ಅಕ್ಟೋಬರ್ 29 ರಂದು ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದಂದು 12,850 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿಯವರು ನೆರವೇರಿಸಲಿದ್ದಾರೆ

October 28th, 12:47 pm

ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 29 ರಂದು ಮಧ್ಯಾಹ್ನ 12:30 ಕ್ಕೆ ನವದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆ (ಎಐಐಎ)ಯಲ್ಲಿ ಸುಮಾರು 12,850 ಕೋಟಿ ರೂಪಾಯಿಗಳ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಚಾಲನೆಯನ್ನು ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.

ಶ್ರಾವಸ್ತಿಗೆ ರಾಷ್ಟ್ರೀಯ ಭೂಪಟದಲ್ಲಿ ವಿಶಿಷ್ಟ ಗುರುತನ್ನು ನೀಡುವ ಪ್ರಯತ್ನಗಳು ನಡೆಯುತ್ತಿವೆ: ಯುಪಿಯ ಶ್ರಾವಸ್ತಿಯಲ್ಲಿ ಪ್ರಧಾನಿ ಮೋದಿ

May 22nd, 12:45 pm

2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ,ಪ್ರಧಾನಿ ಮೋದಿ ಯುಪಿಯ ಶ್ರಾವಸ್ತಿಯಲ್ಲಿ ತಮ್ಮ ವಿಶೇಷ ಉಪಸ್ಥಿತಿಯನ್ನು ಗುರುತಿಸಿದರು ಮತ್ತು ಪ್ರತಿಪಕ್ಷಗಳ ವಿರುದ್ಧ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ಪ್ರತಿಜ್ಞೆ ಮಾಡಿದರು. ಅವರು ‘ವಿಕಸಿತ್ ಉತ್ತರ ಪ್ರದೇಶ’ಕ್ಕಾಗಿ ತಮ್ಮ ಅಚಲ ದೃಷ್ಟಿಯನ್ನು ಒತ್ತಿ ಹೇಳಿದರು. ರಾಷ್ಟ್ರದ ಒಳಿತಿಗಾಗಿ ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರಧಾನಿ ನಾಗರಿಕರನ್ನು ಕೋರಿದರು.

ಇಂದು, ಜಾಗತಿಕ ವೇದಿಕೆಯಲ್ಲಿ ಭಾರತದ ಸ್ಥಾನಮಾನ ಮತ್ತು ಗೌರವ ಗಮನಾರ್ಹವಾಗಿ ಹೆಚ್ಚಾಗಿದೆ: ಬಸ್ತಿಯಲ್ಲಿ ಪ್ರಧಾನಿ ಮೋದಿ

May 22nd, 12:35 pm

2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ಪ್ರಧಾನಿ ಮೋದಿ ಯುಪಿಯ ಬಸ್ತಿಯಲ್ಲಿ ತಮ್ಮ ವಿಶೇಷ ಉಪಸ್ಥಿತಿಯನ್ನು ಗುರುತಿಸಿದರು ಮತ್ತು ವಿರೋಧಪಕ್ಷಗಳ ವಿರುದ್ಧ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ಪ್ರತಿಜ್ಞೆ ಮಾಡಿದರು. ಅವರು 'ವಿಕಸಿತ್ ಉತ್ತರ ಪ್ರದೇಶ'ಕ್ಕಾಗಿ ತಮ್ಮ ಅಚಲ ದೃಷ್ಟಿಯನ್ನು ಒತ್ತಿ ಹೇಳಿದರು. ರಾಷ್ಟ್ರದ ಒಳಿತಿಗಾಗಿ ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರಧಾನಿ ನಾಗರಿಕರನ್ನು ಕೋರಿದರು.

