ವಿಶ್ವ ಪರಿಸರ ದಿನ 2023ರ ಪ್ರಯುಕ್ತ ಪ್ರಧಾನ ಮಂತ್ರಿಗಳ ವಿಡಿಯೋ ಸಂದೇಶದ ಇಂಗ್ಲಿಷ್‌ ಭಾಷಣದ ವಿವರ

June 05th, 03:00 pm

ವಿಶ್ವ ಪರಿಸರ ದಿನಾಚರಣೆಯಂದು ನಿಮ್ಮೆಲ್ಲರಿಗೂ, ದೇಶ ಹಾಗೂ ಜಗತ್ತಿನಾದ್ಯಂತ ಜನರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ. ಏಕ ಬಳಕೆ ಪ್ಲಾಸ್ಟಿಕ್‌ ಬಳಕೆ ತೊಡೆದು ಹಾಕುವುದು ಈ ವರ್ಷದ ಪರಿಸರ ದಿನದ ಧ್ಯೇಯವಾಗಿದೆ. ಈ ಜಾಗತಿಕ ಉಪಕ್ರಮಕ್ಕೂ ಮೊದಲೇ ಭಾರತದವು ಕಳೆದ 4-5 ವರ್ಷಗಳಿಂದ ಈ ವಿಚಾರದಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಲು ನನಗೆ ಸಂತೋಷವಾಗುತ್ತದೆ. ಹಿಂದೆ ಅಂದರೆ 2018ರ ಆರಂಭದಲ್ಲೇ ಭಾರತವು ಏಕ-ಬಳಕೆಯ ಪ್ಲಾಸ್ಟಿಕ್ ನಿರ್ಮೂಲನೆಗಾಗಿ ಎರಡು ಹಂತದ ಪ್ರಯತ್ನ ಆರಂಭಿಸಿತು. ಒಂದೆಡೆ ಏಕ ಬಳಕೆ ಪ್ಲಾಸ್ಟಿಕ್‌ ಮೇಲೆ ನಿಷೇಧ ಹೇರಿದ್ದರೆ ಮತ್ತೊಂದೆಡೆ ಪ್ಲಾಸ್ಟಿಕ್‌ ತ್ಯಾಜ್ಯದ ವೈಜ್ಞಾನಿಕ ಸಂಸ್ಕರಣೆಯನ್ನು ಕಡ್ಡಾಯಗೊಳಿಸಲಾಗಿತು. ಇದರ ಪರಿಣಾಮವಾಗಿ ದೇಶದಲ್ಲಿ ಸುಮಾರು 30 ಲಕ್ಷ ಟನ್‌ನಷ್ಟು ಪ್ಲಾಸ್ಟಿಕ್‌ ಪ್ಯಾಕೇಜಿಂಗ್‌ ಉತ್ಪನ್ನಗಳನ್ನು ಕಡ್ಡಾಯವಾಗಿ ಮರುಬಳಕೆ ಮಾಡಲಾಗುತ್ತಿದೆ. ಇದು ದೇಶದಲ್ಲಿ ವಾರ್ಷಿಕವಾಗಿ ಉತ್ಪತ್ತಿಯಾಗುವ ಶೇ. 75ರಷ್ಟು ಪ್ಲಾಸ್ಟಿಕ್‌ ತ್ಯಾಜ್ಯದಷ್ಟಾಗಿದೆ. ಈ ಪ್ಲಾಸ್ಟಿಕ್‌ ತ್ಯಾಜ್ಯ ಮರುಬಳಕೆ ಪ್ರಕ್ರಿಯೆಯಲ್ಲಿ 10000ಕ್ಕೂ ಹೆಚ್ಚು ಉತ್ಪಾದಕರು, ಆಮದುದಾರರು, ಪ್ರತಿಷ್ಠಿತ ಬ್ರ್ಯಾಂಡ್‌ನ ಮಾಲೀಕರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ವಿಶ್ವ ಪರಿಸರ ದಿನವನ್ನು ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಪ್ರಧಾನಿ ಭಾಷಣ

