ನನ್ನ ಸ್ನೇಹಿತ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಉತ್ತಮ ಸಂಭಾಷಣೆ ನಡೆಸಿದ್ದೇನೆ: ಪ್ರಧಾನಿ ಮೋದಿ
November 06th, 10:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಾಗಿ ಚುನಾಯಿತರಾದ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಸಂವಾದ ನಡೆಸಿದರು ಮತ್ತು ಅವರ ಅದ್ಭುತ ಗೆಲುವಿಗಾಗಿ ಅವರನ್ನು ಅಭಿನಂದಿಸಿದರು. ವಿವಿಧ ಕ್ಷೇತ್ರಗಳಲ್ಲಿ ಭಾರತ-ಯುಎಸ್ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಮತ್ತೊಮ್ಮೆ ಒಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಶ್ರೀ ಮೋದಿ ಹೇಳಿದರು.ಪ್ರಧಾನಮಂತ್ರಿ ಅವರು ಡೆಲಾವೇರ್ ನ ವಿಲ್ಮಿಂಗ್ಟನ್ ನಲ್ಲಿ ಅಮೆರಿಕ ಅಧ್ಯಕ್ಷರನ್ನು ಭೇಟಿ ಮಾಡಿದರು
September 22nd, 02:02 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆಲಾವೇರ್ ನಲ್ಲಿ ನಡೆದ ಕ್ವಾಡ್ ಶೃಂಗಸಭೆಯ ಸಂದರ್ಭದಲ್ಲಿ ಅಮೆರಿಕದ ಅಧ್ಯಕ್ಷ ಘನತೆವೆತ್ತ ಶ್ರೀ ಜೋಸೆಫ್ ಬೈಡನ್ ಅವರನ್ನು ಭೇಟಿ ಮಾಡಿದರು. ವಿಶೇಷವಾಗಿ, ಅಧ್ಯಕ್ಷ ಬೈಡನ್ ವಿಲ್ಮಿಂಗ್ಟನ್ನಲ್ಲಿರುವ ತಮ್ಮ ಮನೆಯಲ್ಲಿ ಸಭೆಯನ್ನು ಆಯೋಜಿಸಿದ್ದರು.