78 ನೇ ಸ್ವಾತಂತ್ರ್ಯೋತ್ಸವದಂದು ಕೆಂಪು ಕೋಟೆ ಆವರಣದಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 15th, 03:04 pm
ಭಾಷಣದ ಮುಖ್ಯಾಂಶಗಳು ಈ ಕೆಳಕಂಡಂತಿವೆ78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
August 15th, 01:09 pm
ದೇಶಕ್ಕಾಗಿ ತಮ್ಮ ಪ್ರಾಣತ್ಯಾಗ ಮಾಡಿದ ಮತ್ತು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡ ಅಸಂಖ್ಯಾತ ಪೂಜನೀಯ ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ಗೌರವ ಸಲ್ಲಿಸುವ ಶುಭ ದಿನ, ಶುಭ ಕ್ಷಣ ಇದಾಗಿದೆ. ಅವರು ತಮ್ಮ ಜೀವನದುದ್ದಕ್ಕೂ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು, ಭಾರತ್ ಮಾತಾ ಕಿ ಜೈ ಎಂಬ ಘೋಷಣೆಗಳೊಂದಿಗೆ ಧೈರ್ಯದಿಂದ ನೇಣುಗಂಬವನ್ನು ಅಪ್ಪಿಕೊಂಡರು. ಇದು ಅವರ ಧೈರ್ಯ, ಸಂಕಲ್ಪ ಮತ್ತು ದೇಶಭಕ್ತಿ ಸದ್ಗುಣಗಳನ್ನು ಸ್ಮರಿಸುವ ಹಬ್ಬವಾಗಿದೆ. ಈ ವೀರಕಲಿಗಳಿಂದಾಗಿಯೇ ಈ ಸ್ವಾತಂತ್ರ್ಯದ ಹಬ್ಬದಂದು ಮುಕ್ತವಾಗಿ ಉಸಿರಾಡುವ ಸೌಭಾಗ್ಯ ನಮಗೆ ದಕ್ಕದೆ. ದೇಶವು ಅವರಿಗೆ ಬಹಳ ಋಣಿಯಾಗಿದೆ. ಅಂತಹ ಪ್ರತಿಯೊಬ್ಬ ಮಹಾನ್ ವ್ಯಕ್ತಿಯ ಬಗ್ಗೆ ನಮ್ಮ ಗೌರವ ವನ್ನು ವ್ಯಕ್ತಪಡಿಸೋಣ.ಭಾರತವು 78 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತದೆ
August 15th, 07:30 am
78 ನೇ ಸ್ವಾತಂತ್ರ್ಯ ದಿನದಂದು, ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ಭಾರತದ ಭವಿಷ್ಯದ ದೃಷ್ಟಿಕೋನವನ್ನು ವಿವರಿಸಿದರು. 2036 ರ ಒಲಂಪಿಕ್ಸ್‌ನ ಆತಿಥ್ಯದಿಂದ ಸೆಕ್ಯುಲರ್ ಸಿವಿಲ್ ಕೋಡ್ ಅನ್ನು ಚಾಂಪಿಯನ್ ಮಾಡುವವರೆಗೆ, ಪಿಎಂ ಮೋದಿ ಅವರು ಭಾರತದ ಸಾಮೂಹಿಕ ಪ್ರಗತಿ ಮತ್ತು ಪ್ರತಿಯೊಬ್ಬ ನಾಗರಿಕನ ಸಬಲೀಕರಣಕ್ಕೆ ಒತ್ತು ನೀಡಿದರು. ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ಹೊಸ ಹುರುಪಿನೊಂದಿಗೆ ಮುಂದುವರಿಸುವ ಕುರಿತು ಮಾತನಾಡಿದರು. ನಾವೀನ್ಯತೆ, ಶಿಕ್ಷಣ ಮತ್ತು ಜಾಗತಿಕ ನಾಯಕತ್ವದ ಮೇಲೆ ಕೇಂದ್ರೀಕರಿಸಿದ ಅವರು 2047 ರ ವೇಳೆಗೆ ಭಾರತವು ವಿಕಸಿತ ಭಾರತವಾಗುವುದನ್ನು ತಡೆಯಲು ಯಾವುದೂ ಸಾಧ್ಯವಿಲ್ಲ ಎಂದು ಅವರು ಪುನರುಚ್ಚರಿಸಿದರು.ಕೇರಳದ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
February 27th, 12:24 pm
