Prime Minister Narendra Modi to inaugurate Grameen Bharat Mahotsav 2025 in New Delhi
January 03rd, 05:56 pm
Prime Minister Shri Narendra Modi will inaugurate Grameen Bharat Mahotsav 2025 on 4th January, at around 11 AM, at Bharat Mandapam, New Delhi. He will also address the gathering on the occasion.ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024ರಲ್ಲಿ ಭಾಗವಹಿಸುವವರೊಂದಿಗೆ ಡಿಸೆಂಬರ್ 11ರಂದು ಸಂವಾದ ನಡೆಸಲಿರುವ ಪ್ರಧಾನಮಂತ್ರಿ
December 09th, 07:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 11 , 2024 ರಂದು ಸಂಜೆ 4:30 ಗಂಟೆಗೆ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024 ರ ಗ್ರಾಂಡ್ ಫಿನಾಲೆಯಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಯುವ ನವೋದ್ಯಮಿಗಳೊಂದಿಗೆ ಸಂವಾದ ನಡೆಸಲಿದ್ದಾರೆ . ಗ್ರ್ಯಾಂಡ್ ಫಿನಾಲೆಯಲ್ಲಿ 1300ಕ್ಕೂ ಹೆಚ್ಚು ವಿದ್ಯಾರ್ಥಿಗಳ ತಂಡಗಳು ಭಾಗವಹಿಸುತ್ತವೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ಕಾರ್ಯಕಾರ್ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 07th, 05:52 pm
ಕಾರ್ಯಕಾರ್(ಕಾರ್ಯಕರ್ತರು) ಸುವರ್ಣ ಮಹೋತ್ಸವದ ಶುಭ ಸಂದರ್ಭದಲ್ಲಿ ನಾನು ಭಗವಾನ್ ಸ್ವಾಮಿನಾರಾಯಣ ಅವರ ಪಾದಗಳಿಗೆ ತಲೆಬಾಗಿ ನಮಸ್ಕರಿಸುತ್ತೇನೆ. ಇಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರ 103ನೇ ಜನ್ಮದಿನ ಆಚರಿಸಲಾಗುತ್ತಿದೆ, ಅವರಿಗೂ ಸಹ ನಾನು ಗೌರವಪೂರ್ವಕವಾಗಿ ನಮಸ್ಕರಿಸುತ್ತೇನೆ, ಏಕೆಂದರೆ ಅವರು ದೈವಿಕ ಗುರು ಹರಿ ಪ್ರಗತ್ ಬ್ರಹ್ಮನ ಮೂರ್ತರೂಪವಾಗಿದ್ದರು. ಭಗವಾನ್ ಸ್ವಾಮಿನಾರಾಯಣ ಅವರ ಬೋಧನೆಗಳು ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ಅವರ ಸಂಕಲ್ಪಗಳು ಮತ್ತು ನಿರ್ಣಯಗಳು ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಅವರ ಅವಿರತ ಪ್ರಯತ್ನ ಮತ್ತು ಸಮರ್ಪಣೆಯ ಮೂಲಕ ಇಂದು ಸಾಕಾರಗೊಳ್ಳುತ್ತಿವೆ. 