ಗುಜರಾತ್‌ನ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಮೊದಲನೆಯ ಘಟಿಕೋತ್ಸವದಲ್ಲಿ ಪ್ರಧಾನಮಂತ್ರಿಯವರ ಭಾಷಣ
March 12th, 12:14 pm
ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಜಿ, ಗೃಹ ಸಚಿವರಾದ ಶ್ರೀ ಅಮಿತ್ ಶಾ, ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್, ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಉಪಕುಲಪತಿ ವಿಮಲ್ ಪಟೇಲ್ ಜಿ, ಅಧಿಕಾರಿಗಳು, ಶಿಕ್ಷಕರು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಪೋಷಕರು, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!ʻರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯʼದ ಕಟ್ಟಡವನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿಯವರು, ಮೊದಲ ಘಟಿಕೋತ್ಸವ ಉದ್ದೇಶಿಸಿ ಮಾತನಾಡಿದರು
March 12th, 12:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯʼದ ಕಟ್ಟಡವನ್ನು ದೇಶಕ್ಕೆ ಸಮರ್ಪಿಸಿದರು ಮತ್ತು ಅಹಮದಾಬಾದ್ ನಲ್ಲಿ ಈ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ ಉದ್ದೇಶಿಸಿ ಮಾತನಾಡಿದರು. ಕೇಂದ್ರ ಗೃಹ ವ್ಯವಹಾರಗಳು ಹಾಗು ಸಹಕಾರ ಖಾತೆ ಸಚಿವ ಶ್ರೀ ಅಮಿತ್ ಶಾ, ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಮತ್ತು ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಡಿಜಿಟಲ್ ಭಾರತವು ಪಾರದರ್ಶಕತೆ, ಪರಿಣಾಮಕಾರಿ ಸೇವಾ ವಿತರಣೆ ಮತ್ತು ಉತ್ತಮ ಆಡಳಿತವನ್ನು ನೀಡುತ್ತದೆ: ಪ್ರಧಾನಿ ಮೋದಿ
October 07th, 06:15 pm
ಪ್ರಧಾನಿ ನರೇಂದ್ರ ಮೋದಿ ಇಂದು ಐಐಟಿ ಗಾಂಧೀನಗರ ಹೊಸ ಕ್ಯಾಂಪಸ್ ಕಟ್ಟಡ ದೇಶಕ್ಕೆ ಸಮರ್ಪಿಸಿದರು ಮತ್ತು ಪ್ರಧಾನ್ ಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಯೋಜನೆಯನ್ನು ಪ್ರಾರಂಭಿಸಿದರು . ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ, ಎಲ್ಲಾ ವಯಸ್ಸಿನ ಗುಂಪುಗಳು ಮತ್ತು ಸಮಾಜದ ವರ್ಗಗಳಲ್ಲಿ ಡಿಜಿಟಲ್ ಪ್ರತಿಶತಕ್ಕೆ ಡಿಜಿಟಲ್ ಸಾಕ್ಷರತೆಯನ್ನು ಹರಡಲು ಕಾರ್ಯವು ನಡೆಯುತ್ತಿದೆ ಎಂದು ಹೇಳಿದರು.ಪ್ರಧಾನಮಂತ್ರಿ ಐಐಟಿ ಗಾಂಧಿನಗರ ಸಮುಚ್ಛಯವನ್ನು ದೇಶಕ್ಕೆ ಸಮರ್ಪಿಸಿದರು , ಡಿಜಿಟಲ್ ಸಾಕ್ಷರತಾ ಯೋಜನೆಯನ್ನು ಚಾಲನೆ ನೀಡಿದರು
October 07th, 06:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐಐಟಿ ಗಾಂಧಿನಗರ ಕ್ಯಾಂಪಸ್ ಅನ್ನು ದೇಶಕ್ಕೆ ಸಮರ್ಪಿಸಿದರು. ಪ್ರಧಾನಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಅಭಿಯಾನದಡಿ ತರಬೇತಿ ಪಡೆಯುತ್ತಿರುವವರನ್ನು ಅವರು ಪುರಸ್ಕರಿಸಿದರು. ಗಾಂಧಿ ನಗರದಲ್ಲಿ ಪ್ರಧಾನಮಂತ್ರಿಯವರು ದೊಡ್ಡ ಸಂಖ್ಯೆಯಲ್ಲಿದ್ದ ಐಐಟಿ ವಿದ್ಯಾರ್ಥಿಗಳೂ ಸೇರಿದಂತೆ ಸಾರ್ವಜನಿಕ ಸಭೆ ಉದ್ದೇಶಿಸಿ ಭಾಷಣ ಮಾಡಿದರು .