
ಕರ್ನಾಟಕದ ಬೆಂಗಳೂರಿನಲ್ಲಿ ವಿವಿಧ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
August 10th, 01:30 pm
ಕರ್ನಾಟಕ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಜೀ, ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಜೀ, ಕೇಂದ್ರದಲ್ಲಿನ ನನ್ನ ಸಹೋದ್ಯೋಗಿಗಳಾದ ಶ್ರೀ ಮನೋಹರ್ ಲಾಲ್ ಖಟ್ಟರ್ ಜೀ, ಶ್ರೀ ಹೆಚ್.ಡಿ. ಕುಮಾರಸ್ವಾಮಿ ಜೀ, ಶ್ರೀ ಅಶ್ವಿನಿ ವೈಷ್ಣವ್ ಜೀ, ಶ್ರೀ ವಿ. ಸೋಮಣ್ಣ ಜೀ, ಶ್ರೀಮತಿ ಶೋಭಾ ಜೀ, ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಜೀ, ಕರ್ನಾಟಕ ಸರ್ಕಾರದ ಸಚಿವರಾದ ಶ್ರೀ ಬಿ. ಸುರೇಶ್ ಜೀ, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್ ಜೀ, ಸಂಸದರಾದ ಶ್ರೀ ತೇಜಸ್ವಿ ಸೂರ್ಯ ಜೀ, ಡಾ. ಮಂಜುನಾಥ್ ಜೀ, ಶಾಸಕರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಜೀ, ಮತ್ತು ಕರ್ನಾಟಕದ ನನ್ನ ಸಹೋದರ ಸಹೋದರಿಯರೇ,
ಬೆಂಗಳೂರಿನಲ್ಲಿ 22,800 ಕೋಟಿ ರೂಪಾಯಿಗಳ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 10th, 01:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಸುಮಾರು 7,160 ಕೋಟಿ ರೂ. ಮೌಲ್ಯದ ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಿದರು ಮತ್ತು 15,610 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದ ಬೆಂಗಳೂರು ಮೆಟ್ರೋ ಹಂತ-3 ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಅವರು ಬೆಂಗಳೂರಿನ ಕೆ ಎಸ್ ಆರ್ ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದ ನೆಲಕ್ಕೆ ಕಾಲಿಟ್ಟಾಗ ತಮಗೆ ಒಂದು ರೀತಿಯ ಆತ್ಮೀಯತೆಯ ಭಾವನೆ ಮೂಡಿತು ಎಂದು ಹೇಳಿದರು. ಕರ್ನಾಟಕದ ಸಂಸ್ಕೃತಿಯ ಶ್ರೀಮಂತಿಕೆ, ಜನರ ವಾತ್ಸಲ್ಯ, ಮತ್ತು ಹೃದಯವನ್ನು ತಟ್ಟುವ ಕನ್ನಡ ಭಾಷೆಯ ಮಾಧುರ್ಯವನ್ನು ಶ್ಲಾಘಿಸಿದ ಶ್ರೀ ಮೋದಿ ಅವರು ಬೆಂಗಳೂರಿನ ಅಧಿದೇವತೆ ಅಣ್ಣಮ್ಮ ತಾಯಿಯ ಪಾದಗಳಿಗೆ ನಮಸ್ಕರಿಸುವುದರ ಮೂಲಕ ತಮ್ಮ ಭಾಷಣವನ್ನು ಆರಂಭಿಸಿದರು. ಶತಮಾನಗಳ ಹಿಂದೆ ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಗರಕ್ಕೆ ಅಡಿಪಾಯ ಹಾಕಿದ್ದನ್ನು ಸ್ಮರಿಸಿದ ಪ್ರಧಾನ ಮಂತ್ರಿಗಳು, ಕೆಂಪೇಗೌಡರು ಸಂಪ್ರದಾಯದಲ್ಲಿ ಬೇರೂರಿರುವ ಜೊತೆಗೆ ಪ್ರಗತಿಯ ಹೊಸ ಎತ್ತರಗಳನ್ನು ತಲುಪುವ ನಗರದ ಕನಸು ಕಂಡಿದ್ದರು ಎಂದು ಹೇಳಿದರು. “ಬೆಂಗಳೂರು ಯಾವಾಗಲೂ ಆ ಮನೋಭಾವವನ್ನು ಜೀವಂತವಾಗಿರಿಸಿದೆ ಮತ್ತು ಅದನ್ನು ಕಾಪಾಡಿಕೊಂಡಿದೆ. ಇಂದು, ಬೆಂಗಳೂರು ಅದೇ ಕನಸನ್ನು ನನಸಾಗಿಸುತ್ತಿದೆ” ಎಂದು ಪ್ರಧಾನಮಂತ್ರಿ ಹೇಳಿದರು.