ಯುಪಿಯಲ್ಲಿ ಬಸ್ತಿ ಮತ್ತು ಶ್ರಾವಸ್ತಿ ರ್‍ಯಾಲಿಗಳಲ್ಲಿ ಪ್ರಧಾನಿ ಮೋದಿ ಅವರು ಭಾರೀ ಜನಸಮೂಹವನ್ನು ಆಕರ್ಷಿಸುತ್ತಾರೆ

May 22nd, 12:30 pm

2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ಪ್ರಧಾನಿ ಮೋದಿ ಯುಪಿಯ ಬಸ್ತಿ ಮತ್ತು ಶ್ರಾವಸ್ತಿಯಲ್ಲಿ ತಮ್ಮ ವಿಶೇಷ ಉಪಸ್ಥಿತಿಯನ್ನು ಗುರುತಿಸಿದರು ಮತ್ತು ವಿರೋಧಪಕ್ಷಗಳ ವಿರುದ್ಧ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ಪ್ರತಿಜ್ಞೆ ಮಾಡಿದರು. ಅವರು 'ವಿಕಸಿತ್ ಉತ್ತರ ಪ್ರದೇಶ'ಕ್ಕಾಗಿ ತಮ್ಮ ಅಚಲ ದೃಷ್ಟಿಯನ್ನು ಒತ್ತಿ ಹೇಳಿದರು. ರಾಷ್ಟ್ರದ ಒಳಿತಿಗಾಗಿ ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರಧಾನಿ ನಾಗರಿಕರನ್ನು ಕೋರಿದರು.

ಬಿಹಾರದ ಬೇಗುಸರಾಯ್‌ನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

March 02nd, 08:06 pm

ʻಜೈ ಮಂಗಲ ಘರ್ ಮಂದಿರʼ ಮತ್ತು ನೌಲಾಖಾ ಮಂದಿರದಲ್ಲಿ ಪ್ರತಿಷ್ಠಾಪನೆಗೊಂಡಿರುವ ದೇವತೆಗಳಿಗೆ ನಾನು ನಮಸ್ಕರಿಸುತ್ತೇನೆ. ಇಂದು, ನಾನು 'ವಿಕಸಿತ ಭಾರತ'ಕ್ಕಾಗಿ(ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ) 'ವಿಕಸಿತ ಬಿಹಾರʼದ(ಅಭಿವೃದ್ಧಿ ಹೊಂದಿದ ಬಿಹಾರ) ಅಭಿವೃದ್ಧಿಗೆ ಕೊಡುಗೆ ನೀಡುವ ಸಂಕಲ್ಪದೊಂದಿಗೆ ಬೇಗುಸರಾಯ್‌ಗೆ ಬಂದಿದ್ದೇನೆ. ಇಷ್ಟು ದೊಡ್ಡ ಜನಸಮೂಹವನ್ನು ಭೇಟಿಯಾಗುವುದು ನನ್ನ ಸೌಭಾಗ್ಯ.

ಬಿಹಾರದ ಬಿಗುಸರಾಯ್‌ನಲ್ಲಿ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನ ಮಂತ್ರಿ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಣೆ

March 02nd, 04:50 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಬಿಗುಸರಾಯ್‌ನಲ್ಲಿಂದು ಸುಮಾರು 1.48 ಲಕ್ಷ ಕೋಟಿ ರೂಪಾಯಿ ಮೌಲ್ಯದ ಬಹು ತೈಲ ಮತ್ತು ಅನಿಲ ಕ್ಷೇತ್ರದ ಯೋಜನೆಗಳು ಮತ್ತು ಬಿಹಾರದಲ್ಲಿ 13,400 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು.

