ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ 'ಪಿಎಂ ವಿಶ್ವಕರ್ಮ' ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 20th, 11:45 am

2 ದಿನಗಳ ಹಿಂದೆಯಷ್ಟೇ ವಿಶ್ವಕರ್ಮ ಜಯಂತಿ ಆಚರಿಸಿದ್ದೆವು. ಇಂದು ನಾವು ವಾರ್ಧಾದ ಪವಿತ್ರ ಭೂಮಿಯಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಯಶಸ್ಸನ್ನು ಆಚರಿಸುತ್ತಿದ್ದೇವೆ. 1932ರ ಇದೇ ದಿನದಂದು ಮಹಾತ್ಮ ಗಾಂಧೀಜಿ ಅವರು ಅಸ್ಪೃಶ್ಯತೆಯ ವಿರುದ್ಧ ತಮ್ಮ ಅಭಿಯಾನ ಆರಂಭಿಸಿದ್ದರು ಎಂಬುದು ಇಂದಿನ ವಿಶೇಷ. ಈ ಹಿನ್ನೆಲೆಯಲ್ಲಿ ವಿನೋಬಾ ಭಾವೆ ಅವರ ಪುಣ್ಯಭೂಮಿ, ಮಹಾತ್ಮ ಗಾಂಧಿ ಅವರ ‘ಕರ್ಮಭೂಮಿ’ ಮತ್ತು ವಾರ್ಧಾ ಭೂಮಿಯಲ್ಲಿ ವಿಶ್ವಕರ್ಮ ಯೋಜನೆಯ 1 ವರ್ಷದ ಸಂಭ್ರಮಾಚರಣೆಯು ನಮ್ಮ ‘ವಿಕಸಿತ ಭಾರತ’(ಅಭಿವೃದ್ಧಿ ಹೊಂದಿದ ಭಾರತ)ದ ಸಂಕಲ್ಪಕ್ಕೆ ಹೊಸ ಚೈತನ್ಯ ನೀಡುವ ಸಾಧನೆ ಮತ್ತು ಸ್ಫೂರ್ತಿಯ ಸಂಗಮವಾಗಿದೆ. ವಿಶ್ವಕರ್ಮ ಯೋಜನೆ ಮೂಲಕ ನಾವು ಶ್ರಮದ ಮೂಲಕ ಸಮೃದ್ಧಿ ಮತ್ತು ಕೌಶಲ್ಯದ ಮೂಲಕ ಉತ್ತಮ ಭವಿಷ್ಯದ ಬದ್ಧತೆ ಹೊಂದಿದ್ದೇವೆ. ವಾರ್ಧಾದಲ್ಲಿ ಬಾಪು ಅವರ ಸ್ಫೂರ್ತಿಗಳು ಈ ಬದ್ಧತೆಗಳನ್ನು ಪೂರೈಸಲು ನಮಗೆ ಸಹಾಯ ಮಾಡುತ್ತದೆ. ಈ ಉಪಕ್ರಮಕ್ಕೆ ಸಂಬಂಧಿಸಿದ ಎಲ್ಲರಿಗೂ ಮತ್ತು ದೇಶಾದ್ಯಂತದ ಎಲ್ಲಾ ಫಲಾನುಭವಿಗಳಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

September 20th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ‘ಆಚಾರ್ಯ ಚಾಣಕ್ಯ ಕೌಶಲ್ಯ ಅಭಿವೃದ್ಧಿ’ಯೋಜನೆ ಮತ್ತು ‘ಪುಣ್ಯಶ್ಲೋಕ ಅಹಲ್ಯಾದೇವಿ ಹೋಳ್ಕರ್ ಮಹಿಳಾ ಸ್ಟಾರ್ಟಪ್ ಯೋಜನೆʼಗೆ ಚಾಲನೆ ನೀಡಿದರು. ಪ್ರಧಾನಮಂತ್ರಿ ವಿಶ್ವಕರ್ಮ ಫಲಾನುಭವಿಗಳಿಗೆ ಪ್ರಮಾಣಪತ್ರಗಳು ಮತ್ತು ಸಾಲಗಳನ್ನು ಬಿಡುಗಡೆ ಮಾಡಿದರು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಒಂದು ವರ್ಷದ ಪ್ರಗತಿಯನ್ನು ಗುರುತಿಸುವ ಸ್ಮರಣಾರ್ಥ ಅಂಚೆಚೀಟಿಯನ್ನು ಬಿಡುಗಡೆ ಮಾಡಿದರು. ಮಹಾರಾಷ್ಟ್ರದ ಅಮರಾವತಿಯಲ್ಲಿ ಪ್ರಧಾನಮಂತ್ರಿ ಮೆಗಾ ಇಂಟಿಗ್ರೇಟೆಡ್ ಟೆಕ್ಸ್‌ಟೈಲ್ ರೀಜನ್‌ ಅಂಡ್‌ ಅಪಾರಲ್ (ಪಿಎಂ ಮಿತ್ರಾ) ಪಾರ್ಕ್‌ ಗೆ ಶ್ರೀ ಮೋದಿಯವರು ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನವನ್ನು ಪ್ರಧಾನಿಯವರು ವೀಕ್ಷಿಸಿದರು.

