ನೈಜೀರಿಯಾದಲ್ಲಿ ನಡೆದ ಭಾರತೀಯ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

November 17th, 07:20 pm

ಇಂದು, ನೀವು ನಿಜವಾಗಿಯೂ ಅಬುಜಾದಲ್ಲಿ ಅದ್ಭುತ ವಾತಾವರಣವನ್ನು ಸೃಷ್ಟಿಸಿದ್ದೀರಿ. ನಿನ್ನೆ ಸಂಜೆಯಿಂದ ಎಲ್ಲವನ್ನೂ ನೋಡಿದಾಗ, ನಾನು ಅಬುಜಾದಲ್ಲಿಲ್ಲ ಆದರೆ ಭಾರತದ ನಗರದಲ್ಲಿ ಇದ್ದೇನೆ ಎಂದು ಅನಿಸುತ್ತದೆ. ನಿಮ್ಮಲ್ಲಿ ಅನೇಕರು ಲಾಗೋಸ್, ಕಾನೊ, ಕಡುನಾ ಮತ್ತು ಪೋರ್ಟ್ ಹಾರ್ಕೋರ್ಟ್ ನಿಂದ ಅಬುಜಾಗೆ ಪ್ರಯಾಣಿಸಿದ್ದೀರಿ, ವಿವಿಧ ಸ್ಥಳಗಳಿಂದ ಬಂದಿದ್ದೀರಿ ಮತ್ತು ನಿಮ್ಮ ಮುಖದ ಮೇಲಿನ ಹೊಳಪು, ನೀವು ಹೊರಸೂಸುವ ಶಕ್ತಿ ಮತ್ತು ಉತ್ಸಾಹವು ಇಲ್ಲಿರಲು ನಿಮ್ಮ ಉತ್ಸುಕತೆಯನ್ನು ಪ್ರತಿಬಿಂಬಿಸುತ್ತದೆ. ನಾನು ಕೂಡ ನಿಮ್ಮನ್ನು ಭೇಟಿಯಾಗುವ ಈ ಅವಕಾಶಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದೆ. ನಿಮ್ಮ ಪ್ರೀತಿ ಮತ್ತು ವಾತ್ಸಲ್ಯ ನನಗೆ ಅಪಾರ ನಿಧಿಯಾಗಿದೆ. ನಿಮ್ಮ ನಡುವೆ ಇದ್ದು, ನಿಮ್ಮೊಂದಿಗೆ ಸಮಯ ಕಳೆಯುವುದರಿಂದ, ಈ ಕ್ಷಣಗಳು ನನ್ನ ಜೀವಮಾನವಿಡೀ ನೆನಪಿನಲ್ಲಿ ಉಳಿಯುತ್ತವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ನೈಜೀರಿಯಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಭಾಷಣ

November 17th, 07:15 pm

ಪ್ರಧಾನಮಂತ್ರಿಯಾಗಿ ನೈಜೀರಿಯಾಕ್ಕೆ ಇದು ಅವರ ಮೊದಲ ಭೇಟಿ ಎಂದು ಹೇಳಿದ ಶ್ರೀ ಮೋದಿ, ತಮ್ಮೊಂದಿಗೆ ಕೋಟ್ಯಂತರ ಭಾರತೀಯರ ಶುಭ ಹಾರೈಕೆಗಳನ್ನು ತಂದಿರುವೆನು ಎಂದು ಹೇಳಿದರು. ನೈಜೀರಿಯಾದಲ್ಲಿರುವ ಭಾರತೀಯರ ಪ್ರಗತಿಯ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುತ್ತಾನೆ ಎಂದು ಅವರು ಹೇಳಿದರು. ಅಧ್ಯಕ್ಷ ಟಿನುಬು ಮತ್ತು ನೈಜೀರಿಯಾದ ಜನರಿಗೆ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಶ್ರೀ ಮೋದಿ ಅವರು ಎಲ್ಲಾ ವಿನಮ್ರತೆಯೊಂದಿಗೆ ಪ್ರಶಸ್ತಿಯನ್ನು ಕೋಟಿಗಟ್ಟಲೆ ಭಾರತೀಯರಿಗೆ ಅರ್ಪಿಸಿದರು.