'ಮನ್ ಕಿ ಬಾತ್' ಕೇಳುಗರು ಈ ಕಾರ್ಯಕ್ರಮದ ನಿಜವಾದ ನಿರೂಪಕರು: ಪ್ರಧಾನಿ ಮೋದಿ

September 29th, 11:30 am

ನನ್ನ ಪ್ರೀತಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ ನಾವೆಲ್ಲರೂ 'ಮನದ ಮಾತಿನ' ಮೂಲಕ ಒಗ್ಗೂಡುವ ಅವಕಾಶ ಲಭಿಸಿದೆ. ಇಂದಿನ ಈ ಕಂತು ನನ್ನನ್ನು ಬಹಳ ಭಾವುಕನನ್ನಾಗಿಸಲಿದೆ, ಅನೇಕ ಹಳೆಯ ನೆನಪುಗಳು ನನ್ನನ್ನು ಮುತ್ತಿವೆ - ಕಾರಣ ಏನೆಂದರೆ 'ಮನದ ಮಾತಿನ' ನಮ್ಮ ಈ ಪಯಣಕ್ಕೆ 10 ವರ್ಷಗಳು ತುಂಬುತ್ತಿದೆ. 10 ವರ್ಷಗಳ ಹಿಂದೆ ಅಕ್ಟೋಬರ್ 3 ರಂದು ವಿಜಯದಶಮಿಯ ದಿನದಂದು 'ಮನದ ಮಾತು’ ಪ್ರಾರಂಭವಾಗಿತ್ತು ಮತ್ತು ಈ ವರ್ಷ ಅಕ್ಟೋಬರ್ 3 ರಂದು 'ಮನದ ಮಾತಿಗೆ ' 10 ವರ್ಷತುಂಬುವ ಸಂದರ್ಭ ನವರಾತ್ರಿಯ ಮೊದಲ ದಿನವಾಗಿದೆ. 'ಮನದ ಮಾತಿನ’ ಈ ಸುದೀರ್ಘ ಪಯಣದಲ್ಲಿ ನಾನು ಎಂದೂ ಮರೆಯಲಾಗದ ಇಂತಹ ಹಲವಾರು ಮೈಲಿಗಲ್ಲುಗಳಿವೆ, ನಮ್ಮ ಈ ಪಯಣದಲ್ಲಿ ನಿರಂತರ ಸಹಯೋಗವನ್ನು ನೀಡಿದಂತಹ ' ಮನದ ಮಾತಿನ' ಕೋಟ್ಯಂತರ ಶ್ರೋತೃ ಬಾಂಧವರಿದ್ದಾರೆ. ದೇಶದ ಮೂಲೆ ಮೂಲೆಗಳಿಂದ ಅವರು ಮಾಹಿತಿಯನ್ನು ಒದಗಿಸಿದರು. ಮನದ ಮಾತಿನ ಶ್ರೋತೃಗಳೇ ಈ ಕಾರ್ಯಕ್ರಮದ ನಿಜವಾದ ರೂವಾರಿಗಳು. ಸಾಮಾನ್ಯವಾಗಿ ಎಲ್ಲಿಯವರೆಗೆ ರೋಚಕ ವಿಷಯಗಳನ್ನು ಮಾತನಾಡುವುದಿಲ್ಲವೋ, ನಕಾರಾತ್ಮಕ ವಿಷಯಗಳನ್ನು ಮಾತನಾಡುವುದಿಲ್ಲವೋ ಅಲ್ಲಿವರೆಗೆ ಅದು ಹೆಚ್ಚಿನ ಗಮನ ಸೆಳೆಯುವುದಿಲ್ಲ ಎನ್ನಲಾಗುತ್ತದೆ. ಆದರೆ ಮನದ ಮಾತು ದೇಶದ ಜನರು ಸಕಾರಾತ್ಮಕ ಮಾಹಿತಿಗಾಗಿ , ಎಷ್ಟು ಉತ್ಸುಕರಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಿದೆ. ಸಕಾರಾತ್ಮಕ ಮಾತು, ಪ್ರೇರಣಾತ್ಮಕ ಉದಾಹರಣೆಗಳು, ಸ್ಫೂರ್ತಿದಾಯಕ ಕಥೆಗಳು ಜನರಿಗೆ ಬಹಳ ಇಷ್ಟವಾಗುತ್ತವೆ. ಕೇವಲ ಮಳೆಹನಿಗಳನ್ನು ಮಾತ್ರ ಕುಡಿಯುವಂತಹ ಚಾತಕ ಪಕ್ಷಿಯಂತೆ ಜನರು ದೇಶದ ಸೌಲಭ್ಯಗಳ ಬಗ್ಗೆ, ಜನರ ಸಾಮೂಹಿಕ ಸಾಧನೆಗಳ ಬಗ್ಗೆ ಮನದ ಮಾತಿನ ಮೂಲಕ ಎಷ್ಟು ಹೆಮ್ಮೆಯಿಂದ ಕೇಳುತ್ತಾರೆ. ಮನದ ಮಾತಿನ 10 ವರ್ಷಗಳ ಪಯಣ ಎಷ್ಟು ಅದ್ಭುತವಾದ ಹಾರವನ್ನು ಸಿದ್ಧಗೊಳಿಸಿದೆ ಎಂದರೆ ಪ್ರತಿ ಸಂಚಿಕೆಯೊಂದಿಗೆ ಹೊಸ ಯಶೋಗಾಥೆಗಳು, ಹೊಸ ಕೀರ್ತಿವಂತರು ಮತ್ತು ಹೊಸ ವ್ಯಕ್ತಿತ್ವಗಳನ್ನು ಸೇರಿಸುತ್ತಾ ಸಾಗಿದೆ. ನಮ್ಮ ಸಮಾಜದಲ್ಲಿ ಸಾಮಾಜಿಕ ಹಿತದೃಷ್ಟಿಯ ಭಾವನೆಯಿಂದ ಯಾವುದೇ ಕೆಲಸ ಮಾಡಿದರೂ ಅವರಿಗೆ 'ಮನದ ಮಾತಿನ' ಮೂಲಕ ಗೌರವ ಲಭಿಸುತ್ತದೆ. 'ಮನದ ಮಾತಿ'ಗೆ ಬಂದ ಪತ್ರಗಳನ್ನು ನಾನು ಓದಿದಾಗ ನನ್ನ ಮನವೂ ಹೆಮ್ಮೆಯಿಂದ ಬೀಗುತ್ತದೆ. ನಮ್ಮ ದೇಶದಲ್ಲಿ ಅದೆಷ್ಟೋ ಪ್ರತಿಭಾವಂತರಿದ್ದಾರೆ, ಅವರು ತಮ್ಮ ಇಡೀ ಜೀವನವನ್ನು ಜನರ ನಿಸ್ವಾರ್ಥ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ. ಅವರ ಬಗ್ಗೆ ತಿಳಿಯುವುದು ನನ್ನಲ್ಲಿ ಹೊಸ ಶಕ್ತಿಯನ್ನು ತುಂಬುತ್ತದೆ. 'ಮನದ ಮಾತಿನ' ಈ ಸಂಪೂರ್ಣ ಪ್ರಕ್ರಿಯೆಯು ನನಗೆ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆಯುವಂತಿದೆ. ಮನದ ಮಾತಿನ ಪ್ರತಿ ವಿಷಯ, ಪ್ರತಿ ಘಟನೆ, ಪ್ರತಿ ಪತ್ರವನ್ನು ನೆನಪಿಸಿಕೊಂಡಾಗ, ನನಗೆ ಭಗವಂತನ ರೂಪದಲ್ಲಿರುವ ಜನತಾ ಜನಾರ್ದನನ ದರ್ಶನ ಪಡೆದಂತೆ ಭಾಸವಾಗುತ್ತದೆ.

ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

June 30th, 11:00 am

'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.

ಪ್ರಧಾನಿ ನರೇಂದ್ರ ಮೋದಿಅವರ ಯೂಟ್ಯೂಬ್ ಜರ್ನಿ: ಜಾಗತಿಕ ಪ್ರಭಾವಕ್ಕೆ 15 ವರ್ಷಗಳು

September 27th, 11:29 pm

ನನ್ನ ಯೂಟ್ಯೂಬರ್ ಸ್ನೇಹಿತರೇ, ಇಂದು ಸಹ ಯೂಟ್ಯೂಬರ್ ಆಗಿ ನಿಮ್ಮ ನಡುವೆ ಇರಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ನಿಮ್ಮಂತೆಯೇ ಇದ್ದೇನೆ, ಯಾವುದೇ ಭಿನ್ನವಾಗಿಲ್ಲ. 15 ವರ್ಷಗಳಿಂದ ನಾನು ಯೂಟ್ಯೂಬ್ ಚಾನೆಲ್ ಮೂಲಕ ದೇಶ ಮತ್ತು ಪ್ರಪಂಚದೊಂದಿಗೆ ಸಂಪರ್ಕ ಹೊಂದಿದ್ದೇನೆ. ನಾನು ಯೋಗ್ಯ ಸಂಖ್ಯೆಯಲ್ಲಿ ಚಂದಾದಾರರನ್ನು ಸಹ ಹೊಂದಿದ್ದೇನೆ.

