ಪ್ರಧಾನಿ ಮೋದಿಯವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಿಂದ ದೂರವಾಣಿ ಕರೆ ಸ್ವೀಕರಿಸಿದರು
August 16th, 04:30 pm
ಪ್ರಧಾನಿ ಮೋದಿ ಅವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಪ್ರೊ. ಮೊಹಮ್ಮದ್ ಯೂನಸ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು, ಅಲ್ಲಿ ಅವರು ಪ್ರಜಾಪ್ರಭುತ್ವ ಮತ್ತು ಶಾಂತಿಯುತ ಬಾಂಗ್ಲಾದೇಶವನ್ನು ಬೆಂಬಲಿಸುವ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದರು. ಅಲ್ಪಸಂಖ್ಯಾತ ಸಮುದಾಯಗಳನ್ನು, ವಿಶೇಷವಾಗಿ ಹಿಂದೂಗಳನ್ನು ರಕ್ಷಿಸುವ ಮಹತ್ವವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು.Our connectivity initiatives emerged as a lifeline during the COVID Pandemic: PM Modi
November 01st, 11:00 am
PM Modi and President Sheikh Hasina of Bangladesh jointly inaugurated three projects in Bangladesh. We have prioritized the strengthening of India-Bangladesh Relations by enabling robust connectivity and creating a Smart Bangladesh, PM Modi said.ಭಾರತ ಮತ್ತು ಬಾಂಗ್ಲಾದೇಶದ ಪ್ರಧಾನ ಮಂತ್ರಿಗಳು ನವೆಂಬರ್ ಒಂದರಂದು ಮೂರು ಅಭಿವೃದ್ಧಿ ಯೋಜನೆಗಳನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ
October 31st, 05:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಅವರು ಮೂರು ಭಾರತೀಯ ನೆರವಿನ ಅಭಿವೃದ್ಧಿ ಯೋಜನೆಗಳನ್ನು 1 ನವೆಂಬರ್ 2023 ರಂದು ಬೆಳಿಗ್ಗೆ ಸುಮಾರು 11 ಗಂಟೆಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಜಂಟಿಯಾಗಿ ಉದ್ಘಾಟಿಸಲಿದ್ದಾರೆ. ಈ ಮೂರು ಯೋಜನೆಗಳು ಅಖೌರಾ - ಅಗರ್ತಲಾ ಗಡಿಯಾಚೆಗಿನ ರೈಲು ಸಂಪರ್ಕ ; ಖುಲ್ನಾ - ಮೊಂಗ್ಲಾ ಬಂದರು ರೈಲು ಮಾರ್ಗ; ಮತ್ತು ಮೈತ್ರೀ ಸೂಪರ್ ಥರ್ಮಲ್ ಪವರ್ ಪ್ಲಾಂಟ್ನ ಘಟಕ – II ಅನ್ನು ಒಳಗೊಂಡಿವೆ.ʻಇಂಡಿಯಾ ಟುಡೇ ಕಾನ್‌ಕ್ಲೇವ್ʼನಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 18th, 11:17 pm
`ಇಂಡಿಯಾ ಟುಡೇ ಕಾನ್‌ಕ್ಲೇವ್ʼನಲ್ಲಿ ನಮ್ಮೊಂದಿಗಿರುವ ಎಲ್ಲ ಗಣ್ಯರಿಗೆ ಶುಭಾಶಯಗಳು! ಡಿಜಿಟಲ್ ಮಾಧ್ಯಮದ ಮೂಲಕ ನಮ್ಮೊಂದಿಗೆ ಸೇರಿದ ಭಾರತ ಮತ್ತು ವಿದೇಶಗಳ ವೀಕ್ಷಕರು ಮತ್ತು ಓದುಗರಿಗೆ ಶುಭಾಶಯಗಳು. ಈ ಸಮಾವೇಶದ ವಿಷಯ - ʻಭಾರತದ ಘಳಿಗೆʼ (ದಿ ಇಂಡಿಯಾ ಮೂಮೆಂಟ್) ಎಂಬುದನ್ನು ತಿಳಿದು ನನಗೆ ಸಂತೋಷವಾಗಿದೆ. ಇಂದು, ವಿಶ್ವದ ಪ್ರಮುಖ ಅರ್ಥಶಾಸ್ತ್ರಜ್ಞರು, ವಿಶ್ಲೇಷಕರು, ಚಿಂತಕರು ಇದು ʻಭಾರತದ ಘಳಿಗೆʼ ಎಂದು ಒಗ್ಗಟ್ಟಿನಿಂದ ಹೇಳುತ್ತಿದ್ದಾರೆ. ಆದರೆ ʻಇಂಡಿಯಾ ಟುಡೇ ಸಮೂಹʼವು ಈ ಆಶಾವಾದವನ್ನು ವ್ಯಕ್ತಪಡಿಸಿರುವುದು 'ಮತ್ತಷ್ಟು ವಿಶೇಷ'ವಾಗಿದೆ. ಅಂದಹಾಗೆ, 20 ತಿಂಗಳ ಹಿಂದೆ ನಾನು ಕೆಂಪು ಕೋಟೆಯಿಂದ ಮಾಡಿದ ಭಾಷಣದ ವೇಳೆ – ಭಾರತಕ್ಕೆ ʻಇದು ಸರಿಯಾದ ಸಮಯ, ಇದೇ ಸಮಯʼ ಎಂದು ಹೇಳಿದ್ದೆ. ಆದರೆ ಈ ಸ್ಥಾನವನ್ನು ತಲುಪಲು 20 ತಿಂಗಳುಗಳು ಬೇಕಾಯಿತು. ಆಗಲೂ - ʻಇದು ಭಾರತದ ಘಳಿಗೆʼ ಎಂಬುದೇ ಸ್ಫೂರ್ತಿಯಾಗಿತ್ತು.ʻಇಂಡಿಯಾ ಟುಡೇ ಕಾನ್‌ಕ್ಲೇವ್ʼ ಉದ್ದೇಶಿಸಿ ಪ್ರಧಾನಿ ಭಾಷಣ
March 18th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ `ಹೋಟೆಲ್ ತಾಜ್ ಪ್ಯಾಲೇಸ್’ನಲ್ಲಿ ನಡೆದ `ಇಂಡಿಯಾ ಟುಡೇ ಕಾನ್‌ಕ್ಲೇವ್ʼ ಉದ್ದೇಶಿಸಿ ಮಾತನಾಡಿದರು.`ಭಾರತ-ಬಾಂಗ್ಲಾದೇಶ ಸ್ನೇಹ ಕೊಳವೆ ಮಾರ್ಗʼದ (ಇಂಧನ ಕೊಳವೆ ಮಾರ್ಗ) ಜಂಟಿ ವರ್ಚುವಲ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಕನ್ನಡ ಅನುವಾದ
March 18th, 05:10 pm
ಇಂದು ಭಾರತ-ಬಾಂಗ್ಲಾದೇಶ ಬಾಂಧವ್ಯದ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ʻಭಾರತ-ಬಾಂಗ್ಲಾದೇಶ ಸ್ನೇಹ ಕೊಳವೆ ಮಾರ್ಗʼಕ್ಕೆ (ಇಂಧನ ಕೊಳವೆ ಮಾರ್ಗಕ್ಕೆ) ನಾವು 2018ರ ಸೆಪ್ಟೆಂಬರ್‌ನಲ್ಲಿ ಶಂಕುಸ್ಥಾಪನೆ ನೆರವೇರಿಸಿದೆವು. ಇಂದು ಪ್ರಧಾನಮಂತ್ರಿ ಶೇಖ್ ಹಸೀನಾ ಅವರೊಂದಿಗೆ ಇದನ್ನು ಉದ್ಘಾಟಿಸುವ ಅವಕಾಶ ಬಂದಿರುವುದು ನನಗೆ ಸಂತೋಷ ತಂದಿದೆ.ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಭಾರತ-ಬಾಂಗ್ಲಾದೇಶ ಮೈತ್ರಿ ಪೈಪ್ಲೈನ್ ಅನ್ನು ಜಂಟಿಯಾಗಿ ಉದ್ಘಾಟಿಸಿದರು
March 18th, 05:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಿ ಶ್ರೀಮತಿ ಶೇಖ್ ಹಸೀನಾ ಅವರು ಇಂದು ಭಾರತ-ಬಾಂಗ್ಲಾದೇಶ ಮೈತ್ರಿ ಪೈಪ್ಲೈನ್ (ಐ ಬಿ ಎಫ್ ಪಿ) ಅನ್ನು ವರ್ಚುವಲ್ ವಿಧಾನದಲ್ಲಿ ಜಂಟಿಯಾಗಿ ಉದ್ಘಾಟಿಸಿದರು. ಈ ಪೈಪ್ಲೈನ್ನ ನಿರ್ಮಾಣಕ್ಕೆ ಸೆಪ್ಟೆಂಬರ್ 2018 ರಲ್ಲಿ ಇಬ್ಬರೂ ಪ್ರಧಾನ ಮಂತ್ರಿಗಳು ಅಡಿಪಾಯ ಹಾಕಿದ್ದರು. ನುಮಾಲಿಗಢ್ ರಿಫೈನರಿ ಲಿಮಿಟೆಡ್ 2015 ರಿಂದ ಬಾಂಗ್ಲಾದೇಶಕ್ಕೆ ಪೆಟ್ರೋಲಿಯಂ ಉತ್ಪನ್ನಗಳನ್ನು ಪೂರೈಸುತ್ತಿದೆ. ಇದು ಭಾರತ ಮತ್ತು ಅದರ ನೆರೆಹೊರೆಯ ರಾಷ್ಟ್ರಗಳ ನಡುವಿನ ಎರಡನೇ ಗಡಿಯಾಚೆಗಿನ ಇಂಧನ ಪೈಪ್ಲೈನ್ ಆಗಿದೆ.ಭಾರತ ಮತ್ತು ಬಾಂಗ್ಲಾದೇಶದ ಪ್ರಧಾನ ಮಂತ್ರಿಗಳಿಂದ ಭಾರತ-ಬಾಂಗ್ಲಾದೇಶ ಸ್ನೇಹ ಪೈಪ್ ಲೈನನ್ನು ವರ್ಚುವಲ್ ಮೂಲಕ ಉದ್ಘಾಟನೆ
March 16th, 06:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಭಾರತ-ಬಾಂಗ್ಲಾದೇಶ ನಡುವಿನ ಪೈಪ್ಲೈನ್ ಅನ್ನು 18 ಮಾರ್ಚ್ 2023 ರಂದು ಭಾರತೀಯ ಕಾಲಮಾನ ಐದು ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.