ಶ್ರೀ ನಾರಾಯಣ ಗುರು ಮತ್ತು ಗಾಂಧೀಜಿ ನಡುವಿನ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 24th, 11:30 am
ಬ್ರಹ್ಮಋಷಿ ಸ್ವಾಮಿ ಸಚ್ಚಿದಾನಂದ ಜೀ, ಶ್ರೀಮಠ ಸ್ವಾಮಿ ಶುಭಾಂಗ-ನಂದಾ ಜೀ, ಸ್ವಾಮಿ ಶಾರದಾನಂದ ಜೀ, ಎಲ್ಲಾ ಪೂಜ್ಯ ಸಾಧು ಸಂತರೆ, ಸರ್ಕಾರದ ನನ್ನ ಸಹೋದ್ಯೋಗಿ ಶ್ರೀ ಜಾರ್ಜ್ ಕುರಿಯನ್ ಜೀ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಅಡೂರ್ ಪ್ರಕಾಶ್ ಜೀ, ಇಲ್ಲಿರುವ ಇತರೆ ಎಲ್ಲ ಹಿರಿಯ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ.ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಅವರ ನಡುವಿನ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 24th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಭಾರತದ ಇಬ್ಬರು ಶ್ರೇಷ್ಠ ಆಧ್ಯಾತ್ಮಿಕ ಮತ್ತು ನೈತಿಕ ನಾಯಕರಾದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದು ಈ ಸ್ಥಳವು ರಾಷ್ಟ್ರದ ಇತಿಹಾಸದಲ್ಲಿ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಇದು ನಮ್ಮ ಸ್ವಾತಂತ್ರ್ಯ ಚಳವಳಿಗೆ ಹೊಸ ದಿಕ್ಕನ್ನು ನೀಡಿದ, ಸ್ವಾತಂತ್ರ್ಯದ ಉದ್ದೇಶಗಳು ಮತ್ತು ಸ್ವತಂತ್ರ ಭಾರತದ ಕನಸಿಗೆ ನಿರ್ದಿಷ್ಟ ಅರ್ಥವನ್ನು ನೀಡಿದ ಐತಿಹಾಸಿಕ ಘಟನೆಯಾಗಿದೆ ಎಂದು ಅವರು ಒತ್ತಿ ಹೇಳಿದರು. 100 ವರ್ಷಗಳ ಹಿಂದೆ ನಡೆದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಭೇಟಿಯು ಇಂದಿಗೂ ಸ್ಪೂರ್ತಿದಾಯಕ ಮತ್ತು ಪ್ರಸ್ತುತವಾಗಿದೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಾಮಾಜಿಕ ಸಾಮರಸ್ಯ ಮತ್ತು ಸಾಮೂಹಿಕ ಗುರಿಗಳಿಗೆ ಶಕ್ತಿಶಾಲಿ ಮೂಲವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಈ ಐತಿಹಾಸಿಕ ಸಂದರ್ಭದಲ್ಲಿ, ಅವರು ಶ್ರೀ ನಾರಾಯಣ ಗುರುಗಳ ಪಾದಗಳಿಗೆ ನಮನ ಸಲ್ಲಿಸಿದರು ಮತ್ತು ಮಹಾತ್ಮ ಗಾಂಧಿ ಅವರಿಗೆ ಗೌರವನಮನ ಸಲ್ಲಿಸಿದರು.ಜಮ್ಮು-ಕಾಶ್ಮೀರದ ಕತ್ರಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 06th, 12:50 pm
ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಜಿ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಜಿ, ಜಿತೇಂದ್ರ ಸಿಂಗ್ ಜಿ, ವಿ. ಸೋಮಣ್ಣ ಜಿ, ಉಪಮುಖ್ಯಮಂತ್ರಿ ಸುರೇಂದ್ರ ಕುಮಾರ್ ಜಿ, ಜಮ್ಮು-ಕಾಶ್ಮೀರ ವಿಧಾನಸಭೆಯ ವಿಪಕ್ಷ ನಾಯಕ ಸುನಿಲ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿ ಜುಗಲ್ ಕಿಶೋರ್ ಜಿ, ಇಲ್ಲಿರುವ ಜನಪ್ರತಿನಿಧಿಗಳೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ. ಇದು ವೀರ್ ಜೋರಾವರ್ ಸಿಂಗ್ ಜಿ ಅವರ ಭೂಮಿ, ನಾನು ಈ ಭೂಮಿಗೆ ನಮಸ್ಕರಿಸುತ್ತೇನೆ.