2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ನಮನ
December 13th, 10:21 am
2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಗೌರವ ನಮನ ಸಲ್ಲಿಸಿದ್ದಾರೆ.ಸುಬ್ರಮಣ್ಯ ಭಾರತಿ ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 11th, 10:27 am
ಕವಿ ಮತ್ತು ಬರಹಗಾರ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.ಮಹಾಪರಿನಿರ್ವಾಣ ದಿನದ ಅಂಗವಾಗಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ
December 06th, 09:27 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾಪರಿನಿರ್ವಾಣ ದಿನದ ಅಂಗವಾಗಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಅವರಿಗೆ ಇಂದು ಗೌರವ ನಮನ ಸಲ್ಲಿಸಿದರು. ಸಮಾನತೆ ಮತ್ತು ಮಾನವ ಘನತೆಗಾಗಿ ಡಾ. ಅಂಬೇಡ್ಕರ್ ಅವರ ಅವಿರತ ಹೋರಾಟವು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡಲಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.ಡಾ. ಹರೇಕೃಷ್ಣ ಮಹತಾಬ್ ಜೀಯವರು ಭಾರತವನ್ನು ಸ್ವತಂತ್ರಗೊಳಿಸಿ ಪ್ರತಿಯೊಬ್ಬ ಭಾರತೀಯನಿಗೂ ಘನತೆ ಮತ್ತು ಸಮಾನತೆಯ ಜೀವನವನ್ನು ನೀಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಅತ್ಯುನ್ನತ ವ್ಯಕ್ತಿತ್ವ: ಪ್ರಧಾನಮಂತ್ರಿ
November 22nd, 03:11 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಡಾ. ಹರೇಕೃಷ್ಣ ಮಹಾತಾಬ್ ಜೀ ಅವರನ್ನು ಭಾರತವನ್ನು ಸ್ವತಂತ್ರಗೊಳಿಸಿ, ಪ್ರತಿಯೊಬ್ಬ ಭಾರತೀಯನಿಗೂ ಘನತೆ ಮತ್ತು ಸಮಾನತೆಯ ಜೀವನವನ್ನು ನೀಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಅತ್ಯುನ್ನತ ವ್ಯಕ್ತಿತ್ವ ಎಂದು ಶ್ಲಾಘಿಸಿದ್ದಾರೆ. ಅವರ 125ನೇ ಜನ್ಮ ದಿನಾಚರಣೆಯಂದು ಗೌರವ ನಮನ ಸಲ್ಲಿಸಿದ ಶ್ರೀ ಮೋದಿಯವರು, ಡಾ. ಮಹತಾಬ್ ಅವರ ಆದರ್ಶಗಳನ್ನು ಈಡೇರಿಸುವುದು ಸರ್ಕಾರದ ಬದ್ಧತೆ ಎಂದು ಹೇಳಿದರು.ಭಾರತೀಯ ಸ್ಮಾರಕಕ್ಕೆ ಪ್ರಧಾನಮಂತ್ರಿ ಭೇಟಿ
November 21st, 10:00 pm
ಅವರ ಜೊತೆಗೆ ಗಯಾನಾ ಪ್ರಧಾನಿ ಬ್ರಿಗೇಡಿಯರ್ (ನಿವೃತ್ತ) ಮಾರ್ಕ್ ಫಿಲಿಪ್ಸ್ ಇದ್ದರು. ಈ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಮಂತ್ರಿ ಅವರನ್ನು ಟಾಸ್ಸಾ ಡ್ರಮ್ಸ್ನ ಮೇಳ ಸ್ವಾಗತಿಸಿತು.ಮಹಾತ್ಮಾ ಗಾಂಧಿ ಅವರಿಗೆ ಪ್ರಧಾನಮಂತ್ರಿ ನಮನ
November 21st, 09:57 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗಯಾನಾದ ಜಾರ್ಜ್ಟೌನ್ನಲ್ಲಿರುವ ಐತಿಹಾಸಿಕ ವಾಯುವಿಹಾರ ಉದ್ಯಾನವನದಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಗೆ ನಮನ ಸಲ್ಲಿಸಿದರು.ಶ್ರೀ ಬಾಳಾಸಾಹೇಬ್ ಠಾಕ್ರೆ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
November 17th, 01:22 pm
ಶ್ರೀ ಬಾಳಾಸಾಹೇಬ್ ಠಾಕ್ರೆ ಅವರ ಪುಣ್ಯ ತಿಥಿಯಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೌರವ ನಮನ ಸಲ್ಲಿಸಿದರು. ಶ್ರೀ ಠಾಕ್ರೆ ಅವರು ಮಹಾರಾಷ್ಟ್ರದ ಅಭಿವೃದ್ಧಿ ಮತ್ತು ಮರಾಠಿ ಜನತೆಯ ಸಬಲೀಕರಣದ ಕಾರಣಕ್ಕಾಗಿ ಹೋರಾಡಿದ, ಹಾಗೂ ದೂರದೃಷ್ಟಿ ಹೊಂದಿದ್ದ ವ್ಯಕ್ತಿಯಾಗಿದ್ದರು ಎಂದು ಶ್ರೀ ಮೋದಿ ಅವರು ಹೇಳಿದರು.ಬೋಡೋಫಾ ಉಪೇಂದ್ರನಾಥ ಬ್ರಹ್ಮಾವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
November 15th, 11:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೋಡೋಫಾ ಉಪೇಂದ್ರನಾಥ ಬ್ರಹ್ಮಾವರ ಅವರಿಗೆ ಗೌರವ ಸಲ್ಲಿಸಿ ಅವರ ಜೀವನ ಪಯಣವು ಹಲವರಿಗೆ ಶಕ್ತಿ ನೀಡುತ್ತದೆ ಎಂದಿದ್ದಾರೆ.ಶ್ರೀ ಜವಾಹರಲಾಲ್ ನೆಹರೂ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿಯವರಿಂದ ಗೌರವ ನಮನ
November 14th, 08:52 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ಜವಾಹರಲಾಲ್ ನೆಹರೂ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಶ್ರೀ ರಾಮ್ ವಿಲಾಸ್ ಪಾಸ್ವಾನ್ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 08th, 02:52 pm
ಶ್ರೀ ರಾಮ್ ವಿಲಾಸ್ ಪಾಸ್ವಾನ್ ಜಿ ಅವರ ಪುಣ್ಯ ತಿಥಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಶ್ರೀ ರಾಮ್ ವಿಲಾಸ್ ಜಿ ಅವರು ಅತ್ಯುತ್ತಮ ನಾಯಕರಾಗಿದ್ದರು, ಬಡವರ ಸಬಲೀಕರಣಕ್ಕಾಗಿ ಸಂಪೂರ್ಣವಾಗಿ ಬದ್ಧರಾಗಿದ್ದರು ಮತ್ತು ಬಲಿಷ್ಠ ಹಾಗೂ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಸಮರ್ಪಿತರಾಗಿದ್ದರು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.ಸಂತ ಶ್ರೀ ಸೇವಾಲಾಲ್ ಜಿ ಮಹಾರಾಜರಿಗೆ ಪ್ರಧಾನಮಂತ್ರಿ ನಮನ
October 05th, 02:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತ ಶ್ರೀ ಸೇವಾಲಾಲ್ ಮಹಾರಾಜರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ಶ್ರೀ ಸೇವಾ ಲಾಲ್ ಅವರು ಸಮಾಜ ಸುಧಾರಣೆ ಮತ್ತು ಆಧ್ಯಾತ್ಮಿಕ ಮಾರ್ಗದರ್ಶನದ ಸೆಲೆ ಎಂದು ಪ್ರಧಾನಮಂತ್ರಿ ಬಣ್ಣಿಸಿದ್ದಾರೆ.ಕೈವ್ನಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಪ್ರಧಾನಿ ಮೋದಿ
August 23rd, 03:25 pm
ಪ್ರಧಾನಿ ಮೋದಿ ಅವರು ಕೈವ್ನಲ್ಲಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದರು. ಸೌಹಾರ್ದಯುತ ಸಮಾಜವನ್ನು ನಿರ್ಮಿಸುವಲ್ಲಿ ಮಹಾತ್ಮ ಗಾಂಧಿಯವರ ಶಾಂತಿಯ ಸಂದೇಶದ ಕಾಲಾತೀತ ಪ್ರಸ್ತುತತೆಯನ್ನು ಪ್ರಧಾನಿ ಒತ್ತಿ ಹೇಳಿದರು. ಅವರು ತೋರಿಸಿದ ಮಾರ್ಗವು ಇಂದಿನ ಜಾಗತಿಕ ಸವಾಲುಗಳಿಗೆ ಪರಿಹಾರಗಳನ್ನು ನೀಡಿತು ಎಂದು ಅವರು ಗಮನಿಸಿದರು.ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗವಹಿಸಿದ ಸರ್ವರಿಗೂ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ
August 09th, 08:58 am