ವಿಸಿ (ವಿಡಿಯೊ ಕಾನ್ಫರೆನ್ಸ್) ಮೂಲಕ ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

January 18th, 12:47 pm

ವಿಕಸಿತ ಭಾರತ ಸಂಕಲ್ಪ ಯಾತ್ರೆ ಎರಡು ತಿಂಗಳು ಪೂರೈಸಿದೆ. ಈ ಯಾತ್ರೆಯಲ್ಲಿ ಚಲಿಸುತ್ತಿರುವ 'ವಿಕಾಸ ರಥ' (ಅಭಿವೃದ್ಧಿ ರಥ) 'ವಿಶ್ವಾಸ್ ರಥ' (ವಿಶ್ವಾಸ ರಥ) ಆಗಿದೆ, ಮತ್ತು ಈಗ ಜನರು ಇದನ್ನು 'ಗ್ಯಾರಂಟಿ ವಾಲಾ ರಥ್' (ಗ್ಯಾರಂಟಿ ರಥ) ಎಂದು ಕರೆಯುತ್ತಿದ್ದಾರೆ. ಯಾರೂ ಹಿಂದೆ ಉಳಿಯುವುದಿಲ್ಲ ಮತ್ತು ಯಾರೂ ಯಾವುದೇ ಯೋಜನೆಗಳ ಪ್ರಯೋಜನಗಳನ್ನು ಕಳೆದುಕೊಳ್ಳುವುದಿಲ್ಲ ಎಂಬ ನಂಬಿಕೆ ಇದೆ. ಆದ್ದರಿಂದ, ನರೇಂದ್ರ ಮೋದಿಯವರ ಖಾತರಿಯ ವಾಹನ ಇನ್ನೂ ತಲುಪದ ಹಳ್ಳಿಗಳಲ್ಲಿ, ಜನರು ಈಗ ಕುತೂಹಲದಿಂದ ಕಾಯುತ್ತಿದ್ದಾರೆ. ಆರಂಭದಲ್ಲಿ, ನಾವು ಈ ಯಾತ್ರೆಯನ್ನು ಜನವರಿ 26 ರವರೆಗೆ ಯೋಜಿಸಿದ್ದೇವೆ, ಆದರೆ ಹೆಚ್ಚಿನ ಬೆಂಬಲ ಮತ್ತು ಹೆಚ್ಚಿದ ಬೇಡಿಕೆಯೊಂದಿಗೆ, ಪ್ರತಿ ಹಳ್ಳಿಯ ಜನರು ನರೇಂದ್ರ ಮೋದಿ ಅವರ ಖಾತರಿಯ ವಾಹನವು ತಮ್ಮ ಸ್ಥಳಕ್ಕೆ ಬರಬೇಕು ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ನನಗೆ ತಿಳಿದಾಗಿನಿಂದ, ಇದನ್ನು ಜನವರಿ 26 ರ ನಂತರವೂ ವಿಸ್ತರಿಸುವಂತೆ ನಾನು ನಮ್ಮ ಸರ್ಕಾರಿ ಅಧಿಕಾರಿಗಳಿಗೆ ಹೇಳಿದ್ದೇನೆ. ಜನರಿಗೆ ಇದು ಬೇಕು ಮತ್ತು ಬೇಡಿಕೆ ಇದೆ, ಆದ್ದರಿಂದ ನಾವು ಅದನ್ನು ಪೂರೈಸಬೇಕಾಗಿದೆ. ಆದ್ದರಿಂದ, ಬಹುಶಃ ಕೆಲವು ದಿನಗಳ ನಂತರ, ನರೇಂದ್ರ ಮೋದಿ ಅವರ ಖಾತರಿ ವಾಹನವು ಫೆಬ್ರವರಿ ತಿಂಗಳಲ್ಲಿಯೂ ಮುಂದುವರಿಯುವುದು ನಿಶ್ಚಿತವಾಗಿದೆ.

ʻವಿಕಸಿತ ಭಾರತ ಸಂಕಲ್ಪ ಯಾತ್ರೆʼಯ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿಗಳ ಸಂವಾದ

January 18th, 12:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ʻವಿಕಸಿತ ಭಾರತ ಸಂಕಲ್ಪ ಯಾತ್ರೆʼಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ದೇಶದ ವಿವಿಧ ಭಾಗಗಳಿಂದ ʻವಿಕಸಿತ ಭಾರತ ಸಂಕಲ್ಪ ಯಾತ್ರೆʼಯ ಸಾವಿರಾರು ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು, ಸಂಸದರು, ಶಾಸಕರು ಮತ್ತು ಸ್ಥಳೀಯ ಮಟ್ಟದ ಪ್ರತಿನಿಧಿಗಳು ಭಾಗವಹಿಸಿದ್ದರು.

ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮ; ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನ ಮಂತ್ರಿ ಭಾಷಣ