June 05th, 02:29 pm

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ವಿಶ್ವ ಪರಿಸರ ದಿನದಂದು ವಿಶ್ವದ ಪ್ರತಿಯೊಂದು ದೇಶಕ್ಕೂ ತಮ್ಮ ಶುಭಾಶಯಗಳನ್ನು ತಿಳಿಸಿದರು. ಈ ವರ್ಷದ ಪರಿಸರ ದಿನದ ಘೋಷ ವಾಕ್ಯ ಏಕ-ಬಳಕೆಯ ಪ್ಲಾಸ್ಟಿಕ್ ತೊಡೆದುಹಾಕಲು ಅಭಿಯಾನದ ಕುರಿತು ಒತ್ತಿ ಹೇಳಿದ ಅವರು, ಭಾರತವು ಕಳೆದ 4-5 ವರ್ಷಗಳಿಂದ ಈ ನಿಟ್ಟಿನಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಸಂತೋಷ ವ್ಯಕ್ತಪಡಿಸಿದರು. ಭಾರತವು 2018ರಲ್ಲಿ ಏಕ-ಬಳಕೆಯ ಪ್ಲಾಸ್ಟಿಕ್ ಅನ್ನು ನಿರ್ಮೂಲನೆ ಮಾಡಲು ಎರಡು ಹಂತಗಳಲ್ಲಿ ಕಾರ್ಯನಿರ್ವಹಿಸಲು ಆರಂಭಿಸಿತು ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಒಂದೆಡೆ, ನಾವು ಏಕ-ಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸಿದ್ದೇವೆ, ಮತ್ತೊಂದೆಡೆ, ಪ್ಲಾಸ್ಟಿಕ್ ತ್ಯಾಜ್ಯ ಸಂಸ್ಕರಣೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಅವರು ಹೇಳಿದರು. ಆ ಕಾರಣದಿಂದಾಗಿ, ಭಾರತದಲ್ಲಿ ಉತ್ಪಾದನೆಯಾಗುವ ಒಟ್ಟು ವಾರ್ಷಿಕ ಪ್ಲಾಸ್ಟಿಕ್ ತ್ಯಾಜ್ಯದ ಶೇಕಡ 75 ರಷ್ಟಿರುವ ಸುಮಾರು 30 ಲಕ್ಷ ಟನ್ ಪ್ಲಾಸ್ಟಿಕ್ ಪ್ಯಾಕೇಜಿಂಗ್ ಅನ್ನು ಭಾರತದಲ್ಲಿ ಕಡ್ಡಾಯವಾಗಿ ಮರುಬಳಕೆ ಮಾಡಲಾಗುತ್ತಿದೆ ಮತ್ತು ಸುಮಾರು 10 ಸಾವಿರ ಉತ್ಪಾದಕರು, ಆಮದುದಾರರು ಮತ್ತು ಬ್ರ್ಯಾಂಡ್‌ಗಳು ಬಂದಿವೆ ಇದರ ವ್ಯಾಪ್ತಿಗೆ ಬಂದಿವೆ ಎಂದು ಪ್ರಧಾನಿ ಹೇಳಿದರು.

13 ನೇ ಬ್ರಿಕ್ಸ್ ಶೃಂಗಸಭೆಗೆ ಪ್ರಧಾನ ಮಂತ್ರಿ ಅಧ್ಯಕ್ಷತೆ ವಹಿಸಿದರು

September 09th, 09:21 pm

ಬ್ರಿಕ್ಸ್ ಶೃಂಗಸಭೆಯಲ್ಲಿ, ಮುಂದಿನ 15 ವರ್ಷಗಳಲ್ಲಿ ಬ್ರಿಕ್ಸ್ ಇನ್ನೂ ಹೆಚ್ಚಿನ ಫಲಿತಾಂಶ ಆಧಾರಿತವಾಗಿದೆಯೆ ಎಂದು ನಾವು ಖಚಿತಪಡಿಸಿಕೊಳ್ಳಬೇಕು. ಭಾರತವು ತನ್ನ ಅಧ್ಯಕ್ಷತೆಯ ಅವಧಿಗೆ ಆಯ್ಕೆ ಮಾಡಿದ ವಿಷಯವು ನಿಖರವಾಗಿ ಈ ಆದ್ಯತೆಯನ್ನು ತೋರಿಸುತ್ತದೆ - 'ಬ್ರಿಕ್ಸ್@15: ಇಂಟ್ರಾ ಬ್ರಿಕ್ಸ್ ಸಹಕಾರ ನಿರಂತರತೆ, ಬಲವರ್ಧನೆ ಮತ್ತು ಒಮ್ಮತಕ್ಕಾಗಿ. ಈ ನಾಲ್ಕು ಸಿಗಳು ಒಂದು ರೀತಿಯಲ್ಲಿ ನಮ್ಮ ಬ್ರಿಕ್ಸ್ ಪಾಲುದಾರಿಕೆಯ ಮೂಲಭೂತ ತತ್ವಗಳಾಗಿವೆ.