ತ್ರಿವರ್ಣ ಧ್ವಜದ ವೈಭವವನ್ನು ಎತ್ತಿ ಹಿಡಿಯುವಲ್ಲಿ 'ಹರ್ ಘರ್ ತಿರಂಗ ಅಭಿಯಾನ' ಒಂದು ವಿಶಿಷ್ಟ ಹಬ್ಬವಾಗಿದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

July 28th, 11:30 am

ನನ್ನ ಪ್ರೀತಿಯ ದೇಶವಾಸಿಗಳೆ, 'ಮನ್ ಕಿ ಬಾತ್' ಕಾರ್ಯಕ್ರಮಕ್ಕೆ ನಿಮಗೆಲ್ಲರಿಗೂ ಸ್ವಾಗತ, ಆತ್ಮೀಯ ಶುಭಾಶಯಗಳು. ಈ ಕ್ಷಣದಲ್ಲಿ ಜರುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ಇಡೀ ವಿಶ್ವದ ಗಮನ ಸೆಳೆದಿದೆ, ಈ ಋತುವಿನ ಫ್ಲೇವರ್ ಆಗಿದೆ. ಒಲಿಂಪಿಕ್ಸ್ ನಮ್ಮ ಆಟಗಾರರಿಗೆ ವಿಶ್ವ ವೇದಿಕೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲು ಅವಕಾಶ ಮಾಡಿಕೊಟ್ಟಿದೆ. ದೇಶಕ್ಕಾಗಿ ಏನನ್ನಾದರೂ ಮಾಡಲು ಅವರಿಗೆ ಅವಕಾಶ ನೀಡಿದೆ. ನಮ್ಮ ಆಟಗಾರರನ್ನು ಪ್ರೋತ್ಸಾಹಿಸೋಣ... ಭಾರತ ತಂಡಕ್ಕೆ ಚಿಯರ್!!

​​​​​​​ ನವದೆಹಲಿಯ ನಡೆದ ʻಭಾರತ್ ಟೆಕ್ಸ್-2024ʼ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳ ಭಾಷಣದ ಕನ್ನಡ ಪಠ್ಯಾಂತರ

February 26th, 11:10 am

ನನ್ನ ಕ್ಯಾಬಿನೆಟ್ ಸಹೋದ್ಯೋಗಿಗಳಾದ ಪಿಯೂಷ್ ಗೋಯಲ್ ಅವರೇ ಮತ್ತು ದರ್ಶನ ಜರ್ದೋಶ್ ಅವರೇ, ವಿವಿಧ ದೇಶಗಳ ರಾಯಭಾರಿಗಳೇ, ಹಿರಿಯ ರಾಜತಾಂತ್ರಿಕರೇ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧಿಕಾರಿಗಳೇ, ಫ್ಯಾಷನ್ ಮತ್ತು ಜವಳಿ ಪ್ರಪಂಚದ ಎಲ್ಲಾ ಸಹವರ್ತಿಗಳೇ, ಯುವ ಉದ್ಯಮಿಗಳೇ, ವಿದ್ಯಾರ್ಥಿಗಳೇ, ನಮ್ಮ ನೇಕಾರರು ಮತ್ತು ಕುಶಲಕರ್ಮಿಗಳೇ ಹಾಗೂ ಮಹಿಳೆಯರೇ ಮತ್ತು ಮಹನೀಯರೇ! ಭಾರತ್ ಮಂಟಪದಲ್ಲಿ ʻಭಾರತ್ ಟೆಕ್ಸ್ʼ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ನಿಮ್ಮೆಲ್ಲರಿಗೂ ಅಭಿನಂದನೆಗಳು! ಇಂದಿನ ಕಾರ್ಯಕ್ರಮವು ಖುದ್ದು ಬಹಳ ವಿಶೇಷವಾಗಿದೆ. ಇದು ಏಕೆ ವಿಶೇಷವೆಂದರೆ ಇದು ಭಾರತದ ಎರಡು ಅತಿದೊಡ್ಡ ಪ್ರದರ್ಶನ ಕೇಂದ್ರಗಳಾದ ʻಭಾರತ್ ಮಂಟಪʼ ಮತ್ತು ʻಯಶೋಭೂಮಿʼಯಲ್ಲಿ ಏಕಕಾಲದಲ್ಲಿ ನಡೆಯುತ್ತಿದೆ. ಇಂದು, 3,000ಕ್ಕೂ ಹೆಚ್ಚು ಪ್ರದರ್ಶಕರು... 100 ದೇಶಗಳಿಂದ ಸುಮಾರು 3,000 ಖರೀದಿದಾರರು... 40,000ಕ್ಕೂ ಹೆಚ್ಚು ವ್ಯಾಪಾರ ಸಂದರ್ಶಕರು... ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇವೆ. ಈ ಕಾರ್ಯಕ್ರಮವು ಜವಳಿ ಪರಿಸರ ವ್ಯವಸ್ಥೆಯ ಎಲ್ಲಾ ಪಾಲುದಾರರನ್ನು ಮತ್ತು ಇಡೀ ಮೌಲ್ಯ ಸರಪಳಿಯನ್ನು ಒಗ್ಗೂಡಿಸಲು ವೇದಿಕೆಯನ್ನು ಒದಗಿಸುತ್ತಿದೆ.