December 09th, 12:35 pm

ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ಹೀಗೆ ಭಾರತದ ಮೂಲೆ ಮೂಲೆಯಲ್ಲೂ ಮೋದಿ ಅವರ ‘ಗ್ಯಾರಂಟಿ ವಾಹನ’ದ ಬಗ್ಗೆ ಪ್ರತಿ ಸಣ್ಣ ಮತ್ತು ದೊಡ್ಡ ಹಳ್ಳಿಗಳಲ್ಲಿ ಕಂಡುಬರುವ ಉತ್ಸಾಹ ಗೋಚರಿಸುತ್ತದೆ. ಈ ವಾಹನವು ಆ ಗ್ರಾಮೀಣ ಜನರ ಮೂಲಕ ಹಾದುಹೋಗದಿದ್ದಾಗ, ಜನರು ತಾವಾಗಿಯೇ ಬಂದು ಗ್ರಾಮದ ರಸ್ತೆಯ ಮಧ್ಯೆ ನಿಂತು ಎಲ್ಲಾ ಮಾಹಿತಿ ಪಡೆಯಲು ವಾಹನ ನಿಲ್ಲಿಸುತ್ತಾರೆ ಎಂಬುದನ್ನು ನಾನು ಕಲಿತಿದ್ದೇನೆ. ಆದ್ದರಿಂದ, ಇದನ್ನು ಸ್ವತಃ ನಂಬಲಾಗದು. ನಾನೀಗ ಕೆಲವು ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ್ದೇನೆ. ಈ ಭೇಟಿಯಲ್ಲಿ 1.5 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ತಮ್ಮ ಅನುಭವಗಳನ್ನು ಹೇಳಿಕೊಳ್ಳಲು ಅವಕಾಶ ಪಡೆದಿದ್ದಾರೆ. ಈ ಅನುಭವಗಳನ್ನು ಸಹ ದಾಖಲಿಸಲಾಗಿದೆ ಎಂದು ನನಗೆ ತಿಳಿಸಲಾಗಿದೆ. ಕಳೆದ 10-15 ದಿನಗಳಲ್ಲಿ ನಾನು ಕಾಲಕಾಲಕ್ಕೆ ಹಳ್ಳಿಯ ಜನರ ಭಾವನೆಗಳನ್ನು ನೋಡಿದ್ದೇನೆ. ಯೋಜನೆಗಳು ತಲುಪಿವೆಯೇ, ಅವುಗಳನ್ನು ಸಂಪೂರ್ಣವಾಗಿ ಅಳವಡಿಸಲಾಗಿದೆಯೇ ಅಥವಾ ಇಲ್ಲವೇ. ಅವರಿಗೆ ಎಲ್ಲಾ ವಿವರಗಳೂ ಗೊತ್ತು.

ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿಯವರ ಸಂವಾದ

December 09th, 12:30 pm

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ‘ಮೋದಿ ಕಿ ಗ್ಯಾರಂಟಿ’ವಾಹನಕ್ಕೆ ಪ್ರತಿ ಹಳ್ಳಿಯಲ್ಲಿಯೂ ಕಂಡುಬರುತ್ತಿರುವ ಅದ್ಭುತ ಉತ್ಸಾಹದ ಬಗ್ಗೆ ಗಮನ ಸೆಳೆದರು. ಸ್ವಲ್ಪ ಸಮಯದ ಹಿಂದೆ ಫಲಾನುಭವಿಗಳೊಂದಿಗೆ ನಡೆಸಿದ ತಮ್ಮ ಸಂವಾದವನ್ನು ಪ್ರಸ್ತಾಪಿಸಿದ ಪ್ರಧಾನಿ, ಈ ಪ್ರಯಾಣದಲ್ಲಿ 1.5 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ತಮ್ಮ ಅನುಭವಗಳನ್ನು ದಾಖಲಿಸಿದ್ದಾರೆ ಎಂದು ತಿಳಿಸಿದರು. ಶಾಶ್ವತ ಮನೆ, ನಲ್ಲಿ ನೀರಿನ ಸಂಪರ್ಕ, ಶೌಚಾಲಯ, ಉಚಿತ ಚಿಕಿತ್ಸೆ, ಉಚಿತ ಪಡಿತರ, ಗ್ಯಾಸ್ ಸಂಪರ್ಕ, ವಿದ್ಯುತ್ ಸಂಪರ್ಕ, ಬ್ಯಾಂಕ್ ಖಾತೆ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ, ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ ಮತ್ತು ಪ್ರಧಾನ ಮಂತ್ರಿ ಸ್ವಾಮಿತ್ವ ಆಸ್ತಿ ಕಾರ್ಡ್‌ ಮತ್ತಿತರ ಸವಲತ್ತುಗಳನ್ನು ಅವರು ಪ್ರಸ್ತಾಪಿಸಿದರು. ದೇಶದಾದ್ಯಂತ ಹಳ್ಳಿಗಳ ಕೋಟ್ಯಂತರ ಕುಟುಂಬಗಳು ಯಾವುದೇ ಸರ್ಕಾರಿ ಕಚೇರಿಗೆ ಪದೇ ಪದೇ ಅಲೆಯದೇ ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಪಡೆದಿವೆ ಎಂದು ಅವರು ಹೇಳಿದರು. ಸರಕಾರವು ಫಲಾನುಭವಿಗಳನ್ನು ಗುರುತಿಸಿ ನಂತರ ಅವರಿಗೆ ಸವಲತ್ತು ನೀಡಲು ಕ್ರಮಕೈಗೊಂಡಿದೆ ಎಂದು ಒತ್ತಿ ಹೇಳಿದರು. ಅದಕ್ಕಾಗಿಯೇ ಜನರು, ಮೋದಿ ಕಿ ಗ್ಯಾರಂಟಿ ಎಂದರೆ ಈಡೇರುವ ಭರವಸೆ ಎಂದು ಹೇಳುತ್ತಾರೆ ಎಂದರು.

