ಕರ್ನಾಟಕದ ಹುಬ್ಬಳ್ಳಿ-ಧಾರವಾಡದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 12th, 04:01 pm
ಈ ವರ್ಷದ ಆರಂಭದಲ್ಲೂ ಹುಬ್ಬಳ್ಳಿಗೆ ಭೇಟಿ ನೀಡುವ ಅವಕಾಶ ನನಗೆ ಸಿಕ್ಕಿತ್ತು. ಹುಬ್ಬಳ್ಳಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರು ರಸ್ತೆಬದಿಯಲ್ಲಿ ನಿಂತು ನನ್ನ ಮೇಲೆ ಇಷ್ಟೊಂದು ಪ್ರೀತಿ ಮತ್ತು ಆಶೀರ್ವಾದಗಳನ್ನು ಸುರಿಸಿದ ರೀತಿಯನ್ನು ನಾನು ಎಂದಿಗೂ ಮರೆಯುವುದಿಲ್ಲ. ಈ ಹಿಂದೆ ಕರ್ನಾಟಕದ ವಿವಿಧ ಭಾಗಗಳಿಗೆ ಭೇಟಿ ನೀಡುವ ಅವಕಾಶ ನನಗೆ ಸಿಕ್ಕಿತ್ತು. ಬೆಂಗಳೂರಿನಿಂದ ಬೆಳಗಾವಿಯವರೆಗೆ, ಕಲಬುರಗಿಯಿಂದ ಶಿವಮೊಗ್ಗದವರೆಗೆ, ಮೈಸೂರಿನಿಂದ ತುಮಕೂರಿನವರೆಗೆ ಕನ್ನಡಿಗರು ನನಗೆ ನಿರಂತರವಾಗಿ ನೀಡಿದ ಪ್ರೀತಿ, ವಾತ್ಸಲ್ಯ ಮತ್ತು ಆಶೀರ್ವಾದ ನಿಜಕ್ಕೂ ಅಗಾಧವಾಗಿದೆ. ನಾನು ನಿಮ್ಮ ಪ್ರೀತಿಗೆ ಚಿರಋಣಿಯಾಗಿದ್ದೇನೆ ಮತ್ತು ಕರ್ನಾಟಕದ ಜನರಿಗೆ ನಿರಂತರವಾಗಿ ಸೇವೆ ಸಲ್ಲಿಸುವ ಮೂಲಕ ಈ ಋಣವನ್ನು ತೀರಿಸುತ್ತೇನೆ. ಕರ್ನಾಟಕದ ಪ್ರತಿಯೊಬ್ಬ ವ್ಯಕ್ತಿಯು ಸಂತೃಪ್ತ ಜೀವನವನ್ನು ಹೊಂದಿದ್ದಾನೆ ಎಂದು ಖಚಿತಪಡಿಸಿಕೊಳ್ಳುವ ದಿಕ್ಕಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ; ಇಲ್ಲಿನ ಯುವಕರು ಮುಂದೆ ಸಾಗುತ್ತಿದ್ದಾರೆ ಮತ್ತು ನಿಯಮಿತವಾಗಿ ಹೊಸ ಉದ್ಯೋಗಾವಕಾಶಗಳನ್ನು ಪಡೆಯುತ್ತಿದ್ದಾರೆ. ಇಲ್ಲಿನ ಸಹೋದರಿಯರು ಮತ್ತು ಹೆಣ್ಣುಮಕ್ಕಳು ಉತ್ತಮ ರೀತಿಯಲ್ಲಿ ಸಶಕ್ತರಾಗಿದ್ದಾರೆ. ಬಿಜೆಪಿಯ ಡಬಲ್ ಎಂಜಿನ್ ಸರಕಾರವು ಕರ್ನಾಟಕದ ಪ್ರತಿ ಜಿಲ್ಲೆ, ಪ್ರತಿ ಗ್ರಾಮ ಮತ್ತು ಪ್ರತಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿದೆ. ಇಂದು ಧಾರವಾಡದ ಈ ಭೂಮಿಯಲ್ಲಿ ಅಭಿವೃದ್ಧಿಯ ಹೊಸ ಪ್ರವಾಹವು ಹೊರಹೊಮ್ಮುತ್ತಿದೆ. ಈ ಅಭಿವೃದ್ಧಿಯ ಪ್ರವಾಹವು ಹುಬ್ಬಳ್ಳಿ, ಧಾರವಾಡ ಮತ್ತು ಇಡೀ ಕರ್ನಾಟಕದ ಭವಿಷ್ಯವನ್ನು ಉಜ್ವಲಗೊಳಿಸುತ್ತದೆ ಮತ್ತು ಅರಳಿಸುತ್ತದೆ.ಕರ್ನಾಟಕದ ಹುಬ್ಬಳ್ಳಿ-ಧಾರವಾಡದಲ್ಲಿ ಪ್ರಮುಖ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ರಾಷ್ಟ್ರ ಸಮರ್ಪಣೆ ಮಾಡಿದ ಪ್ರಧಾನಮಂತ್ರಿ
March 12th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಹುಬ್ಬಳ್ಳಿ-ಧಾರವಾಡದಲ್ಲಿ ಪ್ರಮುಖ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. 2019ರ ಫೆಬ್ರವರಿಯಲ್ಲಿ ಪ್ರಧಾನಮಂತ್ರಿಯವರು ಶಂಕುಸ್ಥಾಪನೆ ಮಾಡಿದ್ದ ಐಐಟಿ ಧಾರವಾಡ, ವಿಶ್ವದ ಅತಿ ದೊಡ್ಡ ರೈಲ್ವೆ ಪ್ಲಾಟ್‌ಫಾರ್ಮ್ ಎಂದು ಗಿನ್ನೆಸ್ ವಿಶ್ವದಾಖಲೆಯ ಪುಸ್ತಕದಲ್ಲಿ ಮಾನ್ಯತೆ ಪಡೆದಿರುವ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ನಿಲ್ದಾಣದ 1507 ಮೀಟರ್ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್, ಹೊಸಪೇಟೆ-ಹುಬ್ಬಳ್ಳಿ-ತಿನೈಘಾಟ್ ವಿಭಾಗದ ವಿದ್ಯುದ್ದೀಕರಣ ಮತ್ತು ಹೊಸಪೇಟೆ ರೈಲು ನಿಲ್ದಾಣದ ಉನ್ನತೀಕರಣ ಯೋಜನೆಗಳ ರಾಷ್ಟ್ರ ಸಮರ್ಪಣೆ ಇದರಲ್ಲಿ ಸೇರಿವೆ. ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿಯ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನೂ ಪ್ರಧಾನಮಂತ್ರಿಯವರು ನೆರವೇರಿಸಿದರು. ಜಯದೇವ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಧಾರವಾಡ ಬಹುಗ್ರಾಮ ನೀರು ಸರಬರಾಜು ಯೋಜನೆ ಹಾಗೂ ತುಪ್ಪರಿಹಳ್ಳ ಪ್ರವಾಹ ಹಾನಿ ನಿಯಂತ್ರಣ ಯೋಜನೆಗೆ ಶಂಕುಸ್ಥಾಪನೆಯನ್ನು ಪ್ರಧಾನಿಯವರು ನೆರವೇರಿಸಿದರು.ಮಾರ್ಚ್ 12 ರಂದು ಕರ್ನಾಟಕದ ಮಂಡ್ಯ ಮತ್ತು ಹುಬ್ಬಳ್ಳಿ-ಧಾರವಾಡಕ್ಕೆ ಪ್ರಧಾನಿ ಭೇಟಿ