​​​​​​​ಜಾರ್ಖಂಡ್ ನ ಸಿಂದ್ರಿಯಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

March 01st, 11:30 am

ಜಾರ್ಖಂಡ್ ನ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಜೀ, ಮುಖ್ಯಮಂತ್ರಿ ಶ್ರೀ ಚಂಪೈ ಸೊರೆನ್ ಜೀ, ಗೌರವಾನ್ವಿತ ಕ್ಯಾಬಿನೆಟ್ ಸಹೋದ್ಯೋಗಿ ಅರ್ಜುನ್ ಮುಂಡಾ ಜೀ, ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಇತರ ಗಣ್ಯರು ಮತ್ತು ಜಾರ್ಖಂಡ್ ನ ಪ್ರೀತಿಯ ಸಹೋದರ ಸಹೋದರಿಯರೇ, ಜೋಹರ್ (ನಮಸ್ಕಾರ)! ಇಂದು, ಜಾರ್ಖಂಡ್ 35 ಸಾವಿರ ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಯೋಜನೆಗಳಿಂದ ಆಶೀರ್ವದಿಸಲ್ಪಟ್ಟಿದೆ. ಈ ಉಪಕ್ರಮಗಳಿಗಾಗಿ ನಾನು ನನ್ನ ರೈತ ಸಹೋದರರು, ಬುಡಕಟ್ಟು ಸಮುದಾಯದ ಸದಸ್ಯರು ಮತ್ತು ಜಾರ್ಖಂಡ್ ಜನರನ್ನು ಅಭಿನಂದಿಸುತ್ತೇನೆ.

ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ 35,700 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ

March 01st, 11:04 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಾರ್ಖಂಡ್‌ನ ಸಿಂದ್ರಿ, ಧನ್‌ಬಾದ್‌ನಲ್ಲಿ 35,700 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರಸಗೊಬ್ಬರ, ರೈಲು, ವಿದ್ಯುತ್ ಮತ್ತು ಕಲ್ಲಿದ್ದಲು ಕ್ಷೇತ್ರಗಳನ್ನು ಒಳಗೊಂಡಿವೆ. ಶ್ರೀ ಮೋದಿ ಅವರು ಹಿಂದೂಸ್ತಾನ್ ಉರ್ವರಕ್ ಮತ್ತು ರಸಾಯನ್ ಲಿಮಿಟೆಡ್ (HURL) ಸಿಂಡ್ರಿ ರಸಗೊಬ್ಬರ ಸ್ಥಾವರ ಮಾದರಿಯನ್ನು ಪರಿಶೀಲಿಸಿದರು ಮತ್ತು ಸಿಂದ್ರಿ ಪ್ಲಾಂಟ್ ಕಂಟ್ರೋಲ್ ರೂಮ್‌ ವೀಕ್ಷಿಸಿದರು.

ಉತ್ತರ ಪ್ರದೇಶದ ಗೋರಖ್‌ಪುರ ರೈಲು ನಿಲ್ದಾಣದಿಂದ ಎರಡು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನ ಮಂತ್ರಿಗಳು

July 07th, 08:45 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗೋರಖ್‌ಪುರ ರೈಲು ನಿಲ್ದಾಣದಿಂದ ಎರಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ಆ ಎರಡು ವಂದೇ ಭಾರತ್ ರೈಲುಗಳೆಂದರೆ ಗೋರಕ್ ಪುರ್ - ಲಕ್ನೋ ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಜೋಧ್‌ಪುರ - ಅಹಮದಾಬಾದ್ (ಸಾಬರಮತಿ) ವಂದೇ ಭಾರತ್ ಎಕ್ಸ್‌ಪ್ರೆಸ್. ಸುಮಾರು 498 ಕೋಟಿ ರೂಪಾಯಿ ವೆಚ್ಚದಲ್ಲಿ ಗೋರಖ್‌ಪುರ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ ಸಹ ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಪ್ರಸ್ತಾವಿತ ಗೋರಖ್‌ಪುರ ರೈಲು ನಿಲ್ದಾಣದ ಮಾದರಿಯನ್ನು ಪರಿಶೀಲಿಸಿದರು.

ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ʻಗೀತಾ ಪ್ರೆಸ್‌ʼನ ಶತಮಾನೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

July 07th, 04:00 pm

ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರೇ, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರೇ, `ಗೀತಾ ಪ್ರೆಸ್’ನ ಶ್ರೀ ಕೇಶೋರಾಮ್ ಅಗರ್ವಾಲ್ ಅವರೇ, ಶ್ರೀ ವಿಷ್ಣು ಪ್ರಸಾದ್ ಅವರೇ, ಸಂಸತ್ ಸದಸ್ಯ ರವಿ ಕಿಶನ್ ಅವರೇ, ಇತರ ಎಲ್ಲಾ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!

ಉತ್ತರ ಪ್ರದೇಶದ ಗೋರಖಪುರದಲ್ಲಿ ಗೀತಾ ಪ್ರೆಸ್ ಶತಮಾನೋತ್ಸವ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಮಾತನಾಡಿದರು

July 07th, 03:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗೋರಖಪುರದಲ್ಲಿ ಐತಿಹಾಸಿಕ ಗೀತಾ ಪ್ರೆಸ್ ಶತಮಾನೋತ್ಸವ ಸಮಾರಂಭದ ಸಮಾರೋಪ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಚಿತ್ರಮಯ ಶಿವ ಪುರಾಣ ಗ್ರಂಥವನ್ನು ಬಿಡುಗಡೆ ಮಾಡಿದರು. ಪ್ರಧಾನಮಂತ್ರಿಯವರು ಗೀತಾ ಪ್ರೆಸ್ ನಲ್ಲಿರುವ ಲೀಲಾ ಚಿತ್ರ ದೇವಾಲಯಕ್ಕೆ ಭೇಟಿ ನೀಡಿ ಶ್ರೀರಾಮನಿಗೆ ಪುಷ್ಪನಮನ ಸಲ್ಲಿಸಿದರು.

ಪ್ರಧಾನಮಂತ್ರಿಯವರು ಜುಲೈ 7-8ರಂದು 4 ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ಸುಮಾರು 50,000 ಕೋಟಿ ರೂ.ಗಳ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ

July 05th, 11:48 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಜುಲೈ 7-8 ರಂದು ನಾಲ್ಕು ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಅವರು ಜುಲೈ 7ರಂದು ಛತ್ತೀಸ್‌ಗಢ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಜುಲೈ 8ರಂದು ಪ್ರಧಾನಮಂತ್ರಿಯವರು ತೆಲಂಗಾಣ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

2021 ರ ಗಾಂಧಿ ಶಾಂತಿ ಪ್ರಶಸ್ತಿಯನ್ನು ಪಡೆದಿದ್ದಕ್ಕಾಗಿ ಗೋರಖ್ಪುರದ ಗೀತಾ ಪ್ರೆಸ್ಗೆ ಪ್ರಧಾನಮಂತ್ರಿಯವರಿಂದ ಅಭಿನಂದನೆ

June 18th, 09:03 pm

2021 ರ ಗಾಂಧಿ ಶಾಂತಿ ಪ್ರಶಸ್ತಿಯನ್ನು ಪಡೆದಿದ್ದಕ್ಕಾಗಿ ಗೋರಖ್ಪುರದ ಗೀತಾ ಪ್ರೆಸ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ.

ಗೋರಖ್‌ಪುರ ಸಂಸದ್ ಖೇಲ್ ಮಹಾಕುಂಭದಲ್ಲಿ ಪ್ರಧಾನ ಮಂತ್ರಿ ವೀಡಿಯೊ ಸಂದೇಶ

February 16th, 03:15 pm

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಗೋರಖ್‌ಪುರ ಸಂಸದ ರವಿಕಿಶನ್ ಶುಕ್ಲಾ ಜಿ, ಇಲ್ಲಿ ನೆರೆದಿರುವ ಯುವ ಕ್ರೀಡಾಪಟುಗಳೆ, ತರಬೇತುದಾರರೆ, ಪೋಷಕರೆ ಮತ್ತು ಸಹೋದ್ಯೋಗಿ ಮಿತ್ರರೆ!

