
ನಾರ್ವೆ ಚೆಸ್ 2025ರಲ್ಲಿ ಮ್ಯಾಗ್ನಸ್ ಕಾರ್ಲ್ಸನ್ ವಿರುದ್ಧ ಮೊಟ್ಟಮೊದಲ ಗೆಲುವು ಸಾಧಿಸಿದ ಗುಕೇಶ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
June 02nd, 08:23 pm
ನಾರ್ವೆ ಚೆಸ್ 2025ರ 6ನೇ ಸುತ್ತಿನಲ್ಲಿ ಮ್ಯಾಗ್ನಸ್ ಕಾರ್ಲ್ ಸನ್ ವಿರುದ್ಧ ಮೊದಲ ಗೆಲುವು ಸಾಧಿಸಿದ ಗುಕೇಶ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಅತ್ಯದ್ಭುತ ಗೆಲುವಿಗಾಗಿ ಅಭಿನಂದನೆಗಳು. ನಾರ್ವೆ ಚೆಸ್ 2025ರ 6ನೇ ಸುತ್ತಿನಲ್ಲಿ ಮ್ಯಾಗ್ನಸ್ ಕಾರ್ಲ್ಸನ್ ವಿರುದ್ಧ ಅವರ ಪ್ರಪ್ರಥಮ ಗೆಲುವು ಅವರ ಪ್ರತಿಭೆ ಮತ್ತು ಸಮರ್ಪಣೆಯನ್ನು ಪ್ರದರ್ಶಿಸುತ್ತದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.
ಪ್ರಧಾನಮಂತ್ರಿಯವರನ್ನು ಭೇಟಿಯಾದ ಚೆಸ್ ಚಾಂಪಿಯನ್ ಶ್ರೀ ಗುಕೇಶ್ ಡಿ
December 28th, 06:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಚೆಸ್ ಚಾಂಪಿಯನ್ ಶ್ರೀ ಗುಕೇಶ್ ಡಿ ಅವರು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ಗುಕೇಶ್ ಡಿ ಅವರ ಸಂಕಲ್ಪ ಮತ್ತು ಸಮರ್ಪಣೆಯನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದರು ಮತ್ತು ಅವರ ಆತ್ಮವಿಶ್ವಾಸವು ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ ಎಂದು ಹೇಳಿದರು. ಆನಂತರ ನಮ್ಮ ಸಂಭಾಷಣೆ ಯೋಗ ಮತ್ತು ಧ್ಯಾನದ ಪರಿವರ್ತಕ ಸಾಮರ್ಥ್ಯದ ವಿಷಯಗಳ ಕಡೆಗೆ ಸಾಗಿತು ಎಂದು ಪ್ರಧಾನಮಂತ್ರಿಯವರು ತಿಳಿಸಿದ್ದಾರೆ.
ವಿಶ್ವದ ಅತಿ ಕಿರಿಯ ಚೆಸ್ ಚಾಂಪಿಯನ್ ಗುಕೇಶ್ ಡಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
December 12th, 07:35 pm
ಅತಿ ಕಿರಿಯ ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿರುವ ಗುಕೇಶ್ ಡಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ. ಗುಕೇಶ್ ಅವರ ಸಾಧನೆ ಐತಿಹಾಸಿಕ ಮತ್ತು ಮಾದರಿ ಎಂದು ಪ್ರಧಾನಿ ಶ್ಲಾಘಿಸಿದ್ದಾರೆ.