ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ ಮಹಾನ್ ವ್ಯಕ್ತಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಮಂತ್ರಿ
March 12th, 03:21 pm
ಸ್ವಾತಂತ್ರ್ಯ ಆಂದೋಲನದ ಎಲ್ಲಾ ಚಳವಳಿಗಳು, ದಂಗೆ, ಹೋರಾಟ ಮತ್ತು ಹೋರಾಟಗಾರರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದ ಯಶೋಗಾಥೆಯಲ್ಲಿ ಸರಿಯಾಗಿ ಗುರುತಿಸಲಾಗದ ಚಳವಳಿ, ಹೋರಾಟಗಳು ಮತ್ತು ವ್ಯಕ್ತಿತ್ವಗಳಿಗೆ ಅವರು ವಿಶೇಷ ಗೌರವ ಸಲ್ಲಿಸಿದರು. ಅಹಮದಾಬಾದ್ ನ ಸಾಬರಮತಿ ಆಶ್ರಮದಲ್ಲಿಂದು “ ಸ್ವಾತಂತ್ರ್ಯದ ಅಮೃತ ಮಹೋತ್ಸವ “ಭಾರತ@75” ಉದ್ಘಾಟಿಸಿ ಅವರು ಮಾತನಾಡಿದರು.“ಅಜಾದಿ ಕಾ ಅಮೃತ್ ಮಹೋತ್ಸವ್” ಪೂರ್ವಭಾವೀ ಕಾರ್ಯಕ್ರಮಗಳ ಉದ್ಘಾಟನಾ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
March 12th, 10:31 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮದಾಬಾದ್ ನ ಸಾಬರಮತಿ ಆಶ್ರಮದಿಂದ ಪಾದಯಾತ್ರೆಗೆ ಹಸಿರು ನಿಶಾನೆ ತೋರಿ, (ಭಾರತ@75), ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭದ ಪೂರ್ವಭಾವಿ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಅವರು ಭಾರತ@75 ಆಚರಣೆ ಕುರಿತ ವಿವಿಧ ಇತರ ಸಾಂಸ್ಕೃತಿಕ ಮತ್ತು ಡಿಜಿಟಲ್ ಉಪಕ್ರಮಗಳನ್ನೂ ಉದ್ಘಾಟಿಸಿದರು. ಗುಜರಾತ್ ರಾಜ್ಯಪಾಲ ಶ್ರೀ ಆಚಾರ್ಯ ದೇವವ್ರತ್, ಕೇಂದ್ರ ಸಂಸ್ಕೃತಿ ಖಾತೆ ರಾಜ್ಯ ಸಚಿವ (ಸ್ವತಂತ್ರ ನಿರ್ವಹಣೆ) ಶ್ರೀ ಪ್ರಹ್ಲಾದ ಸಿಂಗ್ ಪಟೇಲ್, ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.ಭಾರತ@75 “ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಪೂರ್ವಭಾವಿ ಚಟುವಟಿಕೆಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
March 12th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮದಾಬಾದ್ ನ ಸಾಬರಮತಿ ಆಶ್ರಮದಿಂದ ಪಾದಯಾತ್ರೆಗೆ ಹಸಿರು ನಿಶಾನೆ ತೋರಿ, (ಭಾರತ@75), ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭದ ಪೂರ್ವಭಾವಿ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಅವರು ಭಾರತ@75 ಆಚರಣೆ ಕುರಿತ ವಿವಿಧ ಇತರ ಸಾಂಸ್ಕೃತಿಕ ಮತ್ತು ಡಿಜಿಟಲ್ ಉಪಕ್ರಮಗಳನ್ನೂ ಉದ್ಘಾಟಿಸಿದರು. ಗುಜರಾತ್ ರಾಜ್ಯಪಾಲ ಶ್ರೀ ಆಚಾರ್ಯ ದೇವವ್ರತ್, ಕೇಂದ್ರ ಸಂಸ್ಕೃತಿ ಖಾತೆ ರಾಜ್ಯ ಸಚಿವ (ಸ್ವತಂತ್ರ ನಿರ್ವಹಣೆ) ಶ್ರೀ ಪ್ರಹ್ಲಾದ ಸಿಂಗ್ ಪಟೇಲ್, ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.ಸಾಬರಮತಿ ಆಶ್ರಮದಿಂದ ಅಮೃತ ಮಹೋತ್ಸವ ಕಾರ್ಯಕ್ರಮ ಆರಂಭ: ಪ್ರಧಾನ ಮಂತ್ರಿ
March 12th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹಮದಾಬಾದ್ ನ ಸಾಬರಮತಿ ಆಶ್ರಮದಿಂದ ಆರಂಭವಾಗುವ ಪಾದಯಾತ್ರೆ (ಸ್ವಾತಂತ್ರ್ಯ ನಡಿಗೆ) ಗೆ ಹಸಿರು ನಿಶಾನೆ ತೋರಲಿದ್ದಾರೆ.ಮಾರ್ಚ್ 12 ರಂದು ʻಸ್ವಾತಂತ್ರ್ಯದ ಅಮೃತ ಮಹೋತ್ಸವʼಕ್ಕೆ (ಆಜಾದಿ ಕಾ ಅಮೃತ್ ಮಹೋತ್ಸವ್) ಸಂಬಂಧಿಸಿದ ಕಾರ್ಯಕ್ರಮಗಳನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ
March 11th, 03:30 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 2021ರ ಮಾರ್ಚ್ 12 ರಂದು ಅಹಮದಾಬಾದ್‌ನ ಸಾಬರಮತಿ ಆಶ್ರಮದಿಂದ 'ಪಾದಯಾತ್ರೆʼಗೆ (ಸ್ವಾತಂತ್ರ್ಯ ಜಾಥಾ) ಚಾಲನೆ ನೀಡಲಿದ್ದಾರ. ಜೊತೆಗೆ, 'ಸ್ವಾತಂತ್ರ್ಯದ ಅಮೃತ ಮಹೋತ್ಸವ'ದ (ಭಾರತ @ 75) ಪ್ರಾರಂಭೋತ್ಸವ ಕಾರ್ಯಕ್ರಮಗಳನ್ನು ಅವರು ಉದ್ಘಾಟನೆ ಮಾಡಲಿದ್ದಾರೆ. ʻಭಾರತ@75ʼ ಅಂಗವಾಗಿ ಇತರ ಸಾಂಸ್ಕೃತಿಕ ಮತ್ತು ಡಿಜಿಟಲ್ ಉಪಕ್ರಮಗಳಿಗೂ ಚಾಲನೆ ನೀಡಲಿರುವ ಪ್ರಧಾನಿ ಸಾಬರಮತಿ ಆಶ್ರಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬೆಳಗ್ಗೆ 10: 30 ಕ್ಕೆ ಪ್ರಾರಂಭವಾಗಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಹಾಯಕ ಸಚಿವ (ಸ್ವತಂತ್ರ್ಯ ನಿರ್ವಹಣೆ) ಶ್ರೀ ಪ್ರಹಲಾದ್ ಸಿಂಗ್ ಪಟೇಲ್ ಮತ್ತು ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಉಪಸ್ಥಿತರಿರಲಿದ್ದಾರೆ.