ಗೋವಾದಲ್ಲಿ ನಡೆದ 9ನೇ ವಿಶ್ವ ಆಯುರ್ವೇದ ಕಾಂಗ್ರೆಸ್ ನ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಭಾಷಾಂತರ
December 11th, 04:15 pm
ಸುಂದರವಾದ ಗೋವಾದಲ್ಲಿ ವಿಶ್ವ ಆಯುರ್ವೇದ ಕಾಂಗ್ರೆಸ್ ಗಾಗಿ ಭಾರತ ಮತ್ತು ವಿದೇಶಗಳಿಂದ ಬಂದು ಸೇರಿದ ಎಲ್ಲಾ ಸ್ನೇಹಿತರನ್ನು ನಾನು ಸ್ವಾಗತಿಸುತ್ತೇನೆ. ವಿಶ್ವ ಆಯುರ್ವೇದ ಕಾಂಗ್ರೆಸ್ ಕಾರ್ಯಕ್ರಮವನ್ನು ಯಶಸ್ವಿಯಾಗಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಭಾರತವು ತನ್ನ ಸ್ವಾತಂತ್ರ್ಯದ 'ಅಮೃತ ಕಾಲ' (ಸುವರ್ಣಯುಗ) ಕ್ಕೆ ಅಡಿಯಿಡಲು ಪ್ರಾರಂಭಿಸಿದ ಸುವರ್ಣ ಸಮಯದಲ್ಲಿ ಈ ಘಟನೆ ನಡೆಯುತ್ತಿದೆ. ನಮ್ಮ ಜ್ಞಾನ, ವಿಜ್ಞಾನ ಮತ್ತು ಸಾಂಸ್ಕೃತಿಕ ಅನುಭವದ ಮೂಲಕ ವಿಶ್ವ ಕಲ್ಯಾಣದ ಸಂಕಲ್ಪವು ನಮ್ಮ 'ಅಮೃತ ಕಾಲ'ದ ಒಂದು ಮಹತ್ತರ ಗುರಿಯಾಗಿದ್ದು, ಆಯುರ್ವೇದವು ಇದಕ್ಕೆ ಬಲವಾದ ಮತ್ತು ಪರಿಣಾಮಕಾರಿ ಮಾಧ್ಯಮವಾಗಿದೆ. ಭಾರತವು ಈ ವರ್ಷ ಜಿ -20 ಶೃಂಗ ಸಭೆಯ ಆತಿಥ್ಯ ಮತ್ತು ಅಧ್ಯಕ್ಷತೆಯನ್ನು ವಹಿಸುತ್ತಿದೆ. ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಎಂಬುದು ಜಿ-20 ಶೃಂಗಸಭೆಯ ಧ್ಯೇಯವಾಕ್ಯವಾಗಿದೆ. ವಿಶ್ವ ಆಯುರ್ವೇದ ಕಾಂಗ್ರೆಸ್ ನಲ್ಲಿ ನೀವೆಲ್ಲರೂ ಇಡೀ ವಿಶ್ವದ ಆರೋಗ್ಯದ ಜೊತೆಯಲ್ಲಿ ಈ ವಿಷಯಗಳನ್ನೂ ಚರ್ಚಿಸಿದ್ದೀರಿ. ವಿಶ್ವದ 30 ಕ್ಕೂ ಹೆಚ್ಚು ದೇಶಗಳು ಆಯುರ್ವೇದವನ್ನು ಸಾಂಪ್ರದಾಯಿಕ ವೈದ್ಯ ಪದ್ಧತಿಯಾಗಿ ಗುರುತಿಸಿರುವುದು ನನಗೆ ಬಹಳ ಸಂತೋಷ ತಂದ ವಿಷಯವಾಗಿದೆ. ಆಯುರ್ವೇದದ ಮನ್ನಣೆಗಾಗಿ ನಾವು ಸಂಘಟಿತರಾಗಿ ಅದನ್ನು ಹೆಚ್ಚು ಹೆಚ್ಚು ದೇಶಗಳಿಗೆ ತಲುಪಿಸಬೇಕಾಗಿದೆ.PM addresses valedictory function of 9th World Ayurveda Congress
December 11th, 04:00 pm
