ಇಂಧನ ವಲಯದ ಉನ್ನತ ಸಿ.ಇ.ಒ.ಗಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ
February 06th, 09:34 pm
ಗೋವಾದಲ್ಲಿ ನಡೆದ ಭಾರತೀಯ ಇಂಧನ ಸಪ್ತಾಹದಲ್ಲಿ ಇಂಧನ ಕ್ಷೇತ್ರದ ಉನ್ನತ ಸಿ.ಇ.ಒ.ಗಳೊಂದಿಗೆ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಾದ ನಡೆಸಿದರು.ಗೋವಾದಲ್ಲಿ ನಡೆದ ಭಾರತ ಇಂಧನ ಸಪ್ತಾಹ 2024 ಉದ್ಘಾಟನೆ ವೇಳೆ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅನುವಾದ
February 06th, 12:00 pm
ಇದು ಭಾರತ ಇಂಧನ ಸಪ್ತಾಹದ ಎರಡನೇ ಆವೃತ್ತಿ, ನಾನು ನಿಮ್ಮೆಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸುತ್ತೇನೆ. ಇದು ಕ್ರಿಯಾಶೀಲ ಶಕ್ತಿಗೆ ಹೆಸರಾದ ರಾಜ್ಯ ಗೋವಾದಲ್ಲಿ ನಡೆಯುತ್ತಿರುವುದು ನನಗೆ ಅತೀವ ಆನಂದ ತಂದಿದೆ. ತನ್ನ ಆತಿಥ್ಯಕ್ಕೆ ಹೆಸರುವಾಸಿಯಾದ ಗೋವಾ ತನ್ನ ಶ್ರೀಮಂತ ಸೌಂದರ್ಯ ಮತ್ತು ಸಂಸ್ಕೃತಿಯಿಂದಾಗಿ ಜಗತ್ತಿನೆಲ್ಲೆಡೆಯಿಂದ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಪ್ರಸ್ತುತ ಗೋವಾ ಅಭಿವೃದ್ಧಿಯಲ್ಲಿ ಹೊಸ ಎತ್ತರಕ್ಕೆ ಏರುತ್ತಿದೆ. ಆದ್ದರಿಂದ, ಪರಿಸರ ಪ್ರಜ್ಞೆ ಮತ್ತು ಸುಸ್ಥಿರ ಭವಿಷ್ಯವನ್ನು ಚರ್ಚಿಸಲು ನಾವು ಸಭೆ ನಡೆಸುತ್ತಿರುವಾಗ, ಗೋವಾ ಒಂದು ಸೂಕ್ತ ಸ್ಥಳವಾಗಿದೆ. ಈ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ನಮ್ಮ ಗೌರವಾನ್ವಿತ ವಿದೇಶಿ ಅತಿಥಿಗಳು ಜೀವಮಾನವಿಡೀ ಗೋವಾದ ಅಚ್ಚುಮೆಚ್ಚಿನ ನೆನಪುಗಳನ್ನು ತಮ್ಮೊಂದಿಗೆ ಒಯ್ಯುತ್ತಾರೆಂಬ ವಿಶ್ವಾಸ ನನಗಿದೆಇಂಡಿಯಾ ಇಂಧನ ಸಪ್ತಾಹ-2024 ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನ ಮಂತ್ರಿ
February 06th, 11:18 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋವಾದಲ್ಲಿಂದು “ಭಾರತ ಇಂಧನ ಸಪ್ತಾಹ-2024” ಕಾರ್ಯಕ್ರಮ ಉದ್ಘಾಟಿಸಿದರು. “ಭಾರತ ಇಂಧನ ಸಪ್ತಾಹ-2024” ಕಾರ್ಯಕ್ರಮವು ಭಾರತದ ಅತಿ ದೊಡ್ಡ ಮತ್ತು ಎಲ್ಲವನ್ನು ಒಳಗೊಂಡಿರುವ ಇಂಧನ ಪ್ರದರ್ಶನ ಮತ್ತು ಸಮ್ಮೇಳನವಾಗಿದ್ದು, ಭಾರತದ ಇಂಧನ ಪರಿವರ್ತನೆಯ ಗುರಿಗಳನ್ನು ವೇಗಗೊಳಿಸಲು ಸಂಪೂರ್ಣ ಇಂಧನ ಮೌಲ್ಯ ಸರಪಳಿಯನ್ನು ಒಟ್ಟುಗೂಡಿಸುತ್ತದೆ. ಪ್ರಧಾನ ಮಂತ್ರಿ ಅವರು ಜಾಗತಿಕ ಮಟ್ಟದ ತೈಲ ಮತ್ತು ಅನಿಲ ಕ್ಷೇತ್ರದ ಸಿಇಒಗಳು ಮತ್ತು ತಜ್ಞರೊಂದಿಗೆ ದುಂಡುಮೇಜಿನ ಸಭೆ ನಡೆಸಿದರು.ಫೆ.6ರಂದು ಗೋವಾಗೆ ಪ್ರಧಾನ ಮಂತ್ರಿ ಭೇಟಿ
