ವಿಡಿಯೊ ಕಾನ್ಫರೆನ್ಸ್ ಮೂಲಕ ರೋಜ್ ಗಾರ್ ಮೇಳದ ಅಡಿಯಲ್ಲಿ 71,000ಕ್ಕೂ ನೇಮಕಾತಿ ಪತ್ರಗಳ ವಿತರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 23rd, 11:00 am
ನನ್ನ ಸಂಪುಟ ಸಹೋದ್ಯೋಗಿಗಳು, ದೇಶದಾದ್ಯಂತದ ಇತರ ಗಣ್ಯರು ಮತ್ತು ನನ್ನ ಯುವ ಸ್ನೇಹಿತರೇ!ರೋಜ್ ಗಾರ್ ಮೇಳದಡಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ನೇಮಕಗೊಂಡಿರುವ 71 ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 23rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ರೋಜ್ ಗಾರ್ ಮೇಳವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಹೊಸದಾಗಿ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ನೇಮಕಗೊಂಡಿರುವ ಸುಮಾರು 71 ಸಾವಿರಕ್ಕೂ ಅಧಿಕ ಯುವಜನತೆಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ರೋಜ್‌ಗಾರ್ ಮೇಳ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಇದು ರಾಷ್ಟ್ರ ನಿರ್ಮಾಣ ಮತ್ತು ಸ್ವಯಂ ಸಬಲೀಕರಣಕ್ಕೆ ಕೊಡುಗೆ ನೀಡಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವ ಮೂಲಕ ಯುವಕರನ್ನು ಸಶಕ್ತಗೊಳಿಸುತ್ತದೆ.Modernization of agriculture systems is a must for Viksit Bharat: PM Modi
February 24th, 10:36 am
PM Modi inaugurated and laid the foundation stone of multiple key initiatives for the Cooperative sector at Bharat Mandapam, New Delhi. Recalling his experience as CM of Gujarat, the Prime Minister cited the success stories of Amul and Lijjat Papad as the power of cooperatives and also highlighted the central role of women in these enterprises.ಸಹಕಾರಿ ಕ್ಷೇತ್ರಕ್ಕಾಗಿ ಪ್ರಧಾನಮಂತ್ರಿಯವರಿಂದ ಅನೇಕ ಪ್ರಮುಖ ಉಪಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ
February 24th, 10:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಸಹಕಾರಿ ಕ್ಷೇತ್ರಕ್ಕೆ ಬಹುಮುಖ್ಯ ಉಪಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು. 