ್ರೀಪಾದ್ ನಾಯ್ಕ್ ಜಿ, ಜರ್ಮನಿಯ ಆರ್ಥಿಕ ಸಹಕಾರ ಸಚಿವರು ಮತ್ತು ಡೆನ್ಮಾರ್ಕ್‌ನ ಕೈಗಾರಿಕಾ ವ್ಯವಹಾರ ಸಚಿವರು ಸೇರಿದಂತೆ ವಿದೇಶಿ ಗಣ್ಯ ಅತಿಥಿಗಳೆ, ವಿವಿಧ ರಾಜ್ಯಗಳ ಇಂಧನ ಸಚಿವರೆ, ಹಲವಾರು ದೇಶಗಳ ಪ್ರತಿನಿಧಿಗಳೆ, ಇಲ್ಲಿ ನೆರೆದಿರುವ ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಗಾಂಧಿನಗರದಲ್ಲಿ 4ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶ ಮತ್ತು ಎಕ್ಸ್ ಪೋ (ಮರು ಹೂಡಿಕೆ) ಉದ್ಘಾಟಿಸಿದರು
September 16th, 11:11 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ 4ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶ ಮತ್ತು ಎಕ್ಸ್ ಪೋ (ಮರು ಹೂಡಿಕೆ) ಉದ್ಘಾಟಿಸಿದರು. 3 ದಿನಗಳ ಶೃಂಗಸಭೆಯು 200 ಗಿಗಾವ್ಯಾಟ್ ಗಿಂತ ಹೆಚ್ಚು ಸ್ಥಾಪಿತ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯದ ಭಾರತದ ಗಮನಾರ್ಹ ಸಾಧನೆಗೆ ಪ್ರಮುಖ ಕೊಡುಗೆ ನೀಡಿದವರನ್ನು ಗೌರವಿಸುತ್ತದೆ. ಸಾರ್ವಜನಿಕ ಮತ್ತು ಖಾಸಗಿ ವಲಯದ ಕಂಪನಿಗಳು, ನವೋದ್ಯಮಗಳು ಮತ್ತು ಪ್ರಮುಖ ಉದ್ಯಮದ ಉದ್ದಿಮಿಗಳ ಅತ್ಯಾಧುನಿಕ ಆವಿಷ್ಕಾರಗಳನ್ನು ಪ್ರದರ್ಶಿಸುವ ಪ್ರದರ್ಶನವನ್ನು ಶ್ರೀ ನರೇಂದ್ರ ಮೋದಿ ವೀಕ್ಷಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಸೋಮನಾಥ ಟ್ರಸ್ಟ್‌ನ ಸಭೆಯ ಅಧ್ಯಕ್ಷತೆ ವಹಿಸಿದ್ದರು
September 16th, 10:29 am
ಇಂದು ನಡೆದ ಶ್ರೀ ಸೋಮನಾಥ ಟ್ರಸ್ಟ್‌ನ ಸಭೆಯ ಅಧ್ಯಕ್ಷತೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಹಿಸಿದ್ದರು.ಸೆಪ್ಟೆಂಬರ್ 15-17ರ ವರೆಗೆ ಪ್ರಧಾನಮಂತ್ರಿ ಅವರು ಜಾರ್ಖಂಡ್, ಗುಜರಾತ್ ಮತ್ತು ಒಡಿಶಾಗೆ ಭೇಟಿ ನೀಡಲಿದ್ದಾರೆ
September 14th, 09:53 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 15 ರಂದು ಜಾರ್ಖಂಡ್‌ಗೆ ಭೇಟಿ ನೀಡಲಿದ್ದು, ಅಂದು ಬೆಳಗ್ಗೆ ಸುಮಾರು 10 ಗಂಟೆಗೆ ಅವರು ಟಾಟಾನಗರ-ಪಾಟ್ನಾ ನಡುವಿನ ವಂದೇ ಭಾರತ್ ರೈಲಿಗೆ ಜಾರ್ಖಂಡ್‌ನ ಟಾಟಾನಗರ ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರುನಿಶಾನೆ ತೋರಲಿದ್ದಾರೆ. ಬೆಳಗ್ಗೆ 10.30ರ ಸುಮಾರಿಗೆ ಅವರು 660 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ವಿವಿಧ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಜಾರ್ಖಂಡ್‌ನ ಟಾಟಾನಗರದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ(ಪಿಎಂಎವೈ-ಜಿ) ಯೋಜನೆಯ 20 ಸಾವಿರ ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ವಿತರಿಸಲಿದ್ದಾರೆ.ʻವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆʼಯ 10 ನೇ ಆವೃತ್ತಿಯಲ್ಲಿ ಪ್ರಧಾನಮಂತ್ರಿಯವರ ದೂರದೃಷ್ಟಿಯನ್ನು ಶ್ಲಾಘಿಸಿದ ಜಾಗತಿಕ ಉದ್ಯಮ ಮುಖಂಡರು
January 10th, 12:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗಾಂಧಿನಗರದ ʻಮಹಾತ್ಮಾ ಮಂದಿರʼದಲ್ಲಿ ಗುಜರಾತ್ ಜಾಗತಿಕ ಹೂಡಿಕೆದಾರರ ಸಮಾವೇಶದ 10ನೇ ಆವೃತ್ತಿಯಾದ ʻವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆ-2024ʼಕ್ಕೆ ಚಾಲನೆ ನೀಡಿದರು. ಈ ವರ್ಷದ ಶೃಂಗಸಭೆಯು 'ಭವಿಷ್ಯದ ಹೆಬ್ಬಾಗಿಲು' ವಿಷಯಾಧಾರಿತವಾಗಿ ಆಯೋಜನೆಗೊಂಡಿದ್ದು, 34 ಪಾಲುದಾರ ರಾಷ್ಟ್ರಗಳು ಮತ್ತು 16 ಪಾಲುದಾರ ಸಂಸ್ಥೆಗಳು ಭಾಗವಹಿಸಿವೆ. ಈಶಾನ್ಯ ಪ್ರದೇಶಗಳಲ್ಲಿ ಹೂಡಿಕೆಯ ಅವಕಾಶಗಳನ್ನು ಪ್ರದರ್ಶಿಸಲು ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವಾಲಯವು ಈ ಶೃಂಗಸಭೆಯನ್ನು ವೇದಿಕೆಯಾಗಿ ಬಳಸುತ್ತಿದೆ.ಗುಜರಾತ್‌ನ ಗಾಂಧಿನಗರದಲ್ಲಿ ಸ್ಪಂದನಾಶೀಲ(ವೈಬ್ರೆಂಟ್) ಗುಜರಾತ್ ಶೃಂಗಸಭೆ 2024 ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
January 10th, 10:30 am
2024ರ ಹೊಸ ವರ್ಷಕ್ಕೆ ನಾನು ನಿಮಗೆಲ್ಲರಿಗೂ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಭಾರತವು ಇತ್ತೀಚೆಗೆ ತನ್ನ 75ನೇ ಸ್ವಾತಂತ್ರ್ಯ ಅಮೃತ ವರ್ಷವನ್ನು ಆಚರಿಸಿದೆ. ನಮ್ಮ ರಾಷ್ಟ್ರದ ಸ್ವಾತಂತ್ರ್ಯದ ಶತಮಾನೋತ್ಸವದ ಸಂಭ್ರಮಾಚರಣೆಯ ಮೂಲಕ ಅಭಿವೃದ್ಧಿ ಹೊಂದಿದ ಸ್ಥಾನಮಾನ ಸಾಧಿಸುವ ಗುರಿಯೊಂದಿಗೆ ಮುಂದಿನ 25 ವರ್ಷಗಳ ಗುರಿಗಳತ್ತ ಶ್ರದ್ಧೆಯಿಂದ ಕೆಲಸ ಮಾಡುತ್ತಿದೆ. ಈ 25 ವರ್ಷಗಳ ಅಧಿಕಾರಾವಧಿಯು ಭಾರತಕ್ಕೆ 'ಅಮೃತ ಕಾಲ'ದ ಅವಧಿಯಾಗಿದೆ. ಇದು ತಾಜಾ ಆಕಾಂಕ್ಷೆಗಳು, ಹೊಸ ನಿರ್ಣಯಗಳು ಮತ್ತು ನಿರಂತರ ಸಾಧನೆಗಳ ಅವಧಿಯನ್ನು ಸೂಚಿಸುತ್ತದೆ. ಈ ಮೊದಲ ರೋಮಾಂಚಕ ಅಥವಾ ಸ್ಪಂದನಾಶೀಲ ಗುಜರಾತ್ ಜಾಗತಿಕ ಶೃಂಗಸಭೆಯು 'ಅಮೃತ ಕಾಲ'ದ ಸಮಯದಲ್ಲಿ ನಡೆದಿರುವುದು ಅಪಾರ ಮಹತ್ವ ಹೊಂದಿದೆ. ಈ ಶೃಂಗಸಭೆಯಲ್ಲಿ ನಮ್ಮೊಂದಿಗೆ ಸೇರಿಕೊಂಡಿರುವ 100ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾರತದ ಅಭಿವೃದ್ಧಿ ಪಯಣದಲ್ಲಿ ಅಮೂಲ್ಯ ಮಿತ್ರರಾಗಿದ್ದಾರೆ. ನಾನು ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ ಮತ್ತು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. 