ಗುಜರಾತ್‌ನ ಗಾಂಧಿನಗರದಲ್ಲಿ ರಿ-ಇನ್ವೆಸ್ಟ್ 2024 ಸಮ್ಮೇಳನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 16th, 11:30 am

ಗುಜರಾತ್ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ, ಶ್ರೀ ಭೂಪೇಂದ್ರಭಾಯಿ ಪಟೇಲ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ರಾಜಸ್ಥಾನ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಶರ್ಮಾ ಜಿ, ಮಧ್ಯಪ್ರದೇಶ ಮುಖ್ಯಮಂತ್ರಿ ಶ್ರೀ ಮೋಹನ್ ಯಾದವ್ ಜಿ, ಛತ್ತೀಸ್‌ಗಢ ಮುಖ್ಯಮಂತ್ರಿ ಮತ್ತು ಗೋವಾ ಮುಖ್ಯಮಂತ್ರಿಗಳೆ, ಸಂಪು ಸಹೋದ್ಯೋಗಿಗಳಾದ ಪ್ರಲ್ಹಾದ್ ಜೋಶಿ ಮತ್ತು ಶ್ರೀಪಾದ್ ನಾಯ್ಕ್ ಜಿ, ಜರ್ಮನಿಯ ಆರ್ಥಿಕ ಸಹಕಾರ ಸಚಿವರು ಮತ್ತು ಡೆನ್ಮಾರ್ಕ್‌ನ ಕೈಗಾರಿಕಾ ವ್ಯವಹಾರ ಸಚಿವರು ಸೇರಿದಂತೆ ವಿದೇಶಿ ಗಣ್ಯ ಅತಿಥಿಗಳೆ, ವಿವಿಧ ರಾಜ್ಯಗಳ ಇಂಧನ ಸಚಿವರೆ, ಹಲವಾರು ದೇಶಗಳ ಪ್ರತಿನಿಧಿಗಳೆ, ಇಲ್ಲಿ ನೆರೆದಿರುವ ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಗಾಂಧಿನಗರದಲ್ಲಿ 4ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶ ಮತ್ತು ಎಕ್ಸ್ ಪೋ (ಮರು ಹೂಡಿಕೆ) ಉದ್ಘಾಟಿಸಿದರು

September 16th, 11:11 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ 4ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶ ಮತ್ತು ಎಕ್ಸ್ ಪೋ (ಮರು ಹೂಡಿಕೆ) ಉದ್ಘಾಟಿಸಿದರು. 3 ದಿನಗಳ ಶೃಂಗಸಭೆಯು 200 ಗಿಗಾವ್ಯಾಟ್ ಗಿಂತ ಹೆಚ್ಚು ಸ್ಥಾಪಿತ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯದ ಭಾರತದ ಗಮನಾರ್ಹ ಸಾಧನೆಗೆ ಪ್ರಮುಖ ಕೊಡುಗೆ ನೀಡಿದವರನ್ನು ಗೌರವಿಸುತ್ತದೆ. ಸಾರ್ವಜನಿಕ ಮತ್ತು ಖಾಸಗಿ ವಲಯದ ಕಂಪನಿಗಳು, ನವೋದ್ಯಮಗಳು ಮತ್ತು ಪ್ರಮುಖ ಉದ್ಯಮದ ಉದ್ದಿಮಿಗಳ ಅತ್ಯಾಧುನಿಕ ಆವಿಷ್ಕಾರಗಳನ್ನು ಪ್ರದರ್ಶಿಸುವ ಪ್ರದರ್ಶನವನ್ನು ಶ್ರೀ ನರೇಂದ್ರ ಮೋದಿ ವೀಕ್ಷಿಸಿದರು.

