Second India-Australia Annual Summit

November 20th, 08:38 pm

PM Modi and Australian PM Anthony Albanese held the 2nd India-Australia Annual Summit in Rio de Janeiro. They reaffirmed their commitment to the Comprehensive Strategic Partnership, focusing on defense, trade, education, renewable energy, and people-to-people ties.

ಲಾವೊ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಮಾಡಿದ ಮಧ್ಯಂತರ ಭಾಷಣದ ಕನ್ನಡ ಅವತರಣಿಕೆ

October 11th, 08:15 am

ಭಾರತವು ಆಸಿಯಾನ್‌ ನ ಏಕತೆ ಮತ್ತು ಕೇಂದ್ರೀಕರಣವನ್ನು ಸತತವಾಗಿ ಬೆಂಬಲಿಸುತ್ತಿದೆ. ಭಾರತದ ಇಂಡೋ-ಪೆಸಿಫಿಕ್ ದೃಷ್ಟಿಕೋನ ಮತ್ತು ಕ್ವಾಡ್ ಸಹಕಾರಕ್ಕೆ ಆಸಿಯಾನ್ ಪ್ರಮುಖ ಆಧಾರವಾಗಿದೆ. ಭಾರತದ ಇಂಡೋ-ಪೆಸಿಫಿಕ್ ಓಷನ್ಸ್ ಇನಿಶಿಯೇಟಿವ್ ಮತ್ತು ಇಂಡೋ-ಪೆಸಿಫಿಕ್ ಮೇಲಿನ ಆಸಿಯಾನ್ ಔಟ್‌ಲುಕ್ ನಡುವೆ ಪ್ರಮುಖ ಸಾಮ್ಯತೆಗಳಿವೆ. ಸಂಪೂರ್ಣ ಪ್ರದೇಶದ ಸಮಗ್ರ ಶಾಂತಿ ಮತ್ತು ಪ್ರಗತಿಗೆ ಮುಕ್ತ, ತೆರೆದ, ಅಂತರ್ಗತ, ಸಮೃದ್ಧ ಮತ್ತು ನಿಯಮಗಳ-ಆಧಾರಿತ ಇಂಡೋ-ಪೆಸಿಫಿಕ್ ನಿರ್ಣಾಯಕಗಳು ಅಗತ್ಯವಾಗಿದೆ.

19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಗವಹಿಸುವಿಕೆ

October 11th, 08:10 am

ಪ್ರಧಾನಮಂತ್ರಿ ಅವರು 2024ರ ಅಕ್ಟೋಬರ್ 11ರಂದು ಲಾವೋ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ (ಇಎಎಸ್) ಭಾಗವಹಿಸಿದ್ದರು.

ಪ್ರಧಾನಿ ಮೋದಿ ಸೆಪ್ಟೆಂಬರ್ 21 ರಿಂದ 23 ರವರೆಗೆ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾಗೆ ಭೇಟಿ ನೀಡಲಿದ್ದಾರೆ

September 19th, 03:07 pm

2024 ರ ಸೆಪ್ಟೆಂಬರ್ 21-23 ರ ಅವಧಿಯಲ್ಲಿ ಪ್ರಧಾನಿ ಮೋದಿ ಯುಎಸ್‌ಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಡೆಲವೇರ್‌ನ ವಿಲ್ಮಿಂಗ್‌ಟನ್‌ನಲ್ಲಿ ನಡೆಯಲಿರುವ ನಾಲ್ಕನೇ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ಸೆಪ್ಟೆಂಬರ್ 23 ರಂದು ನ್ಯೂಯಾರ್ಕ್‌ನಲ್ಲಿ ನಡೆಯುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಧಾನಮಂತ್ರಿಯವರು ‘ಭವಿಷ್ಯದ ಶೃಂಗಸಭೆ’ಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಬ್ರೂನೈ ಸುಲ್ತಾನರೊಂದಿಗಿನ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನೀಡಿದ ಹೇಳಿಕೆಗಳ ಕನ್ನಡ ಅನುವಾದ

September 04th, 03:18 pm

ನಿಮ್ಮ ಸೌಜನ್ನದ ಮಾತುಗಳು, ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ನಿಮಗೆ ಮತ್ತು ನಿಮ್ಮ ಇಡೀ ರಾಜಮನೆತನಕ್ಕೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.