1 ಲಕ್ಷ ಸ್ವಯಂಸೇವಕರು, ಯುವಕರು ಮತ್ತು ಮಕ್ಕಳನ್ನು ಒಳಗೊಂಡ ಈ ಭವ್ಯವಾದ ಸಾಂಸ್ಕೃತಿಕ ಕಾರ್ಯಕ್ರಮವು ಬೀಜ, ಮರ ಮತ್ತು ಹಣ್ಣುಗಳ ಸಾರವನ್ನು ಸುಂದರವಾಗಿ ಪ್ರತಿನಿಧಿಸುತ್ತಿದೆ. ನಾನು ನಿಮ್ಮ ನಡುವೆ ದೈಹಿಕವಾಗಿ ಇರಲು ಸಾಧ್ಯವಾಗದಿದ್ದರೂ, ಈ ಘಟನೆಯ ಚೈತನ್ಯ ಮತ್ತು ಶಕ್ತಿಯನ್ನು ನನ್ನ ಹೃದಯದಲ್ಲಿ ಆಳವಾಗಿ ಅನುಭವಿಸುತ್ತೇನೆ. ಇಂತಹ ಭವ್ಯವಾದ ಮತ್ತು ದಿವ್ಯವಾದ ಆಚರಣೆಯನ್ನು ಆಯೋಜಿಸಿದ್ದಕ್ಕಾಗಿ ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಮತ್ತು ಎಲ್ಲಾ ಪೂಜ್ಯ ಸಾಧು ಸಂತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಅವರಿಗೆ ಅಪಾರ ಗೌರವದಿಂದ ನಮಸ್ಕರಿಸುತ್ತೇನೆ.ಅಹಮದಾಬಾದ್‌ನಲ್ಲಿ ಕಾರ್ಯಕರ್ತರ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
December 07th, 05:40 pm
ಅಹಮದಾಬಾದ್‌ನಲ್ಲಿ ಆಯೋಜಿತವಾಗಿದ್ದ ಕಾರ್ಯಕರ್ತರ ಸುವರ್ಣ ಮಹೋತ್ಸವವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಉದ್ದೇಶಿಸಿ ಭಾಷಣ ಮಾಡಿದರು. ಪರಮಪೂಜ್ಯ ಗುರು ಹರಿ ಮಹಂತ ಸ್ವಾಮಿ ಮಹಾರಾಜ್, ಪೂಜ್ಯ ಸಾಧು ಸಂತರು ಮತ್ತು ಸತ್ಸಂಗಿ ಕುಟುಂಬದ ಸದಸ್ಯರು ಮತ್ತು ಇತರೆ ಗಣ್ಯರು ಮತ್ತು ಪ್ರತಿನಿಧಿಗಳನ್ನು ಅವರು ಸ್ವಾಗತಿಸಿದರು. ಕಾರ್ಯಕರ್ತರ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಶ್ರೀ ಮೋದಿ ಅವರು ಭಗವಾನ್ ಸ್ವಾಮಿ ನಾರಾಯಣರ ಪಾದಗಳಿಗೆ ನಮಸ್ಕರಿಸಿ, ಇಂದು ಪ್ರಮುಖ್ ಸ್ವಾಮಿ ಮಹಾರಾಜರ 103ನೇ ಜನ್ಮದಿನವೂ ಆಗಿದೆ. ಭಗವಾನ್ ಸ್ವಾಮಿ ನಾರಾಯಣರ ಬೋಧನೆಗಳು, ಪ್ರಮುಖ ಸ್ವಾಮಿ ಮಹಾರಾಜರ ಸಂಕಲ್ಪಗಳು ಪರಮ ಪೂಜ್ಯ ಗುರು ಹರಿಮಹಂತ ಸ್ವಾಮಿ ಮಹಾರಾಜರ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಇಂದು ಫಲ ನೀಡುತ್ತಿವೆ. ಯುವಕರು ಮತ್ತು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಸುಮಾರು 1 ಲಕ್ಷ ಕಾರ್ಯಕರ್ತರು ಸೇರಿದಂತೆ ಇಂತಹ ಬೃಹತ್ ಕಾರ್ಯಕ್ರಮವನ್ನು ವೀಕ್ಷಿಸುತ್ತಿರುವುದು ಸಂತಸ ತಂದಿದೆ. ಸ್ಥಳದಲ್ಲಿ ದೈಹಿಕವಾಗಿ ಇಲ್ಲದಿದ್ದರೂ, ಈ ಕಾರ್ಯಕ್ರಮದ ಶಕ್ತಿಯನ್ನು ಅನುಭವಿಸಬಹುದಾಗಿದೆ. ಮಹಾರಥೋತ್ಸವದಲ್ಲಿ ಭಾಗಿಯಾಗಿರುವ ಪರಮಪೂಜ್ಯ ಗುರು ಹರಿಮಹಾಂತ ಸ್ವಾಮಿ ಮಹಾರಾಜರು, ಸಕಲ ಸಾಧು ಸಂತರಿಗೆ ಅವರು ಶುಭ ಕೋರಿದರು.PM Modi expresses happiness over global enthusiasm towards Indian history and culture