​​​​​​​ನವದೆಹಲಿಯಲ್ಲಿ ಭಾರತ್ ಟೆಕ್ಸ್ 2024 ಉದ್ಘಾಟಿಸಿದ ಪ್ರಧಾನಿ

February 26th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ದೇಶದಲ್ಲಿ ಆಯೋಜಿಸಿರುವ ಅತಿದೊಡ್ಡ ಜಾಗತಿಕ ಜವಳಿ ಮೇಳ ಎಂದು ಹೆಸರಾಗಿರುವ ಭಾರತ್ ಟೆಕ್ಸ್ 2024 ಅನ್ನು ಉದ್ಘಾಟಿಸಿದರು. ಮೇಳದಲ್ಲಿ ಪ್ರದರ್ಶಿಸಿರುವ ಮಳಿಗೆಗಳಲ್ಲಿ ಓಡಾಡಿದ ಪ್ರಧಾನಿ ಅವರು ಅಲ್ಲಿನ ವಸ್ತುಗಳನ್ನು ವೀಕ್ಷಿಸಿದರು.

ಪ್ರಧಾನಿ ನರೇಂದ್ರ ಮೋದಿಅವರ ಯೂಟ್ಯೂಬ್ ಜರ್ನಿ: ಜಾಗತಿಕ ಪ್ರಭಾವಕ್ಕೆ 15 ವರ್ಷಗಳು

September 27th, 11:29 pm

ನನ್ನ ಯೂಟ್ಯೂಬರ್ ಸ್ನೇಹಿತರೇ, ಇಂದು ಸಹ ಯೂಟ್ಯೂಬರ್ ಆಗಿ ನಿಮ್ಮ ನಡುವೆ ಇರಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ನಿಮ್ಮಂತೆಯೇ ಇದ್ದೇನೆ, ಯಾವುದೇ ಭಿನ್ನವಾಗಿಲ್ಲ. 15 ವರ್ಷಗಳಿಂದ ನಾನು ಯೂಟ್ಯೂಬ್ ಚಾನೆಲ್ ಮೂಲಕ ದೇಶ ಮತ್ತು ಪ್ರಪಂಚದೊಂದಿಗೆ ಸಂಪರ್ಕ ಹೊಂದಿದ್ದೇನೆ. ನಾನು ಯೋಗ್ಯ ಸಂಖ್ಯೆಯಲ್ಲಿ ಚಂದಾದಾರರನ್ನು ಸಹ ಹೊಂದಿದ್ದೇನೆ.

ಯೂಟ್ಯೂಬ್ ಫ್ಯಾನ್ ಫೆಸ್ಟ್ ಇಂಡಿಯಾ 2023ರ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಯೂಟ್ಯೂಬ್ ಬಳಕೆದಾರರನ್ನು ಉದ್ದೇಶಿಸಿ ಮಾತನಾಡಿದರು

September 27th, 11:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯೂಟ್ಯೂಬ್ ಫ್ಯಾನ್ ಫೆಸ್ಟ್ ಇಂಡಿಯಾ 2023ರ ಸಂದರ್ಭದಲ್ಲಿ ಯೂಟ್ಯೂಬರ್ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು. ಅವರು ಯೂಟ್ಯೂಬಿನಲ್ಲಿ ತಮ್ಮ 15 ವರ್ಷಗಳನ್ನು ಪೂರ್ಣಗೊಳಿಸಿದರು ಮತ್ತು ಮಾಧ್ಯಮದ ಮೂಲಕ ಜಾಗತಿಕ ಪ್ರಭಾವವನ್ನು ಸೃಷ್ಟಿಸುವ ತಮ್ಮ ಅನುಭವವನ್ನು ಹಂಚಿಕೊಂಡರು.