February 05th, 11:30 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ಫೆ.6ರಂದು ಗೋವಾಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ ಸುಮಾರು 10.30ಕ್ಕೆ ಪ್ರಧಾನ ಮಂತ್ರಿ ಅವರು ಒಎನ್ ಜಿಸಿ ಸಾಗರ ಸಂರಕ್ಷಣಾ(ಸರ್ವೈವಲ್) ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಬೆಳಗ್ಗೆ ಸುಮಾರು 10.45ಕ್ಕೆ ಅವರು ಇಂಡಿಯಾ ಇಂಧನ ಸಪ್ತಾಹ-2024 ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಂತರ ಮಧ್ಯಾಹ್ನ ಸುಮಾರು 2.45ಕ್ಕೆ ಅವರು ವಿಕ್ಷಿತ್ ಭಾರತ್, ವಿಕ್ಷಿತ್ ಗೋವಾ-2047 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಬೆಂಗಳೂರಿನಲ್ಲಿ ನಡೆದ 'ಭಾರತ ಇಂಧನ ಸಪ್ತಾಹ 2023'ರಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲೀಷ್ ಅನುವಾದ
February 06th, 11:50 am
ವಿನಾಶಕಾರಿ ಭೂಕಂಪದಿಂದ ಹಾನಿಗೊಳಗಾದ ಟರ್ಕಿಯಲ್ಲಿನ ಪರಿಸ್ಥಿತಿಯನ್ನು ನಾವು ಗಮನಿಸುತ್ತಿದ್ದೇವೆ. ಅಲ್ಲಿ ದುರಂತ ಸಾವುಗಳು ಮತ್ತು ವ್ಯಾಪಕ ಹಾನಿಯ ವರದಿಗಳಿವೆ. ಟರ್ಕಿಯ ಸುತ್ತಲಿನ ದೇಶಗಳು ಸಹ ಭೂಕಂಪದ ಪ್ರಭಾವಕ್ಕೆ ಒಳಗಾಗಿ ಹಾನಿಗೀಡಾಗಿವೆ. ಭಾರತದ 140 ಕೋಟಿ ಜನರ ಸಹಾನುಭೂತಿ ಅಲ್ಲಿನ ಎಲ್ಲಾ ಭೂಕಂಪ ಸಂತ್ರಸ್ತರ ಪರವಾಗಿ ಇದೆ. ಭೂಕಂಪ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಭಾರತ ಬದ್ಧವಾಗಿದೆ.ಬೆಂಗಳೂರಿನಲ್ಲಿ ಭಾರತ ಇಂಧನ ಸಪ್ತಾಹ -2023ರನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
February 06th, 11:46 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಭಾರತ ಇಂಧನ ಸಪ್ತಾಹ (ಐಇಡಬ್ಲ್ಯೂ) 2023 ಅನ್ನು ಉದ್ಘಾಟಿಸಿದರು. ಇಂಡಿಯನ್ ಆಯಿಲ್ ನ 'ಅನ್ ಬಾಟಲ್ಡ್' ಉಪಕ್ರಮದ ಅಡಿಯಲ್ಲಿ ಪ್ರಧಾನಮಂತ್ರಿಯವರು ಸಮವಸ್ತ್ರಗಳನ್ನು ಬಿಡುಗಡೆ ಮಾಡಿದರು. ಈ ಸಮವಸ್ತ್ರಗಳನ್ನು ಮರುಬಳಕೆ ಮಾಡಿದ ಪಿ.ಇ.ಟಿ ಬಾಟಲಿಗಳಿಂದ ತಯಾರಿಸಲಾಗುತ್ತದೆ. ಇಂಡಿಯನ್ ಆಯಿಲ್ ನ ಒಳಾಂಗಣ ಸೌರ ಅಡುಗೆ ವ್ಯವಸ್ಥೆಯ ಟ್ವಿನ್-ಕುಕ್ ಟಾಪ್ ಮಾದರಿಯನ್ನು ಅವರು ಲೋಕಾರ್ಪಣೆ ಮಾಡಿದರು ಮತ್ತು ಅದರ ವಾಣಿಜ್ಯ ಬಳಕೆಗೆ ಹಸಿರು ನಿಶಾನೆ ತೋರಿದರು.