ಯೂಟ್ಯೂಬ್ ಫ್ಯಾನ್ ಫೆಸ್ಟ್ ಇಂಡಿಯಾ 2023ರ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಯೂಟ್ಯೂಬ್ ಬಳಕೆದಾರರನ್ನು ಉದ್ದೇಶಿಸಿ ಮಾತನಾಡಿದರು

September 27th, 11:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯೂಟ್ಯೂಬ್ ಫ್ಯಾನ್ ಫೆಸ್ಟ್ ಇಂಡಿಯಾ 2023ರ ಸಂದರ್ಭದಲ್ಲಿ ಯೂಟ್ಯೂಬರ್ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು. ಅವರು ಯೂಟ್ಯೂಬಿನಲ್ಲಿ ತಮ್ಮ 15 ವರ್ಷಗಳನ್ನು ಪೂರ್ಣಗೊಳಿಸಿದರು ಮತ್ತು ಮಾಧ್ಯಮದ ಮೂಲಕ ಜಾಗತಿಕ ಪ್ರಭಾವವನ್ನು ಸೃಷ್ಟಿಸುವ ತಮ್ಮ ಅನುಭವವನ್ನು ಹಂಚಿಕೊಂಡರು.

ರಾಷ್ಟ್ರಕ್ಕೆ ಯಶೋಭೂಮಿ ಸಮರ್ಪಣೆ ಮತ್ತು ವಿಶ್ವಕರ್ಮ ಯೋಜನೆಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 17th, 06:08 pm

ಕೇಂದ್ರ ಸಚಿವ ಸಂಪುಟದ ನನ್ನ ಎಲ್ಲಾ ಸಹೋದ್ಯೋಗಿಗಳೆ, ದೇಶದ ಮೂಲೆ ಮೂಲೆಗಳಿಂದ ಆಗಮಿಸಿ, ಈ ಭವ್ಯ ಕಟ್ಟಡದಲ್ಲಿ ಸೇರಿರುವ ಆತ್ಮೀಯ ಸಹೋದರ ಸಹೋದರಿಯರೆ, 70ಕ್ಕಿಂತ ಹೆಚ್ಚಿನ ನಗರಗಳಿಂದ ಈ ಕಾರ್ಯಕ್ರಮಕ್ಕೆ ಸೇರಿರುವ ನನ್ನ ಸಹನಾಗರಿಕರೆ, ಇತರೆ ಗಣ್ಯ ಅತಿಥಿಗಳೆ ಮತ್ತು ನನ್ನ ಕುಟುಂಬ ಸದಸ್ಯರೆ!

ನವದೆಹಲಿಯಲ್ಲಿ ಭಾರತ ಅಂತಾರಾಷ್ಟ್ರೀಯ ಸಮಾವೇಶ ಮತ್ತು ಪ್ರದರ್ಶನ ಕೇಂದ್ರ - ‘ಯಶೋಭೂಮಿ’ ಮೊದಲನೇ ಹಂತವನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ

September 17th, 12:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ದ್ವಾರಕಾದಲ್ಲಿ ಭಾರತ ಅಂತಾರಾಷ್ಟ್ರೀಯ ಸಮಾವೇಶ ಮತ್ತು ಪ್ರದರ್ಶನ ಕೇಂದ್ರ (ಇಂಡಿಯಾ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಮತ್ತು ಎಕ್ಸ್‌ಪೋ ಸೆಂಟರ್) - ‘ಯಶೋಭೂಮಿ’ಯ ಮೊದಲನೇ ಹಂತವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. 'ಯಶೋಭೂಮಿ' ಭವ್ಯವಾದ ಸಮಾವೇಶ ಕೇಂದ್ರ, ಬಹು ಪ್ರದರ್ಶನ ಸಭಾಂಗಣಗಳು ಮತ್ತು ಇತರ ಸೌಲಭ್ಯಗಳನ್ನು ಹೊಂದಿದೆ. ಪ್ರಧಾನಿಯವರು ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಕರಕುಶಲಿಗಳಿಗಾಗಿ ‘ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ’ಗೆ ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ಪಿಎಂ ವಿಶ್ವಕರ್ಮ ಲೋಗೋ, ಘೋಷವಾಕ್ಯ ಮತ್ತು ಪೋರ್ಟಲ್ ಅನ್ನು ಸಹ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅವರು ನಿರ್ದಿಷ್ಟವಾಗಿ ರೂಪಿಸಿದ ಸ್ಟಾಂಪ್ ಶೀಟ್, ಟೂಲ್ ಕಿಟ್ ಇ-ಪುಸ್ತಕ ಮತ್ತು ವಿಡಿಯೋವನ್ನು ಬಿಡುಗಡೆ ಮಾಡಿದರು. ಪ್ರಧಾನಮಂತ್ರಿಯವರು 18 ಫಲಾನುಭವಿಗಳಿಗೆ ವಿಶ್ವಕರ್ಮ ಪ್ರಮಾಣಪತ್ರಗಳನ್ನು ವಿತರಿಸಿದರು.

ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

August 07th, 04:16 pm

ಕೆಲವು ದಿನಗಳ ಹಿಂದೆ ಭಾರತ ಮಂಟಪವನ್ನು ಅದ್ಧೂರಿಯಾಗಿ ಉದ್ಘಾಟಿಸಲಾಗಿತ್ತು. ನಿಮ್ಮಲ್ಲಿ ಕೆಲವರು ಮೊದಲು ಇಲ್ಲಿಗೆ ಬಂದು ನಿಮ್ಮ ಮಳಿಗೆಗಳು ಅಥವಾ ಟೆಂಟ್‌ಗಳನ್ನು ಹಾಕಿದ್ದಿರಿ. ಆದರೆ ಇಂದು ನೀವು ಇಲ್ಲಿ ಪರಿವರ್ತಿತ ರಾಷ್ಟ್ರವನ್ನು ನೋಡುತ್ತಿದ್ದೀರಿ. ಇಂದು ನಾವು ಈ ಭಾರತ ಮಂಟಪದಲ್ಲಿ ರಾಷ್ಟ್ರೀಯ ಕೈಮಗ್ಗ ದಿನ ಆಚರಿಸುತ್ತಿದ್ದೇವೆ. ಭಾರತ ಮಂಟಪದ ಈ ವೈಭವದಲ್ಲಿಯೂ ಭಾರತದ ಕೈಮಗ್ಗ ಉದ್ಯಮವು ಪ್ರಮುಖ ಪಾತ್ರ ವಹಿಸುತ್ತಿದೆ. ಪ್ರಾಚೀನ ಮತ್ತು ಆಧುನಿಕತೆಯ ಈ ಸಂಗಮವು ಇಂದಿನ ಭಾರತವನ್ನು ವ್ಯಾಖ್ಯಾನಿಸುತ್ತಿದೆ. ಇಂದಿನ ಭಾರತ ಕೇವಲ ಸ್ಥಳೀಯರ ಬಗ್ಗೆ ಧ್ವನಿಯೆತ್ತದೆ, ವಿಶ್ವವ್ಯಾಪಿಯಾಗಿಸಲು ಜಾಗತಿಕ ವೇದಿಕೆ ಒದಗಿಸುತ್ತಿದೆ. ಸ್ವಲ್ಪ ಸಮಯದ ಹಿಂದೆ, ನಮ್ಮ ಕೆಲವು ನೇಕಾರರೊಂದಿಗೆ ಸಂವಹನ ನಡೆಸಲು ನನಗೆ ಅವಕಾಶ ಸಿಕ್ಕಿತು. ದೇಶಾದ್ಯಂತ ಅನೇಕ ಕೈಮಗ್ಗ ಕ್ಲಸ್ಟರ್‌ಗಳಿಂದ ನಮ್ಮ ನೇಕಾರ ಸಹೋದರರು ಮತ್ತು ಸಹೋದರಿಯರು ನಮ್ಮೊಂದಿಗೆ ಇರಲು ದೂರದೂರುಗಳಿಂದ ಇಲ್ಲಿಗೆ ಬಂದಿದ್ದಾರೆ. ಈ ಭವ್ಯ ಸಮಾರಂಭದಲ್ಲಿ ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ!

ನವದೆಹಲಿಯಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ

August 07th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದ `ಭಾರತ್ ಮಂಟಪ’ದಲ್ಲಿ ನಡೆದ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ, ʻರಾಷ್ಟ್ರೀಯ ಫ್ಯಾಶನ್ ಟೆಕ್ನಾಲಜಿ ಸಂಸ್ಥೆʼ ಅಭಿವೃದ್ಧಿಪಡಿಸಿದ 'ಭಾರತೀಯ ವಸ್ತ್ರ ಏವಮ್ ಶಿಲ್ಪ ಕೋಶ್ʼ ಎಂಬ ಜವಳಿ ಮತ್ತು ಕರಕುಶಲ ವಸ್ತುಗಳ ಭಂಡಾರ ಪೋರ್ಟಲ್‌ಗೆ ಅವರು ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನಕ್ಕೂ ಭೇಟಿ ನೀಡಿ, ನೇಕಾರರೊಂದಿಗೆ ಸಂವಾದ ನಡೆಸಿದರು.