November 28th, 05:31 pm
The Prime Minister Shri Narendra Modi today expressed happiness over global enthusiasm towards Indian history and culture. Prime Minister Shri Narendra Modi said that the Indian culture resonates globally. Sharing the glimpses from his foreign visits, Prime Minister Shri Modi said that this immense enthusiasm towards our history and culture is extremely gladdening.ಅಭಿವೃದ್ಧಿ ಮತ್ತು ಪರಂಪರೆಯೊಂದಿಗೆ ಒಟ್ಟಾಗಿ ಮುಂದುವರಿಯಲು ನಾವು ಬದ್ಧರಾಗಿದ್ದೇವೆ: ಪ್ರಧಾನಮಂತ್ರಿ
November 12th, 07:05 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಗಾಸ್ ಹಬ್ಬದ ಸಂದರ್ಭದಲ್ಲಿ ಎಲ್ಲ ನಾಗರಿಕರಿಗೆ ಶುಭ ಕೋರಿದ್ದಾರೆ. ಅಭಿವೃದ್ಧಿ ಮತ್ತು ಪರಂಪರೆಯೊಂದಿಗೆ ಒಟ್ಟಾಗಿ ಮುಂದುವರಿಯಲು ಭಾರತ ಬದ್ಧವಾಗಿದೆ ಎಂದು ಅವರು ಹೇಳಿದರು. ವಿಶೇಷವಾಗಿ ಉತ್ತರಾಖಂಡದ ನಾಗರಿಕರಿಗೆ ಶುಭ ಕೋರಿದ ಅವರು, ದೇವಭೂಮಿಯ ಇಗಾಸ್ ಹಬ್ಬದ ಪರಂಪರೆ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.ಶ್ರೇಷ್ಠ ನರ್ತಕರು ಮತ್ತು ಸಾಂಸ್ಕೃತಿಕ ದಿಗ್ಗಜ ಶ್ರೀ ಕನಕ ರಾಜು ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
October 26th, 10:36 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೇಷ್ಠ ನೃತ್ಯಗಾರರು ಮತ್ತು ಸಾಂಸ್ಕೃತಿಕ ದಿಗ್ಗಜ ಶ್ರೀ ಕನಕ ರಾಜು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಗುಸ್ಸಾಡಿ ನೃತ್ಯವನ್ನು ಸಂರಕ್ಷಿಸಲು ಅವರು ನೀಡಿದ ಶ್ರೀಮಂತ ಕೊಡುಗೆ ಮತ್ತು ಸಾಂಸ್ಕೃತಿಕ ಪರಂಪರೆಯ ಪ್ರಮುಖ ಅಂಶಗಳು, ಅವುಗಳ ಅಧಿಕೃತ ರೂಪದಲ್ಲಿ ಪ್ರವರ್ಧಮಾನಕ್ಕೆ ಬರುವುದನ್ನು ಖಚಿತಪಡಿಸಿಕೊಳ್ಳಲು ಅವರ ಸಮರ್ಪಣೆ ಮತ್ತು ಉತ್ಸಾಹವನ್ನು ಶ್ರೀ ನರೇಂದ್ರ ಮೋದಿ ಶ್ಲಾಘಿಸಿದರು.ಅಂತಾರಾಷ್ಟ್ರೀಯ ಅಭಿಧಮ್ಮ ದಿನ ಉದ್ಘಾಟಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