ಗೋರಖ್ ಪುರ ಸಂಸದ್ (ವಿಶೇಷ) ಖೇಲ್ (ಕ್ರೀಡೆ) ಮಹಾಕುಂಭವನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದ ಪ್ರಧಾನಮಂತ್ರಿ

February 16th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಗೋರಖ್ ಪುರ ಸಂಸದ್ ಖೇಲ್ ಮಹಾಕುಂಭ ಉದ್ದೇಶಿಸಿ ಭಾಷಣ ಮಾಡಿದರು.

ಉತ್ತರ ಪ್ರದೇಶದ ಜಲೌನ್ ನಲ್ಲಿ ಬುಂಡೇಲ್ ಖಂಡ್ ಎಕ್ಸ್ ಪ್ರೆಸ್ ವೇ ಉದ್ಘಾಟನೆ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಅನುವಾದ

July 16th, 04:17 pm

ಉತ್ತರ ಪ್ರದೇಶದ ಎಲ್ಲ ಜನರಿಗೆ, ಬುಂಡೇಲ್ ಖಂಡದ ಸಹೋದರ ಸಹೋದರಿಯರಿಗೆ ಈ ಆಧುನಿಕ ಬುಂಡೇಲ್ ಖಂಡ ಎಕ್ಸ್ ಪ್ರೆಸ್ ವೇ ಗಾಗಿ ನನ್ನ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಕೋರುತ್ತೇನೆ. ಈ ಎಕ್ಸ್ ಪ್ರೆಸ್ ವೇ ಅನ್ನು ಬುಂಡೇಲ್ ಖಂಡದ ವೈಭವದ ಪರಂಪರೆಗೆ ಅರ್ಪಿಸುತ್ತಿದ್ದೇವೆ. ಉತ್ತರ ಪ್ರದೇಶದ ಸಂಸದನಾಗಿ ಮತ್ತು ಉತ್ತರ ಪ್ರದೇಶದ ಪ್ರತಿನಿಧಿಯಾಗಿ ಈ ಎಕ್ಸ್ ಪ್ರೆಸ್ ವೇಯನ್ನು ಬುಂಡೇಲ್ ಖಂಡಕ್ಕೆ ಕೊಡುಗೆಯಾಗಿ ನೀಡುತ್ತಿರುವುದಕ್ಕೆ ಅತೀವ ಸಂತಸವಾಗುತ್ತಿದೆ. ಈ ಪ್ರದೇಶ ಅಸಂಖ್ಯಾತ ಯೋಧರನ್ನು ಮತ್ತು ದೇಶಕ್ಕಾಗಿ ರಕ್ತ ಹರಿಸಿದವರನ್ನು ಮತ್ತು ಶೌರ್ಯ ಹಾಗೂ ಕಠಿಣ ಪರಿಶ್ರಮದ ಪುರುಷರು ಮತ್ತು ಮಹಿಳೆಯರನ್ನು ಕೊಡುಗೆಯಾಗಿ ನೀಡಿದೆ.

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ಪ್ರಧಾನ ಮಂತ್ರಿ ಅವರಿಂದ ಬುಂದೇಲ್ ಖಂಡ ಎಕ್ಸ್ ಪ್ರೆಸ್ ವೇ ಉದ್ಘಾಟನೆ.

