The mantra of the Bharatiya Nyaya Sanhita is - Citizen First: PM Modi
December 03rd, 12:15 pm
The Prime Minister, Shri Narendra Modi dedicated to the nation the successful implementation of three transformative new criminal laws—Bharatiya Nyaya Sanhita, Bharatiya Nagarik Suraksha Sanhita and Bharatiya Sakshya Adhiniyam today at Chandigarh.ಯಶಸ್ವಿಯಾಗಿ ಅನುಷ್ಠಾನಗೊಂಡ 3 ಹೊಸ ಕ್ರಿಮಿನಲ್ ಕಾನೂನುಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 03rd, 11:47 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಂಡೀಗಢದಲ್ಲಿಂದು 3 ಪರಿವರ್ತನೀಯ ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಅಧಿನಿಯಮಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಈ 3 ಕಾನೂನುಗಳು ಯಶಸ್ವಿಯಾಗಿ ಅನುಷ್ಠಾನಗೊಂಡಿವೆ. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಸತ್ಯ ಮತ್ತು ನ್ಯಾಯ ಸ್ಥಾಪಿಸುವ ಶಕ್ತಿಯ ರೂಪವಾದ ಮಾತೆ ಚಂಡಿ ದೇವಿಗೆ ಚಂಡೀಗಢದ ಗುರುತು ಸಂಬಂಧಿಸಿದೆ, ಅದೇ ತತ್ವಶಾಸ್ತ್ರವು ಭಾರತೀಯ ನ್ಯಾಯ ಸಂಹಿತೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸಂಪೂರ್ಣ ಸ್ವರೂಪದ ಆಧಾರವಾಗಿದೆ. ಭಾರತ ಸಂವಿಧಾನದ ಸ್ಫೂರ್ತಿಯಿಂದ ಪ್ರೇರಿತವಾದ ಭಾರತೀಯ ನ್ಯಾಯ ಸಂಹಿತೆ ಜಾರಿಗೆ ಬರುತ್ತಿರುವುದು ಒಂದು ಐತಿಹಾಸಿಕ ಕ್ಷಣವಾಗಿದ್ದು, ರಾಷ್ಟ್ರವು ವಿಕಸಿತ ಭಾರತ್ ಕಟ್ಟುವ ಸಂಕಲ್ಪದೊಂದಿಗೆ ಮುನ್ನಡೆಯುವ ಪ್ರಮುಖ ಘಟ್ಟದಲ್ಲಿದೆ. ಭಾರತೀಯ ಸಂವಿಧಾನ ಅಳವಡಿಸಿಕೊಂ 75 ವರ್ಷಗಳಲ್ಲಿ ನಮ್ಮ ಸಂವಿಧಾನವು ದೇಶದ ನಾಗರಿಕರಿಗೆ ಕಲ್ಪಿಸಿದ ಆದರ್ಶಗಳನ್ನು ಈಡೇರಿಸುವ ನಿಟ್ಟಿನಲ್ಲಿ ಇದು ಸಂಕೀರ್ಣ ಪ್ರಯತ್ನವಾಗಿದೆ. ಅದರ ಲೈವ್ ಡೆಮೊ ಮೂಲಕ ಕಾನೂನುಗಳನ್ನು ಹೇಗೆ ಜಾರಿಗೊಳಿಸಬಹುದು ಎಂಬುದರ ಕುರಿತು ತನಗೆ ಒಂದು ನೋಟ ಸಿಕ್ಕಿದೆ. ಹಾಗಾಗಿ, ಕಾನೂನುಗಳ ಲೈವ್ ಡೆಮೊಗೆ ಭೇಟಿ ನೀಡುವಂತೆ ಪ್ರಧಾನಿ ಜನರನ್ನು ಒತ್ತಾಯಿಸಿದರು. 3 ಹೊಸ ಕ್ರಿಮಿನಲ್ ಕಾನೂನುಗಳ ಯಶಸ್ವಿ ಅನುಷ್ಠಾನದ ಸಂದರ್ಭದಲ್ಲಿ ಅವರು ಎಲ್ಲಾ ನಾಗರಿಕರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಚಂಡೀಗಢದ ಆಡಳಿತದ ಎಲ್ಲಾ ಪಾಲುದಾರರನ್ನು ಅವರು ಅಭಿನಂದಿಸಿದರು.ಉತ್ತರಾಖಂಡ ಸ್ಥಾಪನಾ ದಿವಸದಂದು ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ
November 09th, 11:00 am
ಇಂದು ಉತ್ತರಾಖಂಡದ ರಜತ ಮಹೋತ್ಸವ ವರ್ಷದ ಆರಂಭವನ್ನು ಸೂಚಿಸುತ್ತದೆ. ಅಂದರೆ, ಉತ್ತರಾಖಂಡವು ತನ್ನ 25ನೇ ವರ್ಷಕ್ಕೆ ಕಾಲಿಡುತ್ತಿದೆ. ನಾವು ಮುಂದೆ ನೋಡುತ್ತಿರುವಾಗ, ಉತ್ತರಾಖಂಡದ ಉಜ್ವಲ ಮತ್ತು ಸಮೃದ್ಧ ಭವಿಷ್ಯವನ್ನು ನಿರ್ಮಿಸಲು ಬದ್ಧರಾಗಿ ಮುಂದಿನ 25 ವರ್ಷಗಳ ಪ್ರಯಾಣವನ್ನು ನಾವು ಪ್ರಾರಂಭಿಸಬೇಕು. ಇದರಲ್ಲಿ ಒಂದು ಸಂತೋಷಕರ ಕಾಕತಾಳೀಯವಿದೆ: ನಮ್ಮ ಪ್ರಗತಿಯು ಭಾರತದ ಅಮೃತ ಕಾಲದೊಂದಿಗೆ ಹೊಂದಿಕೆಯಾಗುತ್ತದೆ, ಇದು ರಾಷ್ಟ್ರೀಯ ಬೆಳವಣಿಗೆಗೆ ಮೀಸಲಾಗಿರುವ ಗಮನಾರ್ಹ 25 ವರ್ಷಗಳ ಅವಧಿಯಾಗಿದೆ. ಈ ಸಂಗಮವು ಅಭಿವೃದ್ಧಿ ಹೊಂದಿದ ಭಾರತದ ಭಾಗವಾಗಿ ಅಭಿವೃದ್ಧಿ ಹೊಂದಿದ ಉತ್ತರಾಖಂಡದ ದೃಷ್ಟಿಕೋನವನ್ನು ಬಿಂಬಿಸುತ್ತದೆ, ಈ ಯುಗದಲ್ಲಿ ನಮ್ಮ ಹಂಚಿಕೆಯ ಆಕಾಂಕ್ಷೆಗಳು ಸಾಕಾರಗೊಳ್ಳುತ್ತಿವೆ. ಉತ್ತರಾಖಂಡದ ಜನರು ಮುಂಬರುವ 25 ವರ್ಷಗಳ ಗುರಿಗಳನ್ನು ಕೇಂದ್ರೀಕರಿಸಿ ರಾಜ್ಯದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ನನಗೆ ಸಂತೋಷವಾಗಿದೆ. ಈ ಕಾರ್ಯಕ್ರಮಗಳ ಮೂಲಕ ಉತ್ತರಾಖಂಡದ ಹೆಮ್ಮೆಯನ್ನು ಆಚರಿಸಲಾಗುವುದು ಮತ್ತು ಅಭಿವೃದ್ಧಿ ಹೊಂದಿದ ಉತ್ತರಾಖಂಡದ ದೃಷ್ಟಿಕೋನವು ಪ್ರತಿಯೊಬ್ಬ ನಿವಾಸಿಯಲ್ಲೂ ಪ್ರತಿಧ್ವನಿಸುತ್ತದೆ. ಈ ಮಹತ್ವದ ಸಂದರ್ಭದಲ್ಲಿ ಮತ್ತು ಈ ನಿರ್ಣಾಯಕ ನಿರ್ಣಯಕ್ಕಾಗಿ, ನಾನು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಕೇವಲ ಎರಡು ದಿನಗಳ ಹಿಂದೆ, ಪ್ರವಾಸಿ ಉತ್ತರಾಖಂಡ್ ಸಮ್ಮೇಳನವನ್ನು ಸಹ ಯಶಸ್ವಿಯಾಗಿ ನಡೆಸಲಾಯಿತು. ನಮ್ಮ ವಲಸಿಗ ಉತ್ತರಾಖಂಡಿಗಳು ರಾಜ್ಯದ ಅಭಿವೃದ್ಧಿಯ ಪಯಣದಲ್ಲಿ ಮಹತ್ವದ ಪಾತ್ರ ವಹಿಸುವುದನ್ನು ಮುಂದುವರಿಸುತ್ತಾರೆ ಎಂಬ ವಿಶ್ವಾಸ ನನಗಿದೆ.ದೇವಭೂಮಿ ಉತ್ತರಾಖಂಡದ ರಜತ ಮಹೋತ್ಸವ ಸಂದರ್ಭದಲ್ಲಿ ಉತ್ತರಾಖಂಡದ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ
November 09th, 10:40 am
ಉತ್ತರಾಖಂಡದ ಸಂಸ್ಥಾಪನಾ ದಿನದಂದು ಅಲ್ಲಿನ ಎಲ್ಲ ಜನತೆಗೆ ಶುಭ ಕೋರಿರುವ ಪ್ರಧಾನಮಂತ್ರಿಯವರು, ಇಂದಿನಿಂದ ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ ವರ್ಷ ಆರಂಭವಾಗುತ್ತಿರುವುದನ್ನು ಉಲ್ಲೇಖಿಸಿದರು. ಉತ್ತರಾಖಂಡವು ರಾಜ್ಯ ಸ್ಥಾಪನೆಯ 25ನೇ ವರ್ಷಕ್ಕೆ ಪ್ರವೇಶಿಸಿರುವುದನ್ನು ಉಲ್ಲೇಖಿಸಿದ ಶ್ರೀ ಮೋದಿ, ರಾಜ್ಯದ ಮುಂಬರುವ 25 ವರ್ಷಗಳ ಉಜ್ವಲ ಭವಿಷ್ಯಕ್ಕಾಗಿ ಕೆಲಸ ಮಾಡುವಂತೆ ಜನರನ್ನು ಆಗ್ರಹಿಸಿದರು. ಉತ್ತರಾಖಂಡದ ಮುಂಬರುವ 25 ವರ್ಷಗಳ ಪ್ರಯಾಣವು ಭಾರತದ ಅಮೃತ್ ಕಾಲ್ ನ 25 ನೇ ವರ್ಷದ ಜೊತೆ ಸರಿಹೊಂದಿಕೆಯಾಗುವಂತಿದೆ. ಇದೊಂದು ಕಾಕತಾಳೀಯ ಎಂದ ಪ್ರಧಾನ ಮಂತ್ರಿ ಅವರು, ಇದು ವಿಕ್ಷಿತ್ ಭಾರತ್ ಗಾಗಿ ವಿಕ್ಷಿತ್ (ಅಭಿವೃದ್ಧಿ ಹೊಂದಿದ) ಉತ್ತರಾಖಂಡವನ್ನು ಸಂಕೇತಿಸುತ್ತದೆ ಎಂದರು. ಈ ಅವಧಿಯಲ್ಲಿ ವಿಕ್ಷಿತ್ ಭಾರತದ ಸಂಕಲ್ಪ ಈಡೇರುವುದಕ್ಕೆ ದೇಶ ಸಾಕ್ಷಿಯಾಗಲಿದೆ ಎಂದು ಶ್ರೀ ಮೋದಿ ಹೇಳಿದರು. ಮುಂಬರುವ 25 ವರ್ಷಗಳಲ್ಲಿ ಸಂಕಲ್ಪಗಳ ಜೊತೆಗೆ ಜನರು ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮಗಳ ಮೂಲಕ ಉತ್ತರಾಖಂಡದ ಹೆಮ್ಮೆಯನ್ನು ಹರಡಲಾಗುವುದು ಮತ್ತು ಅಭಿವೃದ್ಧಿ ಹೊಂದಿದ ಉತ್ತರಾಖಂಡದ ಗುರಿ ರಾಜ್ಯದ ಪ್ರತಿಯೊಬ್ಬ ನಿವಾಸಿಯನ್ನು ತಲುಪಲಿದೆ ಎಂದು ಅವರು ಹೇಳಿದರು. ಈ ಮಹತ್ವದ ಸಂದರ್ಭದಲ್ಲಿ ಮತ್ತು ಈ ಮಹತ್ವದ ನಿರ್ಣಯವನ್ನು ಅಂಗೀಕರಿಸಿದ್ದಕ್ಕಾಗಿ ಶ್ರೀ ಮೋದಿ ಅವರು ರಾಜ್ಯದ ಎಲ್ಲ ನಿವಾಸಿಗಳನ್ನು ಅಭಿನಂದಿಸಿದರು. ಇತ್ತೀಚೆಗೆ ಯಶಸ್ವಿಯಾಗಿ ಆಯೋಜಿಸಲಾದ 'ಪ್ರವಾಸಿ ಉತ್ತರಾಖಂಡ ಸಮ್ಮೇಳನ'ದ ಬಗ್ಗೆಯೂ ಅವರು ಗಮನಸೆಳೆದರು ಮತ್ತು ಉತ್ತರಾಖಂಡದ ಅಭಿವೃದ್ಧಿಯಲ್ಲಿ ಸಾಗರೋತ್ತರ ಉತ್ತರಾಖಂಡದ ಜನರು ಪ್ರಮುಖ ಪಾತ್ರ ವಹಿಸುತ್ತಾರೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು.ಗುಜರಾತ್ ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 31st, 07:31 am