ನವೆಂಬರ್ 19ರಂದು ಅರುಣಾಚಲ ಪ್ರದೇಶ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಿ

November 17th, 03:36 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ನವೆಂಬರ್ 19ರಂದು ಅರುಣಾಚಲ ಪ್ರದೇಶ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 9.30ರ ಸುಮಾರಿಗೆ ಪ್ರಧಾನಮಂತ್ರಿಯವರು ಇಟಾನಗರದ ʻಡೋನಿ ಪೋಲೊ ವಿಮಾನ ನಿಲ್ದಾಣʼವನ್ನು ಉದ್ಘಾಟಿಸಲಿದ್ದಾರೆ ಮತ್ತು 600 ಮೆಗಾವ್ಯಾಟ್ ಸಾಮರ್ಥ್ಯದ ಕಮೆಂಗ್ ಜಲವಿದ್ಯುತ್ ಕೇಂದ್ರವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅದಾದ ಬಳಿಕ, ಅವರು ಉತ್ತರ ಪ್ರದೇಶದ ವಾರಾಣಸಿಯನ್ನು ತಲುಪಲಿದ್ದು, ಅಲ್ಲಿ ಅವರು ಮಧ್ಯಾಹ್ನ 2 ಗಂಟೆಗೆ 'ಕಾಶಿ ತಮಿಳು ಸಂಗಮಂ' ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಯೋಗ ಅತ್ಯಂತ ಪರಿಣಾಮಕಾರಿ ಎಂದು ಜಗತ್ತು ಒಪ್ಪಿಕೊಂಡಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

September 25th, 11:00 am

ಕಳೆದ ಕೆಲವು ದಿನಗಳಲ್ಲಿ ನಮ್ಮ ಗಮನ ಸೆಳೆದ ವಿಷಯವೆಂದರೆ ಚೀತಾ. ಚೀತಾಗಳ ಬಗ್ಗೆ ಮಾತನಾಡುವಂತೆ ಸಾಕಷ್ಟು ಸಂದೇಶಗಳು ಬಂದಿವೆ. ಉತ್ತರ ಪ್ರದೇಶದ ಅರುಣ್ ಕುಮಾರ್ ಗುಪ್ತಾ ಅಥವಾ ತೆಲಂಗಾಣದ ಎನ್. ರಾಮಚಂದ್ರನ್ ರಘುರಾಮ್, ಗುಜರಾತ್ನ ರಾಜನ್ ಅಥವಾ ದೆಹಲಿಯ ಸುಬ್ರತಾ ಹೀಗೆ ದೇಶದ ಮೂಲೆ ಮೂಲೆಗಳಿಂದ ಚೀತಾಗಳು ಭಾರತಕ್ಕೆ ಮರಳಿದ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ. 130 ಕೋಟಿ ಭಾರತೀಯರು ಸಂತೋಷದಿಂದ, ಹೆಮ್ಮೆಯಿಂದ ಬೀಗಿದ್ದಾರೆ; ಇದು ಪ್ರಕೃತಿಯ ಬಗೆಗಿನ ಭಾರತದ ಪ್ರೀತಿ. ಈ ಬಗ್ಗೆ ಜನರು ಕೇಳುವ ಸಾಮಾನ್ಯ ಪ್ರಶ್ನೆಯೆಂದರೆ ಮೋದಿ ಜೀ, ಚೀತಾಗಳನ್ನು ನೋಡಲು ನಮಗೆ ಯಾವಾಗ ಅವಕಾಶ ಸಿಗುತ್ತದೆ?

ಶಾರ್ಟ್ ಕಟ್ ರಾಜಕಾರಣ ಮಾಡುವವರು ಹೊಸ ವಿಮಾನ ನಿಲ್ದಾಣ, ಹೆದ್ದಾರಿ, ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸುವುದಿಲ್ಲ: ಪ್ರಧಾನಿ

July 12th, 03:56 pm

ಪ್ರಧಾನಿ ನರೇಂದ್ರ ಮೋದಿ ಇಂದು ಜಾರ್ಖಂಡ್‌ನ ದಿಯೋಘರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಜನರ ಉತ್ಸಾಹವನ್ನು ಗುರುತಿಸುವ ಮೂಲಕ ಪ್ರಧಾನಿ ಮೋದಿ ಭಾಷಣ ಆರಂಭಿಸಿದರು. ಅಭಿವೃದ್ಧಿಯ ಹಬ್ಬವನ್ನು ನೀವು ಸಾವಿರಾರು ದಿವಸಗಳೊಂದಿಗೆ ಸ್ವಾಗತಿಸಿದ ರೀತಿ ಅದ್ಭುತವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ನಾನು ಇಲ್ಲಿಯೂ ಅದೇ ಉತ್ಸಾಹವನ್ನು ಅನುಭವಿಸುತ್ತಿದ್ದೇನೆ.

ಜಾರ್ಖಂಡ್‌ನ ದಿಯೋಘರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು

July 12th, 03:54 pm

ಪ್ರಧಾನಿ ನರೇಂದ್ರ ಮೋದಿ ಇಂದು ಜಾರ್ಖಂಡ್‌ನ ದಿಯೋಘರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಜನರ ಉತ್ಸಾಹವನ್ನು ಗುರುತಿಸುವ ಮೂಲಕ ಪ್ರಧಾನಿ ಮೋದಿ ಭಾಷಣ ಆರಂಭಿಸಿದರು. ಅಭಿವೃದ್ಧಿಯ ಹಬ್ಬವನ್ನು ನೀವು ಸಾವಿರಾರು ದಿವಸಗಳೊಂದಿಗೆ ಸ್ವಾಗತಿಸಿದ ರೀತಿ ಅದ್ಭುತವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ನಾನು ಇಲ್ಲಿಯೂ ಅದೇ ಉತ್ಸಾಹವನ್ನು ಅನುಭವಿಸುತ್ತಿದ್ದೇನೆ.

ಮಣಿಪುರದ 50ನೇ ರಾಜ್ಯೋತ್ಸವ ದಿನ ಅಂಗವಾಗಿ ಪ್ರಧಾನ ಮಂತ್ರಿ ಭಾಷಣ

January 21st, 10:31 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಣಿಪುರದ 50ನೇ ರಾಜ್ಯೋತ್ಸವ ದಿನದಂದು ಮಣಿಪುರದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಈ ವೈಭವೋಪೇತ ಪಯಣಕ್ಕೆ ಕಾರಣರಾದ ಪ್ರತಿಯೊಬ್ಬರ ತ್ಯಾಗ ಮತ್ತು ಶ್ರಮಕ್ಕೆ ಗೌರವ ಸಲ್ಲಿಸಿದರು. ರಾಜ್ಯದ ಇತಿಹಾಸದಲ್ಲಿ ಏರಿಳಿತಗಳನ್ನು ಎದುರಿಸುವ ಸಂದರ್ಭದಲ್ಲಿ ಮಣಿಪುರಿ ಜನರು ತೋರಿದ ಸ್ಥೈರ್ಯ ಮತ್ತು ಏಕತೆ ಅವರ ನಿಜವಾದ ಶಕ್ತಿ ಎಂದು ಅವರು ಬಣ್ಣಿಸಿದರು. ರಾಜ್ಯದ ಜನರ ನಿರೀಕ್ಷೆಗಳು ಮತ್ತು ಆಕಾಂಕ್ಷೆಗಳನ್ನು ಖುದ್ದು ಅರಿಯುವ ಪ್ರಯತ್ನಗಳನ್ನು ನಿರಂತರ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಪುನರುಚ್ಚರಿಸಿದ ಅವರು, ಇದು ಅಲ್ಲಿನ ಜನರ ಭಾವನೆಗಳು ಮತ್ತು ನಿರೀಕ್ಷೆಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಮತ್ತು ರಾಜ್ಯದ ಸಮಸ್ಯೆಗಳನ್ನು ನಿಭಾಯಿಸಲು ಮಾರ್ಗಗಳನ್ನು ಕಂಡುಕೊಳ್ಳಲು ಅನುವು ಮಾಡಿಕೊಟ್ಟಿತು ಎಂದರು. ಮಣಿಪುರಿ ಜನರು ಶಾಂತಿ ಸ್ಥಾಪನೆಯ ತಮ್ಮ ಬಹುದೊಡ್ಡ ಆಸೆಯನ್ನು ಈಡೇರಿಸಬಹುದೆಂದು ಅವರು ಹರ್ಷ ವ್ಯಕ್ತಪಡಿಸಿದರು. “ಮಣಿಪುರವು ರಸ್ತೆ ತಡೆ ಮತ್ತು ಬಂದ್ ಸ್ವಾತಂತ್ರ್ಯ ಮತ್ತು ಶಾಂತಿಗೆ ಅರ್ಹವಾಗಿದೆ ಎಂದು ಅವರು ಹೇಳಿದರು.

