ಬಿಹಾರದ ಜಮುಯಿಯಲ್ಲಿ ಆಯೋಜಿತವಾಗಿದ್ದ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 15th, 11:20 am
ಬಿಹಾರದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಬಿಹಾರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜುಯಲ್ ಓರಾಮ್ ಜಿ, ಜಿತನ್ ರಾಮ್ ಮಾಂಝಿ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ಮತ್ತು ಯು ಕೆ ದುರ್ಗಾದಾಸ್ ಜಿ ಮತ್ತು ಇಂದು ನಮ್ಮೆಲ್ಲರ ನಡುವೆ ಬಿರ್ಸಾ ಮುಂಡಾ ಜಿ ಅವರ ವಂಶಸ್ಥರು ಇದ್ದಾರೆ ಎಂಬುದು ನಮ್ಮೆಲ್ಲರ ಸೌಭಾಗ್ಯ. ಇಂದು ಅವರ ಮನೆಯಲ್ಲಿ ಪ್ರಮುಖ ಧಾರ್ಮಿಕ ಆಚರಣೆ ಇದ್ದರೂ. ಅವರ ಕುಟುಂಬ ಧಾರ್ಮಿಕ ವಿಧಿಗಳಲ್ಲಿ ನಿರತರಾಗಿದ್ದರೂ, ಬುಧ್ರಾಮ್ ಮುಂಡಾ ಜಿ ಅವರು ನಮ್ಮೊಂದಿಗೆ ಸೇರಿಕೊಂಡಿದ್ದಾರೆ, ಸಿಧು ಕನ್ಹು ಅವರ ವಂಶಸ್ಥರಾದ ಮಂಡಲ್ ಮುರ್ಮು ಜಿ ಅವರು ನಮ್ಮೊಂದಿಗೆ ಇರುವುದು ನಮಗೆ ಸಮಾನ ಗೌರವವಾಗಿದೆ. ಇಂದು ಭಾರತೀಯ ಜನತಾ ಪಕ್ಷದಲ್ಲಿ ಅತ್ಯಂತ ಹಿರಿಯ ನಾಯಕರಿದ್ದರೆ, ಒಂದು ಕಾಲದಲ್ಲಿ ಲೋಕಸಭೆಯ ಉಪಸ್ಪೀಕರ್ ಆಗಿ ಸೇವೆ ಸಲ್ಲಿಸಿದ ನಮ್ಮ ಕರಿಯ ಮುಂಡಾಜಿ ಅವರು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು ಎಂದು ಹೇಳಲು ನನಗೆ ಸಂತೋಷದ ವಿಷಯವಾಗಿದೆ. ಇದು ಇನ್ನೂ ನಮಗೆ ಮಾರ್ಗದರ್ಶನ ನೀಡುತ್ತಿದೆ. ಜುಯಲ್ ಓರಾಮ್ ಜಿ ಉಲ್ಲೇಖಿಸಿದಂತೆ, ಅವರು ನನಗೆ ತಂದೆಯಂತಿದ್ದಾರೆ. ಕರಿಯಾ ಮುಂಡಾ ಜಿ ಅವರು ಜಾರ್ಖಂಡ್‌ನಿಂದ ಇಲ್ಲಿಗೆ ವಿಶೇಷವಾಗಿ ಪ್ರಯಾಣಿಸಿದ್ದಾರೆ. ಬಿಹಾರದ ಉಪಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ವಿಜಯ್ ಕುಮಾರ್ ಸಿನ್ಹಾ ಜಿ, ಸಾಮ್ರಾಟ್ ಚೌಧರಿ ಜಿ, ಬಿಹಾರ ಸರ್ಕಾರದ ಸಚಿವರು, ಸಂಸದರು, ವಿಧಾನಸಭಾ ಸದಸ್ಯರು, ಇತರೆ ಸಾರ್ವಜನಿಕ ಪ್ರತಿನಿಧಿಗಳು, ದೇಶದ ಮೂಲೆ ಮೂಲೆಗಳಿಂದ ಬಂದಿರುವ ಗಣ್ಯ ಅತಿಥಿಗಳು ಮತ್ತು ಜಮುಯಿಯ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.ಜನಜಾತಿಯ ಗೌರವ್ ದಿವಸ್ ಸಂದರ್ಭದಲ್ಲಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ
November 15th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಜಮುಯಿಯಲ್ಲಿಂದು ಜನಜಾತಿಯ ಗೌರವ್ ದಿವಸ್ ಅಂಗವಾಗಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ, ಸುಮಾರು 6,640 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.ಬಿಹಾರದ ದರ್ಭಾಂಗದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಸಮರ್ಪಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
November 13th, 11:00 am
ನಾನು ರಾಜ ಜನಕ ಮತ್ತು ಮಾತೆ ಸೀತಾ ಅವರ ಪವಿತ್ರ ಭೂಮಿಗೆ ಮತ್ತು ಮಹಾನ್ ಕವಿ ವಿದ್ಯಾಪತಿಯ ಜನ್ಮಸ್ಥಳಕ್ಕೆ ನಮಸ್ಕರಿಸುತ್ತೇನೆ. ಈ ಶ್ರೀಮಂತ ಮತ್ತು ಭವ್ಯವಾದ ಭೂಮಿಯ ಎಲ್ಲರಿಗೂ ನನ್ನ ಹಾರ್ದಿಕ ಶುಭಾಶಯಗಳು!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದಲ್ಲಿ 12,100 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು ರಾಷ್ಟ್ರಕ್ಕೆ ಸಮರ್ಪಿಸಿದರು
November 13th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ದರ್ಭಾಂಗದಲ್ಲಿ ಸುಮಾರು 12,100 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಈ ಅಭಿವೃದ್ಧಿ ಯೋಜನೆಗಳು ಆರೋಗ್ಯ, ರೈಲು, ರಸ್ತೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕ್ಷೇತ್ರಗಳನ್ನು ಒಳಗೊಂಡಿವೆ.ಗುಜರಾತ್‌ನ ಅಮ್ರೇಲಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 28th, 04:00 pm
ವೇದಿಕೆಯಲ್ಲಿರುವ ಗುಜರಾತಿನ ಗೌರವಾನ್ವಿತ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್ ಜಿ, ಗುಜರಾತ್‌ನ ನನ್ನ ಸಹೋದರ ಸಹೋದರಿಯರೆ ಮತ್ತು ವಿಶೇಷವಾಗಿ ಅಮ್ರೇಲಿಯ ನನ್ನ ಸಹೋದರ ಸಹೋದರಿಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿ 4,900 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
October 28th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿಂದು 4,900 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲು, ರಸ್ತೆ, ಜಲ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳನ್ನು ಒಳಗೊಂಡಿವೆ. ರಾಜ್ಯದ ಅಮ್ರೇಲಿ, ಜಾಮ್‌ನಗರ, ಮೊರ್ಬಿ, ದೈವಭೂಮಿ ದ್ವಾರಕಾ, ಜುನಾಗಢ್, ಪೋರಬಂದರ್, ಕಚ್ ಮತ್ತು ಬೊಟಾಡ್ ಜಿಲ್ಲೆಗಳ ನಾಗರಿಕರಿಗೆ ಪ್ರಯೋಜನ ನೀಡುತ್ತವೆ.ಅಕ್ಟೋಬರ್ 29 ರಂದು ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದಂದು 12,850 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿಯವರು ನೆರವೇರಿಸಲಿದ್ದಾರೆ
October 28th, 12:47 pm
ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 29 ರಂದು ಮಧ್ಯಾಹ್ನ 12:30 ಕ್ಕೆ ನವದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆ (ಎಐಐಎ)ಯಲ್ಲಿ ಸುಮಾರು 12,850 ಕೋಟಿ ರೂಪಾಯಿಗಳ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಚಾಲನೆಯನ್ನು ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.ಅಕ್ಟೋಬರ್ 20ರಂದು ವಾರಣಾಸಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 19th, 05:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 20, 2024ರಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2:00 ಗಂಟೆಗೆ ಆರ್.ಜೆ. ಶಂಕರ ಕಣ್ಣಿನ ಆಸ್ಪತ್ರೆಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಲಿದ್ದಾರೆ. ನಂತರ, ಸಂಜೆ 4:15 ರ ಸುಮಾರಿಗೆ, ಅವರು ವಾರಣಾಸಿಯಲ್ಲಿ ಬಹುವಿಧದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ 2024 ರಲ್ಲಿ ಉದ್ಯಮ ದಿಗ್ಗಜರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದ ಶ್ಲಾಘನೆ
October 15th, 02:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪಂನಲ್ಲಿ ನಡೆದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ (ITU-WTSA) 2024 ರ ಸಂದರ್ಭದಲ್ಲಿ ಇಂಡಿಯಾ ಮೊಬೈಲ್ ಕಾಂಗ್ರೆಸ್ನ 8 ನೇ ಆವೃತ್ತಿಯನ್ನು ಉದ್ಘಾಟಿಸಿದರು. ಡಬ್ಲ್ಯು ಟಿ ಎಸ್ ಎ ಎಂಬುದು ಡಿಜಿಟಲ್ ತಂತ್ರಜ್ಞಾನಗಳಿಗಾಗಿನ ವಿಶ್ವ ಸಂಸ್ಥೆಯ ಏಜೆನ್ಸಿಯಾದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಪ್ರಮಾಣೀಕರಣ ಕಾರ್ಯಕ್ಕಾಗಿ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಆಯೋಜಿಸಲಾಗುವ ಆಡಳಿತ ಸಮ್ಮೇಳನವಾಗಿದೆ. ಇದೇ ಮೊದಲ ಬಾರಿಗೆ ಐಟಿಯು – ಡಬ್ಲ್ಯುಟಿಎಸ್ಎ ಅನ್ನು ಭಾರತ ಮತ್ತು ಏಷ್ಯಾ-ಪೆಸಿಫಿಕ್ನಲ್ಲಿ ಆಯೋಜಿಸಲಾಗಿದೆ. ಇದು ದೂರಸಂಪರ್ಕ, ಡಿಜಿಟಲ್ ಮತ್ತು ಐಸಿಟಿ ವಲಯಗಳನ್ನು ಪ್ರತಿನಿಧಿಸುತ್ತಿರುವ 190 ಕ್ಕೂ ಹೆಚ್ಚು ದೇಶಗಳ 3,000 ಕ್ಕೂ ಹೆಚ್ಚು ಉದ್ಯಮ ನಾಯಕರು, ನೀತಿ-ನಿರೂಪಕರು ಮತ್ತು ತಂತ್ರಜ್ಞಾನ ತಜ್ಞರನ್ನು ಒಟ್ಟುಗೂಡಿಸಿರುವ ಪ್ರಮುಖ ಜಾಗತಿಕ ಕಾರ್ಯಕ್ರಮವಾಗಿದೆ.ಪ್ರಧಾನಮಂತ್ರಿಯವರು ಅಕ್ಟೋಬರ್ 15 ರಂದು ಐಟಿಯು ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಮ್ಮೇಳನ 2024 ಅನ್ನು ಉದ್ಘಾಟಿಸಲಿದ್ದಾರೆ
October 14th, 05:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 15 ರಂದು ಬೆಳಿಗ್ಗೆ 10 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಅಂತರರಾಷ್ಟ್ರೀಯ ದೂರಸಂಪರ್ಕ ಮಹಾಸಂಘ - ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಮ್ಮೇಳನ 2024 (ಡಬ್ಲ್ಯುಟಿಎಸ್ಎ) ಅನ್ನು ಉದ್ಘಾಟಿಸಲಿದ್ದಾರೆ.ಮುಂಬೈ ಮೆಟ್ರೋ ಲೈನ್ 3ರ ಆರೆ ಜೆವಿಎಲ್ ಆರ್ ನಿಂದ ಬಿಕೆಸಿ ವಿಭಾಗ ಉದ್ಘಾಟಣೆಯಾದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮುಂಬೈ ಜನತೆಗೆ ಅಭಿನಂದನೆ ಸಲ್ಲಿಸಿದರು
