ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ 2024 ರಲ್ಲಿ ಉದ್ಯಮ ದಿಗ್ಗಜರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದ ಶ್ಲಾಘನೆ

October 15th, 02:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪಂನಲ್ಲಿ ನಡೆದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ (ITU-WTSA) 2024 ರ ಸಂದರ್ಭದಲ್ಲಿ ಇಂಡಿಯಾ ಮೊಬೈಲ್ ಕಾಂಗ್ರೆಸ್ನ 8 ನೇ ಆವೃತ್ತಿಯನ್ನು ಉದ್ಘಾಟಿಸಿದರು. ಡಬ್ಲ್ಯು ಟಿ ಎಸ್ ಎ ಎಂಬುದು ಡಿಜಿಟಲ್ ತಂತ್ರಜ್ಞಾನಗಳಿಗಾಗಿನ ವಿಶ್ವ ಸಂಸ್ಥೆಯ ಏಜೆನ್ಸಿಯಾದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಪ್ರಮಾಣೀಕರಣ ಕಾರ್ಯಕ್ಕಾಗಿ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಆಯೋಜಿಸಲಾಗುವ ಆಡಳಿತ ಸಮ್ಮೇಳನವಾಗಿದೆ. ಇದೇ ಮೊದಲ ಬಾರಿಗೆ ಐಟಿಯು – ಡಬ್ಲ್ಯುಟಿಎಸ್ಎ ಅನ್ನು ಭಾರತ ಮತ್ತು ಏಷ್ಯಾ-ಪೆಸಿಫಿಕ್ನಲ್ಲಿ ಆಯೋಜಿಸಲಾಗಿದೆ. ಇದು ದೂರಸಂಪರ್ಕ, ಡಿಜಿಟಲ್ ಮತ್ತು ಐಸಿಟಿ ವಲಯಗಳನ್ನು ಪ್ರತಿನಿಧಿಸುತ್ತಿರುವ 190 ಕ್ಕೂ ಹೆಚ್ಚು ದೇಶಗಳ 3,000 ಕ್ಕೂ ಹೆಚ್ಚು ಉದ್ಯಮ ನಾಯಕರು, ನೀತಿ-ನಿರೂಪಕರು ಮತ್ತು ತಂತ್ರಜ್ಞಾನ ತಜ್ಞರನ್ನು ಒಟ್ಟುಗೂಡಿಸಿರುವ ಪ್ರಮುಖ ಜಾಗತಿಕ ಕಾರ್ಯಕ್ರಮವಾಗಿದೆ.

ಐಟಿಯು- ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಅಸೆಂಬ್ಲಿ 2024 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

October 15th, 10:05 am

ನನ್ನ ಸಂಪುಟ (ಕ್ಯಾಬಿನೆಟ್) ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜೀ, ಚಂದ್ರಶೇಖರ್ ಜೀ, ಐಟಿಯು ಪ್ರಧಾನ ಕಾರ್ಯದರ್ಶಿ, ವಿವಿಧ ದೇಶಗಳ ಸಚಿವರು, ಭಾರತದ ವಿವಿಧ ರಾಜ್ಯಗಳ ಸಚಿವರು, ಉದ್ಯಮದ ಮುಖಂಡರು, ಟೆಲಿಕಾಂ ತಜ್ಞರು, ನವೋದ್ಯಮ ಜಗತ್ತಿನ ಯುವ ಉದ್ಯಮಿಗಳು, ಭಾರತ ಮತ್ತು ವಿದೇಶಗಳ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ,

ನವದೆಹಲಿಯಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ -2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

October 15th, 10:00 am

ನವದೆಹಲಿಯ ಭಾರತ್ ಮಂಟಪಂನಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ [ಡಬ್ಲ್ಯುಟಿಎಸ್ಎ] -2024 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ ನ 8ನೇ ಆವೃತ್ತಿಗೂ ಪ್ರಧಾನಮಂತ್ರಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನವನ್ನು ನಡೆದಾಡುತ್ತಾ ವೀಕ್ಷಿಸಿದರು.

ಪ್ರಧಾನಮಂತ್ರಿಯವರು ಅಕ್ಟೋಬರ್ 15 ರಂದು ಐಟಿಯು ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಮ್ಮೇಳನ 2024 ಅನ್ನು ಉದ್ಘಾಟಿಸಲಿದ್ದಾರೆ

October 14th, 05:31 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 15 ರಂದು ಬೆಳಿಗ್ಗೆ 10 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಅಂತರರಾಷ್ಟ್ರೀಯ ದೂರಸಂಪರ್ಕ ಮಹಾಸಂಘ - ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಮ್ಮೇಳನ 2024 (ಡಬ್ಲ್ಯುಟಿಎಸ್ಎ) ಅನ್ನು ಉದ್ಘಾಟಿಸಲಿದ್ದಾರೆ.