ಜಮ್ಮು ಮತ್ತು ಕಾಶ್ಮೀರದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 06th, 12:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು ಮತ್ತು ದೇಶಕ್ಕೆ ಸಮರ್ಪಿಸಿದರು. ವೀರ ಜೋರಾವರ್ ಸಿಂಗ್ ಅವರ ಭೂಮಿಗೆ ನಮನ ಸಲ್ಲಿಸುತ್ತಾ, ಇಂದಿನ ಕಾರ್ಯಕ್ರಮವು ಭಾರತದ ಏಕತೆ ಮತ್ತು ದೃಢಸಂಕಲ್ಪದ ಭವ್ಯ ಆಚರಣೆಯಾಗಿದೆ ಎಂದು ಹೇಳಿದರು. ಮಾತಾ ವೈಷ್ಣೋದೇವಿಯ ಆಶೀರ್ವಾದದಿಂದ ಕಾಶ್ಮೀರ ಕಣಿವೆ ಈಗ ಭಾರತದ ವಿಶಾಲ ರೈಲ್ವೆ ಜಾಲಕ್ಕೆ ಸಂಪರ್ಕ ಹೊಂದಿದೆ ಎಂದು ಶ್ರೀ ಮೋದಿ ಹೇಳಿದರು. ನಾವು ಯಾವಾಗಲೂ ಮಾತೆ ಭಾರತಿಯನ್ನು ಆಳವಾದ ಭಕ್ತಿಯಿಂದ ಪ್ರಾರ್ಥಿಸುತ್ತೇವೆ, 'ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ' ಎಂದು ಹೇಳುತ್ತೇವೆ, ಇಂದು, ಇದು ನಮ್ಮ ರೈಲ್ವೆ ಜಾಲದಲ್ಲಿಯೂ ಸಹ ವಾಸ್ತವವಾಗಿದೆ ಎಂದು ಪ್ರಧಾನಿ ಉದ್ಗರಿಸಿದರು, ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಮಾರ್ಗ ಯೋಜನೆಯು ಕೇವಲ ಹೆಸರಲ್ಲ, ಜಮ್ಮು ಮತ್ತು ಕಾಶ್ಮೀರದ ಹೊಸ ಶಕ್ತಿಯ ಸಂಕೇತ ಮತ್ತು ಭಾರತದ ಬೆಳೆಯುತ್ತಿರುವ ಸಾಮರ್ಥ್ಯಗಳಿಗೆ ಸಾಕ್ಷಿಯಾಗಿದೆ ಎಂದು ಒತ್ತಿ ಹೇಳಿದರು. ಈ ಪ್ರದೇಶದಲ್ಲಿ ರೈಲು ಮೂಲಸೌಕರ್ಯ ಮತ್ತು ಸಂಪರ್ಕವನ್ನು ಹೆಚ್ಚಿಸುವ ಬದ್ಧತೆಗೆ ಅನುಗುಣವಾಗಿ, ಅವರು ಚೆನಾಬ್ ಮತ್ತು ಅಂಜಿ ರೈಲು ಸೇತುವೆಗಳನ್ನು ಉದ್ಘಾಟಿಸಿದರು ಮತ್ತು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು, ಇದು ಜಮ್ಮು ಮತ್ತು ಕಾಶ್ಮೀರದೊಳಗೆ ಸಂಪರ್ಕವನ್ನು ಹೆಚ್ಚಿಸುತ್ತದೆ. ಇದರ ಜೊತೆಗೆ, ಶ್ರೀ ಮೋದಿ ಅವರು ಜಮ್ಮುವಿನಲ್ಲಿ ಹೊಸ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ ನೆರವೇರಿಸಿದರು, ಈ ಪ್ರದೇಶದಲ್ಲಿ ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸಿದರು, ₹46,000 ಕೋಟಿ ಮೌಲ್ಯದ ಯೋಜನೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯನ್ನು ವೇಗಗೊಳಿಸುತ್ತವೆ, ಪ್ರಗತಿ ಮತ್ತು ಸಮೃದ್ಧಿಗೆ ಚಾಲನೆ ನೀಡುತ್ತವೆ ಎಂದು ಹೇಳಿದರು. ಪ್ರಧಾನಿಯವರು ತಮ್ಮ ಶುಭಾಶಯಗಳನ್ನು ವ್ಯಕ್ತಪಡಿಸಿದರು ಮತ್ತು ಬೆಳವಣಿಗೆ ಹಾಗು ಪರಿವರ್ತನೆಯ ಈ ಹೊಸ ಯುಗಕ್ಕಾಗಿ ಜನರನ್ನು ಅಭಿನಂದಿಸಿದರು.ಮೇ 29 ಮತ್ತು 30 ರಂದು ಪ್ರಧಾನಮಂತ್ರಿಗಳು ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ
May 28th, 12:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 29 ಮತ್ತು 30 ರಂದು ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.ಉದಯೋನ್ಮುಖ ಈಶಾನ್ಯ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 23rd, 11:00 am
ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಸುಕಾಂತ ಮಜುಂದಾರ್ ಜಿ, ಮಣಿಪುರ ರಾಜ್ಯಪಾಲರಾದ ಅಜಯ್ ಭಲ್ಲಾ ಜಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಜಿ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಾಹಾ ಜಿ, ಮೇಘಾಲಯದ ಮುಖ್ಯಮಂತ್ರಿ ತಂಗ್ಮಾಂಗ್ ಸಿನ್ರಾಡ್ ಎಸ್. ನಾಗಾಲ್ಯಾಂಡ್ ಮುಖ್ಯಮಂತ್ರಿ ನೇಫಿಯು ರಿಯೊ ಜಿ, ಮಿಜೋರಾಮ್‌ನ ಮುಖ್ಯಮಂತ್ರಿ ಲಾಲ್ದುಹೋಮಾ ಜಿ, ಉದ್ಯಮ ರಂಗದ ದಿಗ್ಗಜರೆ, ಹೂಡಿಕೆದಾರರೆ, ಮಹಿಳೆಯರು ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಸಿಂಗ್ ನಾರ್ತ್ ಈಸ್ಟ್ ಇನ್ವೆಸ್ಟರ್ಸ್ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು
May 23rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ರೈಸಿಂಗ್ ನಾರ್ತ್ ಈಸ್ಟ್ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಸಮಾರಂಭಕ್ಕೆ ಆಗಮಿಸಿದ ಎಲ್ಲಾ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಮಂತ್ರಿಯವರು, ಈಶಾನ್ಯ ಪ್ರದೇಶದ ಭವಿಷ್ಯದ ಬಗ್ಗೆ ಹೆಮ್ಮೆ, ಆತ್ಮೀಯತೆ ಮತ್ತು ಅಪಾರ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇತ್ತೀಚೆಗೆ ಭಾರತ ಮಂಟಪದಲ್ಲಿ ನಡೆದ ಅಷ್ಟಲಕ್ಷ್ಮಿ ಮಹೋತ್ಸವವನ್ನು ಸ್ಮರಿಸಿದ ಅವರು, ಇಂದಿನ ಕಾರ್ಯಕ್ರಮವು ಈಶಾನ್ಯ ವಲಯದಲ್ಲಿ ಹೂಡಿಕೆಯ ಸಂಭ್ರಮಾಚರಣೆಯಾಗಿದೆ ಎಂದು ಒತ್ತಿ ಹೇಳಿದರು. ಈ ಶೃಂಗಸಭೆಯಲ್ಲಿ ಪ್ರಮುಖ ಉದ್ಯಮ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿ, ಈ ವಲಯದಲ್ಲಿನ ಅವಕಾಶಗಳ ಬಗೆಗಿನ ಉತ್ಸಾಹವನ್ನು ಇದು ಎತ್ತಿ ತೋರಿಸುತ್ತದೆ ಎಂದರು. ಹೂಡಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವಲ್ಲಿ ಶ್ರಮಿಸಿದ ಎಲ್ಲಾ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳಿಗೆ ಅವರು ಅಭಿನಂದನೆ ಸಲ್ಲಿಸಿದರು. ತಮ್ಮ ಶುಭಾಶಯಗಳನ್ನು ತಿಳಿಸುತ್ತಾ, ಪ್ರಧಾನಮಂತ್ರಿಯವರು ನಾರ್ತ್ ಈಸ್ಟ್ ರೈಸಿಂಗ್ ಶೃಂಗಸಭೆಯನ್ನು ಶ್ಲಾಘಿಸಿದರು ಮತ್ತು ಈ ವಲಯದ ನಿರಂತರ ಬೆಳವಣಿಗೆ ಹಾಗೂ ಸಮೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.ಆಂಧ್ರಪ್ರದೇಶ (ತಿರುಪತಿ), ಛತ್ತೀಸಗಢ (ಭಿಲಾಯಿ), ಜಮ್ಮು ಮತ್ತು ಕಾಶ್ಮೀರ (ಜಮ್ಮು), ಕರ್ನಾಟಕ (ಧಾರವಾಡ) ಮತ್ತು ಕೇರಳ(ಪಾಲಕ್ಕಾಡ್)ಗಳಲ್ಲಿ ಸ್ಥಾಪಿಸಲಾದ ಐದು ಭಾರತೀಯ ತಂತ್ರಜ್ಞಾನ ಸಂಸ್ಥೆಗಳ (ಐಐಟಿ) ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಸಂಪುಟದ ಅನುಮೋದನೆ