ಕೇರಳದ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಜೀ, ನನ್ನ ಸಹೋದ್ಯೋಗಿ ಮತ್ತು ರಾಜ್ಯ ಸಚಿವ ಶ್ರೀ ವಿ. ಮುರಳೀಧರನ್, ಇಸ್ರೋ ಕುಟುಂಬದ ಎಲ್ಲರೂ ನಮಸ್ಕಾರ!ಕೇರಳದ ತಿರುವನಂತಪುರದಲ್ಲಿರುವ ವಿಕ್ರಂ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ ಪ್ರಧಾನಿ ಭೇಟಿ
February 27th, 12:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ತಿರುವನಂತಪುರದಲ್ಲಿರುವ ವಿಕ್ರಂ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (ವಿಎಸ್ ಎಸ್ ಸಿ)ಗೆ ಭೇಟಿ ನೀಡಿದ್ದರು ಮತ್ತು ಸುಮಾರು 1800 ಕೋಟಿ ರೂ. ಮೌಲ್ಯದ ಮೂರು ಪ್ರಮುಖ ಬಾಹ್ಯಾಕಾಶ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರು. ಯೋಜನೆಗಳಲ್ಲಿ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಎಸ್ ಎಲ್ ವಿ ಇಂಟಿಗ್ರೇಷನ್ ಫೆಸಿಲಿಟಿ (ಪಿಐಎಫ್ ); ಮಹೇಂದ್ರಗಿರಿಯಲ್ಲಿರುವ ಇಸ್ರೋ ಪ್ರೊಪಲ್ಷನ್ ಕಾಂಪ್ಲೆಕ್ಸ್‌ನಲ್ಲಿ ಹೊಸ 'ಸೆಮಿ-ಕ್ರಯೋಜೆನಿಕ್ಸ್ ಇಂಟಿಗ್ರೇಟೆಡ್ ಇಂಜಿನ್ ಮತ್ತು ಸ್ಟೇಜ್ ಟೆಸ್ಟ್ ಸೌಲಭ್ಯ'; ಮತ್ತು ತಿರುವನಂತಪುರಂನ ವಿಎಸ್ ಎಸ್ ಸಿಯಲ್ಲಿ ‘ಟ್ರೈಸಾನಿಕ್ ವಿಂಡ್ ಟನಲ್’ ಒಳಗೊಂಡಿವೆ. ಶ್ರೀ ನರೇಂದ್ರ ಮೋದಿ ಅವರು ಗಗನಯಾನ ಮಿಷನ್‌ನ ಪ್ರಗತಿಯನ್ನು ಪರಿಶೀಲಿಸಿದರು ಮತ್ತು ನಾಲ್ಕು ಗಗನಯಾತ್ರಿಗಳಿಗೆ 'ಗಗನಯಾತ್ರಿ ರೆಕ್ಕೆಗಳನ್ನು' ನೀಡಿದರು. ಆ ಗಗನಯಾತ್ರಿಗಳೆಂದರೆ ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್, ಗ್ರೂಪ್ ಕ್ಯಾಪ್ಟನ್ ಅಜಿತ್ ಕೃಷ್ಣನ್, ಗ್ರೂಪ್ ಕ್ಯಾಪ್ಟನ್ ಅಂಗದ್ ಪ್ರತಾಪ್ ಮತ್ತು ವಿಂಗ್ ಕಮಾಂಡರ್ ಶುಭಾಂಶು ಶುಕ್ಲಾ.ಗಗನಯಾನ ಅಭಿಯಾನದ ಸನ್ನದ್ಧತೆ ಕುರಿತು ಪ್ರಗತಿಪರಿಶೀಲನೆ ನಡೆಸಿದ ಪ್ರಧಾನಮಂತ್ರಿ
October 17th, 01:53 pm
ಭಾರತದ ಗಗನಯಾನ ಅಭಿಯಾನ ಕುರಿತಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯ ಉನ್ನತ ಮಟ್ಟದ ಸಭೆಯಲ್ಲಿ ಪ್ರಗತಿ ಪರಿಶೀಲನೆ ನಡೆಯಿತು ಮತ್ತು ಭಾರತದ ಬಾಹ್ಯಾಕಾಶ ಭವಿಷ್ಯದ ಪರಿಶೋಧನಾ ಪ್ರಯತ್ನಗಳ ಕುರಿತು ವಿವರಿಸಲಾಯಿತು.ಜಗತ್ತು ಭಾರತವನ್ನು ಹೊಗಳಿದರೆ ಕೇಂದ್ರದಲ್ಲಿ ಬಹುಮತದ ಸರ್ಕಾರವನ್ನು ಆಯ್ಕೆ ಮಾಡಲು ನಿಮ್ಮ ಮತವೇ ಕಾರಣ: ಮೂಡಬಿದಿರೆಯಲ್ಲಿ ಪ್ರಧಾನಿ ಮೋದಿ
