'ಹಸಿರು ಬೆಳವಣಿಗೆ' ಕುರಿತ ಬಜೆಟ್ ನಂತರದ ವೆಬಿನಾರ್ ನಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
February 23rd, 10:22 am
2014 ರಿಂದ ಭಾರತದ ಎಲ್ಲಾ ಬಜೆಟ್ ಗಳಲ್ಲಿ ಒಂದು ಮಾದರಿ ಇದೆ. ಅಂದಿನಿಂದ ನಮ್ಮ ಸರ್ಕಾರದ ಪ್ರತಿಯೊಂದು ಬಜೆಟ್ ಪ್ರಸ್ತುತ ಸವಾಲುಗಳನ್ನು ಏಕಕಾಲದಲ್ಲಿ ಎದುರಿಸುತ್ತಾ ನವಯುಗದ ಸುಧಾರಣೆಗಳಿಗೆ ಒತ್ತು ನೀಡುತ್ತಿದೆ. ಹಸಿರು ಬೆಳವಣಿಗೆ ಮತ್ತು ಇಂಧನ ಪರಿವರ್ತನೆಗಾಗಿ ಭಾರತದ ಕಾರ್ಯತಂತ್ರದ ಮೂರು ಪ್ರಮುಖ ಸ್ತಂಭಗಳಿವೆ. ಮೊದಲನೆಯದಾಗಿ, ನವೀಕರಿಸಬಹುದಾದ ಇಂಧನದ ಉತ್ಪಾದನೆಯನ್ನು ಹೆಚ್ಚಿಸುವುದು; ಎರಡನೆಯದಾಗಿ, ನಮ್ಮ ಆರ್ಥಿಕತೆಯಲ್ಲಿ ಪಳೆಯುಳಿಕೆ ಇಂಧನಗಳ ಬಳಕೆಯನ್ನು ತಗ್ಗಿಸುವುದು; ಮತ್ತು ಮೂರನೆಯದಾಗಿ: ದೇಶದೊಳಗೆ ಅನಿಲ ಆಧಾರಿತ ಆರ್ಥಿಕತೆಯತ್ತ ವೇಗವಾಗಿ ಮುಂದುವರಿಯುವುದು. ಈ ಕಾರ್ಯತಂತ್ರದ ಭಾಗವಾಗಿ, ಎಥೆನಾಲ್ ಮಿಶ್ರಣ, ಪಿಎಂ-ಕುಸುಮ್ ಯೋಜನೆ, ಸೌರ ವಿದ್ಯುತ್ ಉತ್ಪಾದನೆಗೆ ಪ್ರೋತ್ಸಾಹ, ಛಾವಣಿ ಮೇಲೆ ಸೌರ ಯೋಜನೆ, ಕಲ್ಲಿದ್ದಲು ಅನಿಲೀಕರಣ ಅಥವಾ ಬ್ಯಾಟರಿಯಲ್ಲಿ ವಿದ್ಯುತ್ ಸಂಗ್ರಹಣೆ ಸೇರಿದಂತೆ ಅನೇಕ ಪ್ರಮುಖ ಘೋಷಣೆಗಳನ್ನು ನಂತರದ ಬಜೆಟ್ ನಲ್ಲಿ ಮಾಡಲಾಗಿದೆ. ಈ ವರ್ಷದ ಬಜೆಟ್ ನಲ್ಲಿ, ಉದ್ಯಮಕ್ಕೆ ಹಸಿರು ಸಾಲಗಳಿವೆ ಮತ್ತು ರೈತರಿಗೆ ಪಿಎಂ ಪ್ರಣಾಮ್ ಯೋಜನೆಯೂ ಇದೆ. ಹಳ್ಳಿಗಳಿಗೆ ಗೋಬರ್ ಧನ್ ಯೋಜನೆ ಮತ್ತು ನಗರ ಪ್ರದೇಶಗಳಿಗೆ ವಾಹನ ಗುಜರಿ ನೀತಿ ಇದೆ. ಹಸಿರು ಜಲಜನಕಕ್ಕೆ ಒತ್ತು ನೀಡಲಾಗಿದೆ ಮತ್ತು ಗದ್ದೆ ಸಂರಕ್ಷಣೆಗೆ ಸಮಾನ ಗಮನವಿದೆ. ಹಸಿರು ಬೆಳವಣಿಗೆಗೆ ಸಂಬಂಧಿಸಿದಂತೆ ಈ ವರ್ಷದ ಬಜೆಟ್ ನಲ್ಲಿ ಮಾಡಲಾದ ಅವಕಾಶಗಳು ಒಂದು ರೀತಿಯಲ್ಲಿ ನಮ್ಮ ಭವಿಷ್ಯದ ಪೀಳಿಗೆಯ ಉಜ್ವಲ ಭವಿಷ್ಯಕ್ಕೆ ಅಡಿಪಾಯವಾಗಿವೆ.'ಹಸಿರು ಪ್ರಗತಿ(ಬೆಳವಣಿಗೆ)' ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 23rd, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಹಸಿರು ಬೆಳವಣಿಗೆ' ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾತನಾಡಿದರು. 2023ರ ಕೇಂದ್ರ ಬಜೆಟ್ ನಲ್ಲಿ ಘೋಷಿಸಲಾದ ಉಪಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಲಹೆ, ಸೂಚನೆಗಳನ್ನು ಪಡೆಯಲು ಸರ್ಕಾರವು ಆಯೋಜಿಸಿರುವ ಬಜೆಟ್ ನಂತರದ 12 ವೆಬಿನಾರ್‌ಗಳ ಸರಣಿಯಲ್ಲಿ ಇದು ಮೊದಲನೆಯದಾಗಿದೆ.One has to keep up with the changing times and embrace global best practices: PM