May 07th, 12:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಐದು ಹೊಸ ಐಐಟಿಗಳ ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ (ಹಂತ-‘ಬಿ’ನಿರ್ಮಾಣ) ಅನುಮೋದನೆ ನೀಡಿದೆ. ಈ ಐದು ಹೊಸ ಐಐಟಿಗಳನ್ನು ಆಂಧ್ರಪ್ರದೇಶ (ಐಐಟಿ ತಿರುಪತಿ), ಕೇರಳ (ಐಐಟಿ ಪಾಲಕ್ಕಾಡ್), ಛತ್ತೀಸಗಢ (ಐಐಟಿ ಭಿಲಾಯಿ), ಜಮ್ಮು ಮತ್ತು ಕಾಶ್ಮೀರ (ಐಐಟಿ ಜಮ್ಮು) ಮತ್ತು ಕರ್ನಾಟಕ (ಐಐಟಿ ಧಾರವಾಡ) ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಸ್ಥಾಪಿಸಲಾಗಿದೆ.ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ವೈಯುಜಿಎಂ ಸಮಾವೇಶದಲ್ಲಿ ಪ್ರಧಾನಮಂತ್ರಿ ಭಾಷಣ
April 29th, 11:01 am
ಇಂದು, ಸರ್ಕಾರ, ಶೈಕ್ಷಣಿಕ ವಲಯ, ವಿಜ್ಞಾನ ಮತ್ತು ಸಂಶೋಧನೆಗೆ ಸಂಬಂಧಿಸಿದ ವಿವಿಧ ಕ್ಷೇತ್ರಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ಉಪಸ್ಥಿತರಿದ್ದಾರೆ. ಈ ಏಕತೆ, ಈ ಸಂಗಮವನ್ನೇ ನಾವು ವೈಯುಜಿಎಂ ಎಂದು ಕರೆಯುತ್ತೇವೆ. ವಿಕಸಿತ ಭಾರತದ ಭವಿಷ್ಯದ ತಂತ್ರಜ್ಞಾನಕ್ಕೆ ಸಂಬಂಧಿಸಿದ ಎಲ್ಲಾ ಪಾಲುದಾರರು ಒಟ್ಟಿಗೆ ಸೇರಿ ತೊಡಗಿಸಿಕೊಂಡಿರುವ ಒಂದು ವೈಯುಜಿಎಂ. ಭಾರತದ ಇನೋವೇಶನ್ ಸಾಮರ್ಥ್ಯವನ್ನು ಮತ್ತು ಡೀಪ್-ಟೆಕ್ನಲ್ಲಿ ಅದರ ಪಾತ್ರವನ್ನು ಹೆಚ್ಚಿಸಲು ನಾವು ಮಾಡುತ್ತಿರುವ ಪ್ರಯತ್ನಗಳನ್ನು ಈ ಕಾರ್ಯಕ್ರಮವು ಮತ್ತಷ್ಟು ಬಲಪಡಿಸುತ್ತದೆ ಎಂದು ನಾನು ನಂಬುತ್ತೇನೆ. ಇಂದು ಐಐಟಿ ಕಾನ್ಪುರ ಮತ್ತು ಐಐಟಿ ಬಾಂಬೆಯಲ್ಲಿ AI, ಇಂಟೆಲಿಜೆಂಟ್ ಸಿಸ್ಟಮ್ಸ್, ಹಾಗೂ ಬಯೋಸೈನ್ಸಸ್, ಬಯೋಟೆಕ್ನಾಲಜಿ, ಆರೋಗ್ಯ ಮತ್ತು ವೈದ್ಯಕೀಯ ವಿಭಾಗಗಳಲ್ಲಿ ಸೂಪರ್ ಹಬ್ಗಳ ಆರಂಭಕ್ಕೆ ಚಾಲನೆ ದೊರೆತಿದೆ. ಇಂದು ವಾಧ್ವಾನಿ ಇನ್ನೋವೇಶನ್ ನೆಟ್ವರ್ಕ್ ನ ಉದ್ಘಾಟನೆಯೂ ಆಗಿದೆ. ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ ಸಹಯೋಗದೊಂದಿಗೆ ಸಂಶೋಧನೆಯನ್ನು ಮುನ್ನಡೆಸಲು ಪ್ರತಿಜ್ಞೆಯನ್ನು ಸಹ ತೆಗೆದುಕೊಳ್ಳಲಾಗಿದೆ. ಈ ಉಪಕ್ರಮಕ್ಕಾಗಿ ವಾಧ್ವಾನಿ ಫೌಂಡೇಶನ್, ನಮ್ಮ ಐಐಟಿಗಳು ಮತ್ತು ಇತರ ಎಲ್ಲ ಪಾಲುದಾರರಿಗೆ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ವಿಶೇಷವಾಗಿ, ನನ್ನ ಸ್ನೇಹಿತರಾದ ರೊಮೇಶ್ ವಾಧ್ವಾನಿ ಜಿ ಅವರನ್ನು ನಾನು ಶ್ಲಾಘಿಸುತ್ತೇನೆ. ನಿಮ್ಮ ಸಮರ್ಪಣೆ ಮತ್ತು ಪೂರ್ವಭಾವಿ ಪ್ರಯತ್ನಗಳಿಂದಾಗಿ ಖಾಸಗಿ ಮತ್ತು ಸಾರ್ವಜನಿಕ ವಲಯಗಳು ಒಟ್ಟಾಗಿ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳನ್ನು ತಂದಿವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೈಯುಜಿಎಂ ಇನ್ನೋವೇಶನ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು
April 29th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ವೈಯುಜಿಎಂ ಇನ್ನೋವೇಶನ್ ಸಮಾವೇಶವನ್ನುದ್ದೇಶಿಸಿ (YUGM Innovation Conclave) ಮಾತನಾಡಿದರು. ಈ ಸಂದರ್ಭದಲ್ಲಿ ಅವರು, ಸರ್ಕಾರಿ ಅಧಿಕಾರಿಗಳು, ಶೈಕ್ಷಣಿಕ ವಲಯದವರು ಹಾಗೂ ವಿಜ್ಞಾನ ಮತ್ತು ಸಂಶೋಧನಾ ವೃತ್ತಿಪರರ ಈ ಮಹತ್ವದ ಸಮಾಗಮವನ್ನು ವಿಶೇಷವಾಗಿ ಪ್ರಸ್ತಾಪಿಸಿದರು. ಎಲ್ಲಾ ಪಾಲುದಾರರ ಈ ಸಂಗಮವೇ YUGM ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಇದು ವಿಕಸಿತ ಭಾರತಕ್ಕಾಗಿ ಭವಿಷ್ಯದ ತಂತ್ರಜ್ಞಾನಗಳನ್ನು ಮುನ್ನಡೆಸುವ ಗುರಿ ಹೊಂದಿರುವ ಸಹಯೋಗವಾಗಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದ ಮೂಲಕ, ಭಾರತದ ನಾವೀನ್ಯತಾ ಸಾಮರ್ಥ್ಯವನ್ನು ಹೆಚ್ಚಿಸುವ ಮತ್ತು ಡೀಪ್-ಟೆಕ್ನಲ್ಲಿ (Deep-tech) ಅದರ ಪಾತ್ರವನ್ನು ಬಲಪಡಿಸುವ ಪ್ರಯತ್ನಗಳು ಇನ್ನಷ್ಟು ವೇಗವನ್ನು ಪಡೆದುಕೊಳ್ಳಲಿವೆ ಎಂದು ಪ್ರಧಾನಮಂತ್ರಿಯವರು ವಿಶ್ವಾಸ ವ್ಯಕ್ತಪಡಿಸಿದರು. ಅವರು AI, ಇಂಟೆಲಿಜೆಂಟ್ ಸಿಸ್ಟಮ್ ಹಾಗೂ ಜೈವಿಕ ವಿಜ್ಞಾನ (Biosciences), ಜೈವಿಕ ತಂತ್ರಜ್ಞಾನ (Biotechnology), ಆರೋಗ್ಯ (Health) ಮತ್ತು ವೈದ್ಯಕೀಯ (Medicine) ಕ್ಷೇತ್ರಗಳ ಮೇಲೆ ಗಮನ ಕೇಂದ್ರೀಕರಿಸುವ ಐಐಟಿ ಕಾನ್ಪುರ ಮತ್ತು ಐಐಟಿ ಬಾಂಬೆಯಲ್ಲಿ ಸೂಪರ್ ಹಬ್ಗಳ (Super hubs) ಉದ್ಘಾಟನೆಯನ್ನು ಪ್ರಸ್ತಾಪಿಸಿದರು. ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ (National Research Foundation) ಸಹಯೋಗದೊಂದಿಗೆ ಸಂಶೋಧನೆಯನ್ನು ಮುನ್ನಡೆಸುವ ಬದ್ಧತೆಯನ್ನು ಪುನರುಚ್ಚರಿಸುವ 'ವಾಧ್ವಾನಿ ಇನ್ನೋವೇಶನ್ ನೆಟ್ವರ್ಕ್' (Wadhwani Innovation Network) ನ ಪ್ರಾರಂಭದ ಬಗ್ಗೆಯೂ ಅವರು ಉಲ್ಲೇಖಿಸಿದರು. ಪ್ರಧಾನಿಯವರು ವಾಧ್ವಾನಿ ಫೌಂಡೇಶನ್, ಐಐಟಿಗಳು ಮತ್ತು ಈ ಉಪಕ್ರಮಗಳಲ್ಲಿ ಭಾಗಿಯಾಗಿರುವ ಎಲ್ಲಾ ಪಾಲುದಾರರನ್ನು ಅಭಿನಂದಿಸಿದರು. 1 ಖಾಸಗಿ ಮತ್ತು ಸಾರ್ವಜನಿಕ ವಲಯಗಳ ಸಹಯೋಗದ ಮೂಲಕ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಲು ಶ್ರೀ ರೊಮೇಶ್ ವಾಧ್ವಾನಿಯವರ ಸಮರ್ಪಣೆ ಮತ್ತು ಸಕ್ರಿಯ ಪಾತ್ರಕ್ಕಾಗಿ ಅವರು ವಿಶೇಷ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.ಏಪ್ರಿಲ್ 29ರಂದು ವೈಯುಜಿಎಂ ಸಮಾವೇಶದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ
April 28th, 07:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 29ರಂದು ಬೆಳಗ್ಗೆ 11ಗಂಟೆಗೆ ನವದೆಹಲಿಯ ಭಾರತ ಮಂಟಪದಲ್ಲಿ ನಡೆಯಲಿರುವ ವೈಯುಜಿಎಂ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಈ ವಾರ ಭಾರತದ ಬಗ್ಗೆ ವಿಶ್ವ
April 22nd, 12:27 pm
ರಾಜತಾಂತ್ರಿಕ ಫೋನ್ ಕರೆಗಳಿಂದ ಹಿಡಿದು ಹೊಸ ವೈಜ್ಞಾನಿಕ ಆವಿಷ್ಕಾರಗಳವರೆಗೆ, ಈ ವಾರ ಜಾಗತಿಕ ವೇದಿಕೆಯಲ್ಲಿ ಭಾರತದ ಉಪಸ್ಥಿತಿಯು ಸಹಯೋಗ, ನಾವೀನ್ಯತೆ ಮತ್ತು ಸಾಂಸ್ಕೃತಿಕ ಹೆಮ್ಮೆಯಿಂದ ಗುರುತಿಸಲ್ಪಟ್ಟಿದೆ.ಮಧ್ಯಪ್ರದೇಶದ ಆನಂದಪುರ ಧಾಮ್ ನಲ್ಲಿ ಪ್ರಧಾನಮಂತ್ರಿ ಭಾಷಣ