ಪ್ರಧಾನಮಂತ್ರಿ ಅವರಿಂದ ಫೆಬ್ರವರಿ 16ರಂದು ದೆಹಲಿಯ ಮೇಜರ್ ಧ್ಯಾನ್ ಚಂದ್‌ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆದಿ ಮಹೋತ್ಸವ ಉದ್ಘಾಟನೆ

February 15th, 08:51 am

ಪ್ರಧಾನಮಂತ್ರಿ ಅವರು ದೇಶದ ಬುಡಕಟ್ಟು ಜನರ ಕಲ್ಯಾಣ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಂಡು ಮುಂಚೂಣಿಯಲ್ಲಿದ್ದಾರೆ ಮತ್ತು ದೇಶದ ಪ್ರಗತಿ ಮತ್ತು ಅಭಿವೃದ್ಧಿಯಲ್ಲಿ ಅವರ ಕೊಡುಗೆಗೆ ಸೂಕ್ತ ಗೌರವವನ್ನು ನೀಡುತ್ತಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಬುಡಕಟ್ಟು ಸಂಸ್ಕೃತಿಯನ್ನು ಬಿಂಬಿಸುವ ಪ್ರಯತ್ನವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ಮೇಜರ್ ಧ್ಯಾನ್ ಚಂದ್‌ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಫೆಬ್ರವರಿ 16ರಂದು ಬೆಳಿಗ್ಗೆ 10.30ಕ್ಕೆ ಬೃಹತ್ ರಾಷ್ಟ್ರೀಯ ಬುಡಕಟ್ಟು ಉತ್ಸವ-ಆದಿ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ.

ನವೆಂಬರ್ 19ರಂದು ಅರುಣಾಚಲ ಪ್ರದೇಶ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಿ

November 17th, 03:36 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ನವೆಂಬರ್ 19ರಂದು ಅರುಣಾಚಲ ಪ್ರದೇಶ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 9.30ರ ಸುಮಾರಿಗೆ ಪ್ರಧಾನಮಂತ್ರಿಯವರು ಇಟಾನಗರದ ʻಡೋನಿ ಪೋಲೊ ವಿಮಾನ ನಿಲ್ದಾಣʼವನ್ನು ಉದ್ಘಾಟಿಸಲಿದ್ದಾರೆ ಮತ್ತು 600 ಮೆಗಾವ್ಯಾಟ್ ಸಾಮರ್ಥ್ಯದ ಕಮೆಂಗ್ ಜಲವಿದ್ಯುತ್ ಕೇಂದ್ರವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅದಾದ ಬಳಿಕ, ಅವರು ಉತ್ತರ ಪ್ರದೇಶದ ವಾರಾಣಸಿಯನ್ನು ತಲುಪಲಿದ್ದು, ಅಲ್ಲಿ ಅವರು ಮಧ್ಯಾಹ್ನ 2 ಗಂಟೆಗೆ 'ಕಾಶಿ ತಮಿಳು ಸಂಗಮಂ' ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಯೋಗ ಅತ್ಯಂತ ಪರಿಣಾಮಕಾರಿ ಎಂದು ಜಗತ್ತು ಒಪ್ಪಿಕೊಂಡಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