ಮಣಿಪುರದ 50ನೇ ಸ್ಥಾಪನಾ ದಿನ ಉದ್ದೇಶಿಸಿ ಪ್ರಧಾನಿ ಭಾಷಣ

January 21st, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಣಿಪುರದ 50ನೇ ರಾಜ್ಯೋತ್ಸವ ದಿನದಂದು ಮಣಿಪುರದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಈ ವೈಭವೋಪೇತ ಪಯಣಕ್ಕೆ ಕಾರಣರಾದ ಪ್ರತಿಯೊಬ್ಬರ ತ್ಯಾಗ ಮತ್ತು ಶ್ರಮಕ್ಕೆ ಗೌರವ ಸಲ್ಲಿಸಿದರು. ರಾಜ್ಯದ ಇತಿಹಾಸದಲ್ಲಿ ಏರಿಳಿತಗಳನ್ನು ಎದುರಿಸುವ ಸಂದರ್ಭದಲ್ಲಿ ಮಣಿಪುರಿ ಜನರು ತೋರಿದ ಸ್ಥೈರ್ಯ ಮತ್ತು ಏಕತೆ ಅವರ ನಿಜವಾದ ಶಕ್ತಿ ಎಂದು ಅವರು ಬಣ್ಣಿಸಿದರು. ರಾಜ್ಯದ ಜನರ ನಿರೀಕ್ಷೆಗಳು ಮತ್ತು ಆಕಾಂಕ್ಷೆಗಳನ್ನು ಖುದ್ದು ಅರಿಯುವ ಪ್ರಯತ್ನಗಳನ್ನು ನಿರಂತರ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಪುನರುಚ್ಚರಿಸಿದ ಅವರು, ಇದು ಅಲ್ಲಿನ ಜನರ ಭಾವನೆಗಳು ಮತ್ತು ನಿರೀಕ್ಷೆಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಮತ್ತು ರಾಜ್ಯದ ಸಮಸ್ಯೆಗಳನ್ನು ನಿಭಾಯಿಸಲು ಮಾರ್ಗಗಳನ್ನು ಕಂಡುಕೊಳ್ಳಲು ಅನುವು ಮಾಡಿಕೊಟ್ಟಿತು ಎಂದರು. ಮಣಿಪುರಿ ಜನರು ಶಾಂತಿ ಸ್ಥಾಪನೆಯ ತಮ್ಮ ಬಹುದೊಡ್ಡ ಆಸೆಯನ್ನು ಈಡೇರಿಸಬಹುದೆಂದು ಅವರು ಹರ್ಷ ವ್ಯಕ್ತಪಡಿಸಿದರು. “ಮಣಿಪುರವು ರಸ್ತೆ ತಡೆ ಮತ್ತು ಬಂದ್ ಸ್ವಾತಂತ್ರ್ಯ ಮತ್ತು ಶಾಂತಿಗೆ ಅರ್ಹವಾಗಿದೆ ಎಂದು ಅವರು ಹೇಳಿದರು.

ವಿವಿಧ ವಲಯಗಳಿಗೆ ಸೇರಿದ ನವೋದ್ಯಮಗಳ ಯಶಸ್ವಿ ಉದ್ಯಮಶೀಲರ ಜತೆಗಿನ ಸಂವಾದದಲ್ಲಿ ಪ್ರಧಾನ ಮಂತ್ರಿ ಭಾಷಣ

January 15th, 04:31 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಪಿಯೂಷ್ ಗೋಯಲ್ ಜಿ, ಮನ್ಸುಖ್ ಮಾಂಡವಿಯಾ ಜಿ, ಅಶ್ವಿನಿ ವೈಷ್ಣವ್ ಜಿ, ಸರ್ಬಾನಂದ್ ಸೋನೊವಾಲ್ ಜಿ, ಪರ್ಶೋತ್ತಮ್ ರುಪಾಲ ಜಿ, ಜಿ. ಕಿಶನ್ ರೆಡ್ಡಿ ಜಿ, ಪಶುಪತಿ ಕುಮಾರ್ ಪಾರಸ್ ಜಿ, ಜಿತೇಂದ್ರ ಸಿಂಗ್ ಜಿ, ಸೋಮ್ ಪ್ರಕಾಶ್ ಜಿ, ದೇಶಾದ್ಯಂತ ಇರುವ ನವೋದ್ಯಮಗಳ ಉದ್ಯಮಶೀಲ ದಿಗ್ಗಜರೇ, ನನ್ನ ಯುವ ಸ್ನೇಹಿತರೆ, ವೇದಿಕೆಯಲ್ಲಿರುವ ಎಲ್ಲಾ ಗಣ್ಯರೇ, ಸಹೋದರ ಸಹೋದರಿಯರೇ,