April 11th, 03:37 pm
ಸ್ವಾಮಿ ವಿಚಾರ ಪೂರ್ಣ ಆನಂದ ಜಿ ಮಹಾರಾಜ್ ಜಿ, ರಾಜ್ಯಪಾಲರಾದ ಮಂಗೂಭಾಯ್ ಪಟೇಲ್ ಜಿ, ಮುಖ್ಯಮಂತ್ರಿ ಮೋಹನ್ ಯಾದವ್ ಜಿ, ನನ್ನ ಸಂಪುಟ ಸಹೋದ್ಯೋಗಿ ಜ್ಯೋತಿರಾದಿತ್ಯ ಸಿಂಧಿಯಾ ಜಿ, ಸಂಸದ ವಿ.ಡಿ. ಶರ್ಮಾ ಜಿ, ಸಂಸದ ಜನಾರ್ದನ ಸಿಂಗ್ ಸಿಗ್ರಿವಾಲ್ ಜಿ, ವೇದಿಕೆಯ ಮೇಲೆ ಉಪಸ್ಥಿತರಿರುವ ಇತರ ಗಣ್ಯರೇ, ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ, ದೆಹಲಿ, ಹರಿಯಾಣ, ಪಂಜಾಬ್ ಮತ್ತು ದೇಶದಾದ್ಯಂತದಿಂದ ಬಹಳ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಆಗಮಿಸಿದ್ದಾರೆ. ನಿಮ್ಮೆಲ್ಲರಿಗೂ ನನ್ನ ನಮಸ್ಕಾರಗಳು.ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
April 11th, 03:26 pm
ಭಾರತದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಮುಂದುವರಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿಗಳು ಇಂದು ಮಧ್ಯಪ್ರದೇಶದ ಅಶೋಕನಗರ ಜಿಲ್ಲೆಯ ಇಸಾಗರ್ಹ್ ತಹಸಿಲ್ ನ ಆನಂದಪುರ ಧಾಮಕ್ಕೆ ಭೇಟಿ ನೀಡಿದರು. ಅವರು ಗುರು ಜಿ ಮಹಾರಾಜರ ದೇವಾಲಯದಲ್ಲಿ ದರ್ಶನ ಪಡೆದು ಪೂಜೆ ಸಲ್ಲಿಸಿದರು ಮತ್ತು ಆನಂದಪುರ ಧಾಮದ ದೇವಾಲಯದ ಆವರಣವನ್ನು ವೀಕ್ಷಿಸಿದರು. ಅಲ್ಲಿ ನೆರೆದಿದ್ದ ಜನರನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿ, ಹರಿಯಾಣ, ಪಂಜಾಬ್ ಮತ್ತು ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತ ಸಮೂಹವನ್ನು ಆದರದಿಂದ ಸ್ವಾಗತಿಸಿದರು. ಶ್ರೀ ಆನಂದಪುರ ಧಾಮಕ್ಕೆ ಭೇಟಿ ನೀಡಿದ ತಮ್ಮ ಸಂತಸವನ್ನು ವ್ಯಕ್ತಪಡಿಸಿದ ಅವರು, ಗುರುಜಿ ಮಹಾರಾಜರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಅನುಭವವು ತಮ್ಮ ಮನಸ್ಸಿಗೆ ಆನಂದವನ್ನು ನೀಡಿತು ಎಂದು ಹೇಳಿದರು.ಈ ವಾರ ಭಾರತದ ಬಗ್ಗೆ ವಿಶ್ವ
March 26th, 12:06 pm
ಭಾರತವು ರಕ್ಷಣೆ ಮತ್ತು ತಂತ್ರಜ್ಞಾನದಿಂದ ಜಾಗತಿಕ ವ್ಯಾಪಾರ ಮತ್ತು ರಾಜತಾಂತ್ರಿಕತೆಯವರೆಗೆ ವಿವಿಧ ಕ್ಷೇತ್ರಗಳಲ್ಲಿ ಅಲೆಗಳನ್ನು ಸೃಷ್ಟಿಸುತ್ತಿದೆ. ಈ ವಾರ, ದೇಶವು ತನ್ನ ನೌಕಾ ಶಕ್ತಿಯನ್ನು ಬಲಪಡಿಸುತ್ತಿದೆ, ಭವಿಷ್ಯದ ಸಾರಿಗೆಯನ್ನು ಅಳವಡಿಸಿಕೊಳ್ಳುತ್ತಿದೆ ಮತ್ತು ಜಾಗತಿಕ ಪಾಲುದಾರರೊಂದಿಗೆ ಆರ್ಥಿಕ ಸಂಬಂಧಗಳನ್ನು ನಿರ್ಮಿಸುತ್ತಿದೆ.ಸಿಲ್ವಾಸ್ಸಾದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಭಾಷಣ
March 07th, 03:00 pm
ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು ಆಡಳಿತಾಧಿಕಾರಿ ಶ್ರೀ ಪ್ರಫುಲ್ಭಾಯಿ ಪಟೇಲ್, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಶ್ರೀಮತಿ ಕಲ್ಬೆನ್ ಡೆಲ್ಕರ್, ಎಲ್ಲಾ ಗಣ್ಯರೇ, ಸಹೋದರ ಸಹೋದರಿಯರೇ, ನಮಸ್ಕಾರ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಲ್ವಾಸ್ಸಾ, ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ ಮತ್ತು ದಮನ್ ಮತ್ತು ದಿಯುಗಳಲ್ಲಿ 2580 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು ಮತ್ತು ಚಾಲನೆ ನೀಡಿದರು
March 07th, 02:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಲ್ವಾಸ್ಸಾ, ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ ಮತ್ತು ದಮನ್ ಮತ್ತು ದಿಯುಗಳಲ್ಲಿ 2580 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮಕ್ಕೂ ಮುನ್ನ ಅವರು ಸಿಲ್ವಾಸ್ಸಾದಲ್ಲಿ ನಮೋ ಆಸ್ಪತ್ರೆಯನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಈ ಪ್ರದೇಶದೊಂದಿಗೆ ಸಂಪರ್ಕ ಸಾಧಿಸಲು ಮತ್ತು ತೊಡಗಿಸಿಕೊಳ್ಳಲು ಅವಕಾಶ ನೀಡಿದ ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯುಗಳ ಸಮರ್ಪಿತ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಜನರೊಂದಿಗೆ ತಾವು ಹೊಂದಿರುವ ಆತ್ಮೀಯತೆ ಮತ್ತು ದೀರ್ಘಕಾಲದ ಸಂಪರ್ಕವನ್ನು ಅವರು ನೆನಪಿಸಿಕೊಂಡರು, ಈ ಪ್ರದೇಶದೊಂದಿಗಿನ ತಮ್ಮ ಬಂಧವು ದಶಕಗಳಷ್ಟು ಹಳೆಯದು ಎಂಬುದನ್ನವರು ಹಂಚಿಕೊಂಡರು. 2014 ರಲ್ಲಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈ ಪ್ರದೇಶವು ಸಾಧಿಸಿದ ಪ್ರಗತಿಯನ್ನು ಅವರು ಎತ್ತಿ ತೋರಿಸಿದರು, ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯುಗಳ ಸಾಮರ್ಥ್ಯವನ್ನು ಆಧುನಿಕತೆ ಮತ್ತು ಪ್ರಗತಿಯ ಗುರುತಾಗಿ ಪರಿವರ್ತಿಸಿರುವುದನ್ನು ಅವರು ಪ್ರಸ್ತಾಪಿಸಿದರು.The vision of Investment in People stands on three pillars – Education, Skill and Healthcare: PM Modi
March 05th, 01:35 pm
PM Modi participated in the Post-Budget Webinar on Employment and addressed the gathering on the theme Investing in People, Economy, and Innovation. PM remarked that India's education system is undergoing a significant transformation after several decades. He announced that over one crore manuscripts will be digitized under Gyan Bharatam Mission. He noted that India, now a $3.8 trillion economy will soon become a $5 trillion economy. PM highlighted the ‘Jan-Bhagidari’ model for better implementation of the schemes.