September 25th, 11:00 am

ಕಳೆದ ಕೆಲವು ದಿನಗಳಲ್ಲಿ ನಮ್ಮ ಗಮನ ಸೆಳೆದ ವಿಷಯವೆಂದರೆ ಚೀತಾ. ಚೀತಾಗಳ ಬಗ್ಗೆ ಮಾತನಾಡುವಂತೆ ಸಾಕಷ್ಟು ಸಂದೇಶಗಳು ಬಂದಿವೆ. ಉತ್ತರ ಪ್ರದೇಶದ ಅರುಣ್ ಕುಮಾರ್ ಗುಪ್ತಾ ಅಥವಾ ತೆಲಂಗಾಣದ ಎನ್. ರಾಮಚಂದ್ರನ್ ರಘುರಾಮ್, ಗುಜರಾತ್ನ ರಾಜನ್ ಅಥವಾ ದೆಹಲಿಯ ಸುಬ್ರತಾ ಹೀಗೆ ದೇಶದ ಮೂಲೆ ಮೂಲೆಗಳಿಂದ ಚೀತಾಗಳು ಭಾರತಕ್ಕೆ ಮರಳಿದ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ. 130 ಕೋಟಿ ಭಾರತೀಯರು ಸಂತೋಷದಿಂದ, ಹೆಮ್ಮೆಯಿಂದ ಬೀಗಿದ್ದಾರೆ; ಇದು ಪ್ರಕೃತಿಯ ಬಗೆಗಿನ ಭಾರತದ ಪ್ರೀತಿ. ಈ ಬಗ್ಗೆ ಜನರು ಕೇಳುವ ಸಾಮಾನ್ಯ ಪ್ರಶ್ನೆಯೆಂದರೆ ಮೋದಿ ಜೀ, ಚೀತಾಗಳನ್ನು ನೋಡಲು ನಮಗೆ ಯಾವಾಗ ಅವಕಾಶ ಸಿಗುತ್ತದೆ?

ರಾಷ್ಟ್ರೀಯ ಕೈಮಗ್ಗ ದಿನದ ಸಂದರ್ಭದಲ್ಲಿ ಭಾರತದ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆಗೆ ಪ್ರಧಾನಮಂತ್ರಿಯವರು ಗೌರವ ಸಲ್ಲಿಸಿದರು

August 07th, 02:24 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಕೈಮಗ್ಗ ದಿನದ ಸಂದರ್ಭದಲ್ಲಿ ಭಾರತದ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆ ಮತ್ತು ಭಾರತದ ಕಲಾತ್ಮಕ ಸಂಪ್ರದಾಯಗಳನ್ನು ಆಚರಿಸಲು ಶ್ರಮಿಸುತ್ತಿರುವ ಎಲ್ಲರಿಗೂ ಗೌರವ ಸಲ್ಲಿಸಿದ್ದಾರೆ. ಕೈಮಗ್ಗ ಸ್ಟಾರ್ಟ್‌ಅಪ್ ಗ್ರ್ಯಾಂಡ್ ಚಾಲೆಂಜ್‌ನಲ್ಲಿ ಭಾಗವಹಿಸುವಂತೆ ಸ್ಟಾರ್ಟ್‌ಅಪ್‌ಗಳ ಪ್ರಪಂಚದೊಂದಿಗೆ ಸಂಬಂಧ ಹೊಂದಿರುವ ಎಲ್ಲಾ ಯುವಜನರನ್ನು ಪ್ರಧಾನಮಂತ್ರಿ ಒತ್ತಾಯಿಸಿದರು.

Taxpayer is respected only when projects are completed in stipulated time: PM Modi

June 23rd, 01:05 pm

PM Modi inaugurated 'Vanijya Bhawan' and launched the NIRYAT portal in Delhi. Referring to the new infrastructure of the Ministry, the Prime Minister said that this is also time to renew the pledge of ease of doing business and through that ‘ease of living’ too. Ease of access, he said, is the link between the two.

PM inaugurates 'Vanijya Bhawan' and launches NIRYAT portal

June 23rd, 10:30 am

PM Modi inaugurated 'Vanijya Bhawan' and launched the NIRYAT portal in Delhi. Referring to the new infrastructure of the Ministry, the Prime Minister said that this is also time to renew the pledge of ease of doing business and through that ‘ease of living’ too. Ease of access, he said, is the link between the two.