ʻವಿಕಸಿತ ಭಾರತ ಸಂಕಲ್ಪ ಯಾತ್ರೆʼಯ ಫಲಾನುಭವಿಗಳೊಂದಿಗಿನ ಸಂವಾದದ ವೇಳೆ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

November 30th, 12:00 pm

ಇಂದು, ʻವಿಕಸಿತ ಭಾರತ ಸಂಕಲ್ಪ ಯಾತ್ರೆʼ(ಅಭಿವೃದ್ಧಿ ಹೊಂದಿದ ಭಾರತ ಪ್ರಯಾಣದ ಸಂಕಲ್ಪ) 15 ದಿನಗಳನ್ನು ಪೂರೈಸುತ್ತಿದೆ. ಬಹುಶಃ ಆರಂಭದಲ್ಲಿ ಈ ಯಾತ್ರೆಯನ್ನು ಹೇಗೆ ಪ್ರಾರಂಭಿಸಬೇಕು, ಯಾವ ರೀತಿಯ ಸಿದ್ಧತೆಗಳನ್ನು ಮಾಡಬೇಕು ಎಂಬ ವಿಚಾರವಾಗಿ ಕೆಲವು ತೊಂದರೆಗಳು ಇದ್ದವು. ಆದರೆ ಕಳೆದ ಎರಡು ಅಥವಾ ಮೂರು ದಿನಗಳಲ್ಲಿ, ಸಾವಿರಾರು ಜನರು ಸೇರುತ್ತಿರುವ ಸುದ್ದಿಗಳನ್ನು ನಾನು ನೋಡುತ್ತಿದ್ದೇನೆ ಮತ್ತು ಕೇಳುತ್ತಿದ್ದೇನೆ. ಅಂದರೆ, ಈ 'ವಿಕಾಸ ರಥ'(ಅಭಿವೃದ್ಧಿ ರಥ) ಮುಂದೆ ಸಾಗಿದಂತೆ, ಕೇವಲ 15 ದಿನಗಳಲ್ಲಿ ಜನರು ಅದರ ಹೆಸರನ್ನು ಬದಲಾಯಿಸಿದ್ದಾರೆ ಎಂದು ನಾನು ಕೇಳಲ್ಪಟ್ಟೆ. ಸರ್ಕಾರ ಇದನ್ನು ಪ್ರಾರಂಭಿಸಿದಾಗ, ಇದನ್ನು 'ವಿಕಾಸ್ ರಥ' ಎಂದು ಕರೆಯಲಾಗುತ್ತಿತ್ತು, ಆದರೆ ಈಗ ಜನರು ಇದು 'ರಥ' ಅಲ್ಲ, ಆದರೆ ಮೋದಿಯವರ ʻಗ್ಯಾರಂಟಿʼ ವಾಹನ ಎಂದು ಹೇಳುತ್ತಿದ್ದಾರೆ. ಇದನ್ನು ಕೇಳಿ ನನಗೆ ತುಂಬಾ ಸಂತೋಷವಾಯಿತು. ನಿಮಗೆ ಮೋದಿ ಮೇಲೆ ಎಷ್ಟು ವಿಶ್ವಾಸವಿಯೆಂದರೆ, ನೀವು ಅದನ್ನು ಮೋದಿಯವರ ಗ್ಯಾರಂಟಿ ವಾಹನವಾಗಿ ಪರಿವರ್ತಿಸಿದ್ದೀರಿ. ನೀವು ಮೋದಿಯವರ ʻಗ್ಯಾರಂಟಿʼ ವಾಹನ ಎಂದು ಕರೆದಿರುವ ಹಿನ್ನೆಲೆಯಲ್ಲಿ, ಮೋದಿ ಆ ಬದ್ಧತೆಯನ್ನು ಪೂರೈಸುತ್ತಾರೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ.

ʻವಿಕಸಿತ ಭಾರತ ಸಂಕಲ್ಪ ಯಾತ್ರೆʼಯ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ

November 30th, 11:27 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻವಿಕಸಿತ ಭಾರತ ಸಂಕಲ್ಪ ಯಾತ್ರೆʼಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ʻಪ್ರಧಾನಮಂತ್ರಿ ಮಹಿಳಾ ಕಿಸಾನ್ ಡ್ರೋನ್ ಕೇಂದ್ರʼಕ್ಕೂ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ದಿಯೋಘರ್‌ನ ʻಏಮ್ಸ್ʼ ಆಸ್ಪತ್ರೆಯಲ್ಲಿ ದೇಶದ 10,000ನೇ ಜನೌಷಧ ಕೇಂದ್ರವನ್ನು ಉದ್ಘಾಟಿಸಿದರು. ಇದಲ್ಲದೆ, ದೇಶದಲ್ಲಿ ಜನೌಷಧ ಕೇಂದ್ರಗಳ ಸಂಖ್ಯೆಯನ್ನು 10,000 ದಿಂದ 25,000ಕ್ಕೆ ಹೆಚ್ಚಿಸುವ ಕಾರ್ಯಕ್ರಮಕ್ಕೆ ಶ್ರೀ ಮೋದಿ ಚಾಲನೆ ನೀಡಿದರು. ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್‌ಗಳನ್ನು ಒದಗಿಸುವುದು ಮತ್ತು ಜನೌಷಧ ಕೇಂದ್ರಗಳ ಸಂಖ್ಯೆಯನ್ನು 10,000 ದಿಂದ 25,000ಕ್ಕೆ ಹೆಚ್ಚಿಸುವುದು ಈ ಎರಡೂ ಉಪಕ್ರಮಗಳನ್ನು ಪ್ರಧಾನಿ ಈ ವರ್ಷದ ಆರಂಭದಲ್ಲಿ ತಮ್ಮ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಘೋಷಿಸಿದರು. ಈ ಕಾರ್ಯಕ್ರಮವು ಈ ಭರವಸೆಗಳ ಈಡೇರಿಕೆಯನ್ನು ಸೂಚಿಸುತ್ತದೆ. ಜಾರ್ಖಂಡ್‌ನ ದಿಯೋಘರ್, ಒಡಿಶಾದ ರಾಯ್ ಗರ್ಹಾ, ಆಂಧ್ರಪ್ರದೇಶದ ಪ್ರಕಾಶಂ, ಅರುಣಾಚಲ ಪ್ರದೇಶದ ನಾಮ್ಸಾಯಿ ಹಾಗೂ ಜಮ್ಮು ಮತ್ತು ಕಾಶ್ಮೀರದ ಅರ್ನಿಯಾದ ಫಲಾನುಭವಿಗಳೊಂದಿಗೆ ಪ್ರಧಾನಿ ಸಂವಾದ ನಡೆಸಿದರು.