October 17th, 10:05 am
ಸಂಸ್ಕೃತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜೀ, ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವರಾದ ಶ್ರೀ ಕಿರೆನ್ ರಿಜಿಜು ಜೀ, ಬಂದಂತ್ ರಾಹುಲ್ ಬೊಧಿ ಮಹಥೆರೋ ಜೀ, ವೆನವರಬಲ್ ಜುಂಗ್ ಚುಪ್ ಚೋಡೆನ್ ಜೀ, ಮಹಾಸಂಘದ ಎಲ್ಲಾ ಗಣ್ಯ ಸದಸ್ಯರೇ, ರಾಯಭಾರಿ ಸಮುದಾಯದ ಸದಸ್ಯರೇ,. ಬೌದ್ಧ ಚಿಂತಕರೇ, ಬೌದ್ಧ ಧರ್ಮದ ಅನುಯಾಯಿಗಳೇ, ಮಹಿಳೆಯರೇ ಮತ್ತು ಮಹನೀಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆ ಎಂದು ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು
October 17th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು. ಅಭಿಧಮ್ಮ ದಿನವನ್ನು ಅಭಿಧಮ್ಮನಿಗೆ ಕಲಿಸಿದ ನಂತರ ಭಗವಾನ್ ಬುದ್ಧನು ಆಕಾಶಲೋಕದಿಂದ ಇಳಿದದ್ದನ್ನು ಸ್ಮರಿಸಲಾಗುತ್ತದೆ. ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಇತ್ತೀಚೆಗೆ ಗುರುತಿಸಿರುವುದು ಈ ವರ್ಷದ ಅಭಿಧಮ್ಮ ದಿವಸ್ ಆಚರಣೆಯ ಮಹತ್ವವನ್ನು ಹೆಚ್ಚಿಸುತ್ತದೆ, ಏಕೆಂದರೆ ಭಗವಾನ್ ಬುದ್ಧನ ಅಭಿಧಮ್ಮದ ಬೋಧನೆಗಳು ಮೂಲತಃ ಪಾಲಿ ಭಾಷೆಯಲ್ಲಿ ಲಭ್ಯವಿದೆ.ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ ಮತ್ತು ಬಂಗಾಳಿ ಭಾಷೆಗಳಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡಲು ಸಂಪುಟ ಅನುಮೋದನೆ
October 03rd, 09:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ ಮತ್ತು ಬಂಗಾಳಿ ಭಾಷೆಗಳಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನವನ್ನು ನೀಡಲು ಅನುಮೋದನೆ ನೀಡಿದೆ. ಶಾಸ್ತ್ರೀಯ ಭಾಷೆಗಳು ಭಾರತದ ಆಳವಾದ ಮತ್ತು ಪ್ರಾಚೀನ ಸಾಂಸ್ಕೃತಿಕ ಪರಂಪರೆಯ ಪಾಲಕರಾಗಿ ಕಾರ್ಯನಿರ್ವಹಿಸುತ್ತವೆ, ಪ್ರತಿ ಸಮುದಾಯದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೈಲಿಗಲ್ಲಿನ ಸಾರವನ್ನು ಪ್ರಸ್ತುತಪಡಿಸುತ್ತವೆ.PM condoles demise of classical dancer Yamini Krishnamurthy
August 04th, 02:14 pm