March 10th, 01:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಸುಮಾರು 16,000 ಕೋಟಿ ರೂ. ವೆಚ್ಚದ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಪ್ರಧಾನಮಂತ್ರಿಯವರು ಮಧ್ಯಾಹ್ನ 12 ಗಂಟೆಗೆ ಮಂಡ್ಯದಲ್ಲಿ ಪ್ರಮುಖ ರಸ್ತೆ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ನಂತರ ಮಧ್ಯಾಹ್ನ 3:15ಕ್ಕೆ ಹುಬ್ಬಳ್ಳಿ-ಧಾರವಾಡದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಕರ್ನಾಟಕದ ಹುಬ್ಬಳ್ಳಿಯಲ್ಲಿ ಜರುಗಿದ 26ನೇ ರಾಷ್ಟ್ರೀಯ ಯುವಜನೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
January 12th, 04:30 pm
ಕರ್ನಾಟಕದ ಈ ಪ್ರದೇಶವು ತನ್ನ ಸಂಪ್ರದಾಯ, ಸಂಸ್ಕೃತಿ ಮತ್ತು ಜ್ಞಾನಕ್ಕೆ ಹೆಸರುವಾಸಿಯಾಗಿದೆ. ಇಲ್ಲಿನ ಅನೇಕ ವ್ಯಕ್ತಿಗಳಿಗೆ ಜ್ಞಾನಪೀಠ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಪ್ರದೇಶವು ದೇಶಕ್ಕೆ ಹಲವಾರು ಶ್ರೇಷ್ಠ ಸಂಗೀತಗಾರರನ್ನು ನೀಡಿದೆ. ಪಂಡಿತ್ ಕುಮಾರ ಗಂಧರ್ವ, ಪಂಡಿತ್ ಬಸವರಾಜ ರಾಜಗುರು, ಪಂಡಿತ್ ಮಲ್ಲಿಕಾರ್ಜುನ ಮನ್ಸೂರ್, ಭಾರತ ರತ್ನ ಪಂಡಿತ್ ಭೀಮಸೇನ್ ಜೋಶಿ ಮತ್ತು ಪಂಡಿತೆ ಶ್ರೀಮತಿ ಗಂಗೂಬಾಯಿ ಹಾನಗಲ್ ಜೀ ಅವರಿಗೆ ಇಂದು ಹುಬ್ಬಳ್ಳಿಯ ನಾಡಿನಿಂದ ನಾನು ನಮನ ಸಲ್ಲಿಸುತ್ತೇನೆ.ಕರ್ನಾಟಕದ ಹುಬ್ಬಳ್ಳಿಯಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
January 12th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಹುಬ್ಬಳ್ಳಿಯಲ್ಲಿ 26 ನೇ ರಾಷ್ಟ್ರೀಯ ಯುವಜನೋತ್ಸವವನ್ನು ಉದ್ಘಾಟಿಸಿದರು. ಸ್ವಾಮಿ ವಿವೇಕಾನಂದರ ಜನ್ಮದಿನದಂದು ಆಚರಿಸಲಾಗುವ ರಾಷ್ಟ್ರೀಯ ಯುವ ದಿನದಂದು ಅವರ ಆದರ್ಶಗಳು, ಬೋಧನೆಗಳು ಮತ್ತು ಕೊಡುಗೆಗಳನ್ನು ಗೌರವಿಸಲು ಮತ್ತು ಪಾಲಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಉತ್ಸವದ ವಿಷಯವು ‘ವಿಕಸಿತ ಯುವ – ವಿಕಸಿತ ಭಾರತʼ. ಇದು ದೇಶದ ಎಲ್ಲಾ ಭಾಗಗಳ ವೈವಿಧ್ಯಮಯ ಸಂಸ್ಕೃತಿಗಳನ್ನು ಒಂದೇ ವೇದಿಕೆಯಲ್ಲಿ ತರುತ್ತದೆ ಮತ್ತು ಏಕ್ ಭಾರತ್, ಶ್ರೇಷ್ಠ ಭಾರತ್ ಮನೋಭಾವದಲ್ಲಿ ಭಾಗವಹಿಸುವವರನ್ನು ಒಂದುಗೂಡಿಸುತ್ತದೆ.