ಭಾರತದ ಫಿನ್‌ಟೆಕ್ ಪರಿಸರ ವ್ಯವಸ್ಥೆಯು ಇಡೀ ಪ್ರಪಂಚದ ಜೀವನವನ್ನು ಸುಲಭಗೊಳಿಸುತ್ತದೆ: ಮುಂಬೈನ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನಲ್ಲಿ ಪ್ರಧಾನಿ ಮೋದಿ

August 30th, 12:00 pm

ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನಲ್ಲಿ ಪಿಎಂ ಮೋದಿ ಅವರು ಭಾರತದ ಫಿನ್‌ಟೆಕ್ ಕ್ರಾಂತಿಯನ್ನು ಎತ್ತಿ ತೋರಿಸಿದರು, ಆರ್ಥಿಕ ಸೇರ್ಪಡೆ, ತ್ವರಿತ ಅಳವಡಿಕೆ ಮತ್ತು ಜಾಗತಿಕ ನಾವೀನ್ಯತೆಗಳ ಮೇಲೆ ಅದರ ಪ್ರಭಾವವನ್ನು ಪ್ರದರ್ಶಿಸಿದರು. ಜನ್ ಧನ್ ಯೋಜನೆ ಮತ್ತು ಪಿಎಂ ಸ್ವನಿಧಿ ಮೂಲಕ ಮಹಿಳೆಯರ ಸಬಲೀಕರಣದಿಂದ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಪ್ರವೇಶವನ್ನು ಪರಿವರ್ತಿಸುವವರೆಗೆ, ಫಿನ್‌ಟೆಕ್ ಭಾರತದ ಆರ್ಥಿಕತೆ ಮತ್ತು ಜೀವನದ ಗುಣಮಟ್ಟವನ್ನು ಮರುರೂಪಿಸುತ್ತಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ (ಜಿಎಫ್ಎಫ್) 2024 ಉದ್ದೇಶಿಸಿ ಭಾಷಣ ಮಾಡಿದರು

August 30th, 11:15 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ (ಜಿಎಫ್ ಎಫ್) 2024 ಉದ್ದೇಶಿಸಿ ಭಾಷಣ ಮಾಡಿದರು. ಪ್ರಧಾನಮಂತ್ರಿ ಅವರು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನದ ವಾಕ್ ಥ್ರೋ ನಡೆಸಿದರು. ಜಿಎಫ್ಎಫ್ ಉತ್ಸವವನ್ನು ಪೇಮೆಂಟ್ಸ್ ಕೌನ್ಸಿಲ್ ಆಫ್ ಇಂಡಿಯಾ, ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಮತ್ತು ಫಿನ್ ಟೆಕ್ ಕನ್ವರ್ಜೆನ್ಸ್ ಕೌನ್ಸಿಲ್ ಜಂಟಿಯಾಗಿ ಆಯೋಜಿಸಿವೆ. ಇದು ಫಿನ್ ಟೆಕ್ ನಲ್ಲಿ ಭಾರತದ ದಾಪುಗಾಲುಗಳನ್ನು ಪ್ರದರ್ಶಿಸುವ ಮತ್ತು ಕ್ಷೇತ್ರದ ಪ್ರಮುಖ ಮಧ್ಯಸ್ಥಗಾರರನ್ನು ಒಟ್ಟುಗೂಡಿಸುವ ಗುರಿಯನ್ನು ಹೊಂದಿದೆ.

ಆಗಸ್ಟ್ 30 ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿರುವ ಪ್ರಧಾನ ಮಂತ್ರಿ

August 29th, 04:47 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ರ ಆಗಸ್ಟ್ 30 ರಂದು ಮಹಾರಾಷ್ಟ್ರದ ಮುಂಬೈ ಮತ್ತು ಫ;ಲ್ಘರ್ ಗೆ ಭೇಟಿ ನೀಡಲಿದ್ದಾರೆ. ಮುಂಬೈನ ಜಿಯೋ ವರ್ಲ್ಡ್ ಸಮ್ಮೇಳನ ಸಭಾಂಗಣದಲ್ಲಿ ಪ್ರಧಾನಮಂತ್ರಿಯವರು ಬೆಳಿಗ್ಗೆ 11 ಗಂಟೆಗೆ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ [ಜಿಎಫ್ಎಫ್] 2024 ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ತರುವಾಯ ಮಧ್ಯಾಹ್ನ 1;30ಕ್ಕೆ ಪ್ರಧಾನಮಂತ್ರಿಯವರು ಫಲ್ಘರ್ ನ ಸಿಐಡಿಸಿಒ ಕ್ರೀಡಾಂಗಣದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ.