ಲಕ್ನೋದಲ್ಲಿ ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ 4ನೇ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 19th, 03:00 pm
ಇಂದು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಅಭಿವೃದ್ಧಿ ಹೊಂದಿದ ಉತ್ತರ ಪ್ರದೇಶವನ್ನು ನಿರ್ಮಿಸುವ ಸಂಕಲ್ಪದೊಂದಿಗೆ ನಾವು ಇಲ್ಲಿ ಒಂದಾಗಿದ್ದೇವೆ. ಪ್ರಸ್ತುತ, ತಂತ್ರಜ್ಞಾನದ ಮೂಲಕ, ಉತ್ತರ ಪ್ರದೇಶದ 400ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳ ಲಕ್ಷಾಂತರ ವ್ಯಕ್ತಿಗಳು ಈ ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಇದ್ದಾರೆ. ತಂತ್ರಜ್ಞಾನದ ಮೂಲಕ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ನನ್ನ ಎಲ್ಲಾ ಸಹೋದ್ಯೋಗಿಗಳಿಗೆ ನಾನು ಆತ್ಮೀಯ ಸ್ವಾಗತ ಕೋರುತ್ತೇನೆ. ಏಳೆಂಟು ವರ್ಷಗಳ ಹಿಂದೆ ಇದ್ದ ಉತ್ತರ ಪ್ರದೇಶಕ್ಕೂ, ಹೂಡಿಕೆ ಮತ್ತು ಉದ್ಯೋಗಾವಕಾಶಗಳ ಪ್ರಸ್ತುತ ವಾತಾವರಣವನ್ನು ನಾವು ಊಹಿಸಲು ಸಾಧ್ಯವಾಗುತ್ತಿಲ್ಲ. ಅಪರಾಧಗಳು, ಗಲಭೆಗಳು ಮತ್ತು ಕಳ್ಳತನಗಳ ವರದಿಗಳು ಹೇರಳವಾಗಿದ್ದವು. ಆ ಸಮಯದಲ್ಲಿ, ಯಾರಾದರೂ ಉತ್ತರ ಪ್ರದೇಶವನ್ನು ಅಭಿವೃದ್ಧಿಪಡಿಸುವ ಆಕಾಂಕ್ಷೆಗಳನ್ನು ವ್ಯಕ್ತಪಡಿಸಿದ್ದರೆ, ಕೆಲವರು ಕೇಳುತ್ತಿದ್ದರು, ನಂಬುವುದನ್ನೇ ಬಿಟ್ಟುಬಿಟ್ಟಿದ್ದರು. ಆದರೆ, ಇಂದು ಉತ್ತರ ಪ್ರದೇಶಕ್ಕೆ ಲಕ್ಷಾಂತರ ಕೋಟಿ ರೂಪಾಯಿಗಳ ಹೂಡಿಕೆ ಹರಿದು ಬರುತ್ತಿದೆ. ಉತ್ತರ ಪ್ರದೇಶದ ಸಂಸದನಾಗಿ, ನನ್ನ ರಾಜ್ಯದ ಬೆಳವಣಿಗೆಗಳನ್ನು ನೋಡುವುದು ನನಗೆ ಅಪಾರ ಸಂತೋಷ ತುಂಬುತ್ತದೆ. ಇಂದು ಸಾವಿರಾರು ಯೋಜನೆಗಳ ಕಾಮಗಾರಿ ಆರಂಭವಾಗಿದೆ. ಮುಂಬರುವ ಈ ಕಾರ್ಖಾನೆಗಳು ಮತ್ತು ಕೈಗಾರಿಕೆಗಳು ಉತ್ತರ ಪ್ರದೇಶದ ಭೂದೃಶ್ಯವನ್ನು ಪರಿವರ್ತಿಸಲು ಸಿದ್ಧವಾಗಿವೆ. ಎಲ್ಲಾ ಹೂಡಿಕೆದಾರರಿಗೆ, ವಿಶೇಷವಾಗಿ ಉತ್ತರ ಪ್ರದೇಶದ ಯುವಕರಿಗೆ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಉತ್ತರ ಪ್ರದೇಶದ ಲಕ್ನೋದಲ್ಲಿ ʻವಿಕಸಿತ ಭಾರತ-ವಿಕಸಿತ ಉತ್ತರ ಪ್ರದೇಶʼ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ
February 19th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಕ್ನೋದಲ್ಲಿ ʻವಿಕಸಿತ ಭಾರತ ವಿಕಸಿತ ಉತ್ತರ ಪ್ರದೇಶʼ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. 2023ರ ಫೆಬ್ರವರಿಯಲ್ಲಿ ನಡೆದ ನಾಲ್ಕನೇ ʻಯುಪಿ ಜಾಗತಿಕ ಹೂಡಿಕೆದಾರರ ಶೃಂಗಸಭೆ-2023ʼರ ಉದ್ಘಾಟನಾ ಸಮಾರಂಭದಲ್ಲಿ ಅವರು ಉತ್ತರ ಪ್ರದೇಶದಾದ್ಯಂತ 10 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ 14000 ಯೋಜನೆಗಳಿಗೆ ಚಾಲನೆ ನೀಡಿದರು. ಈ ಯೋಜನೆಗಳು ಉತ್ಪಾದನೆ, ನವೀಕರಿಸಬಹುದಾದ ಇಂಧನ; ಮಾಹಿತಿ ತಂತ್ರಜ್ಞಾನ ಮತ್ತು ಐಟಿ ಆಧರಿತ ಸೇವೆಗಳು(ಐಟಿಇಎಸ್), ಆಹಾರ ಸಂಸ್ಕರಣೆ; ವಸತಿ ಮತ್ತು ರಿಯಲ್ ಎಸ್ಟೇಟ್; ಆತಿಥ್ಯ ಮತ್ತು ಮನರಂಜನೆ ಹಾಗೂ ಶಿಕ್ಷಣದಂತಹ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿವೆ.ಡೆಹ್ರಾಡೂನ್‌ನಲ್ಲಿ ಉತ್ತರಾಖಂಡ ಜಾಗತಿಕ ಹೂಡಿಕೆದಾರರ ಶೃಂಗಸಭೆ-2023 ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
December 08th, 12:00 pm
ಉತ್ತರಾಖಂಡದ ದೈವ ಭೂಮಿಗೆ ಬರುವುದು ನನ್ನ ಹೃದಯಕ್ಕೆ ಸದಾ ಅಪಾರ ಸಂತೋಷ ತರುತ್ತದೆ. ಕೆಲವು ವರ್ಷಗಳ ಹಿಂದೆ, ನಾನು ಬಾಬಾ ಕೇದಾರನಾಥನ ದರ್ಶನಕ್ಕೆ ಹೊರಟಾಗ, 21ನೇ ಶತಮಾನದ 3ನೇ ದಶಕವು ಉತ್ತರಾಖಂಡದ ದಶಕ ಎಂದು ನಾನು ಸ್ವಯಂಪ್ರೇರಿತನಾಗಿ ಹೇಳಿದ್ದೆ. ನನ್ನ ಹೇಳಿಕೆಯು ನಿರಂತರ ಸತ್ಯವೆಂದು ಸಾಬೀತು ಆಗಿರುವುದನ್ನು ನೋಡಿ ನನಗೆ ಸಂತೋಷವಾಗಿದೆ. ನಿಮ್ಮೆಲ್ಲರಿಗೂ, ಉತ್ತರಾಖಂಡದ ಹೆಮ್ಮೆಯೊಂದಿಗೆ ಸಂಪರ್ಕ ಸಾಧಿಸಲು, ಅದರ ಅಭಿವೃದ್ಧಿಯ ಪಯಣದ ಭಾಗವಾಗಲು ಮಹತ್ವದ ಅವಕಾಶವಿದೆ. ಉತ್ತರ ಕಾಶಿಯ ಸುರಂಗದಿಂದ ನಮ್ಮ ವಲಸಿಗ ಸಹೋದರರನ್ನು ಸುರಕ್ಷಿತವಾಗಿ ರಕ್ಷಿಸಲು ಯಶಸ್ವಿ ಅಭಿಯಾನ ಮುನ್ನಡೆಸುತ್ತಿರುವ ರಾಜ್ಯ ಸರ್ಕಾರ ಸೇರಿದಂತೆ ಪ್ರತಿಯೊಬ್ಬರನ್ನು ನಾನು ಇಲ್ಲಿ ಅಭಿನಂದನೆ ಸಲ್ಲಿಸುತ್ತೇನೆ.'ಉತ್ತರಾಖಂಡ ಜಾಗತಿಕ ಹೂಡಿಕೆದಾರರ ಸಮಾವೇಶ-2023' ಉದ್ಘಾಟಿಸಿದ ಪ್ರಧಾನಿ
December 08th, 11:26 am
ಉದ್ಯಮದ ಪ್ರಮುಖರು ಈ ಸಂದರ್ಭದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಅದಾನಿ ಗ್ರೂಪ್‌ನ ನಿರ್ದೇಶಕ ಮತ್ತು ವ್ಯವಸ್ಥಾಪಕ ನಿರ್ದೇಶಕ (ಕೃಷಿ, ತೈಲ ಮತ್ತು ಅನಿಲ) ಶ್ರೀ ಪ್ರಣವ್ ಅದಾನಿ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಉತ್ತರಾಖಂಡವು ತನ್ನ ಬೆಳವಣಿಗೆ ಮತ್ತು ಅಭಿವೃದ್ಧಿಯ ವಿಧಾನದಿಂದಾಗಿ ಖಾಸಗಿ ವಲಯದ ಹೂಡಿಕೆಗೆ ಅತ್ಯಂತ ಆಕರ್ಷಕ ತಾಣಗಳಲ್ಲಿ ಒಂದಾಗಿದೆ. ಏಕೆಂದರೆ ಏಕ-ಗವಾಕ್ಷಿ ಮಾದರಿಯಲ್ಲಿ ಅನುಮತಿಗಳು, ಸ್ಪರ್ಧಾತ್ಮಕ ಭೂಮಿಯ ಬೆಲೆಗಳು, ಕೈಗೆಟುಕುವ ವಿದ್ಯುತ್ ಹಾಗೂ ಪರಿಣಾಮಕಾರಿ ವಿತರಣೆ, ಹೆಚ್ಚು ನುರಿತ ಮಾನವಶಕ್ತಿ ಮತ್ತು ರಾಷ್ಟ್ರ ರಾಜಧಾನಿಗೆ ಸಾಮೀಪ್ಯ ಮತ್ತು ಅತ್ಯಂತ ಸ್ಥಿರವಾದ ಕಾನೂನು-ಸುವ್ಯವಸ್ಥೆ ವಾತಾವರಣದ ಸಂಯೋಜನೆಯು ರಾಜ್ಯವನ್ನು ಹೂಡಿಕೆಗೆ ಆಕರ್ಷಕ ತಾಣವನ್ನಾಗಿಸಿದೆ ಎಂದರು. ಶ್ರೀ ಅದಾನಿ ಅವರು ರಾಜ್ಯದಲ್ಲಿ ವಿಸ್ತರಿಸಲಿರುವ ಹಾಗೂ ಹೆಚ್ಚಿನ ಹೂಡಿಕೆ ಮತ್ತು ಉದ್ಯೋಗಗಳನ್ನು ತರುವ ತಮ್ಮ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಉತ್ತರಾಖಂಡ ರಾಜ್ಯಕ್ಕೆ ನಿರಂತರ ಬೆಂಬಲ ನೀಡುತ್ತಿರುವ ಪ್ರಧಾನಮಂತ್ರಿಯವರಿಗೆ ಧನ್ಯವಾದ ಅರ್ಪಿಸಿದ ಅವರು, ಭಾರತದ ಜನರು ತಮ್ಮ ಮೇಲೆ ಅಭೂತಪೂರ್ವ ವಿಶ್ವಾಸ ಮತ್ತು ವಿಶ್ವಾಸವನ್ನು ಇಟ್ಟಿದ್ದಾರೆ ಎಂದರು.ಡಿಸೆಂಬರ್ 8 ರಂದು ಪ್ರಧಾನಮಂತ್ರಿ ಡೆಹ್ರಾಡೂನ್ ಗೆ ಭೇಟಿ ನೀಡಲಿದ್ದಾರೆ ಮತ್ತು 'ಉತ್ತರಾಖಂಡ್ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023' ಉದ್ಘಾಟಿಸಲಿದ್ದಾರೆ
December 06th, 02:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಡಿಸೆಂಬರ್ 8ರಂದು ಉತ್ತರಾಖಂಡದ ಡೆಹ್ರಾಡೂನ್ ಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 10:30 ಕ್ಕೆ ಅವರು ಡೆಹ್ರಾಡೂನಿನ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ನಡೆಯಲಿರುವ 'ಉತ್ತರಾಖಂಡ್ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023' ನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಉತ್ತರ ಪ್ರದೇಶದ ಉದ್ಯೋಗ ಮೇಳದಲ್ಲಿ ಪ್ರಧಾನಮಂತ್ರಿಯವರ ವಿಡಿಯೋ ಸಂದೇಶದ ಇಂಗ್ಲೀಷ್ ಅನುವಾದ
February 26th, 12:01 pm
ಇತ್ತೀಚಿನ ದಿನಗಳಲ್ಲಿ “ಉದ್ಯೋಗ ಮೇಳ” ಕಾರ್ಯಕ್ರಮಗಳು ತಮಗೆ ವಿಶೇಷವಾಗಿವೆ. ಕಳೆದ ಹಲವಾರು ತಿಂಗಳುಗಳಲ್ಲಿ ಒಂದಲ್ಲಾ ಒಂದು ವಾರ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಲಾಗುತ್ತಿದೆ. ಸಹಸ್ರಾರು ಯುವ ಜನರಿಗೆ ಪ್ರಮುಖ ಹುದ್ದೆಗಳಿಗಾಗಿ ನೇಮಕಾತಿ ಪತ್ರಗಳನ್ನು ನೀಡಲಾಗುತ್ತಿದೆ. ಇದಕ್ಕೆ ತಾವು ಸಾಕ್ಷಿಯಾಗುತ್ತಿರುವುದು ತಮ್ಮ ಅದೃಷ್ಟ. ಈ ಪ್ರತಿಭಾವಂತ ಯುವ ಸಮೂಹ ಸರ್ಕಾರಿ ವ್ಯವಸ್ಥೆಯಲ್ಲಿ ಹೊಸ ಆಲೋಚನೆಗಳನ್ನು ತರುತ್ತಿದ್ದಾರೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತಿದ್ದಾರೆ.ಉತ್ತರ ಪ್ರದೇಶ ಉದ್ಯೋಗ ಮೇಳ ಉದ್ದೇಶಿಸಿ ಪ್ರಧಾನಿ ಭಾಷಣ
February 26th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶ ಸರ್ಕಾರದ ʻಉದ್ಯೋಗ ಮೇಳʼವನ್ನುದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಮಾತನಾಡಿದರು. ಉತ್ತರ ಪ್ರದೇಶ ಪೊಲೀಸ್ ಇಲಾಖೆಯ ಸಬ್ ಇನ್ಸ್‌ಪೆಕ್ಟರ್, ನಾಗರಿಕ ಪೊಲೀಸ್ ಇಲಾಖೆಯಲ್ಲಿ ತತ್ಸಮಾನ ಹುದ್ದೆಗಳು, ʻಪ್ಲಾಟೂನ್ ಕಮಾಂಡರ್‌ಗಳುʼ ಹಾಗೂ ಅಗ್ನಿಶಾಮಕ ಇಲಾಖೆಯ ದ್ವಿತೀಯ ಅಧಿಕಾರಿಗಳ ಹುದ್ದೆಗಳಿಗೆ ನೇರ ನೇಮಕಾತಿಗೊಂಡವರಿಗೆ ನೇಮಕಾತಿ ಪತ್ರಗಳನ್ನು ಮೇಳದಲ್ಲಿ ವಿತರಿಸಲಾಯಿತು.ಲಕ್ನೋದಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 10th, 11:01 am
ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಜಿ ಮತ್ತು ಬ್ರಜೇಶ್ ಪಾಠಕ್ ಜಿ, ಕೇಂದ್ರ ಸಂಪುಟದ ನನ್ನ ಹಿರಿಯ ಸಹೋದ್ಯೋಗಿ ಶ್ರೀ ರಾಜನಾಥ್ ಸಿಂಗ್ ಜಿ, ಜಾಗತಿಕ ಹೂಡಿಕೆದಾರರ ಶೃಂಗಸಭೆಯಲ್ಲಿ ಭಾಗವಹಿಸಿರುವ ವಿವಿಧ ದೇಶಗಳ ಗಣ್ಯರು, ಉತ್ತರ ಪ್ರದೇಶದ ಎಲ್ಲಾ ಸಚಿವರು ಮತ್ತು ಉದ್ಯಮದ ಗೌರವಾನ್ವಿತ ಸದಸ್ಯರು, ಜಾಗತಿಕ ಹೂಡಿಕೆದಾರರು, ನೀತಿ ನಿರೂಪಕರು, ಕಾರ್ಪೊರೇಟ್ ವಲಯದ ದಿಗ್ಗಜರು, ಲಕ್ನೋ ಜನಪ್ರತಿನಿಧಿಗಳು, ಮಹಿಳೆಯರು ಮತ್ತು ಮಹನೀಯರೆ!ಲಕ್ನೋದಲ್ಲಿ `ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ ಸಮಾವೇಶ-2023ʼ ಉದ್ಘಾಟಿಸಿದ ಪ್ರಧಾನಿ
February 10th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಕ್ನೋದಲ್ಲಿ `ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ-2023ʼ ಅನ್ನು ಉದ್ಘಾಟಿಸಿದರು. ಇದೇ ಕಾರ್ಯಕ್ರಮದಲ್ಲಿ, ʻಜಾಗತಿಕ ವ್ಯಾಪಾರ ಮೇಳʼ ಮತ್ತು ʻಇನ್ವೆಸ್ಟ್ ಯುಪಿ-2.0ʼಗೆ ಸಹ ಅವರು ಚಾಲನೆ ನೀಡಿದರು. ʻಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ ಸಮಾವೇಶ-2023ʼ ಉತ್ತರ ಪ್ರದೇಶ ಸರ್ಕಾರದ ಪ್ರಮುಖ ಹೂಡಿಕೆ ಶೃಂಗಸಭೆಯಾಗಿದ್ದು, ಇದು ವಿಶ್ವದ ನಾನಾ ಭಾಗಗಳ ನೀತಿ ನಿರೂಪಕರು, ಉದ್ಯಮ ನಾಯಕರು, ಶಿಕ್ಷಣ ತಜ್ಞರು, ಚಿಂತಕರು ಮತ್ತು ನಾಯಕರನ್ನು ಒಗ್ಗೂಡಿಸುತ್ತದೆ. ಪ್ರಧಾನಮಂತ್ರಿಯವರು ವಸ್ತುಪ್ರದರ್ಶನದ ಸಾಲುಗಳಲ್ಲೂ ಹೆಜ್ಜೆ ಹಾಕುವ ಮೂಲಕ ಅದರ ಸಂಕ್ಷಿಪ್ತ ನೋಟವನ್ನು ಪಡೆದುಕೊಂಡರು.ಫೆಬ್ರವರಿ 10ರಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
