ʻಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ನೈಜರ್ʼ ಪ್ರಶಸ್ತಿ ಸ್ವೀಕಾರ ಕುರಿತು ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

November 17th, 08:30 pm

ನೈಜೀರಿಯಾದ ರಾಷ್ಟ್ರೀಯ ಪ್ರಶಸ್ತಿಯಾದ ʻಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್ʼ ಅನ್ನು ನನಗೆ ನೀಡಿ ಗೌರವಿಸಿದ್ದಕ್ಕಾಗಿ ನಾನು ನಿಮಗೆ, ನಿಮ್ಮ ಸರ್ಕಾರಕ್ಕೆ ಮತ್ತು ನೈಜೀರಿಯಾದ ಜನರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ನಾನು ಈ ಗೌರವವನ್ನು ನಮ್ರತೆ ಮತ್ತು ಗೌರವದಿಂದ ಸ್ವೀಕರಿಸುತ್ತೇನೆ. ಮತ್ತು ನಾನು ಈ ಗೌರವವನ್ನು ಭಾರತದ 1.4 ಶತಕೋಟಿ ಜನರಿಗೆ ಹಾಗೂ ಭಾರತ ಮತ್ತು ನೈಜೀರಿಯಾ ನಡುವಿನ ಶಾಶ್ವತ ಸ್ನೇಹಕ್ಕೆ ಅರ್ಪಿಸುತ್ತೇನೆ. ಈ ಗೌರವವು ಭಾರತ ಮತ್ತು ನೈಜೀರಿಯಾ ನಡುವಿನ ವ್ಯೂಹಾತ್ಮಕ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ನಮಗೆ ಸ್ಫೂರ್ತಿ ನೀಡುತ್ತದೆ.

ಪ್ರಧಾನ ಮಂತ್ರಿಯವರಿಗೆ "ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ನೈಜರ್" ಎಂಬ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು

November 17th, 08:11 pm

ಸ್ಟೇಟ್ ಹೌಸ್ ನಲ್ಲಿ ನಡೆದ ಸಮಾರಂಭದಲ್ಲಿ, ನೈಜೀರಿಯಾ ಫೆಡರಲ್ ರಿಪಬ್ಲಿಕ್ ನ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಬೋಲಾ ಅಹ್ಮದ್ ಟಿನುಬು ಅವರು ಭಾರತ-ನೈಜೀರಿಯಾ ಸಂಬಂಧಗಳನ್ನು ಬೆಳೆಸುವಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ರಾಜನೀತಿ ಮತ್ತು ಅದ್ಭುತ ಕೊಡುಗೆಗಾಗಿ ಅವರಿಗೆ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ನೈಜರ್ ಎಂಬ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಪ್ರಧಾನ ಮಂತ್ರಿಯವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತವು ಜಾಗತಿಕ ಶಕ್ತಿಕೇಂದ್ರವಾಗಿ ಸ್ಥಾನ ಪಡೆದಿದ್ದು, ಅವರ ಪರಿವರ್ತನಾತ್ಮಕ ಆಡಳಿತವು ಎಲ್ಲರಿಗೂ ಏಕತೆ, ಶಾಂತಿ ಮತ್ತು ಹಂಚಿಕೆಯ ಪ್ರವೃತ್ತಿಯನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ ಎಂದು ಪ್ರಶಸ್ತಿಯ ಉಲ್ಲೇಖವು ಹೇಳುತ್ತದೆ.