10ನೇ ಆವೃತ್ತಿಯ ವೈಬ್ರೆಂಟ್ ಗ್ಲೋಬಲ್ ಶೃಂಗಸಭೆಯನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
January 10th, 09:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಾಂಧಿನಗರದ ಮಹಾತ್ಮಮಂದಿರದಲ್ಲಿಂದು 10ನೇ ಆವೃತ್ತಿಯ ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆಯನ್ನು ಉದ್ಘಾಟಿಸಿದರು. ಶೃಂಗಸಭೆಯ ಈ ವರ್ಷದ ಘೋಷವಾಕ್ಯ “ಭವಿಷ್ಯಕ್ಕೆ ಹೆಬ್ಬಾಗಿಲು’’ ಎಂದಾಗಿದೆ ಮತ್ತು ಇದರಲ್ಲಿ 34 ಪಾಲುದಾರ ದೇಶಗಳು ಹಾಗೂ 16 ಪಾಲುದಾರ ಸಂಸ್ಥೆಗಳು ಭಾಗವಹಿಸಿವೆ. ಈಶಾನ್ಯ ರಾಜ್ಯಗಳಲ್ಲಿರುವ ಹೂಡಿಕೆ ಅವಕಾಶಗಳನ್ನು ಬಿಂಬಿಸಲು ಈಶಾನ್ಯ ರಾಜ್ಯಗಳ ಅಭಿವೃದ್ಧಿ ಸಚಿವಾಲಯ ಈ ಶೃಂಗಸಭೆಯನ್ನು ವೇದಿಕೆಯನ್ನಾಗಿ ಬಳಸಿಕೊಳ್ಳುತ್ತಿದೆ.PM Modi meets CEOs of global firms in Gandhinagar, Gujarat
January 09th, 04:30 pm
Prime Minister Narendra Modi met CEOs of various global organisations and institutes in Gandhinagar, Gujarat. These included Sultan Ahmed Bin Sulayem of DP World, Mr. Sanjay Mehrotra of Micron Technology, Professor Iain Martin of Deakin University, Mr. Keith Svendsen of A.P. Moller – Maersk and Mr. Toshihiro Suzuki of Suzuki Motor Corp.10ನೇ ವೈಬ್ರೆಂಟ್ ಗುಜರಾತ್ ಗ್ಲೋಬಲ್ ಶೃಂಗಸಭೆ 2024 - ಸಂದರ್ಭದಲ್ಲಿ ಮೊಜಾಂಬಿಕ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
January 09th, 02:03 pm
ಮೊಜಾಂಬಿಕ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಫಿಲಿಪ್ ಜೆಸಿಂಟೊ ನ್ಯೂಸಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 9 ಜನವರಿ 2024 ರಂದು ಗಾಂಧಿನಗರದಲ್ಲಿ ಭೇಟಿ ಮಾಡಿದರು.ದ್ವೀಪ ರಾಷ್ಟ್ರ ಟಿಮೋರ್-ಲೆಸ್ಟೆ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿ ಸಭೆ
January 09th, 11:16 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಹೋರ್ಟಾ ಗಾಂಧಿನಗರದಲ್ಲಿಂದು ಭೇಟಿಯಾದರು. ವೈಬ್ರಂಟ್ ಗುಜರಾತ್ ಶೃಂಗಸಭೆಗೆ ಅಧ್ಯಕ್ಷ ಹೋರ್ಟಾ ಮತ್ತು ಅವರ ನಿಯೋಗಕ್ಕೆ ಪ್ರಧಾನ ಮಂತ್ರಿ ಮೋದಿ ಅವರು ಆತ್ಮೀಯ ಸ್ವಾಗತ ನೀಡಿದರು. ಉಭಯ ದೇಶಗಳ ನಡುವಿನ ರಾಷ್ಟ್ರ ಮಟ್ಟದ ಅಥವಾ ಸರ್ಕಾರ ಮಟ್ಟದ ಮುಖ್ಯಸ್ಥರ ಮೊದಲ ಭೇಟಿ ಇದಾಗಿದೆ. ರೋಮಾಂಚಕ ದೆಹಲಿ-ದಿಲಿ ಸಂಪರ್ಕವನ್ನು ಬಲವಾಗಿ ನಿರ್ಮಿಸುವ ಭಾರತದ ಬದ್ಧತೆಯನ್ನು ಪ್ರಧಾನ ಮಂತ್ರಿ ಪುನರುಚ್ಚರಿಸಿದರು. ಟಿಮೋರ್-ಲೆಸ್ಟೆಯಲ್ಲಿ ಭಾರತೀಯ ಮಿಷನ್ ತೆರೆಯುವುದಾಗಿ 2023 ಸೆಪ್ಟೆಂಬರ್ ನಲ್ಲಿ ಪ್ರಧಾನಿ ಮೋದಿ ಘೋಷಿಸಿದ್ದರು. ಸಾಮರ್ಥ್ಯ ಬಲವರ್ಧನೆ, ಮಾನವ ಸಂಪನ್ಮೂಲ ಅಭಿವೃದ್ಧಿ, ಮಾಹಿತಿ ತಂತ್ರಜ್ಞಾನ, ಹಣಕಾಸು ತಂತ್ರಜ್ಞಾನ, ಸಾಂಪ್ರದಾಯಿಕ ಔಷಧ ಮತ್ತು ಫಾರ್ಮಾ, ಇಂಧನ ಮತ್ತು ಆರೋಗ್ಯ ರಕ್ಷಣೆ ಕ್ಷೇತ್ರದಲ್ಲಿ ಟಿಮೋರ್-ಲೆಸ್ಟೆಗೆ ನೆರವು ನೀಡುವುದಾಗಿ ಭರವಸೆ ನೀಡಿದ್ದರು. ಇಂಟರ್‌ನ್ಯಾಶನಲ್ ಸೋಲಾರ್ ಅಲೈಯನ್ಸ್ (ISA) ಮತ್ತು ವಿಪತ್ತು ನಿರ್ವಹಣಾ ಮೂಲಸೌಕರ್ಯ(CDRI)ಕ್ಕೆ ಸೇರುವಂತೆ ಟಿಮೋರ್-ಲೆಸ್ಟೆಗೆ ಪ್ರಧಾನಿ ಆಹ್ವಾನ ನೀಡಿದರು.ಜನವರಿ 8-10ರವರೆಗೆ ಗುಜರಾತ್‌ಗೆ ಪ್ರಧಾನ ಮಂತ್ರಿಗಳ ಭೇಟಿ
January 07th, 03:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜನವರಿ 8-10 ರವರೆಗೆ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ.ಗುಜರಾತ್‌ನ ಗಾಂಧಿನಗರದಲ್ಲಿ ಶ್ರೀ ಸೋಮನಾಥ ಟ್ರಸ್ಟ್‌ನ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
October 30th, 11:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಗಾಂಧಿನಗರದಲ್ಲಿ ಶ್ರೀ ಸೋಮನಾಥ ಟ್ರಸ್ಟ್‌ನ ಸಭೆಯ ಅಧ್ಯಕ್ಷತೆ ವಹಿಸಿ ಟ್ರಸ್ಟ್‌ನ ಕಾರ್ಯಚಟುವಟಿಕೆಗೆ ಸಂಬಂಧಿಸಿದ ವಿವಿಧ ಅಂಶಗಳ ಕುರಿತು ಚರ್ಚೆ ನಡೆಸಿದರು.ಗುಜರಾತ್ ನ ಮೆಹ್ಸಾನಾದಲ್ಲಿ ವಿವಿಧ ಅಭಿವೃದ್ಧಿ ಉಪಕ್ರಮಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 30th, 09:11 pm