ಇಂಡಿಯಾ ಮೊಬೈಲ್ ಕಾಂಗ್ರೆಸ್ ನ 7ನೇ ಆವೃತ್ತಿಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

October 27th, 10:56 am

ಇಂಡಿಯಾ ಮೊಬೈಲ್ ಕಾಂಗ್ರೆಸ್ ನ ಏಳನೇ ಆವೃತ್ತಿಯಲ್ಲಿ ನಿಮ್ಮೊಂದಿಗೆ ಇರುವುದು ಸ್ವತಃ ಒಂದು ಆಹ್ಲಾದಕರ ಅನುಭವವಾಗಿದೆ. 21 ನೇ ಶತಮಾನದ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ, ಈ ಘಟನೆಯು ಲಕ್ಷಾಂತರ ಜನರ ಹಣೆಬರಹವನ್ನು ಬದಲಾಯಿಸುವ ಶಕ್ತಿಯನ್ನು ಹೊಂದಿದೆ. ನಾವು ಭವಿಷ್ಯದ ಬಗ್ಗೆ ಮಾತನಾಡುವ ಸಮಯವಿತ್ತು, ಅದು ಮುಂದಿನ ದಶಕ, ಅಥವಾ 20-30 ವರ್ಷಗಳ ನಂತರ, ಅಥವಾ ಮುಂದಿನ ಶತಮಾನ. ಆದರೆ ಇಂದು, ಪ್ರತಿದಿನ ತಂತ್ರಜ್ಞಾನದಲ್ಲಿ ತ್ವರಿತ ಬದಲಾವಣೆಗಳಿಂದಾಗಿ, ' ಭವಿಷ್ಯವು ಇಲ್ಲಿ ಮತ್ತು ಈಗ ಇದೆ ' ಎಂದು ನಾವು ಹೇಳುತ್ತೇವೆ. ಕೆಲವೇ ನಿಮಿಷಗಳ ಹಿಂದೆ, ನಾನು ಇಲ್ಲಿನ ಪ್ರದರ್ಶನದಲ್ಲಿ ಕೆಲವು ಮಳಿಗೆಗಳಿಗೆ ಭೇಟಿ ನೀಡಿದ್ದೆ. ಈ ಪ್ರದರ್ಶನದಲ್ಲಿ ನಾನು ಅದೇ ಭವಿಷ್ಯವನ್ನು ನೋಡಿದೆ. ಟೆಲಿಕಾಂ, ತಂತ್ರಜ್ಞಾನ, ಸಂಪರ್ಕ, 6 ಜಿ, ಎಐ(ಕೃತಕ ಬುದ್ದಿಮತ್ತೆ), ಸೈಬರ್ ಭದ್ರತೆ, ಅರೆವಾಹಕಗಳು, ಡ್ರೋನ್ ಗಳು, ಬಾಹ್ಯಾಕಾಶ ಕ್ಷೇತ್ರ, ಆಳ ಸಮುದ್ರ ಪರಿಶೋಧನೆ, ಹಸಿರು ತಂತ್ರಜ್ಞಾನ ಅಥವಾ ಇತರ ಕ್ಷೇತ್ರಗಳು ಆಗಿರಲಿ, ಮುಂಬರುವ ಸಮಯವು ಸಂಪೂರ್ಣವಾಗಿ ವಿಭಿನ್ನವಾಗಿರಲಿದೆ. ಮತ್ತು ಯುವ ಪೀಳಿಗೆಯು ದೇಶದ ಭವಿಷ್ಯವನ್ನು ಮುನ್ನಡೆಸುತ್ತಿದೆ, ನಮ್ಮ ತಂತ್ರಜ್ಞಾನ ಕ್ರಾಂತಿಯನ್ನು ಮುನ್ನಡೆಸುತ್ತಿದೆ ಎಂಬುದು ನಮಗೆಲ್ಲರಿಗೂ ಸಂತೋಷದ ವಿಷಯವಾಗಿದೆ.