ಪ್ರಧಾನಮಂತ್ರಿಯವರು ಜೂನ್ 3 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ

June 02nd, 03:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜೂನ್ 3, 2022 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಸುಮಾರು 11 ಗಂಟೆಗೆ, ಪ್ರಧಾನಮಂತ್ರಿಯವರು ಲಕ್ನೋದ ಇಂದಿರಾಗಾಂಧಿ ಪ್ರತಿಷ್ಠಾನವನ್ನು ತಲುಪಲಿದ್ದಾರೆ, ಅಲ್ಲಿ ಅವರು ಯುಪಿ ಹೂಡಿಕೆದಾರರ ಶೃಂಗಸಭೆಯ ಗುದ್ದಲಿ ಪೂಜೆಯ ಸಮಾರಂಭ @3.0 ಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1:45 ರ ಸುಮಾರಿಗೆ, ಪ್ರಧಾನಮಂತ್ರಿಯವರು ಕಾನ್ಪುರದ ಪರೌಂಕ್ ಗ್ರಾಮವನ್ನು ತಲುಪುತ್ತಾರೆ, ಅಲ್ಲಿ ಅವರು ಗೌರವಾನ್ವಿತ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರೊಂದಿಗೆ ಪಾತ್ರಿ ಮಾತಾ ಮಂದಿರಕ್ಕೆ ಭೇಟಿ ನೀಡಲಿದ್ದಾರೆ. ನಂತರ, ಮಧ್ಯಾಹ್ನ 2 ಗಂಟೆಗೆ ಅವರು ಡಾ. ಬಿ ಆರ್ ಅಂಬೇಡ್ಕರ್ ಭವನಕ್ಕೆ, ನಂತರ ಮಧ್ಯಾಹ್ನ 2:15 ಕ್ಕೆ ಮಿಲನ್ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಕೇಂದ್ರವು ಗೌರವಾನ್ವಿತ ರಾಷ್ಟ್ರಪತಿಯವರ ಪೂರ್ವಜರ ಮನೆಯಾಗಿದೆ, ಇದನ್ನು ಸಾರ್ವಜನಿಕ ಬಳಕೆಗಾಗಿ ದಾನ ಮಾಡಲಾಗಿದೆ ಮತ್ತು ಸಮುದಾಯ ಕೇಂದ್ರವಾಗಿ (ಮಿಲನ್ ಕೇಂದ್ರ) ಪರಿವರ್ತಿಸಲಾಗಿದೆ. ನಂತರ, ಅವರು ಮಧ್ಯಾಹ್ನ 2:30 ಕ್ಕೆ ಪರೌಂಖ್ ಗ್ರಾಮದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಾರೆ.

ಮಣಿಪುರ ಮತ್ತು ತ್ರಿಪುರಾಕ್ಕೆ ಪ್ರಧಾನಿ ಭೇಟಿ ನೀಡಲಿದ್ದಾರೆ

January 02nd, 03:34 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2022 ರ ಜನವರಿ 4 ರಂದು ಮಣಿಪುರ ಮತ್ತು ತ್ರಿಪುರಾ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಸುಮಾರು 11 ಗಂಟೆಗೆ, ಪ್ರಧಾನಮಂತ್ರಿ ಅವರು ಇಂಫಾಲದಲ್ಲಿ 4800 ರೂ.ಗಿಂತ ಹೆಚ್ಚಿನ ಮೌಲ್ಯದ 22 ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ನಂತರ, ಮಧ್ಯಾಹ್ನ 2 ಗಂಟೆಗೆ, ಅಗರ್ತಲಾದಲ್ಲಿ ಅವರು, ಮಹಾರಾಜ ಬೀರ್ ಬಿಕ್ರಮ್ ವಿಮಾನ ನಿಲ್ದಾಣದಲ್ಲಿ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ ಮತ್ತು ಎರಡು ಪ್ರಮುಖ ಅಭಿವೃದ್ಧಿ ಉಪಕ್ರಮಗಳನ್ನು ಪ್ರಾರಂಭಿಸುತ್ತಾರೆ.

Purvanchal Expressway is a reflection of modern facilities in Uttar Pradesh: PM Modi

November 16th, 01:23 pm

Prime Minister Narendra Modi inaugurated the Purvanchal Expressway in Uttar Pradesh. PM Modi said, This is the expressway to the state’s development and will show the way to a new Uttar Pradesh. This expressway is a reflection of modern facilities in UP. This expressway is the expressway of the strong will power of UP.