ಮಹಾತ್ಮಾ ಗಾಂಧಿಯವರ ನಾಯಕತ್ವದಲ್ಲಿ ನಡೆದ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. ಭಾರತ ಬಿಟ್ಟು ತೊಲಗಿ ಚಳವಳಿಯ ಕುರಿತ ದೃಶ್ಯದ ತುಣುಕನ್ನು ಕೂಡಾ ಶ್ರೀ ಮೋದಿ ಅವರು ಹಂಚಿಕೊಂಡಿದ್ದಾರೆ.25 ನೇ ಕಾರ್ಗಿಲ್ ವಿಜಯ ದಿವಸ: ಜುಲೈ 26ರಂದು ಕಾರ್ಗಿಲ್ ಗೆ ಪ್ರಧಾನಮಂತ್ರಿ ಮೋದಿ ಭೇಟಿ
July 25th, 10:28 am
ನಾಳೆ ಜುಲೈ 26ರಂದು 25ನೇ ಕಾರ್ಗಿಲ್ ವಿಜಯ ದಿವಸ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೆಳಗ್ಗೆ ಸುಮಾರು 9:20ಕ್ಕೆ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಕರ್ತವ್ಯದ ವೇಳೆ ದೇಶಕ್ಕೆ ಅತ್ಯುನ್ನತ ತ್ಯಾಗ ಮಾಡಿದ ಧೀರ ಯೋಧರ ಸ್ಮಾರಕಗಳಿಗೆ ನಮನ ಸಲ್ಲಿಸಲಿದ್ದಾರೆ. ನಂತರ ಪ್ರಧಾನಮಂತ್ರಿ ಅವರು ಶಿಂಕುನ್ ಲಾ ಸುರಂಗ ಯೋಜನೆ ಕಾಮಗಾರಿಯನ್ನು ವರ್ಚುವಲ್ ಮಾದರಿಯಲ್ಲಿ ಮೊದಲ ಸ್ಫೋಟ ನಡೆಸುವ ಮೂಲಕ ಆರಂಭಿಸಲಿದ್ದಾರೆ.ʼಸಂವಿಧಾನ ಹತ್ಯಾ ದಿವಸʼವು ಭಾರತದ ಸಂವಿಧಾನವನ್ನು ಯಾವಾಗ ದಮನಿಸಲಾಯಿತು ಎನ್ನುವುದನ್ನು ನೆನಪಿಸುತ್ತದೆ: ಪ್ರಧಾನಮಂತ್ರಿ
July 12th, 05:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 25 ಅನ್ನು ʼಸಂವಿಧಾನ್ ಹತ್ಯಾ ದಿವಸ್ʼ ಎಂದು ಘೋಷಿಸುವುದು ಭಾರತದ ಸಂವಿಧಾನವನ್ನು ದಮನಿಸಿದ ಕಾಲವನ್ನು ನೆನಪಿಸುತ್ತದೆ ಎಂದು ಹೇಳಿದ್ದಾರೆ.ಸ್ವಾಮಿ ವಿವೇಕಾನಂದರ ಪುಣ್ಯ ತಿಥಿ ಅಂಗವಾಗಿ ಪ್ರಧಾನಮಂತ್ರಿ ಗೌರವ ನಮನ
July 04th, 09:44 am
ಸ್ವಾಮಿ ವಿವೇಕಾನಂದರ ಪುಣ್ಯತಿಥಿ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.ಒಡಿಶಾ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಜನ್ಮದಿನಾಚರಣೆ: ಪ್ರಧಾನಿ ಮೋದಿ ಗೌರವ
March 05th, 09:44 am
ಒಡಿಶಾ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಜನ್ಮದಿನದಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.ಪುಲ್ವಾಮಾದಲ್ಲಿ ಹುತಾತ್ಮರಾದ ಧೈರ್ಯಶಾಲಿ ವೀರರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ
February 14th, 11:10 am
ಪುಲ್ವಾಮಾದಲ್ಲಿ 2019ರಲ್ಲಿ ಹುತಾತ್ಮರಾದ ಧೈರ್ಯಶಾಲಿ ವೀರರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮರಿಸಿದ್ದಾರೆಮಾಜಿ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿಯವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿಯವರು ಅವರಿಗೆ ಗೌರವ ನಮನ ಸಲ್ಲಿಸಿದರು
December 11th, 10:41 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಮಾಜಿ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿಯವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮಹಾಪರಿನಿರ್ವಾಣ ದಿನ: ಪ್ರಧಾನ ಮಂತ್ರಿ ನಮನ
December 06th, 08:19 am
ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದಂದು ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನಮನ ಸಲ್ಲಿಸಿದ್ದಾರೆ.