ʻಇಂಡಿಯಾ ಮೊಬೈಲ್ ಕಾಂಗ್ರೆಸ್ʼನ(ಐಎಂಸಿ) 7ನೇ ಆವೃತ್ತಿಯನ್ನು ಉದ್ಘಾಟಿಸಿದ ಪ್ರಧಾನಮಂತ್ರಿಗಳು

October 27th, 10:35 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ʻಭಾರತ್ ಮಂಟಪʼದಲ್ಲಿ ʻಇಂಡಿಯಾ ಮೊಬೈಲ್ ಕಾಂಗ್ರೆಸ್ʼನ 7ನೇ ಆವೃತ್ತಿಗೆ (ಐಎಂಸಿ-2023) ಚಾಲನೆ ನೀಡಿದರು. ʻಇಂಡಿಯಾ ಮೊಬೈಲ್ ಕಾಂಗ್ರೆಸ್ʼ ಏಷ್ಯಾದ ಅತಿದೊಡ್ಡ ಟೆಲಿಕಾಂ, ಮಾಧ್ಯಮ ಮತ್ತು ತಂತ್ರಜ್ಞಾನ ವೇದಿಕೆಯಾಗಿದ್ದು, 2023ರ ಅಕ್ಟೋಬರ್ 27 ರಿಂದ 29 ರವರೆಗೆ 'ಗ್ಲೋಬಲ್ ಡಿಜಿಟಲ್ ಇನ್ನೋವೇಶನ್' ಎಂಬ ವಿಷಯಾಧಾರಿತವಾಗಿ ನಡೆಯಲಿದೆ. ʻಐಎಂಸಿ-2023ʼ ಪ್ರಮುಖ ಅತ್ಯಾಧುನಿಕ ತಂತ್ರಜ್ಞಾನಗಳ ಡೆವಲಪರ್, ತಯಾರಕ ಮತ್ತು ರಫ್ತುದಾರರಾಗಿ ಭಾರತದ ಸ್ಥಾನವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ದೇಶಾದ್ಯಂತದ ಶಿಕ್ಷಣ ಸಂಸ್ಥೆಗಳಿಗೆ 100 '5ಜಿ ಯೂಸ್ ಕೇಸ್ ಲ್ಯಾಬ್'ಗಳನ್ನು (5ಜಿ ಬಳಕೆ ಪ್ರಯೋಗಾಲಯ) ಪ್ರದಾನ ಮಾಡಿದರು.

The digital potential of our nation is unparalleled, perhaps even in the history of mankind: PM

December 08th, 11:00 am

PM Modi addressed India Mobile Congress via video conferencing. PM Modi said it is important to think and plan how do we improve lives  with the upcoming technology revolution. Better healthcare, Better education, Better information and opportunities for our farmers, Better market access for small businesses are some of the goals we can work towards, he added.

ಇಂಡಿಯಾ ಮೊಬೈಲ್ ಕಾಂಗ್ರೆಸ್ 2020: ಪ್ರಧಾನಿ ನರೇಂದ್ರ ಮೋದಿ ಭಾಷಣ

December 08th, 10:59 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವರ್ಚುವಲ್ ಇಂಡಿಯಾ ಮೊಬೈಲ್ ಕಾಂಗ್ರೆಸ್ (ಐಎಂಸಿ) 2020ಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಿದರು. ಐಎಂಸಿ 2020ರ ಧ್ಯೆಯವಾಕ್ಯ ಸಮಗ್ರ ನಾವಿನ್ಯತೆ -ಸ್ಮಾರ್ಟ್, ಸುಭದ್ರ, ಸುಸ್ಥಿರ ಎಂಬುದಾಗಿದೆ. ಇದು ಪ್ರಧಾನಮಂತ್ರಿಯವರ ದೃಷ್ಟಿಕೋನವಾದ ‘ಆತ್ಮನಿರ್ಭರ ಭಾರತ’, ‘ಡಿಜಿಟಲ್ ಒಳಗೊಳ್ಳುವಿಕೆ’, ಮತ್ತು ‘ಸುಸ್ಥಿರ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ನಾವೀನ್ಯತೆ’ಯನ್ನು ಒಗ್ಗೂಡಿಸುವ ಗುರಿ ಹೊಂದಿದೆ. ಇದು ವಿದೇಶಿ ಮತ್ತು ಸ್ಥಳೀಯ ಹೂಡಿಕೆಗಳನ್ನು ಹೆಚ್ಚಿಸಲು, ಟೆಲಿಕಾಂ ಮತ್ತು ಉದಯೋನ್ಮುಖ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.

PM to address India Mobile Congress 2020 on 8th December 2020

December 07th, 03:18 pm

Prime Minister Shri Narendra Modi will give the inaugural address at the virtual India Mobile Congress (IMC) 2020 on 08 December 2020 at 10:45 AM.