December 15th, 02:40 pm
PM Modi unveiled various developmental projects in Gujarat. Speaking about the farm laws, PM Modi said, Farmers are being misled about the agriculture reforms. He pointed out that the agriculture reforms that have taken place is exactly what farmer bodies and even opposition parties have been asking over the years.PM unveils key projects in Gujarat
December 15th, 02:30 pm
Prime Minister Shri Narendra Modi today unveiled various developmental projects in Gujarat.These projects include a desalination plant, a hybrid renewable energy park, and a fully mated milk processing and packing plant. The Chief Minister of Gujarat was present on the occasion.ಡಿಸೆಂಬರ್ 15ರಂದು ಕಚ್ ಗೆ ಪ್ರಧಾನಿ ಭೇಟಿ, ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ
December 13th, 06:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ರಾಜ್ಯದ ಕಚ್ ನ ಧೋರ್ಡೋಗೆ 2020ರ ಜನವರಿ 15ರಂದು ಭೇಟಿ ನೀಡಲಿದ್ದು, ರಾಜ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗಳಲ್ಲಿ ಉಪ್ಪುನೀರು ಶುದ್ಧೀಕರಣ ಘಟಕ, ಹೈಬ್ರೀಡ್ ನವೀಕರಿಸಬಹುದಾದ ಇಂಧನ ಉದ್ಯಾನ ಮತ್ತು ಸಂಪೂರ್ಣ ಸ್ವಯಂಚಾಲಿತ ಹಾಲು ಸಂಸ್ಕರಣೆ ಮತ್ತು ಪೊಟ್ಟಣೀಕರಣ ಸ್ಥಾವರ ಸೇರಿವೆ. ಈ ಕಾರ್ಯಕ್ರಮದಲ್ಲಿ ಗುಜರಾತ್ ಮುಖ್ಯಮಂತ್ರಿ ಉಪಸ್ಥಿತರಿರುತ್ತಾರೆ. ಪ್ರಧಾನಮಂತ್ರಿ ವೈಟ್ ರಾನ್ ಗೆ ಭೇಟಿ ನೀಡಲಿದ್ದು, ನಂತರ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಲಿದ್ದಾರೆ.