ಪೂರ್ವಾಂಚಲ್ ಎಕ್ಸಪ್ರೆಸ್ ವೇ ಉದ್ಘಾಟಿಸಿದ ಪ್ರಧಾನಮಂತ್ರಿ

November 16th, 01:19 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಪೂರ್ವಾಂಚಲ ಎಕ್ಸ್ ಪ್ರೆಸ್ ವೇ ಅನ್ನು ಉದ್ಘಾಟಿಸಿದರು. ಅಲ್ಲದೆ ಅವರು ಸುಲ್ತಾನ್ ಪುರ್ ಜಿಲ್ಲೆಯಲ್ಲಿ ಎಕ್ಸ್ ಪ್ರೆಸ್ ವೇ ಮೇಲೆ ನಿರ್ಮಿಸಿರುವ 3.2 ಕಿಲೋಮೀಟರ್ ಉದ್ದದ ವಾಯುನೆಲೆಯಲ್ಲಿ ವೈಮಾನಿಕ ಪ್ರದರ್ಶನಕ್ಕೆ ಸಾಕ್ಷಿಯಾದರು.

ರಾಷ್ಟ್ರೀಯ ಕೈಮಗ್ಗ ದಿನದ ಅಂಗವಾಗಿ ಕೈಮಗ್ಗ ತಯಾರಿತ ಉತ್ಪನ್ನಗಳಿಗೆ ಬೆಂಬಲ ನೀಡಲು ಪ್ರಧಾನಿ ಕರೆ

August 07th, 01:39 pm

ರಾಷ್ಟ್ರೀಯ ಕೈಮಗ್ಗ ದಿನದ ಅಂಗವಾಗಿ ಕೈಮಗ್ಗ ತಯಾರಿತ ಉತ್ಪನ್ನಗಳಿಗೆ ಬೆಂಬಲ ನೀಡಲು ಪ್ರಧಾನಿ ಕರೆ

ಮಧ್ಯ ಪ್ರದೇಶದಲ್ಲಿಯ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನಾದ ಫಲಾನುಭವಿಗಳ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

August 07th, 10:55 am

ಮಧ್ಯ ಪ್ರದೇಶದ ರಾಜ್ಯಪಾಲರು ಮತ್ತು ನನ್ನ ಬಹಳ ಹಳೆಯ ಸಹೋದ್ಯೋಗಿ ಶ್ರೀ ಮಂಗೂಭಾಯಿ ಪಟೇಲ್. ಅವರು ತಮ್ಮ ಇಡೀ ಬದುಕನ್ನು ಬುಡಕಟ್ಟು ಸಮುದಾಯದ ಕಲ್ಯಾಣಕ್ಕಾಗಿ, ಬುಡಕಟ್ಟು ಸಮಾಜದ ಉತ್ಥಾನಕ್ಕಾಗಿ ಕಳೆದವರು, ಇಂತಹವರು ಮಧ್ಯಪ್ರದೇಶದ ರಾಜ್ಯಪಾಲ ಶ್ರೀ ಮಂಗೂಭಾಯಿ ಅವರು. ಮುಖ್ಯಮಂತ್ರಿ ಶ್ರೀ ಶಿವರಾಜ್ ಸಿಂಗ್, ರಾಜ್ಯ ಸರಕಾರದ ಇತರ ಎಲ್ಲಾ ಸಚಿವರೇ, ಸಂಸದರೇ, ಶಾಸಕರೇ ಮತ್ತು ಮಧ್ಯ ಪ್ರದೇಶದ ವಿವಿಧ ಭಾಗಗಳಿಂದ ಈ ಕಾರ್ಯಕ್ರಮಕ್ಕೆ ಸೇರ್ಪಡೆಗೊಡಿರುವ ಎಲ್ಲಾ ಸಹೋದರಿಯರೇ ಮತ್ತು ಸಹೋದರರೇ!.