May 03rd, 11:01 am
ಚುನಾವಣಾ ಪ್ರಚಾರದ ಭರಾಟೆಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮೂಡಬಿದಿರೆಯಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೇ 10 ರಂದು ಚುನಾವಣೆಯ ದಿನ ಸಮೀಪಿಸುತ್ತಿದೆ. ಕರ್ನಾಟಕವನ್ನು ಅಗ್ರ ರಾಜ್ಯವನ್ನಾಗಿ ಮಾಡಲು ಬಿಜೆಪಿ ಸಂಕಲ್ಪ ಮಾಡಿದೆ ಮತ್ತು ಕರ್ನಾಟಕವನ್ನು ಉತ್ಪಾದನಾ ಸೂಪರ್ ಪವರ್ ಮಾಡುವ ಬಿಜೆಪಿಯ ಸಂಕಲ್ಪವಾಗಿದೆ. ಇದು ಮುಂಬರುವ ವರ್ಷಗಳಲ್ಲಿ ನಮ್ಮ ಮಾರ್ಗಸೂಚಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.ಪ್ರಧಾನಿ ಮೋದಿ ಅವರು ಕರ್ನಾಟಕದ ಮೂಡಬಿದ್ರಿ, ಅಂಕೋಲಾ ಮತ್ತು ಬೈಲಹೊಂಗಲದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
May 03rd, 11:00 am
ಚುನಾವಣಾ ಪ್ರಚಾರದ ಭರಾಟೆಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮೂಡಬಿದಿರೆಯಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೇ 10 ರಂದು ಚುನಾವಣೆಯ ದಿನ ಸಮೀಪಿಸುತ್ತಿದೆ. ಕರ್ನಾಟಕವನ್ನು ಅಗ್ರ ರಾಜ್ಯವನ್ನಾಗಿ ಮಾಡಲು ಬಿಜೆಪಿ ಸಂಕಲ್ಪ ಮಾಡಿದೆ ಮತ್ತು ಕರ್ನಾಟಕವನ್ನು ಉತ್ಪಾದನಾ ಸೂಪರ್ ಪವರ್ ಮಾಡುವ ಬಿಜೆಪಿಯ ಸಂಕಲ್ಪವಾಗಿದೆ. ಇದು ಮುಂಬರುವ ವರ್ಷಗಳಲ್ಲಿ ನಮ್ಮ ಮಾರ್ಗಸೂಚಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.ಎಲ್. ವಿ.ಎಂ.3 ಯಶಸ್ವಿ ಉಡಾವಣೆಗಾಗಿ ಎನ್. ಎಸ್. ಐ.ಎಲ್, ಐ.ಎನ್.ಸ್ಪೇಸ್ ಮತ್ತು ಇಸ್ರೋಗೆ ಪ್ರಧಾನಮಂತ್ರಿ ಅಭಿನಂದನೆ
March 26th, 07:30 pm
ಎಲ್. ವಿ.ಎಂ. 3 ಯಶಸ್ವಿ ಉಡಾವಣೆಗಾಗಿ ಎನ್ ಎಸ್ ಐಎಲ್, ಐಎನ್ –ಸ್ಪೇಸ್ ಮತ್ತು ಇಸ್ರೋವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಸೌರ ಮತ್ತು ಬಾಹ್ಯಾಕಾಶ ಕ್ಷೇತ್ರಗಳಲ್ಲಿ ಭಾರತದ ಅದ್ಭುತಗಳಿಂದ ಜಗತ್ತು ಬೆರಗುಗೊಂಡಿದೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
October 30th, 11:30 am
