ಆಸ್ಟ್ರೇಲಿಯಾ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದ (ಇಂಡ್-ಆಸ್ ಇಸಿಟಿಎ) ಜಾರಿಗೆ ಬಂದಿರುವುದಕ್ಕೆ ಪ್ರಧಾನಮಂತ್ರಿಯವರು ಸಂತಸ ವ್ಯಕ್ತಪಡಿಸಿದ್ದಾರೆ
December 29th, 06:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತ-ಆಸ್ಟ್ರೇಲಿಯಾ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದ (ಇಂಡ್-ಆಸ್ ಇಸಿಟಿಎ) (IndAus ECTA) ಜಾರಿಗೆ ಬಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ನಮ್ಮ 'ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ'ಗೆ ಇದು ಐತಿಹಾಸಿಕ ಕ್ಷಣವಾಗಿದೆ ಎಂದು ಶ್ರೀ ಮೋದಿ ಹೇಳಿದರು.ಭಾರತ- ಆಸ್ಟ್ರೇಲಿಯಾ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದ (ಇಂಡ್ ಆಸ್ ಇಸಿಟಿಎ) ಸಹಿ ಹಾಕಿದ ವರ್ಚುವಲ್ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
April 02nd, 10:01 am
ಒಂದು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ ಇಂದು, ಇದು ನನ್ನ ಸ್ನೇಹಿತ ಸ್ಕಾಟ್ ಅವರೊಂದಿಗೆ ನನ್ನ ಮೂರನೇ ಮುಖಾಮುಖಿ ಸಂವಾದವಾಗಿದೆ. ಕಳೆದ ವಾರ ವರ್ಚುವಲ್ ಶೃಂಗಸಭೆಯಲ್ಲಿ ನಾವು ಬಹಳ ಫಲಪ್ರದ ಚರ್ಚೆ ನಡೆಸಿದ್ದೇವು. ಆ ವೇಳೆ, ನಾವು ನಮ್ಮ ತಂಡಗಳಿಗೆ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದದ ಮಾತುಕತೆಗಳನ್ನು ಶೀಘ್ರವಾಗಿ ಅಂತಿಮಗೊಳಿಸುವಂತೆ ಸೂಚಿಸಿದ್ದೇವೆ ಮತ್ತು ಇಂದು ಈ ಮಹತ್ವದ ಒಪ್ಪಂದಕ್ಕೆ ಸಹಿ ಹಾಕುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ. ಈ ಅಸಾಧಾರಣ ಸಾಧನೆಗಾಗಿ, ನಾನು ಎರಡೂ ದೇಶಗಳ ವಾಣಿಜ್ಯ ಮಂತ್ರಿಗಳು ಮತ್ತು ಅವರ ಅಧಿಕಾರಿಗಳನ್ನು ಹೃದಯ ಪೂರ್ವಕವಾಗಿ ಅಭಿನಂದಿಸುತ್ತೇನೆ.ಭಾರತ-ಆಸ್ಟ್ರೇಲಿಯಾ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದ-ಇಂಡ್ ಆಸ್ ಇಸಿಟಿಎ ಸಹಿಗೆ ಸಾಕ್ಷಿಯಾದ ಪ್ರಧಾನಮಂತ್ರಿ
April 02nd, 10:00 am
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಗೌರವಾನ್ವಿತ ಸ್ಕಾಟ್ ಮಾರಿಸನ್ ಅವರ ಸಮಕ್ಷಮದಲ್ಲಿ ಇಂದು ನಡೆದ ವರ್ಚುವಲ್ ಸಮಾರಂಭದಲ್ಲಿ ಭಾರತ ಸರ್ಕಾರದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಜವಳಿ ಸಚಿವ ಶ್ರೀ ಪಿಯೂಷ್ ಗೋಯಲ್ ಮತ್ತು ಆಸ್ಟ್ರೇಲಿಯಾ ಸರ್ಕಾರದ ವ್ಯಾಪಾರ, ಪ್ರವಾಸೋದ್ಯಮ ಮತ್ತು ಬಂಡವಾಳ ಹೂಡಿಕೆ ಸಚಿವ ಶ್ರೀ ಡಾನ್ ಟೆಹಾನ್, ಭಾರತ-ಆಸ್ಟ್ರೇಲಿಯಾ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದಕ್ಕೆ (IndAus ECTA- ಇಂಡ್ ಆಸ್ ಇಸಿಟಿಎ) ಸಹಿ ಹಾಕಿದರು.