ಮಾರ್ಚ್ 24ರಂದು ವಾರಣಾಸಿಗೆ ಪ್ರಧಾನ ಮಂತ್ರಿ ಭೇಟಿ

March 22nd, 04:07 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 24ರಂದು ವಾರಾಣಸಿಗೆ ಭೇಟಿ ನೀಡಲಿದ್ದು, ಅಂದು ಬೆಳಗ್ಗೆ 10:30ಕ್ಕೆ ರುದ್ರಕಾಶ್ ಕನ್ವೆನ್ಷನ್ ಸೆಂಟರ್‌ನಲ್ಲಿ ಏಕ ವಿಶ್ವ(ಒನ್ ವರ್ಲ್ಡ್) ಕ್ಷಯರೋಗ(ಟಿಬಿ) ಶೃಂಗಸಭೆ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನಮಂತ್ರಿ ಅವರು ಸಂಪೂರ್ಣಾನಂದ ಸಂಸ್ಕೃತ ವಿಶ್ವವಿದ್ಯಾಲಯ ಮೈದಾನದಲ್ಲಿ 1,780 ಕೋಟಿ ರೂ.ಗಿಂತ ಅಧಿಕ ಮೊತ್ತದ ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಪೆಟ್ರೋಲಿಯಂ ಕ್ಷೇತ್ರಕ್ಕೆ ಸಂಬಂಧಿಸಿದ ಬಿಹಾರದ ಮೂರು ಪ್ರಮುಖ ಯೋಜನೆಗಳ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಪ್ರಧಾನಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

September 13th, 12:01 pm

ಕಾರ್ಯಕ್ರಮದ ಪ್ರಾರಂಭದಲ್ಲಿ ನಾನು ನಿಮ್ಮೊಂದಿಗೆ ಬಹಳ ದುಃಖದ ಸುದ್ದಿಯನ್ನು ಹಂಚಿಕೊಳ್ಳಬೇಕಾಗಿದೆ. ಬಿಹಾರದ ಹಿರಿಯ ನಾಯಕ ಶ್ರೀ ರಘುವಂಶ ಪ್ರಸಾದ್ ಸಿಂಗ್ ನಮ್ಮನ್ನು ಅಗಲಿದ್ದಾರೆ. ಅವರಿಗೆ ನನ್ನ ಗೌರವ ನಮನಗಳು. ರಘುವಂಶ್ ಬಾಬು ಅವರ ನಿಧನದಿಂದಾಗಿ ಬಿಹಾರ ಮತ್ತು ದೇಶದ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರು ಬೇರುಗಳೊಂದಿಗೆ ಸಂಪರ್ಕ ಹೊಂದಿದ್ದರು, ಅವರು ಬಡತನವನ್ನು ಅರ್ಥಮಾಡಿಕೊಂಡವರು ಮತ್ತು ಅವರು ತಮ್ಮ ಇಡೀ ಜೀವನವನ್ನು ಬಿಹಾರಕ್ಕಾಗಿ ಮುಡುಪಾಗಿಟ್ಟಿದ್ದರು. ಅವರು ತಮ್ಮ ಜೀವನದುದ್ದಕ್ಕೂ ತಾವು ನಂಬಿದ ಸಿದ್ಧಾಂತವನ್ನು ಬದುಕಲು ಪ್ರಯತ್ನಿಸಿದರು.

ಪೆಟ್ರೋಲಿಯಂ ವಲಯಕ್ಕೆ ಸಂಬಂಧಿಸಿದ ಬಿಹಾರದ ಮೂರು ಪ್ರಮುಖ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ ನರೇಂದ್ರ ಮೋದಿ

September 13th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪೆಟ್ರೋಲಿಯಂ ವಲಯಕ್ಕೆ ಸಂಬಂಧಿಸಿದ ಬಿಹಾರದಲ್ಲಿನ ಮೂರು ಪ್ರಮುಖ ಯೋಜನೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ರಾಷ್ಟ್ರಕ್ಕೆ ಸಮರ್ಪಿಸಿದರು.

ವಡೋದರದಲ್ಲಿ ಅಭಿವೃದ್ಧಿ ಉಪಕ್ರಮಗಳಿಗೆ ಚಾಲನೆ ನೀಡಿದ ಪ್ರಧಾನಿ

October 22nd, 05:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ವಡೋದರಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ವಡೋದರಾ ನಗರದ ಕಮಾಂಡ್ ನಿಯಂತ್ರಣ ಕೇಂದ್ರ; ವಗೋಡಿಯಾ ಪ್ರಾದೇಶಿಕ ನೀರು ಸರಬರಾಜು ಯೋಜನೆ; ಮತ್ತು ಬ್ಯಾಂಕ್ ಆಫ್ ಬರೋಡಾದ ನೂತನ ಪ್ರಧಾನ ಕಚೇರಿ ಕಟ್ಟಡವನ್ನು ದೇಶಕ್ಕೆ ಸಮರ್ಪಿಸಿದರು.

ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಿ, ಘೋಗಾ ಮತ್ತು ದಹೇಜ್ ನಡುವೆ ರೋ ರೋ ದೋಣಿ ಸೇವೆಯ ಮೊದಲ ಹಂತಕ್ಕೆ ನೀಡಲಿದ್ದಾರೆ ಚಾಲನೆ

October 21st, 06:17 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಾಳೆ – 2017ರ ಅಕ್ಟೋಬರ್ 22ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಘೋಗಾದಲ್ಲಿ ಸಾರ್ವಜನಿಕ ಸಭೆಯಲ್ಲಿ, ಪ್ರಧಾನಮಂತ್ರಿ ಅವರು ರೋ ರೋ (ರೋಲ್ ಆನ್ ರೋಲ್ ಆಫ್) ಘೋಗಾ ಮತ್ತು ದಹೇಜ್ ನಡುವಿನ ದೋಣಿ ಸೇವೆಯ ಮೊದಲ ಹಂತವನ್ನು ಉದ್ಘಾಟಿಸಲಿದ್ದಾರೆ.