Prime Minister Shri Narendra Modi today condoled the demise of Indian classical dancer Dr Yamini Krishnamurthy.ಬಿಹಾರದ ರಾಜ್‌ಗಿರ್‌ನಲ್ಲಿ ನಳಂದಾ ವಿಶ್ವವಿದ್ಯಾಲಯದ ಕ್ಯಾಂಪಸ್ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 19th, 10:31 am
ಬಿಹಾರದ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಈ ರಾಜ್ಯಕ್ಕಾಗಿ ಪರಿಶ್ರಮ ಪಡುವ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ನಮ್ಮ ವಿದೇಶಾಂಗ ಸಚಿವ, ಶ್ರೀ ಎಸ್. ಜೈಶಂಕರ್ ಜಿ, ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಶ್ರೀ ಪಬಿತ್ರಾ ಜಿ, ವಿವಿಧ ದೇಶಗಳ ಗಣ್ಯರು ಮತ್ತು ರಾಯಭಾರಿಗಳೆ, ನಳಂದ ವಿಶ್ವವಿದ್ಯಾಲಯದ ಉಪ -ಕುಲಪತಿಗಳು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಮತ್ತು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ನನ್ನ ಎಲ್ಲಾ ಸ್ನೇಹಿತರೆ!ಬಿಹಾರದ ರಾಜ್ ಗಿರ್ ನಲ್ಲಿ ನಳಂದಾ ವಿಶ್ವವಿದ್ಯಾಲಯ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಮಂತ್ರಿ
June 19th, 10:30 am
ಬಿಹಾರದ ರಾಜ್ ಗಿರ್ ನ ನಳಂದಾ ವಿಶ್ವವಿದ್ಯಾಲಯದಲ್ಲಿ ಹೊಸ ಕ್ಯಾಂಪಸ್ ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಭಾರತ ಮತ್ತು ಪೂರ್ವ ಏಷ್ಯಾ ಶೃಂಗಸಭೆ [ಇಎಎಸ್] ದೇಶಗಳೊಂದಿಗೆ ಈ ವಿಶ್ವವಿದ್ಯಾಲಯ ಸಹಯೋಗ ಹೊಂದಿದೆ. ಈ ಉದ್ಘಾಟನಾ ಸಮಾರಂಭದಲ್ಲಿ 17 ಪ್ರಮುಖ ದೇಶಗಳ ಮುಖ್ಯಸ್ಥರು ಒಳಗೊಂಡಂತೆ ಹಲವು ಪ್ರಮುಖ ಗಣ್ಯರು ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಗಿಡ ನೆಟ್ಟು ನೀರೆರದರು.ಏಪ್ರಿಲ್ 26 ರಂದು ಕಮಲದ ಗುಂಡಿಗೆ ನಿಮ್ಮ ಮತವು ಭ್ರಷ್ಟಾಚಾರದ ವಿರುದ್ಧ ನಡೆಯುತ್ತಿರುವ ಚಳುವಳಿಯನ್ನು ಬಲಪಡಿಸುತ್ತದೆ: ಅಟ್ಟಿಂಗಲ್‌ನಲ್ಲಿ ಪ್ರಧಾನ ಮಂತ್ರಿ
April 15th, 11:35 am
ಅಟ್ಟಿಂಗಲ್‌ನಲ್ಲಿ ನಡೆದ ಎರಡನೇ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ, ಬಿಜೆಪಿ ತನ್ನ ಸಂಕಲ್ಪ ಪತ್ರದಲ್ಲಿ ನಮ್ಮ ಪರಂಪರೆಯೊಂದಿಗೆ ಜಾಗತಿಕ ಪ್ರವಾಸಿಗರನ್ನು ಸಂಪರ್ಕಿಸುತ್ತೇವೆ ಮತ್ತು ನಮ್ಮ ಪರಂಪರೆಯ ಮೇಲೆ ವಿಶ್ವ ಪರಂಪರೆಯ ಸ್ಥಾನಮಾನವನ್ನು ನೀಡುತ್ತೇವೆ ಎಂದು ಘೋಷಿಸಿದೆ. ಕೇರಳದಲ್ಲಿ ಇದು ಸಂಭವಿಸುವ ದೊಡ್ಡ ಸಾಧ್ಯತೆಯಿದೆ. ಬಿಜೆಪಿಯ ಯೋಜನೆಯು ಕೇರಳದಲ್ಲಿ ಪರಿಸರ ಪ್ರವಾಸೋದ್ಯಮಕ್ಕಾಗಿ ಹೊಸ ಕೇಂದ್ರಗಳನ್ನು ಸ್ಥಾಪಿಸುತ್ತದೆ, ಇದು ಮಹಿಳೆಯರಿಗೆ ಅವಕಾಶಗಳನ್ನು ಸೃಷ್ಟಿಸುವ ಮೂಲಕ ಅವರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ .ಬಿಜೆಪಿಯ ಸಂಕಲ್ಪ ಪತ್ರ ದೇಶದ ಅಭಿವೃದ್ಧಿಗೆ ಸಂಕಲ್ಪ ಪತ್ರ: ಆಲತ್ತೂರಿನಲ್ಲಿ ಪ್ರಧಾನಿ ಮೋದಿ
April 15th, 11:30 am
ಲೋಕಸಭೆ ಚುನಾವಣೆ, 2024 ರ ಮೊದಲು, ಕೇರಳದ ತ್ರಿಶೂರ್‌ನ ಅಲತ್ತೂರ್ ಪಟ್ಟಣದಲ್ಲಿ ಸಾರ್ವಜನಿಕ ರ್‍ಯಾಲಿಯಲ್ಲಿ ಪಿಎಂ ಮೋದಿ ಪ್ರೀತಿ ಮತ್ತು ಮೆಚ್ಚುಗೆಯನ್ನು ಪಡೆದರು. ಪ್ರಧಾನಮಂತ್ರಿಯವರು ವಿಷು ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ತಿಳಿಸಿದರು ಮತ್ತು ಕೇರಳದ ಬಗ್ಗೆ ತಮ್ಮ ಪಾರದರ್ಶಕ ದೃಷ್ಟಿಯನ್ನು ಪ್ರೇಕ್ಷಕರಿಗೆ ಪ್ರಸ್ತುತಪಡಿಸಿದರು. ಪಿಎಂ ಮೋದಿ ಅವರು ಬಿಜೆಪಿಯ ಸಂಕಲ್ಪ ಪತ್ರದ ಒಂದು ನೋಟವನ್ನು ನೀಡಿದರು, ರಾಷ್ಟ್ರದ ಮೂಲೆ ಮೂಲೆಗೆ ಪ್ರಗತಿ ಮತ್ತು ಸಮೃದ್ಧಿಯ ವಾಗ್ದಾನ ಮಾಡಿದರು.ಕೇರಳದ ಅಲತ್ತೂರ್ ಮತ್ತು ಅಟ್ಟಿಂಗಲ್‌ನಲ್ಲಿ ಸಾರ್ವಜನಿಕ ಸಭೆಗಳಲ್ಲಿ ಉತ್ಸಾಹಭರಿತ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
April 15th, 11:00 am
ಲೋಕಸಭೆ ಚುನಾವಣೆ, 2024 ರ ಮೊದಲು, ಕೇರಳದ ಅಲತ್ತೂರ್ ಮತ್ತು ಅಟ್ಟಿಂಗಲ್‌ನಲ್ಲಿ ಸಾರ್ವಜನಿಕ ರ್‍ಯಾಲಿಗಳಲ್ಲಿ ಪಿಎಂ ಮೋದಿ ಪ್ರೀತಿ ಮತ್ತು ಮೆಚ್ಚುಗೆಯನ್ನು ಪಡೆದರು. ಪ್ರಧಾನಮಂತ್ರಿಯವರು ವಿಷು ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ತಿಳಿಸಿದರು ಮತ್ತು ಕೇರಳದ ಬಗ್ಗೆ ತಮ್ಮ ಪಾರದರ್ಶಕ ದೃಷ್ಟಿಯನ್ನು ಪ್ರೇಕ್ಷಕರಿಗೆ ಪ್ರಸ್ತುತಪಡಿಸಿದರು. ಪಿಎಂ ಮೋದಿ ಅವರು ಬಿಜೆಪಿಯ ಸಂಕಲ್ಪ ಪತ್ರದ ಒಂದು ನೋಟವನ್ನು ನೀಡಿದರು, ರಾಷ್ಟ್ರದ ಮೂಲೆ ಮೂಲೆಗೆ ಪ್ರಗತಿ ಮತ್ತು ಸಮೃದ್ಧಿಯ ವಾಗ್ದಾನ ಮಾಡಿದರು.ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲು ಪ್ರಧಾನಿ ಮೋದಿಯವರ ಭಗೀರಥ ಪ್ರಾರ್ಥನೆ: ಏನಾಗಿತ್ತು, ಏನಾಗಿದೆ ಎಂಬುದರ ಗ್ಲಿಂಪ್ಸಸ್
March 14th, 04:47 pm
ದೇಶದ ಸಾಂಸ್ಕೃತಿಕ ಪರಂಪರೆಯ ತಾಣಗಳನ್ನು ರಕ್ಷಿಸಲು ಮತ್ತು ಸಂರಕ್ಷಿಸಲು ಮೋದಿ ಸರ್ಕಾರವು ಗಮನಾರ್ಹ ಉಪಕ್ರಮವನ್ನು ತೆಗೆದುಕೊಂಡಿದೆ. ಈ ಸೈಟ್‌ಗಳಲ್ಲಿನ ರೂಪಾಂತರಗಳು ದೃಶ್ಯ ಉಪಚಾರವನ್ನು ನೀಡುತ್ತವೆ ಮತ್ತು ಹಿಂದಿನಿಂದ ಇಂದಿನವರೆಗೆ ಅವುಗಳ ವಿಕಾಸವನ್ನು ಸ್ಪಷ್ಟವಾಗಿ ಪ್ರದರ್ಶಿಸುತ್ತವೆ. ಭಾರತದ ಶ್ರೀಮಂತ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲು ಮತ್ತು ಆಚರಿಸಲು ಪ್ರಧಾನ ಮಂತ್ರಿಯವರ ನಿರಂತರ ಪ್ರಯತ್ನಗಳು ಅಥವಾ ಪ್ರಯಾಸ್ ನಿಂದ ಈ ಪರಿವರ್ತನೆಗಳು ಉಂಟಾಗುತ್ತವೆ. ನಾವು ನೋಡೋಣ..ಯುಎಇಯ ಅಬುಧಾಬಿಯಲ್ಲಿ ಬಿಎಪಿಎಸ್ ಹಿಂದೂ ಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 14th, 07:16 pm
ಶ್ರೀ ಸ್ವಾಮಿ ನಾರಾಯಣ್ ಜೈ ದೇವ್, ಗೌರವಾನ್ವಿತ ಶೇಖ್ ನಹ್ಯಾನ್ ಅಲ್ ಮುಬಾರಕ್, ಗೌರವಾನ್ವಿತ ಮಹಂತ್ ಸ್ವಾಮಿ ಜೀ ಮಹಾರಾಜ್, ಭಾರತ, ಯುಎಇ ಮತ್ತು ವಿಶ್ವದಾದ್ಯಂತದ ವಿವಿಧ ದೇಶಗಳ ಗೌರವಾನ್ವಿತ ಅತಿಥಿಗಳು ಮತ್ತು ವಿಶ್ವದ ಮೂಲೆ ಮೂಲೆಗಳಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ನನ್ನ ಸಹೋದರ ಸಹೋದರಿಯರೇ!PM Modi inaugurates BAPS Hindu Mandir in Abu Dhabi, UAE
February 14th, 06:51 pm
Prime Minister Narendra Modi inaugurated the BAPS Hindu Mandir in Abu Dhabi, UAE. The PM along with the Mukhya Mahant of BAPS Hindu Mandir performed all the rituals. The PM termed the Hindu Mandir in Abu Dhabi as a symbol of shared heritage of humanity.Prime Minister’s meeting with President of the UAE
February 13th, 05:33 pm
Prime Minister Narendra Modi arrived in Abu Dhabi on an official visit to the UAE. In a special and warm gesture, he was received at the airport by the President of the UAE His Highness Sheikh Mohamed bin Zayed Al Nahyan, and thereafter, accorded a ceremonial welcome. The two leaders held one-on-one and delegation level talks. They reviewed the bilateral partnership and discussed new areas of cooperation.