24.09.2023 ರಂದು 'ಮನ್ ಕಿ ಬಾತ್' ನ 105 ನೇ ಸಂಚಿಕೆಯಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಕನ್ನಡ ಅನುವಾದ

September 24th, 11:30 am

ನನ್ನ ಪ್ರೀತಿಯ ಪರಿವಾರ ಸದಸ್ಯರಿಗೆ ನಮಸ್ಕಾರ. ‘ಮನದ ಮಾತಿನ’ ಮತ್ತೊಂದು ಸಂಚಿಕೆಯಲ್ಲಿ, ದೇಶದ ಯಶಸ್ಸು, ದೇಶದ ಜನತೆಯ ಯಶಸ್ಸು, ಅವರ ಸ್ಪೂರ್ತಿದಾಯಕ ಜೀವನ ಪಯಣವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ನನಗೆ ಅವಕಾಶ ದೊರೆತಿದೆ. ಇತ್ತೀಚೆಗೆ, ನನಗೆ ಲಭಿಸಿದ ಹೆಚ್ಚಿನ ಪತ್ರಗಳು ಮತ್ತು ಸಂದೇಶಗಳು ಎರಡು ವಿಷಯಗಳ ಮೇಲೆ ಕೇಂದ್ರೀಕೃತವಾಗಿವೆ. ಮೊದಲನೆಯದ್ದು ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ಮತ್ತು ಎರಡನೇ ವಿಷಯವೆಂದರೆ ದೆಹಲಿಯಲ್ಲಿ ಜಿ-20 ರ ಯಶಸ್ವಿ ಆಯೋಜನೆ. ದೇಶದ ಪ್ರತಿಯೊಂದು ಭಾಗದಿಂದ, ಸಮಾಜದ ಪ್ರತಿಯೊಂದು ವರ್ಗದಿಂದ, ಎಲ್ಲಾ ವಯೋಮಾನದ ಜನರಿಂದ ನನಗೆ ಅಸಂಖ್ಯ ಪತ್ರಗಳು ಬಂದಿವೆ. ಚಂದ್ರಯಾನ-3 ರ ಲ್ಯಾಂಡರ್ ಚಂದ್ರನ ಮೇಲೆ ಇಳಿಯುತ್ತಿದ್ದಾಗ, ವಿವಿಧ ಮಾಧ್ಯಮಗಳ ಮೂಲಕ ಕೋಟ್ಯಾಂತರ ಜನರು ಏಕಕಾಲದಲ್ಲಿ ಈ ಘಟನೆಯ ಪ್ರತಿ ಕ್ಷಣವನ್ನು ಸಾಕ್ಷೀಕರಿಸಿದ್ದಾರೆ. ಇಸ್ರೋದ ಯೂಟ್ಯೂಬ್ ಲೈವ್ ಚಾನೆಲ್‌ನಲ್ಲಿ 80 ಲಕ್ಷಕ್ಕೂ ಹೆಚ್ಚು ಜನರು ಘಟನೆಯನ್ನು ವೀಕ್ಷಿಸಿದ್ದು ಸ್ವತಃ ಒಂದು ದಾಖಲೆಯಾಗಿದೆ. ಇದರಿಂದ ಚಂದ್ರಯಾನ-3 ರ ಕುರಿತು ಕೋಟ್ಯಾಂತರ ಭಾರತೀಯರ ಬಾಂಧವ್ಯ ಎಷ್ಟು ಗಾಢವಾಗಿದೆ ಎಂಬುದರ ಅರಿವಾಗುತ್ತದೆ. ಇತ್ತೀಚೆಗೆ ದೇಶದಲ್ಲಿ ಚಂದ್ರಯಾನದ ಈ ಯಶಸ್ಸಿನ ಕುರಿತು, ಅದ್ಭುತವಾದ ಒಂದು ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ ಮತ್ತು ಅದನ್ನು 'ಚಂದ್ರಯಾನ-3 ಮಹಾಕ್ವಿಜ್' ಎಂದು ಹೆಸರಿಸಲಾಗಿದೆ. MyGov ಪೋರ್ಟಲ್‌ನಲ್ಲಿ ನಡೆಯುತ್ತಿರುವ ಈ ಸ್ಪರ್ಧೆಯಲ್ಲಿ ಇದುವರೆಗೆ 15 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. MyGov ವೇದಿಕೆ ಆರಂಭಿಸಿದಂದಿನಿಂದ ಒಂದು ರಸಪ್ರಶ್ನೆಯಲ್ಲಿ ಜನರ ಅತಿ ದೊಡ್ಡ ಭಾಗವಹಿಸುವಿಕೆ ಇದಾಗಿದೆ. ನೀವು ಇನ್ನೂ ಇದರಲ್ಲಿ ಭಾಗವಹಿಸಿಲ್ಲವೆಂದಾದರೆ, ತಡ ಮಾಡಬೇಡಿ, ಇನ್ನೂ ಆರು ದಿನಗಳು ಬಾಕಿ ಇವೆ ಎಂದು ನಿಮಗೆ ಹೇಳಬಯಸುತ್ತೇನೆ. ಈ ರಸಪ್ರಶ್ನೆಯಲ್ಲಿ ಖಂಡಿತ ಭಾಗವಹಿಸಿ.