February 08th, 05:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 10 ರಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿಯವರು ಲಕ್ನೋಗೆ ಭೇಟಿ ನೀಡಲಿದ್ದು, ಅಲ್ಲಿ ಅವರು ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023ನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2:45 ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ನಲ್ಲಿ ಎರಡು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಸಾಂತಾಕ್ರೂಜ್ ಚೆಂಬೂರ್ ಸಂಪರ್ಕ ರಸ್ತೆ ಮತ್ತು ಕುರಾರ್ ಕೆಳಸೇತುವೆ ಯೋಜನೆಯಂತಹ ಎರಡು ರಸ್ತೆ ಯೋಜನೆಗಳನ್ನು ಅವರು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಬಳಿಕ ಸಂಜೆ 4.30ಕ್ಕೆ ಮುಂಬೈನಲ್ಲಿ ಅಲ್ಜಾಮಿಯಾ ಟುಸ್ ಸೈಫಿಯಾದ ಹೊಸ ಕ್ಯಾಂಪಸ್ ಉದ್ಘಾಟಿಸಲಿದ್ದಾರೆ.ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದ ಮಧ್ಯಪ್ರದೇಶ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 ರಲ್ಲಿ ಪ್ರಧಾನಮಂತ್ರಿಯವರ ವೀಡಿಯೊ ಸಂದೇಶದ ಕನ್ನಡ ಭಾಷಾಂತರ
January 11th, 05:00 pm
ಮಧ್ಯಪ್ರದೇಶ ಹೂಡಿಕೆದಾರರ ಶೃಂಗಸಭೆಗೆ ಎಲ್ಲಾ ಹೂಡಿಕೆದಾರರು ಮತ್ತು ಉದ್ಯಮಿಗಳಿಗೆ ಆತ್ಮೀಯ ಸ್ವಾಗತ! ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಮಧ್ಯಪ್ರದೇಶದ ಪಾತ್ರ ಬಹಳ ನಿರ್ಣಾಯಕವಾಗಿದೆ. ಭಕ್ತಿ ಮತ್ತು ಆಧ್ಯಾತ್ಮಿಕತೆಯಿಂದ ಪ್ರವಾಸೋದ್ಯಮದವರೆಗೆ; ಕೃಷಿಯಿಂದ ಹಿಡಿದು ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಯವರೆಗೆ, ಮಧ್ಯಪ್ರದೇಶ ಅನನ್ಯತೆ, ಭವ್ಯತೆ ಮತ್ತು ಜಾಗೃತಿಯ ಸ್ಥಾನ ಪಡೆದಿದೆ.ಮಧ್ಯಪ್ರದೇಶದ ಇಂದೋರ್‌ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 ಉದ್ದೇಶಿಸಿ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸ್ ಭಾಷಣ
January 11th, 11:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಇಂದೋರ್‌ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ವೀಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ಶೃಂಗಸಭೆಯು ಮಧ್ಯಪ್ರದೇಶದ ವೈವಿಧ್ಯಮಯ ಹೂಡಿಕೆ ಅವಕಾಶಗಳನ್ನು ಪ್ರದರ್ಶಿಸಲಿದೆ.PM highlights the four wheels of development at Rising Himachal Global Investors' Summit
November 07th, 04:04 pm
Addressing the gathering, Prime Minister said, he is happy to welcome all the Wealth Creators to this meet.Prime Minister inaugurates the Rising Himachal: Global Investor's Meet 2019 in Dharamshala.