October 05th, 09:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮುಂಬೈ ಮೆಟ್ರೋ ಲೈನ್ 3ನೇ, ಹಂತ -1ರ ಆರೆ ಜೋಗೇಶ್ವರಿ-ವಿಖ್ರೋಲಿ ಲಿಂಕ್ ರಸ್ತೆಯಿಂದ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ವಿಭಾಗ ಉದ್ಘಾಟಣೆಯಾದ ಸಂದರ್ಭದಲ್ಲಿ ಮುಂಬೈ ಜನರನ್ನು ಅಭಿನಂದಿಸಿದರು. ಮುಂಬೈನ ಮೆಟ್ರೋ ಜಾಲ ವಿಸ್ತರಣೆಯಿಂದ ಮುಂಬೈ ಜನರಿಗೆ 'ಸುಗಮ ಜೀವನವು' ದೊರೆಯಲಿದೆ ಎಂದು ಅವರು ಹೇಳಿದರು.ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ 'ಪಿಎಂ ವಿಶ್ವಕರ್ಮ' ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 20th, 11:45 am
2 ದಿನಗಳ ಹಿಂದೆಯಷ್ಟೇ ವಿಶ್ವಕರ್ಮ ಜಯಂತಿ ಆಚರಿಸಿದ್ದೆವು. ಇಂದು ನಾವು ವಾರ್ಧಾದ ಪವಿತ್ರ ಭೂಮಿಯಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಯಶಸ್ಸನ್ನು ಆಚರಿಸುತ್ತಿದ್ದೇವೆ. 1932ರ ಇದೇ ದಿನದಂದು ಮಹಾತ್ಮ ಗಾಂಧೀಜಿ ಅವರು ಅಸ್ಪೃಶ್ಯತೆಯ ವಿರುದ್ಧ ತಮ್ಮ ಅಭಿಯಾನ ಆರಂಭಿಸಿದ್ದರು ಎಂಬುದು ಇಂದಿನ ವಿಶೇಷ. ಈ ಹಿನ್ನೆಲೆಯಲ್ಲಿ ವಿನೋಬಾ ಭಾವೆ ಅವರ ಪುಣ್ಯಭೂಮಿ, ಮಹಾತ್ಮ ಗಾಂಧಿ ಅವರ ‘ಕರ್ಮಭೂಮಿ’ ಮತ್ತು ವಾರ್ಧಾ ಭೂಮಿಯಲ್ಲಿ ವಿಶ್ವಕರ್ಮ ಯೋಜನೆಯ 1 ವರ್ಷದ ಸಂಭ್ರಮಾಚರಣೆಯು ನಮ್ಮ ‘ವಿಕಸಿತ ಭಾರತ’(ಅಭಿವೃದ್ಧಿ ಹೊಂದಿದ ಭಾರತ)ದ ಸಂಕಲ್ಪಕ್ಕೆ ಹೊಸ ಚೈತನ್ಯ ನೀಡುವ ಸಾಧನೆ ಮತ್ತು ಸ್ಫೂರ್ತಿಯ ಸಂಗಮವಾಗಿದೆ. ವಿಶ್ವಕರ್ಮ ಯೋಜನೆ ಮೂಲಕ ನಾವು ಶ್ರಮದ ಮೂಲಕ ಸಮೃದ್ಧಿ ಮತ್ತು ಕೌಶಲ್ಯದ ಮೂಲಕ ಉತ್ತಮ ಭವಿಷ್ಯದ ಬದ್ಧತೆ ಹೊಂದಿದ್ದೇವೆ. ವಾರ್ಧಾದಲ್ಲಿ ಬಾಪು ಅವರ ಸ್ಫೂರ್ತಿಗಳು ಈ ಬದ್ಧತೆಗಳನ್ನು ಪೂರೈಸಲು ನಮಗೆ ಸಹಾಯ ಮಾಡುತ್ತದೆ. ಈ ಉಪಕ್ರಮಕ್ಕೆ ಸಂಬಂಧಿಸಿದ ಎಲ್ಲರಿಗೂ ಮತ್ತು ದೇಶಾದ್ಯಂತದ ಎಲ್ಲಾ ಫಲಾನುಭವಿಗಳಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
September 20th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ‘ಆಚಾರ್ಯ ಚಾಣಕ್ಯ ಕೌಶಲ್ಯ ಅಭಿವೃದ್ಧಿ’ಯೋಜನೆ ಮತ್ತು ‘ಪುಣ್ಯಶ್ಲೋಕ ಅಹಲ್ಯಾದೇವಿ ಹೋಳ್ಕರ್ ಮಹಿಳಾ ಸ್ಟಾರ್ಟಪ್ ಯೋಜನೆʼಗೆ ಚಾಲನೆ ನೀಡಿದರು. ಪ್ರಧಾನಮಂತ್ರಿ ವಿಶ್ವಕರ್ಮ ಫಲಾನುಭವಿಗಳಿಗೆ ಪ್ರಮಾಣಪತ್ರಗಳು ಮತ್ತು ಸಾಲಗಳನ್ನು ಬಿಡುಗಡೆ ಮಾಡಿದರು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಒಂದು ವರ್ಷದ ಪ್ರಗತಿಯನ್ನು ಗುರುತಿಸುವ ಸ್ಮರಣಾರ್ಥ ಅಂಚೆಚೀಟಿಯನ್ನು ಬಿಡುಗಡೆ ಮಾಡಿದರು. ಮಹಾರಾಷ್ಟ್ರದ ಅಮರಾವತಿಯಲ್ಲಿ ಪ್ರಧಾನಮಂತ್ರಿ ಮೆಗಾ ಇಂಟಿಗ್ರೇಟೆಡ್ ಟೆಕ್ಸ್‌ಟೈಲ್ ರೀಜನ್ ಅಂಡ್ ಅಪಾರಲ್ (ಪಿಎಂ ಮಿತ್ರಾ) ಪಾರ್ಕ್ ಗೆ ಶ್ರೀ ಮೋದಿಯವರು ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನವನ್ನು ಪ್ರಧಾನಿಯವರು ವೀಕ್ಷಿಸಿದರು.ಸೆಪ್ಟೆಂಬರ್ 15-17ರ ವರೆಗೆ ಪ್ರಧಾನಮಂತ್ರಿ ಅವರು ಜಾರ್ಖಂಡ್, ಗುಜರಾತ್ ಮತ್ತು ಒಡಿಶಾಗೆ ಭೇಟಿ ನೀಡಲಿದ್ದಾರೆ
September 14th, 09:53 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 15 ರಂದು ಜಾರ್ಖಂಡ್‌ಗೆ ಭೇಟಿ ನೀಡಲಿದ್ದು, ಅಂದು ಬೆಳಗ್ಗೆ ಸುಮಾರು 10 ಗಂಟೆಗೆ ಅವರು ಟಾಟಾನಗರ-ಪಾಟ್ನಾ ನಡುವಿನ ವಂದೇ ಭಾರತ್ ರೈಲಿಗೆ ಜಾರ್ಖಂಡ್‌ನ ಟಾಟಾನಗರ ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರುನಿಶಾನೆ ತೋರಲಿದ್ದಾರೆ. ಬೆಳಗ್ಗೆ 10.30ರ ಸುಮಾರಿಗೆ ಅವರು 660 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ವಿವಿಧ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಜಾರ್ಖಂಡ್‌ನ ಟಾಟಾನಗರದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ(ಪಿಎಂಎವೈ-ಜಿ) ಯೋಜನೆಯ 20 ಸಾವಿರ ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ವಿತರಿಸಲಿದ್ದಾರೆ.ಸೆಪ್ಟೆಂಬರ್ 11ರಂದು ಸೆಮಿಕಾನ್ ಇಂಡಿಯಾ 2024ನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿಯವರು
September 09th, 08:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 2024ರ ಸೆಪ್ಟೆಂಬರ್ 11ರಂದು ಬೆಳಿಗ್ಗೆ 10:30ರ ಸುಮಾರಿಗೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್ ಪೋ ಮಾರ್ಟ್ ನಲ್ಲಿ ಸೆಮಿಕಾನ್ ಇಂಡಿಯಾ 2024ನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣವನ್ನು ಕೂಡಾ ಮಾಡಲಿದ್ದಾರೆ.ಜೂನ್ 20 ಮತ್ತು 21ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
June 19th, 04:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜೂನ್ 20 ಮತ್ತು 21ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ.ಬಿಹಾರದ ನಳಂದ ಪುರಾತನ ಅವಶೇಷಗಳ ತಾಣಗಳಿಗೆ ಪ್ರಧಾನಮಂತ್ರಿ ಭೇಟಿ