11 ರಾಜ್ಯಗಳ 11 ಪ್ರಾಥಮಿಕ ಕೃಷಿ ಸಾಲ ಸಂಘಗಳಲ್ಲಿ (ಪಿಎಸಿಎಸ್) ಮಾಡಲಾಗುತ್ತಿರುವ 'ಸಹಕಾರಿ ವಲಯದಲ್ಲಿ ವಿಶ್ವದ ಅತಿದೊಡ್ಡ ಧಾನ್ಯ ಸಂಗ್ರಹ ಯೋಜನೆ'ಯ ಪ್ರಾಯೋಗಿಕ ಯೋಜನೆಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು. ಈ ಉಪಕ್ರಮದ ಅಡಿಯಲ್ಲಿ ಗೋದಾಮುಗಳು ಮತ್ತು ಇತರ ಕೃಷಿ ಮೂಲಸೌಕರ್ಯಗಳ ನಿರ್ಮಾಣಕ್ಕಾಗಿ ದೇಶಾದ್ಯಂತ ಹೆಚ್ಚುವರಿ 500 ಪಿಎಸಿಎಸ್ ಗಳಿಗೆ ಪ್ರಧಾನಮಂತ್ರಿಯವರು ಶಿಲಾನ್ಯಾಸ ನೆರವೇರಿಸಿದರು. ಈ ಉಪಕ್ರಮವು ಪಿಎಸಿಎಸ್ ಗೋದಾಮುಗಳನ್ನು ಆಹಾರ ಧಾನ್ಯ ಪೂರೈಕೆ ಸರಪಳಿಯೊಂದಿಗೆ ಅಗತ್ಯಕ್ಕೆ ತಕ್ಕಂತೆ ಸಂಯೋಜಿಸುವ ಗುರಿಯನ್ನು ಹೊಂದಿದೆ, ಆಹಾರ ಭದ್ರತೆಯನ್ನು ಬಲಪಡಿಸುವುದು ಮತ್ತು ನಬಾರ್ಡ್ನಿಂದ ಬೆಂಬಲಿತವಾದ ಮತ್ತು ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಎನ್ ಸಿಡಿಸಿ) ನೇತೃತ್ವದ ಸಹಯೋಗದ ಪ್ರಯತ್ನದೊಂದಿಗೆ ದೇಶದಲ್ಲಿ ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುವುದು. ಈ ಉಪಕ್ರಮವು ಕೃಷಿ ಮೂಲಸೌಕರ್ಯ ನಿಧಿ (ಎಐಎಫ್), ಕೃಷಿ ಮಾರುಕಟ್ಟೆ ಮೂಲಸೌಕರ್ಯ (ಎಎಂಐ), ಇತ್ಯಾದಿಗಳಂತಹ ವಿವಿಧ ಅಸ್ತಿತ್ವದಲ್ಲಿರುವ ಯೋಜನೆಗಳನ್ನು ಕ್ರೋಢೀಕರಿಸುವ ಮೂಲಕ ಕಾರ್ಯಗತಗೊಳಿಸಲಾಗುತ್ತಿದೆ. ಸಹಕಾರಿ ಕ್ಷೇತ್ರವನ್ನು ಪುನರುಜ್ಜೀವನಗೊಳಿಸುವ ಮತ್ತು ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿರುವ ಸಹಕಾರದಿಂದ ಸಮೃದ್ಧಿ ಯ ಸರ್ಕಾರದ ಉದ್ದೇಶಕ್ಕೆ ಅನುಗುಣವಾಗಿ, ದೇಶಾದ್ಯಂತ 18,000 ಪಿಎಸಿಎಸ್ ಗಳಲ್ಲಿ ಗಣಕೀಕರಣದ ಯೋಜನೆಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು.ಅಮುಲ್ ಒಕ್ಕೂಟದ ಜಿಸಿಎಂಎಂಎಫ್ ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 22nd, 11:30 am
ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಜೀ; ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್; ನನ್ನ ಸಂಪುಟ ಸಹೋದ್ಯೋಗಿ ಪುರುಷೋತ್ತಮ್ ರೂಪಾಲಾ ಜೀ; ಸಂಸತ್ತಿನ ಗೌರವಾನ್ವಿತ ಸಹೋದ್ಯೋಗಿ ಸಿ.ಆರ್.ಪಾಟೀಲ್, ಅಮುಲ್ ಅಧ್ಯಕ್ಷ ಶ್ರೀ ಶಾಮಲ್ ಭಾಯ್ ಮತ್ತು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಇಲ್ಲಿ ನೆರೆದಿರುವ ನನ್ನ ಎಲ್ಲಾ ಸಹೋದರ ಸಹೋದರಿಯರೇ!ಗುಜರಾತ್ ನ ಅಹಮದಾಬಾದ್ ನಲ್ಲಿ ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು
February 22nd, 10:44 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹಮದಾಬಾದ್ ನ ಮೊಟೆರಾದಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ (ಜಿಸಿಎಂಎಂಎಫ್) ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದರು. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನವನ್ನು ವೀಕ್ಷಿಸಿದರು ಮತ್ತು ಸುವರ್ಣ ಮಹೋತ್ಸವ ಕಾಫಿ ಟೇಬಲ್ ಪುಸ್ತಕವನ್ನು ಬಿಡಿಗಡೆ ಮಾಡಿದರು. ಜಿಸಿಎಂಎಂಎಫ್ ಸಹಕಾರಿ ಸಂಸ್ಥೆಗಳ ಸ್ಥಿತಿಸ್ಥಾಪಕತ್ವ, ಉದ್ಯಮಶೀಲತಾ ಮನೋಭಾವ ಮತ್ತು ರೈತರ ದೃಢ ಸಂಕಲ್ಪಕ್ಕೆ ಸಾಕ್ಷಿಯಾಗಿದೆ, ಇದು ಅಮುಲ್ ಅನ್ನು ವಿಶ್ವದ ಪ್ರಬಲ ಡೈರಿ ಬ್ರ್ಯಾಂಡ್ ಗಳಲ್ಲಿ ಒಂದನ್ನಾಗಿ ಮಾಡಿದೆ.ಗುಜರಾತ್ ನ ದಿಯೋದರ್ ನಲ್ಲಿರುವ ಬನಾಸ್ ಡೇರಿಯಲ್ಲಿ ಅಭಿವೃದ್ಧಿ ಉಪಕ್ರಮಗಳ ಉದ್ಘಾಟನೆ ಕುರಿತು ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