ಮಧ್ಯಪ್ರದೇಶದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ [ಪಿ.ಎಂ.ಜಿ.ಕೆ.ಎ.ವೈ] ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ

August 07th, 10:54 am

ಮಧ್ಯಪ್ರದೇಶದಲ್ಲಿನ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನಾ ಯೋಜನೆ [ಪಿ.ಎಂ.ಜಿ.ಕೆ.ಎ.ವೈ] ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಪರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಈ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಹೆಚ್ಚಿನ ಜಾಗೃತಿ ಮೂಡಿಸುತ್ತಿದ್ದು, ಯಾವುದೇ ಅರ್ಹವ್ಯಕ್ತಿ ಸೌಲಭ್ಯದಿಂದ ವಂಚಿತರಾಗುವುದಿಲ್ಲ ಎಂದು ಹೇಳಿದರು.

ಮನ್ ಕಿ ಬಾತ್' ಸಕಾರಾತ್ಮಕತೆ ಮತ್ತು ಸೂಕ್ಷ್ಮತೆಯನ್ನು ಹೊಂದಿದೆ. ಇದು ಸಾಮೂಹಿಕ ಪಾತ್ರವನ್ನು ಹೊಂದಿದೆ:ಪ್ರಧಾನಿ ಮೋದಿ

July 25th, 09:44 am

ಮನ್ ಕಿ ಬಾತ್ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಟೋಕಿಯೊ ಒಲಿಂಪಿಕ್ಸ್‌ಗಾಗಿ ಭಾರತದ ತುಕಡಿಯೊಂದಿಗೆ ನಡೆಸಿದ ಸಂವಾದವನ್ನು ನೆನಪಿಸಿಕೊಂಡರು ಮತ್ತು ದೇಶವಾಸಿಗಳು ಅವರನ್ನು ಬೆಂಬಲಿಸುವಂತೆ ಕರೆ ನೀಡಿದರು . ಅಮೃತ್ ಮಹೋತ್ಸವ ಕುರಿತು ಮಾತನಾಡಿದ ಪ್ರಧಾನಿ ಮೋದಿ ಅವರು ವಿಶೇಷ ವೆಬ್‌ಸೈಟ್ ಬಗ್ಗೆ ಪ್ರಸ್ತಾಪಿಸಿದರು, ಅಲ್ಲಿ ದೇಶಾದ್ಯಂತದ ನಾಗರಿಕರು ತಮ್ಮದೇ ಗೀತೆಯಲ್ಲಿ ರಾಷ್ಟ್ರಗೀತೆ ದಾಖಲಿಸಬಹುದು. ಅವರು ದೇಶದಾದ್ಯಂತ ಹಲವಾರು ಸ್ಪೂರ್ತಿದಾಯಕ ಕಥೆಗಳನ್ನು ಹಂಚಿಕೊಂಡರು, ನೀರಿನ ಸಂರಕ್ಷಣೆಯ ಮಹತ್ವವನ್ನು ಮತ್ತು ಹೆಚ್ಚಿನದನ್ನು ಎತ್ತಿ ತೋರಿಸಿದರು!

ನಾವು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯ ಬೆನ್ನೆಲುಬನ್ನು ಮುರಿಯುತ್ತೇವೆ ಮತ್ತು ನಮ್ಮ ಎಲ್ಲಾ ಶಕ್ತಿಯಿಂದ ಹೋರಾಡುತ್ತೇವೆ: ಪ್ರಧಾನಿ ಮೋದಿ

February 03rd, 03:57 pm

ಶ್ರೀನಗರದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.ಕಳೆದ ಐದು ವರ್ಷಗಳಲ್ಲಿ ಭಾರತವು ಹೇಗೆ ಸ್ಟಾರ್ಟ್ ಅಪ್ ಮತ್ತು ನಾವೀನ್ಯತೆ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ಪ್ರಧಾನಿ ಮೋದಿ ಅವರು ಸಭೆಯಲ್ಲಿ ಮಾತನಾಡಿದರು. ಕೇಂದ್ರ ಆರೋಗ್ಯದ ಬಗ್ಗೆ ಗಮನ ಕೇಂದ್ರೀಕರಿಸಿದೆ ಮತ್ತು ಆಯುಷ್ಮಾನ್ ಭಾರತ್ ಯೋಜನಾವು ದೇಶಾದ್ಯಂತ ಲಕ್ಷಾಂತರ ಜನರಿಗೆ ಲಾಭದಾಯಕವಾಗಿದೆಯೆಂದು ಅವರು ಗಮನಿಸಿದ್ದಾರೆ.