November 07th, 11:22 am
Addressing the gathering, Prime Minister said, he is happy to welcome all the Wealth Creators to this meet.ಈಶಾನ್ಯ ಆಕ್ಟ್ ಈಸ್ಟ್ ಪಾಲಿಸಿಯ ಕೇಂದ್ರ ಭಾಗದಲ್ಲಿದೆ , ಅಡ್ವಾಂಟೇಜ್ ಅಸ್ಸಾಂ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದರು
February 03rd, 02:10 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅಸ್ಸಾಂನ ಮೊದಲ ಜಾಗತಿಕ ಹೂಡಿಕೆದಾರರ ಶೃಂಗಸಭೆ ಅಡ್ವಾಂಟೇಜ್ ಅಸ್ಸಾಂ ಅನ್ನು ಗುವಾಹಟಿಯಲ್ಲಿ ಉದ್ಘಾಟಿಸಿದರು. ವಿದೇಶಿ ಮತ್ತು ದೇಶೀಯ ಹೂಡಿಕೆದಾರರಿಗೆ ಅದರ ಉತ್ಪಾದನಾ ಅವಕಾಶಗಳನ್ನು ಮತ್ತು ಜಿಯೋಸ್ಟ್ರೈಜಿಕ್ ಪ್ರಯೋಜನಗಳನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ.ಅಸ್ಸಾಂನ ಮೊದಲ ಜಾಗತಿಕ ಹೂಡಿಕೆದಾರರ ಶೃಂಗಸಭೆ 'ಅಡ್ವಾಂಟೇಜ್ ಅಸ್ಸಾಂ' ಅನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು
February 03rd, 02:00 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅಸ್ಸಾಂನ ಮೊದಲ ಜಾಗತಿಕ ಹೂಡಿಕೆದಾರರ ಶೃಂಗಸಭೆ ಅಡ್ವಾಂಟೇಜ್ ಅಸ್ಸಾಂ ಅನ್ನು ಗುವಾಹಟಿಯಲ್ಲಿ ಉದ್ಘಾಟಿಸಿದರು. ವಿದೇಶಿ ಮತ್ತು ದೇಶೀಯ ಹೂಡಿಕೆದಾರರಿಗೆ ಅದರ ಉತ್ಪಾದನಾ ಅವಕಾಶಗಳನ್ನು ಮತ್ತು ಜಿಯೋಸ್ಟ್ರೈಜಿಕ್ ಪ್ರಯೋಜನಗಳನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ.ಅಡ್ವಾಂಟೇಜ್ ಅಸ್ಸಾಂ – ಜಾಗತಿಕ ಹೂಡಿಕೆದಾರರ ಮೇಳ 2018ರ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ
February 02nd, 06:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗುವಾಹಟಿಯಲ್ಲಿ ನಾಳೆ ಅಡ್ವಾಂಟೇಜ್ ಅಸ್ಸಾಂ – ಜಾಗತಿಕ ಹೂಡಿಕೆದಾರರ ಮೇಳ 2018ರ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.ಜಾರ್ಖಂಡ್ ನಲ್ಲಿನ ಜಾಗತಿಕ ಹೂಡಿಕೆದಾರರ ಮೇಳ 2017ಕ್ಕೆ ಶುಭ ಕೋರಿದ ಪ್ರಧಾನಮಂತ್ರಿ
February 16th, 12:24 pm
PM Narendra Modi has extended best wishes to the Global Investors' Summit 2017 in Jharkhand. Investment generated from Invest Jharkhand will create several opportunities for people of the state and give wings to their aspirations. Skills and determination of people of Jharkhand and proactive efforts of Jharkhand Government are bringing record development in the state., the PM said.