June 19th, 01:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ನಳಂದದಲ್ಲಿರುವ ಪುರಾತನ ಅವಶೇಷಗಳ ತಾಣಗಳಿಗೆ ಭೇಟಿ ನೀಡಿದರು. ಮೂಲ ನಳಂದಾ ವಿಶ್ವವಿದ್ಯಾಲಯವು ವಿಶ್ವದ ಮೊದಲ ವಸತಿ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿದೆ. ನಳಂದದ ಪುರಾತನ ಅವಶೇಷಗಳನ್ನು 2016 ರಲ್ಲಿ ವಿಶ್ವಸಂಸ್ಥೆಯ ಪಾರಂಪರಿಕ ತಾಣ ಎಂದು ಘೋಷಿಸಲಾಗಿತ್ತು.ಜೂನ್ 18 - 19 ರಂದು ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ಪ್ರಧಾನಮಂತ್ರಿ ಭೇಟಿ
June 17th, 09:52 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 18 ಮತ್ತು 19 ರಂದು ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ.Aim of NDA is to build a developed Andhra Pradesh for developed India: PM Modi in Palnadu
March 17th, 05:30 pm
Ahead of the Lok Sabha election 2024, PM Modi addressed an emphatic NDA rally in Andhra Pradesh’s Palnadu today. Soon after the election dates were announced, he commenced his campaign, stating, The bugle for the Lok Sabha election has just been blown across the nation, and today I am among everyone in Andhra Pradesh. The PM said, “This time, the election result is set to be announced on June 4th. Now, the nation is saying - '4 June Ko 400 Paar’, ' For a developed India... 400 Paar. For a developed Andhra Pradesh... 400 Paar.PM Modi campaigns in Andhra Pradesh’s Palnadu
March 17th, 05:00 pm
Ahead of the Lok Sabha election 2024, PM Modi addressed an emphatic NDA rally in Andhra Pradesh’s Palnadu today. Soon after the election dates were announced, he commenced his campaign, stating, The bugle for the Lok Sabha election has just been blown across the nation, and today I am among everyone in Andhra Pradesh. The PM said, “This time, the election result is set to be announced on June 4th. Now, the nation is saying - '4 June Ko 400 Paar’, ' For a developed India... 400 Paar. For a developed Andhra Pradesh... 400 Paar.