PM Modi addressed the valedictory function of the 9th World Ayurveda Congress. He also inaugurated three National Ayush Institutes. Dwelling upon the philosophical underpinnings of Ayurveda the PM said, Ayurveda goes beyond treatment and promotes wellness, as he pointed out that the world is shifting towards this ancient way of life after going through various changes in trends.PM greets citizens on Dhanteras
October 22nd, 08:40 pm
The Prime Minister, Shri Narendra Modi has greeted the citizens on the auspicious occasion of Dhanteras. Highlighting the close association of Dhanteras with health and wellness, the Prime Minister recognised the global attention drawn towards India’s traditional medicines & Yoga and lauded the efforts of those working in these fields. He also shared his recent speech at the Global Ayush Summit.ಗುಜರಾತ್ ನ ಗಾಂಧಿನಗರದಲ್ಲಿ ನಡೆದ ಜಾಗತಿಕ ಆಯುಷ್ ಹೂಡಿಕೆ ಮತ್ತು ಆವಿಷ್ಕಾರ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
April 20th, 03:53 pm
ಮಾರಿಷಸ್ ನ ಗೌರವಾನ್ವಿತ ಪ್ರಧಾನ ಮಂತ್ರಿ ಪ್ರವಿಂದ್ ಜಗನ್ನಾಥ್ ಜೀ, ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ. ಟೆಡ್ರೋಸ್, ಗುಜರಾತ್ ನ ಹುರುಪಿನ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ನನ್ನ ಸಂಪುಟ ಸಹೋದ್ಯೋಗಿಗಳಾದ ಸರ್ಬಾನಂದ ಸೋನೊವಾಲ್ ಜೀ, ಮನ್ಸುಖ್ ಭಾಯಿ ಮಾಂಡವಿಯಾ ಜೀ, ಮಹೇಂದ್ರ ಭಾಯಿ ಮುಂಜಾಪಾರಾ ಜೀ, ದೇಶ ಮತ್ತು ವಿದೇಶಗಳ ಎಲ್ಲಾ ರಾಜತಾಂತ್ರಿಕರು, ವಿಜ್ಞಾನಿಗಳು, ಉದ್ಯಮಿಗಳು ಮತ್ತು ತಜ್ಞರು, ಮಹಿಳೆಯರು ಮತ್ತು ಮಹನೀಯರೇ! ಜಾಗತಿಕ ಆಯುಷ್ ಹೂಡಿಕೆ ಮತ್ತು ಆವಿಷ್ಕಾರ ಶೃಂಗಸಭೆಗೆ ನಾನು ನಿಮ್ಮೆಲ್ಲರನ್ನೂ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ವಿವಿಧ ವಲಯಗಳಲ್ಲಿ ಹೂಡಿಕೆಗಾಗಿ ಹೂಡಿಕೆ ಶೃಂಗಸಭೆಗಳನ್ನು ನಡೆಸಿರುವುದನ್ನು ನಾವು ಆಗಾಗ್ಗೆ ನೋಡಿದ್ದೇವೆ ಮತ್ತು ವಿಶೇಷವಾಗಿ ಗುಜರಾತ್ ಈ ಸಂಪ್ರದಾಯವನ್ನು ದೊಡ್ಡ ಪ್ರಮಾಣದಲ್ಲಿ ಮುಂದುವರಿಸಿದೆ. ಆದರೆ ಇದೇ ಮೊದಲ ಬಾರಿಗೆ, ಆಯುಷ್ ವಲಯಕ್ಕಾಗಿಯೇ ಇಂತಹ ಹೂಡಿಕೆ ಶೃಂಗಸಭೆಯನ್ನು ಪ್ರತ್ಯೇಕವಾಗಿ ನಡೆಸಲಾಗುತ್ತಿದೆ.ಗಾಂಧಿನಗರದಲ್ಲಿ ಜಾಗತಿಕ ಆಯುಷ್ ಹೂಡಿಕೆ ಮತ್ತು ನಾವೀನ್ಯತಾ ಶೃಂಗಸಭೆ ಉದ್ಘಾಟಿಸಿದ ಪ್ರಧಾನಮಂತ್ರಿ
April 20th, 11:01 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಗಾಂಧಿನಗರದಲ್ಲಿ ಜಾಗತಿಕ ಆಯುಷ್ ಹೂಡಿಕೆ ಮತ್ತು ನಾವೀನ್ಯತೆ ಶೃಂಗಸಭೆಯನ್ನು ಉದ್ಘಾಟಿಸಿದರು. ಮಾರಿಷಸ್ ಪ್ರಧಾನಮಂತ್ರಿ ಶ್ರೀ ಪ್ರವಿಂದ್ ಕುಮಾರ್ ಜುಗನ್ನಾಥ್ ಮತ್ತು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಎಚ್ಒ) ಮಹಾ ನಿರ್ದೇಶಕ ಡಾ. ತೆದ್ರೋಸ್ ಗೆಬ್ರಿಯಾಸಿಸ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕೇಂದ್ರ ಸಚಿವರಾದ ಡಾ. ಮನ್ಸುಖ್ ಮಾಂಡವೀಯ, ಶ್ರೀ ಸರ್ಬಾನಂದ ಸೋನೋವಾಲ್, ಶ್ರೀ ಮುಂಜಾಪಾರಾ ಮಹೇಂದ್ರಭಾಯ್ ಮತ್ತು ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯ್ ಪಟೇಲ್ ಅವರುಗಳೂ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮೂರು ದಿನಗಳ ಶೃಂಗಸಭೆ 5 ಗೋಷ್ಠಿಗಳು, 8 ದುಂಡುಮೇಜಿನ ಸಭೆಗಳು, 6 ಕಾರ್ಯಾಗಾರ ಮತ್ತು 2 ವಿಚಾರ ಸಂಕಿರಣಗಳು ನಡೆದವು. ಸುಮಾರು 90 ಖ್ಯಾತ ಭಾಷಣಕಾರರು ಮತ್ತು 100 ಪ್ರದರ್ಶಕರ ಉಪಸ್ಥಿತಿ ಇತ್ತು. ಈ ಶೃಂಗಸಭೆ ಹೂಡಿಕೆಯ ಸಂಭವನೀಯತೆಯ ಪ್ರದೇಶವನ್ನು ಗುರುತಿಸಲು ಸಹಕಾರಿಯಾಗಲಿದೆ ಮತ್ತು ಆವಿಷ್ಕಾರ, ಸಂಶೋಧನೆ ಮತ್ತು ಅಭಿವೃದ್ಧಿ, ನವೋದ್ಯಮ ಪೂರಕ ಪರಿಸರ ಮತ್ತು ಯೋಗಕ್ಷೇಮ ಉದ್ಯಮಕ್ಕೆ ಮತ್ತಷ್ಟು ಶಕ್ತಿ ತುಂಬಲಿದೆ. ಇದು ಉದ್ಯಮದ ನಾಯಕರು, ಶೈಕ್ಷಣಿಕ ತಜ್ಞರು ಮತ್ತು ವಿದ್ವಾಂಸರನ್ನು ಒಗ್ಗೂಡಿಸುವುದಲ್ಲದೆ, ಭವಿಷ್ಯದ ಸಹಭಾಗಿತ್ವಗಳಿಗೆ ವೇದಿಕೆಯಾಗಿ ಕಾರ್ಯ ನಿರ್ವಹಿಸಲಿದೆ.