April 19th, 11:02 am
ನೀವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೀರಿ ಎಂದು ಭಾವಿಸುತ್ತೇನೆ. ನಾನು ಆರಂಭದಲ್ಲಿ ಹಿಂದಿಯಲ್ಲಿ ಮಾತನಾಡಬೇಕಾಗಿರುವುದರಿಂದ ನಾನು ನಿಮ್ಮಲ್ಲಿ ಕ್ಷಮೆಯಾಚಿಸುತ್ತೇನೆ. ಏಕೆಂದರೆ ಮಾಧ್ಯಮದ ಸ್ನೇಹಿತರು ನಾನು ಹಿಂದಿಯಲ್ಲಿ ಮಾತನಾಡುವುದು ಒಳ್ಳೆಯದು ಎಂದು ವಿನಂತಿಸಿದರು. ಆದ್ದರಿಂದ, ನಾನು ಅವರ ಮನವಿಯನ್ನು ಅಂಗೀಕರಿಸಲು ನಿರ್ಧರಿಸಿದೆ.ಬನಸ್ಕಾಂತದ ದಿಯೋದರ್ ನ ಬನಾಸ್ ಡೈರಿ ಸಂಕುಲದಲ್ಲಿ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಮಂತ್ರಿ
April 19th, 11:01 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬನಸ್ಕಾಂತ ಜಿಲ್ಲೆಯ ದಿಯೋದರ್‌ನಲ್ಲಿ 600 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಹೊಸ ಡೈರಿ ಸಂಕೀರ್ಣ ಮತ್ತು ಆಲೂಗಡ್ಡೆ ಸಂಸ್ಕರಣಾ ಘಟಕವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಹೊಸ ಡೈರಿ ಸಂಕೀರ್ಣವು ಸಂಪೂರ್ಣ ಗ್ರೀನ್‌ಫೀಲ್ಡ್ ಯೋಜನೆಯಾಗಿದೆ. ಇದು ದಿನಕ್ಕೆ ಸುಮಾರು 30 ಲಕ್ಷ ಲೀಟರ್ ಹಾಲು ಸಂಸ್ಕರಣೆ, ಸುಮಾರು 80 ಟನ್ ಬೆಣ್ಣೆ, ಒಂದು ಲಕ್ಷ ಲೀಟರ್ ಐಸ್ ಕ್ರೀಮ್, 20 ಟನ್ ಗಟ್ಟಿಗೊಳಿಸಿದ ಹಾಲು (ಖೋವಾ) ಮತ್ತು 6 ಟನ್ ಚಾಕೊಲೇಟ್ ಅನ್ನು ಉತ್ಪಾದಿಸುತ್ತದೆ. ಆಲೂಗೆಡ್ಡೆ ಸಂಸ್ಕರಣಾ ಘಟಕವು ಫ್ರೆಂಚ್ ಫ್ರೈಸ್, ಆಲೂಗಡ್ಡೆ ಚಿಪ್ಸ್, ಆಲೂ ಟಿಕ್ಕಿ, ಪ್ಯಾಟೀಸ್ ಮುಂತಾದ ವಿವಿಧ ರೀತಿಯ ಸಂಸ್ಕರಿಸಿದ ಆಲೂಗಡ್ಡೆ ಉತ್ಪನ್ನಗಳನ್ನು ತಯಾರಿಸಲಾಗುವುದು.ಏಪ್ರಿಲ್ 18ರಿಂದ 20 ರವರೆಗೆ ಪ್ರಧಾನಮಂತ್ರಿ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ
April 16th, 02:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಏಪ್ರಿಲ್ 18 ರಿಂದ 20 ರವರೆಗೆ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 18 ರಂದು ಸುಮಾರು ಸಂಜೆ 6 ಗಂಟೆಗೆ ಪ್ರಧಾನಮಂತ್ರಿ ಅವರು ಗಾಂಧಿನಗರದಲ್ಲಿರುವ ಶಾಲೆಗಳ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 19 ರಂದು, ಬೆಳಗ್ಗೆ 9:40 ರ ಸುಮಾರಿಗೆ, ಅವರು ಬನಸ್ಕಾಂತದ ದಿಯೋದರ್‌ನಲ್ಲಿರುವ ಬನಾಸ್ ಡೈರಿ ಸಂಕುಲ್‌ನಲ್ಲಿ ಬಹುವಿಧದ ಅಭಿವೃದ್ಧಿ ಯೋಜನೆಗಳ ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.