PM Modi's interaction with Start-ups from across the country

January 15th, 11:20 am

Prime Minister Narendra Modi interacted with Startups via video conferencing. He announced that every year 16th January would be marked as the National Start-up Day to celebrate the achievements of the start-ups across the country. Start-ups would be the backbone of new India, the PM added.

Bhagwan Birsa lived for the society, sacrificed life for his culture and the country: PM

November 15th, 09:46 am

Prime Minister Narendra Modi inaugurated Bhagwan Birsa Munda Memorial Udyan cum Freedom Fighter Museum at Ranchi via video conferencing. He said, “This museum will become a living venue of our tribal culture full of persity, depicting the contribution of tribal heroes and heroines in the freedom struggle.”

ರಾಂಚಿಯಲ್ಲಿ ನಡೆದ ಜನಜಾತೀಯ ಗೌರವ ದಿನದಲ್ಲಿ ಪ್ರಧಾನಮಂತ್ರಿಯವರಿಂದ ಭಗವಾನ್ ಬಿರ್ಸಾ ಮುಂಡಾ ಸ್ಮರಣಾರ್ಥ ಉದ್ಯಾನವನ ಮತ್ತು ಸ್ವತಂತ್ರ ಸೇನಾನಿ ವಸ್ತು ಸಂಗ್ರಹಾಲಯದ ಉದ್ಘಾಟನೆ

November 15th, 09:45 am

ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು ಜನಜಾತೀಯ ಗೌರವ ದಿವಸ ಎಂದು ಆಚರಿಸಲು ಭಾರತ ಸರ್ಕಾರ ಘೋಷಿಸಿದೆ. ಈ ಸಂದರ್ಭದ ಅಂಗವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಗವಾನ್ ಬಿರ್ಸಾ ಮುಂಡಾ ಸ್ಮಾರಕ ಉದ್ಯಾನ ಮತ್ತು ಸ್ವತಂತ್ರ ಸೇನಾನಿ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಿದರು. ಜಾರ್ಖಂಡ್ ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಯುನೆಸ್ಕೋ ಸೃಜನಾತ್ಮಕ ನಗರಗಳ ಜಾಲ (ಯುಸಿಸಿಎನ್)ಕ್ಕೆ ಶ್ರೀನಗರ ಸೇರ್ಪಡೆಗೆ ಸಂತಸ ವ್ಯಕ್ತಪಡಿಸಿದ ಪ್ರಧಾನ ಮಂತ್ರಿ

November 08th, 10:55 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀನಗರ ಕರಕುಶಲ ಮತ್ತು ಜಾನಪದ ಕಲೆಯ ತನ್ನ ವಿಶೇಷ ಸ್ಥಾನದೊಂದಿಗೆ ಯುನೆಸ್ಕೋ ಸೃಜನಾತ್ಮಕ ನಗರಗಳ ಜಾಲ (ಯುಸಿಸಿಎನ್) ಕ್ಕೆ ಸೇರ್ಪಡೆಗೊಳ್ಳುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

ಕೆವಿಐಸಿಯ ವಿಶ್ವದ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜಕ್ಕೆ ಪ್ರಧಾನಮಂತ್ರಿ ಶ್ಲಾಘನೆ

October 03rd, 06:05 pm

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಗೌರವ ಸಲ್ಲಿಸಲು ಖಾದಿ ಗ್ರಾಮೀಣ ಕೈಗಾರಿಕಾ ಆಯೋಗ, ಲಡಾಖ್ ನ ಲೇಹ್ ನಲ್ಲಿ ವಿಶ್ವದ ಅತಿ ದೊಡ್ಡ ಖಾದಿ ರಾಷ್ಟ್ರೀಯ ಧ್ವಜ (225 ಅಡಿ ಎತ್ತರ ಹಾಗೂ 150 ಅಡಿ ಅಗಲ)ವನ್ನು ಪ್ರದರ್ಶಿಸಿದ್ದನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.