During Congress rule, nothing was done to empower Panchayati Raj institutions: PM Modi

August 07th, 10:37 pm

Today, PM Modi addressed the Kshetriya Panchayati Raj Parishad in Haryana via video conferencing. Addressing the gathering, the PM said, “Today, the country is moving forward with full enthusiasm to fulfill the resolutions of Amrit Kaal and to build a developed India. The PM said, District Panchayats hold tremendous potential to drive significant transformations in various sectors. In this context, your role as representatives of the BJP becomes exceptionally vital.

PM Modi addresses at Kshetriya Panchayati Raj Parishad in Haryana

August 07th, 10:30 am

Today, PM Modi addressed the Kshetriya Panchayati Raj Parishad in Haryana via video conferencing. Addressing the gathering, the PM said, “Today, the country is moving forward with full enthusiasm to fulfill the resolutions of Amrit Kaal and to build a developed India. The PM said, District Panchayats hold tremendous potential to drive significant transformations in various sectors. In this context, your role as representatives of the BJP becomes exceptionally vital.

Centre's projects is benefitting Telangana's industry, tourism, youth: PM Modi

July 08th, 12:52 pm

Addressing a rally in Warangal, PM Modi emphasized the significant role of the state in the growth of the BJP. PM Modi emphasized the remarkable progress India has made in the past nine years, and said “Telangana, too, has reaped the benefits of this development. The state has witnessed a surge in investments, surpassing previous levels, which has resulted in numerous employment opportunities for the youth of Telangana.”

PM Modi addresses a public meeting in Telangana’s Warangal

July 08th, 12:05 pm

Addressing a rally in Warangal, PM Modi emphasized the significant role of the state in the growth of the BJP. PM Modi emphasized the remarkable progress India has made in the past nine years, and said “Telangana, too, has reaped the benefits of this development. The state has witnessed a surge in investments, surpassing previous levels, which has resulted in numerous employment opportunities for the youth of Telangana.”

ತೆಲಂಗಾಣದ ವಾರಂಗಲ್‌ನಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ವೇಳೆ ಪ್ರಧಾನಮಂತ್ರಿ ಮಾಡಿದ ಭಾಷಣದ ಇಂಗ್ಲಿಷ್ ಅನುವಾದ

July 08th, 12:00 pm

ತೆಲಂಗಾಣ ರಾಜ್ಯಪಾಲರಾದ ಸೌಂದರರಾಜನ್ ಜೀ, ನನ್ನ ಕೇಂದ್ರ ಸಂಪುಟದ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜಿ, ಜಿ ಕಿಶನ್ ರೆಡ್ಡಿ ಜಿ, ಸಂಜಯ್ ಜಿ, ಇತರ ಗಣ್ಯರು ಮತ್ತು ತೆಲಂಗಾಣದ ನನ್ನ ಸಹೋದರ ಸಹೋದರಿಯರೇ! ಇತ್ತೀಚೆಗೆ ತೆಲಂಗಾಣ ರಚನೆಯಾಗಿ 9 ವರ್ಷ ಪೂರ್ಣಗೊಂಡಿದೆ. ತೆಲಂಗಾಣ ರಾಜ್ಯವು ಹೊಸದಾಗಿರಬಹುದು ಆದರೆ ಭಾರತದ ಇತಿಹಾಸಕ್ಕೆ ತೆಲಂಗಾಣ ಮತ್ತು ಅದರ ಜನರ ಕೊಡುಗೆ ಯಾವಾಗಲೂ ಬಹುಮೂಲ್ಯವಾಗಿದೆ. ತೆಲುಗು ಜನರ ಸಾಮರ್ಥ್ಯವು ಯಾವಾಗಲೂ ಭಾರತದ ಶಕ್ತಿಯನ್ನು ಹೆಚ್ಚಿಸಿದೆ. ಇಂದು ವಿಶ್ವದ ಐದನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಭಾರತ ಅಭಿವೃದ್ಧಿ ಹೊಂದಲು ತೆಲಂಗಾಣ ಪ್ರಮುಖ ಪಾತ್ರ ವಹಿಸಿದೆ. ಇಡೀ ವಿಶ್ವವೇ ಭಾರತದಲ್ಲಿ ಹೂಡಿಕೆ ಮಾಡಲು ಮುಂದೆ ಬರುತ್ತಿರುವ ಮತ್ತು ಭಾರತದ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ಇಂಥ ಸನ್ನಿವೇಶದಲ್ಲಿ ತೆಲಂಗಾಣದ ಮುಂದೆ ಅವಕಾಶಗಳ ಮಹಾಪೂರವೇ ಇದೆ.