ನನ್ನ ಪ್ರೀತಿಯ ದೇಶವಾಸಿಗಳೇ, ಈಗ ನಾವು ಪವಿತ್ರ ಛಠ್ ಪೂಜೆಯ ಬಗ್ಗೆ ಮಾತನಾಡಿದೆವು, ಭಗವಾನ್ ಸೂರ್ಯನ ಆರಾಧನೆ ಬಗ್ಗೆ ಮಾತನಾಡಿದೆವು. ಹಾಗಾದರೆ ಇಂದು ಸೂರ್ಯನನ್ನು ಪೂಜಿಸುವ ಜೊತೆಗೆ ಅವನು ನೀಡಿದ ವರದ ಬಗ್ಗೆಯೂ ಚರ್ಚಿಸೋಣ. 'ಸೌರಶಕ್ತಿ' ಸೂರ್ಯದೇವನ ವರದಾನ. ಸೌರಶಕ್ತಿ ಇಡೀ ಜಗತ್ತು ತನ್ನ ಭವಿಷ್ಯವನ್ನು ಅದರಲ್ಲಿ ಕಾಣುವಂತಹ ಒಂದು ವಿಷಯವಾಗಿದೆ ಮತ್ತು ಭಾರತಕ್ಕಾಗಿ, ಸೂರ್ಯ ದೇವ ಶತಮಾನಗಳಿಂದ ಕೇವಲ ಪೂಜಿತನಲ್ಲ, ಜೀವನ ವಿಧಾನದ ಕೇಂದ್ರವಾಗಿ ಮಿಳಿತವಾಗಿದ್ದಾನೆ. ಭಾರತವು ಇಂದು ತನ್ನ ಸಾಂಪ್ರದಾಯಿಕ ಅನುಭವಗಳನ್ನು ಆಧುನಿಕ ವಿಜ್ಞಾನದೊಂದಿಗೆ ಸಂಯೋಜಿಸುತ್ತಿದೆ, ಅದಕ್ಕಾಗಿಯೇ, ಇಂದು ನಾವು ಸೌರಶಕ್ತಿಯಿಂದ ವಿದ್ಯುತ್ ಉತ್ಪಾದಿಸುವ ಅತಿದೊಡ್ಡ ದೇಶಗಳಲ್ಲಿ ಒಂದೆನಿಸಿದ್ದೇವೆ. ಸೌರಶಕ್ತಿಯು ನಮ್ಮ ದೇಶದ ಬಡ ಮತ್ತು ಮಧ್ಯಮ ವರ್ಗದವರ ಜೀವನವನ್ನು ಹೇಗೆ ಬದಲಾಯಿಸುತ್ತಿದೆ ಎಂಬುದೂ ಅಧ್ಯಯನದ ವಿಷಯವಾಗಿದೆ.ಪಿ.ಎಂ-ಕಿಸಾನ್ ಯೋಜನೆ ಅಡಿಯಲ್ಲಿ 10ನೇ ಕಂತಿನ ಹಣಕಾಸು ಪ್ರಯೋಜನಗಳ ಬಿಡುಗಡೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
January 01st, 12:31 pm
ತಳಮಟ್ಟದ ರೈತರ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ಸಂಕಲ್ಪವನ್ನು ಮುಂದುವರಿಸುವ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿ ಆರ್ಥಿಕ ನೆರವಿನ 10ನೇ ಕಂತನ್ನು ಬಿಡುಗಡೆ ಮಾಡಿದರು. ಇದರಿಂದಾಗಿ 10 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಸುಮಾರು 351 ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳಿಗೆ 14 ಕೋಟಿ ರೂ.ಗಳಿಗೂ ಅಧಿಕ ಈಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದರು. ಇದರಿಂದ 1.24 ಲಕ್ಷಕ್ಕೂ ಅಧಿಕ ರೈತರಿಗೆ ಪ್ರಯೋಜನವಾಗಲಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಎಫ್ ಪಿಒಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು, ಕೃಷಿ ಸಚಿವರುಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಪಿಎಂ-ಕಿಸಾನ್ ನಿಧಿಯ 10ನೇ ಕಂತು ಬಿಡುಗಡೆ ಮಾಡಿದ ಪ್ರಧಾನಮಂತ್ರಿ
January 01st, 12:30 pm
ತಳಮಟ್ಟದ ರೈತರ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ಸಂಕಲ್ಪವನ್ನು ಮುಂದುವರಿಸುವ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿ ಆರ್ಥಿಕ ನೆರವಿನ 10ನೇ ಕಂತನ್ನು ಬಿಡುಗಡೆ ಮಾಡಿದರು. ಇದರಿಂದಾಗಿ 10 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಸುಮಾರು 351 ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳಿಗೆ 14 ಕೋಟಿ ರೂ.