ನನ್ನ ಖಖಾರಿಯಾ ಟಪ್ಪ ಹೇಗಿದ್ದಾರೆ? ಮೊದಲನೆಯದಾಗಿ, ನಿಮ್ಮ ನಡುವೆ ಇರಲು ಮತ್ತು ನನ್ನ ಶಾಲಾ ದಿನಗಳ ಪರಿಚಿತ ಮುಖಗಳನ್ನು ನೋಡುವ ಈ ಕ್ಷಣವನ್ನು ಹೊಂದಲು ನನಗೆ ಅವಕಾಶ ನೀಡಿದ್ದಕ್ಕಾಗಿ ನಾನು ಮುಖ್ಯಮಂತ್ರಿ ಮತ್ತು ಗುಜರಾತ್ ಸರ್ಕಾರಕ್ಕೆ ನನ್ನ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ನಿಮ್ಮೆಲ್ಲರನ್ನೂ ಭೇಟಿಯಾಗುವುದು ಮತ್ತು ನಾನು ನಿಮ್ಮ ಮನೆಗಳಿಗೆ ಕಾಲಿಟ್ಟಾಗ ಹಳೆಯ ನೆನಪುಗಳನ್ನು ಮರುಪರಿಶೀಲಿಸುವುದು ಅಪಾರ ಸಂತೋಷ ಮತ್ತು ತೃಪ್ತಿಯನ್ನು ತರುತ್ತದೆ. ನನಗೆ ಅವಕಾಶ ಸಿಕ್ಕಾಗಲೆಲ್ಲಾ ಭೂಮಿ ಮತ್ತು ನನ್ನನ್ನು ರೂಪಿಸಿದ ಜನರ ಋಣವನ್ನು ಸ್ವೀಕರಿಸುವುದು ನನ್ನ ಹೃದಯವನ್ನು ಬೆಚ್ಚಗಾಗಿಸುತ್ತದೆ. ಆದ್ದರಿಂದ, ಈ ಋಣವನ್ನು ಒಪ್ಪಿಕೊಳ್ಳಲು ಇಂದು ನನಗೆ ಒಂದು ಸಂದರ್ಭವಾಗಿದೆ. ಇಂದು, ಅಂದರೆ ಅಕ್ಟೋಬರ್ 30 ಮತ್ತು ನಾಳೆ, ಅಕ್ಟೋಬರ್ 31, ಎರಡೂ ದಿನಗಳು ನಮ್ಮೆಲ್ಲರಿಗೂ ಸ್ಫೂರ್ತಿದಾಯಕವಾಗಿವೆ. ಸ್ವಾತಂತ್ರ್ಯ ಹೋರಾಟದಲ್ಲಿ ಆದಿವಾಸಿಗಳನ್ನು (ಬುಡಕಟ್ಟು ಸಮುದಾಯಗಳು) ಮುನ್ನಡೆಸಿದ ಮತ್ತು ಬ್ರಿಟಿಷರನ್ನು ಸೋಲಿಸಿದ ಗೋವಿಂದ್ ಗುರೂಜಿ ಅವರ ಪುಣ್ಯತಿಥಿ ಇಂದು. ನಾಳೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನ.ಗುಜರಾತಿನ ಮೆಹ್ಸಾನಾದಲ್ಲಿ ಸುಮಾರು 5800 ಕೋಟಿ ರೂಪಾಯಿಗಳ ಯೋಜನೆಗಳನ್ನು ಪ್ರಧಾನಮಂತ್ರಿಯವರು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು
October 30th, 04:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಮೆಹ್ಸಾನಾದಲ್ಲಿ ಸುಮಾರು 5800 ಕೋಟಿ ರೂಪಾಯಿಗಳ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಯೋಜನೆಗಳು ರೈಲು, ರಸ್ತೆ, ಕುಡಿಯುವ ನೀರು ಮತ್ತು ನೀರಾವರಿಯಂತಹ ಬಹು ವಲಯಗಳನ್ನು ಒಳಗೊಂಡಿವೆ.ಅಕ್ಟೋಬರ್ 30-31ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 29th, 02:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 30-31ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಅಕ್ಟೋಬರ್ 30 ರಂದು ಬೆಳಗ್ಗೆ 10:30 ಕ್ಕೆ ಅಂಬಾಜಿ ದೇವಸ್ಥಾನದಲ್ಲಿ ಪೂಜೆ ಮತ್ತು ದರ್ಶನ ಪಡೆಯಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ಮೆಹ್ಸಾನಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವರು. ಅಕ್ಟೋಬರ್ 31 ರಂದು ಬೆಳಗ್ಗೆ 8 ಗಂಟೆಗೆ ಅವರು ಕೆವಾಡಿಯಾಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಅವರು ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ. ನಂತರ ಅವರು ಕೆಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಹಾಗೂ ಹಲವು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ನಂತರ, ಬೆಳಗ್ಗೆ 11:15 ರ ಸುಮಾರಿಗೆ, ಅವರು ಪ್ರಾರಂಭ 5.0 ನಲ್ಲಿ 98 ನೇ ಕಾಮನ್ ಫೌಂಡೇಶನ್ ಕೋರ್ಸ್ ನ ಅಧಿಕಾರಿ ತರಬೇತಿದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಜಿ 20 ಆರೋಗ್ಯ ಸಚಿವರ ಸಭೆಯಲ್ಲಿ ಪ್ರಧಾನಮಂತ್ರಿಯವರ ವಿಡಿಯೋ ಸಂದೇಶದ ಪಠ್ಯ
August 18th, 02:15 pm
ಭಾರತದ 1.4 ಶತಕೋಟಿ ಜನರ ಪರವಾಗಿ, ನಾನು ನಿಮಗೆ ಭಾರತಕ್ಕೆ ಮತ್ತು ನನ್ನ ತವರು ರಾಜ್ಯ ಗುಜರಾತ್ ಗೆ ಬಹಳ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ. ನಿಮ್ಮನ್ನು ಸ್ವಾಗತಿಸಲು ನನ್ನೊಂದಿಗೆ 2.4 ಮಿಲಿಯನ್ ವೈದ್ಯರು, 3.5 ಮಿಲಿಯನ್ ದಾದಿಯರು, 1.3 ಮಿಲಿಯನ್ ಅರೆವೈದ್ಯಕೀಯ ಕ್ಷೇತ್ರದ ತಜ್ಞರು, 1.6 ಮಿಲಿಯನ್ ಫಾರ್ಮಾಸಿಸ್ಟ್ ಗಳು ಮತ್ತು ಭಾರತದ ಆರೋಗ್ಯ ಕ್ಷೇತ್ರದಲ್ಲಿ ತೊಡಗಿರುವ ಲಕ್ಷಾಂತರ ಇತರರು ಸೇರಿದ್ದಾರೆ.PM addresses G20 Health Ministers’ Meeting
August 18th, 01:52 pm
PM Modi addressed the G20 Health Ministers’ Meet held in Gandhinagar, Gujarat via video message. He underlined that the Covid-19 pandemic has reminded us that health should be at the center of our decisions. He said that time also showed us the value of international cooperation, whether in medicine and vaccine deliveries or in bringing our people back homeವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ. ತೆದ್ರೋಸ್ ಅಧಾನೋಮ್ ಗೆಬ್ರಿಯೆಸಿಸ್ ಅವರನ್ನು ಭಾರತಕ್ಕೆ ಸ್ವಾಗತಿಸಿದ ಪ್ರಧಾನಮಂತ್ರಿ
August 16th, 02:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ. ತೆದ್ರೋಸ್ ಅಧಾನೋಮ್ ಗೆಬ್ರಿಯೆಸಿಸ್ ಅವರನ್ನು ಭಾರತಕ್ಕೆ ಸ್ವಾಗತಿಸಿದರು. ಶ್ರೀ ನರೇಂದ್ರ ಮೋದಿ ಅವರು ಡಾ.ತೆದ್ರೋಸ್ ಅವರನ್ನು “ತುಳಸಿ ಭಾಯ್ ‘ ಎಂದು ಕರೆಯುತ್ತಾರೆ, ಪ್ರಧಾನಮಂತ್ರಿ ಅವರು ಕಳೆದ ಸಲ ಮಹಾನಿರ್ದೇಶಕರನ್ನು ಭೇಟಿ ಮಾಡಿದ್ದ ವೇಳೆ ಈ ಹೆಸರು ನೀಡಿದ್ದರು.