ತೆಲಂಗಾಣದ ವಾರಂಗಲ್‌ನಲ್ಲಿ ಸುಮಾರು 6,100 ಕೋಟಿ ರೂಪಾಯಿ ಮೌಲ್ಯದ ಹಲವಾರು ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶಂಕುಸ್ಥಾಪನೆ

July 08th, 11:15 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೆಲಂಗಾಣದ ವಾರಂಗಲ್‌ನಲ್ಲಿಂದು ಸುಮಾರು 6,100 ಕೋಟಿ ರೂಪಾಯಿ ಮೊತ್ತದ ಹಲವಾರು ನಿರ್ಣಾಯಕ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಅಭಿವೃದ್ಧಿ ಕಾಮಗಾರಿಗಳಲ್ಲಿ 5,550 ಕೋಟಿ ರೂ. ಮೌಲ್ಯದ 176 ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಮತ್ತು 500 ಕೋಟಿ ರೂ. ವೆಚ್ಚದಲ್ಲಿ ಕಾಜಿಪೇಟೆ ರೈಲ್ವೆ ಉತ್ಪಾದನಾ ಘಟಕ ಅಭಿವೃದ್ಧಿ ಸೇರಿದೆ. ಇದೇ ವೇಳೆ ಪ್ರಧಾನಿ ಅವರು ಭದ್ರಕಾಳಿ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆ ನೆರವೇರಿಸಿದರು.

ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು ಮಧ್ಯಪ್ರದೇಶದ ರೇವಾದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ

April 24th, 11:46 am

ಈ ಐತಿಹಾಸಿಕ ರೇವಾ ನೆಲದಿಂದ ನಾನು ಮಾತೆ ವಿಂಧ್ಯವಾಸಿನಿಗೆ ನಮಿಸುತ್ತೇನೆ. ಈ ಭೂಮಿ ಧೈರ್ಯಶಾಲಿಗಳಿಗೆ ಸೇರಿದೆ; ಇದು ದೇಶಕ್ಕಾಗಿ ತ್ಯಾಗ ಮಾಡಲು ಸದಾ ಸಿದ್ಧರಿರುವವರಿಗೆ ಸೇರಿದೆ. ನಾನು ಲೆಕ್ಕವಿಲ್ಲದಷ್ಟು ಬಾರಿ ರೇವಾಕ್ಕೆ ಬಂದಿದ್ದೇನೆ ಮತ್ತು ನಾನು ಯಾವಾಗಲೂ ನಿಮ್ಮ ಅಪಾರ ಪ್ರೀತಿ ಮತ್ತು ವಾತ್ಸಲ್ಯವನ್ನು ಪಡೆಯುತ್ತಿದ್ದೇನೆ. ಇಂದೂ ಸಹ ನೀವೆಲ್ಲರೂ ನಮ್ಮನ್ನು ಆಶೀರ್ವದಿಸಲು ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದೀರಿ. ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ನಿಮಗೆಲ್ಲರಿಗೂ ಹಾಗೂ ದೇಶದ 2.5 ಲಕ್ಷಕ್ಕೂ ಹೆಚ್ಚು ಪಂಚಾಯತ್‌ಗಳಿಗೆ ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಶುಭಾಶಯಗಳು. ಇಂದು, ನಿಮ್ಮೊಂದಿಗೆ 30 ಲಕ್ಷಕ್ಕೂ ಹೆಚ್ಚು ಪಂಚಾಯತ್ ಪ್ರತಿನಿಧಿಗಳು ಸಹ ವರ್ಚುವಲ್‌ ಆಗಿ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ. ಇದು ಖಂಡಿತವಾಗಿಯೂ ಭಾರತ ಪ್ರಜಾಪ್ರಭುತ್ವದ ಅತ್ಯಂತ ಸ್ಪಷ್ಟ ಚಿತ್ರವಾಗಿದೆ. ನಾವೆಲ್ಲರೂ ಜನಪ್ರತಿನಿಧಿಗಳು. ನಾವೆಲ್ಲರೂ ಈ ದೇಶಕ್ಕೆ, ಈ ಪ್ರಜಾಪ್ರಭುತ್ವಕ್ಕೆ ಸಮರ್ಪಿತರು. ನಮ್ಮ ಕೆಲಸದ ವ್ಯಾಪ್ತಿ ವಿಭಿನ್ನವಾಗಿರಬಹುದು, ಆದರೆ ಗುರಿ ಒಂದೇ ಆಗಿದೆ, ಅದು ಸಾರ್ವಜನಿಕ ಸೇವೆಯಿಂದ ರಾಷ್ಟ್ರಕ್ಕೆ ಸೇವೆ. ಗ್ರಾಮೀಣ ಬಡವರ ಬದುಕು ಸುಗಮವಾಗಲು ಕೇಂದ್ರ ಸರ್ಕಾರ ಮಾಡಿರುವ ಎಲ್ಲ ಯೋಜನೆಗಳನ್ನು ನಮ್ಮ ಪಂಚಾಯಿತಿಗಳು ಅನುಷ್ಠಾನಗೊಳಿಸುತ್ತಿರುವುದು ಸಂತಸ ತಂದಿದೆ.

ಮಧ್ಯಪ್ರದೇಶದ ರೇವಾದಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

April 24th, 11:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ರೇವಾದಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಸುಮಾರು 17,000 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು.

ಮಾರ್ಚ್ 24ರಂದು ವಾರಣಾಸಿಗೆ ಪ್ರಧಾನ ಮಂತ್ರಿ ಭೇಟಿ

March 22nd, 04:07 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 24ರಂದು ವಾರಾಣಸಿಗೆ ಭೇಟಿ ನೀಡಲಿದ್ದು, ಅಂದು ಬೆಳಗ್ಗೆ 10:30ಕ್ಕೆ ರುದ್ರಕಾಶ್ ಕನ್ವೆನ್ಷನ್ ಸೆಂಟರ್‌ನಲ್ಲಿ ಏಕ ವಿಶ್ವ(ಒನ್ ವರ್ಲ್ಡ್) ಕ್ಷಯರೋಗ(ಟಿಬಿ) ಶೃಂಗಸಭೆ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನಮಂತ್ರಿ ಅವರು ಸಂಪೂರ್ಣಾನಂದ ಸಂಸ್ಕೃತ ವಿಶ್ವವಿದ್ಯಾಲಯ ಮೈದಾನದಲ್ಲಿ 1,780 ಕೋಟಿ ರೂ.ಗಿಂತ ಅಧಿಕ ಮೊತ್ತದ ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