July 16th, 10:25 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಜಲೌನ್ ನ ಒರೈ ತಹಸಿಲ್ ನ ಕೈತೇರಿ ಗ್ರಾಮದಲ್ಲಿ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯದ ಸಚಿವರು, ಜನ ಪ್ರತಿನಿಧಿಗಳು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಈ ಬಾರಿ ನಾವು 'ಜೀತ್ ಕಾ ಚೌಕಾ'ವನ್ನು ಹೊಡೆಯಲಿದ್ದೇವೆ... ಮೊದಲು 2014 ರಲ್ಲಿ, ನಂತರ 2017, 2019, ಮತ್ತು ಈಗ 2022: ಬಹ್ರೈಚ್‌ನಲ್ಲಿ ಪ್ರಧಾನಿ ಮೋದಿ

February 22nd, 04:00 pm

ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಸಾರ್ವಜನಿಕ ಸಭೆಯಲ್ಲಿ ಭಾರೀ ಜನಸ್ತೋಮವನ್ನು ಕಂಡು ಹರ್ಷ ವ್ಯಕ್ತಪಡಿಸಿದ ಪ್ರಧಾನಿ ಮೋದಿ, “ನೀವು ಬಿಜೆಪಿಯನ್ನು ಆಶೀರ್ವದಿಸಲು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ, ಈ ಬಾರಿ ನಾವು ‘ಜೀತ್ ಕಾ ಚೌಕ’ವನ್ನು ಹೊಡೆಯಲಿದ್ದೇವೆ... ಮೊದಲು 2014 ರಲ್ಲಿ, ನಂತರ 2017, 2019, ಮತ್ತು ಈಗ 2022. ಯುಪಿಯ ಜನರು 'ಪರಿವಾರವಾದಿಗಳನ್ನು' ತಿರಸ್ಕರಿಸಲು ನಿರ್ಧರಿಸಿದ್ದಾರೆ.

ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ವಿಶಾಲ ಜನಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

February 22nd, 03:59 pm

ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಸಾರ್ವಜನಿಕ ಸಭೆಯಲ್ಲಿ ಭಾರೀ ಜನಸ್ತೋಮವನ್ನು ಕಂಡು ಹರ್ಷ ವ್ಯಕ್ತಪಡಿಸಿದ ಪ್ರಧಾನಿ ಮೋದಿ, “ನೀವು ಬಿಜೆಪಿಯನ್ನು ಆಶೀರ್ವದಿಸಲು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ, ಈ ಬಾರಿ ನಾವು ‘ಜೀತ್ ಕಾ ಚೌಕ’ವನ್ನು ಹೊಡೆಯಲಿದ್ದೇವೆ... ಮೊದಲು 2014 ರಲ್ಲಿ, ನಂತರ 2017, 2019, ಮತ್ತು ಈಗ 2022. ಯುಪಿಯ ಜನರು 'ಪರಿವಾರವಾದಿಗಳನ್ನು' ತಿರಸ್ಕರಿಸಲು ನಿರ್ಧರಿಸಿದ್ದಾರೆ.

ಡಬಲ್ ಇಂಜಿನ್ ಸರ್ಕಾರ್ ಬಡವರು, ರೈತರು ಮತ್ತು ಯುವಕರದ್ದು: ಪ್ರಧಾನಿ ಮೋದಿ

February 20th, 01:41 pm

ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಹರ್ದೋಯ್ ಮತ್ತು ಉನ್ನಾವೋದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಹರ್ದೋಯ್‌ನಲ್ಲಿ ತಮ್ಮ ಮೊದಲ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜನರ ಉತ್ಸಾಹವನ್ನು ಶ್ಲಾಘಿಸಿದರು ಮತ್ತು ಹೋಳಿ ಹಬ್ಬದೊಂದಿಗಿನ ಸಂಬಂಧವನ್ನು ಎತ್ತಿ ತೋರಿಸಿದರು, “ನನಗೆ ಗೊತ್ತು, ಈ ಬಾರಿ ಹರ್ದೋಯಿ ಜನರು, ಯುಪಿ ಜನರು ಆಡಲು ತಯಾರಿ ನಡೆಸುತ್ತಿದ್ದಾರೆ. ಎರಡು ಬಾರಿ ಬಣ್ಣಗಳೊಂದಿಗೆ ಹೋಳಿ.