ಸರ್ದಾರ್ ಸಾಹೇಬರ ಸ್ಫೂರ್ತಿದಾಯಕ ಮಾತುಗಳು... ಏಕತಾ ಪ್ರತಿಮೆಯ ಬಳಿ ಈ ಭವ್ಯ ಕಾರ್ಯಕ್ರಮ... ಏಕ್ತಾ ನಗರದ ಬೆರಗುಗೊಳಿಸುವ ನೋಟ, ಮತ್ತು ಇಲ್ಲಿನ ಭವ್ಯವಾದ ಪ್ರದರ್ಶನಗಳು ... ಮಿನಿ ಇಂಡಿಯಾದ ಒಂದು ನೋಟ... ಎಲ್ಲವೂ ತುಂಬಾ ನಂಬಲಾಗದು, ತುಂಬಾ ಸ್ಫೂರ್ತಿದಾಯಕವಾಗಿದೆ. ಆಗಸ್ಟ್ 15 ಮತ್ತು ಜನವರಿ 26 ರಂತೆ... ಅಕ್ಟೋಬರ್ 31 ರಂದು ನಡೆಯುವ ಈ ಕಾರ್ಯಕ್ರಮವು ಇಡೀ ರಾಷ್ಟ್ರವನ್ನು ಹೊಸ ಶಕ್ತಿಯಿಂದ ತುಂಬುತ್ತದೆ. ರಾಷ್ಟ್ರೀಯ ಏಕತಾ ದಿವಸ್ (ರಾಷ್ಟ್ರೀಯ ಏಕತಾ ದಿನ) ದಂದು ನಾನು ದೇಶದ ಎಲ್ಲ ನಾಗರಿಕರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ನಮನ ಸಲ್ಲಿಸಿದರು, ರಾಷ್ಟ್ರೀಯ ಏಕತಾ ದಿವಸ್ ಆಚರಣೆಯಲ್ಲಿ ಪಾಲ್ಗೊಂಡರು
October 31st, 07:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಯಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಆಚರಣೆಯಲ್ಲಿ ಪಾಲ್ಗೊಂಡರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಅವರು ಅವರಿಗೆ ಪುಷ್ಪ ನಮನ ಸಲ್ಲಿಸಿದರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯ ನೆನಪಿಗಾಗಿ ಪ್ರತಿವರ್ಷ ಅಕ್ಟೋಬರ್ 31 ರಂದು ಆಚರಿಸಲಾಗುವ ರಾಷ್ಟ್ರೀಯ ಏಕತಾ ದಿವಸ್ ಸಂದರ್ಭದಲ್ಲಿ ಶ್ರೀ ನರೇಂದ್ರ ಮೋದಿ ಅವರು ಏಕತಾ ದಿವಸ್ ಪ್ರತಿಜ್ಞೆಯನ್ನು ಬೋಧಿಸಿದರು ಮತ್ತು ಏಕತಾ ದಿವಸ್ ಮೆರವಣಿಗೆಗೆ ಸಾಕ್ಷಿಯಾದರು.PM Modi attends News18 Rising Bharat Summit
March 20th, 08:00 pm
Prime Minister Narendra Modi attended and addressed News 18 Rising Bharat Summit. At this time, the heat of the election is at its peak. The dates have been announced. Many people have expressed their opinions in this summit of yours. The atmosphere is set for debate. And this is the beauty of democracy. Election campaigning is in full swing in the country. The government is keeping a report card for its 10-year performance. We are charting the roadmap for the next 25 years. And planning the first 100 days of our third term, said PM Modi.