4800 ಕೋಟಿ ರೂ. ಗಳ ಹಣ ಹಂಚಿಕೆಯೊಂದಿಗೆ 2022-23 ರಿಂದ 2025-26ನೇ ಹಣಕಾಸು ವರ್ಷದವರೆಗೆ ಕೇಂದ್ರ ಪ್ರಾಯೋಜಿತ ಯೋಜನೆ "ರೋಮಾಂಚಕ ಗ್ರಾಮಗಳ ಕಾರ್ಯಕ್ರಮ"ಕ್ಕೆ ಸಂಪುಟದ ಅನುಮೋದನೆ

February 15th, 03:51 pm

ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, 4800 ಕೋಟಿ ರೂ.ಗಳ ಹಣ ಹಂಚಿಕೆಯೊಂದಿಗೆ 2022-23ರಿಂದ 2025-26ರ ಹಣಕಾಸು ವರ್ಷದವರೆಗೆ ಕೇಂದ್ರ ಪ್ರಾಯೋಜಿತ ಯೋಜನೆ ರೋಮಾಂಚಕ ಗ್ರಾಮ ಕಾರ್ಯಕ್ರಮ (ವಿವಿಪಿ)ಕ್ಕೆ ತನ್ನ ಅನುಮೋದನೆ ನೀಡಿದೆ.

ದೇಶದಲ್ಲಿ ಸಹಕಾರ ಚಳವಳಿಯನ್ನು ಬಲಪಡಿಸಲು ಮತ್ತು ತಳಮಟ್ಟದವರೆಗೆ ಅದರ ವ್ಯಾಪ್ತಿಯನ್ನು ವಿಸ್ತರಿಸಲು ಸಂಪುಟದ ಅನುಮೋದನೆ

February 15th, 03:49 pm

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ದೇಶದಲ್ಲಿ ಸಹಕಾರ ಚಳುವಳಿಯನ್ನು ಬಲಪಡಿಸಲು ಮತ್ತು ತಳಮಟ್ಟದವರೆಗೆ ಅದರ ವ್ಯಾಪ್ತಿಯನ್ನು ವಿಸ್ತರಿಸಲು ಅನುಮೋದನೆ ನೀಡಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಮತ್ತು ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರ ಸಮರ್ಥ ಮಾರ್ಗದರ್ಶನದಲ್ಲಿ ಸಹಕಾರ ಸಚಿವಾಲಯವು, ವ್ಯಾಪ್ತಿಯಿಂದ ಹೊರಗಿರುವ ಪ್ರತಿ ಪಂಚಾಯತ್‌ನಲ್ಲಿ ಕಾರ್ಯಸಾಧ್ಯವಾದ ಪಿಎಸಿಎಸ್, ಪ್ರತಿ ಪಂಚಾಯತ್/ಗ್ರಾಮಗಳಲ್ಲಿ ಕಾರ್ಯಸಾಧ್ಯವಾದ ಡೈರಿ ಸಹಕಾರ ಸಂಘಗಳು ಮತ್ತು ಕರಾವಳಿಯ ಪ್ರತಿ ಪಂಚಾಯತ್/ಗ್ರಾಮಗಳಲ್ಲಿ ಹಾಗೂ ದೊಡ್ಡ ಜಲಮೂಲಗಳನ್ನು ಹೊಂದಿರುವ ಪಂಚಾಯತ್/ಗ್ರಾಮಗಳಲ್ಲಿ ಕಾರ್ಯಸಾಧ್ಯವಾದ ಮೀನುಗಾರಿಕಾ ಸಹಕಾರ ಸಂಘಗಳನ್ನು ಸ್ಥಾಪಿಸಲು ಮತ್ತು ಅಸ್ತಿತ್ವದಲ್ಲಿರುವ ಪಿಎಸಿಎಸ್/ಡೈರಿಯನ್ನು ಬಲಪಡಿಸಲು ಯೋಜನೆಯನ್ನು ರೂಪಿಸಿದೆ. ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ವಿವಿಧ ಯೋಜನೆಗಳ ಸಮನ್ವಯದಲ್ಲಿ 'ಇಡೀ-ಸರ್ಕಾರದ' ವಿಧಾನವನ್ನು ಬಳಸಿಕೊಳ್ಳಲಿದೆ. ಆರಂಭದಲ್ಲಿ, ಮುಂದಿನ ಐದು ವರ್ಷಗಳಲ್ಲಿ 2 ಲಕ್ಷ ಪಿಎಸಿಎಸ್/ ಡೈರಿ/ ಮೀನುಗಾರಿಕಾ ಸಹಕಾರ ಸಂಘಗಳನ್ನು ಸ್ಥಾಪಿಸಲಾಗುವುದು. ಯೋಜನೆಯ ಅನುಷ್ಠಾನಕ್ಕಾಗಿ ಕ್ರಿಯಾ ಯೋಜನೆಯನ್ನು ನಬಾರ್ಡ್, ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ (ಎನ್‌ ಡಿ ಡಿ ಬಿ) ಮತ್ತು ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ (ಎನ್‌ ಎಫ್‌ ಡಿ ಬಿ) ಸಿದ್ಧಪಡಿಸುತ್ತವೆ.