ಗಳಿಗೂ ಅಧಿಕ ಈಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದರು. ಇದರಿಂದ 1.24 ಲಕ್ಷಕ್ಕೂ ಅಧಿಕ ರೈತರಿಗೆ ಪ್ರಯೋಜನವಾಗಲಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಎಫ್ ಪಿಒಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು, ಕೃಷಿ ಸಚಿವರುಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಭಾರತೀಯ ಬಾಹ್ಯಾಕಾಶ ಸಂಘದ ಪ್ರಾರಂಭೋತ್ಸವ ದಲ್ಲಿ ಪ್ರಧಾನಮಂತ್ರಿಯವರ ಭಾಷಣ
October 11th, 11:19 am
ಇಂದು ದೇಶದ ಇಬ್ಬರು ಮಹಾನ್ ಪುತ್ರರಾದ ಭಾರತ ರತ್ನ ಶ್ರೀ ಜಯಪ್ರಕಾಶ್ ನಾರಾಯಣ್ ಜಿ ಮತ್ತು ಭಾರತ ರತ್ನ ಶ್ರೀ ನಾನಾಜಿ ದೇಶಮುಖ್ ಅವರ ಜನ್ಮ ದಿನಾಚರಣೆ. ಈ ಇಬ್ಬರು ಮಹಾನ್ ವ್ಯಕ್ತಿಗಳು ಸ್ವಾತಂತ್ರ್ಯೋತ್ತರ ಭಾರತಕ್ಕೆ ಮಾರ್ಗದರ್ಶನ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಜೀವನ ತತ್ವವು ರಾಷ್ಟ್ರದಲ್ಲಿ ಮಹತ್ವದ ಬದಲಾವಣೆಗಳನ್ನು ತರಲು ಎಲ್ಲರನ್ನೂ ಜೊತೆಯಲ್ಲಿ ಸೇರಿಸಿಕೊಂಡು ಮತ್ತು ಎಲ್ಲರ ಪ್ರಯತ್ನಗಳು ನಮಗೆ ಸ್ಫೂರ್ತಿ ನೀಡುತ್ತಲೇ ಇವೆ. ನಾನು ಜಯಪ್ರಕಾಶ್ ನಾರಾಯಣ್ ಜೀ ಮತ್ತು ನಾನಾಜಿ ದೇಶಮುಖ್ ಅವರಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.ಭಾರತೀಯ ಬಾಹ್ಯಾಕಾಶ ಸಂಘಕ್ಕೆ ಪ್ರಧಾನಿ ಚಾಲನೆ
October 11th, 11:18 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಭಾರತೀಯ ಬಾಹ್ಯಾಕಾಶ ಸಂಘʼಕ್ಕೆ (ಐಎಸ್‌ಪಿಎ) ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಾಹ್ಯಾಕಾಶ ಉದ್ಯಮದ ಪ್ರತಿನಿಧಿಗಳೊಂದಿಗೆ ಅವರು ಸಂವಾದ ನಡೆಸಿದರು.ಅಕ್ಟೋಬರ್ 11ರಂದು ಭಾರತೀಯ ಬಾಹ್ಯಾಕಾಶ ಸಂಘಕ್ಕೆ ಚಾಲನೆ ನೀಡಲಿರುವ ಪ್ರಧಾನಿ
October 09th, 03:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಅಕ್ಟೋಬರ್ 11ರಂದು ಬೆಳಗ್ಗೆ 11 ಗಂಟೆಗೆ ಭಾರತೀಯ ಬಾಹ್ಯಾಕಾಶ ಸಂಘಕ್ಕೆ (ಐಎಸ್ಪಿಎ) ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಈ ಹೆಗ್ಗುರುತಿನ ಸಂದರ್ಭದಲ್ಲಿ ಅವರು ಬಾಹ್ಯಾಕಾಶ ಉದ್ಯಮದ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.