ಭಾರತ-ಗ್ರೀಸ್ ಜಂಟಿ ಹೇಳಿಕೆ

August 25th, 11:11 pm

ಭಾರತ ಮತ್ತು ಗ್ರೀಸ್ ಎರಡೂ ಐತಿಹಾಸಿಕ ಸಂಪರ್ಕಗಳನ್ನು ಹಂಚಿಕೊಂಡಿವೆ ಎಂಬುದನ್ನು ಪ್ರಧಾನಮಂತ್ರಿ ಮಿಟ್ಸೊಟಾಕಿಸ್ ಮತ್ತು ಪ್ರಧಾನಿ ನರೇಂದ ಮೋದಿ ಒಪ್ಪಿಕೊಂಡರು ಮತ್ತು ಜಾಗತಿಕ ವ್ಯವಸ್ಥೆಯು ಅಭೂತಪೂರ್ವ ಬದಲಾವಣೆಗಳಿಗೆ ಒಳಗಾಗುತ್ತಿರುವ ಸಮಯದಲ್ಲಿ, ನಮ್ಮ ದ್ವಿಪಕ್ಷೀಯ ಸಂಬಂಧವನ್ನು ಹೆಚ್ಚಿಸಲು ಪುನಶ್ಚೇತನದ ವಿಧಾನದ ಅಗತ್ಯವಿದೆ ಎಂದು ಸಮ್ಮತಿಸಿದರು.

ಗ್ರೀಸ್ ಪ್ರಧಾನ ಮಂತ್ರಿಯವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ

August 25th, 02:45 pm

ಮೊದಲನೆಯದಾಗಿ, ಗ್ರೀಸ್ ನಲ್ಲಿ ಕಾಡ್ಗಿಚ್ಚಿನ ದುರಂತ ಘಟನೆಗಳಲ್ಲಿ ಜೀವಹಾನಿಗಾಗಿ ಭಾರತದ ಎಲ್ಲಾ ಜನರ ಪರವಾಗಿ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ.

ಭಾರತ-ಫ್ರಾನ್ಸ್ ಇಂಡೋ-ಪೆಸಿಫಿಕ್ ಮಾರ್ಗಸೂಚಿ

July 14th, 11:10 pm

ಭಾರತ ಮತ್ತು ಫ್ರಾನ್ಸ್ ಇಂಡೋ ಪೆಸಿಫಿಕ್ ಪ್ರದೇಶದಲ್ಲಿ ಪ್ರಮುಖ ಪಾಲನ್ನು ಹೊಂದಿರುವ ನಿವಾಸಿ ಶಕ್ತಿಗಳು ಮತ್ತು ಪ್ರಮುಖ ಪಾಲುದಾರರು. ಹಿಂದೂ ಮಹಾಸಾಗರದಲ್ಲಿ ಇಂಡೋ-ಫ್ರೆಂಚ್ ಸಹಭಾಗಿತ್ವವು ನಮ್ಮ ದ್ವಿಪಕ್ಷೀಯ ಸಂಬಂಧಗಳ ಪ್ರಮುಖ ಕೇಂದ್ರಬಿಂದುವಾಗಿದೆ. 2018 ರಲ್ಲಿ, ಭಾರತ ಮತ್ತು ಫ್ರಾನ್ಸ್ 'ಹಿಂದೂ ಮಹಾಸಾಗರ ಪ್ರದೇಶದಲ್ಲಿ ಭಾರತ-ಫ್ರಾನ್ಸ್ ಸಹಕಾರದ ಜಂಟಿ ಕಾರ್ಯತಂತ್ರದ ದೃಷ್ಟಿಕೋನ'ಕ್ಕೆ ಒಪ್ಪಿಕೊಂಡವು. ನಾವು ಈಗ ನಮ್ಮ ಜಂಟಿ ಪ್ರಯತ್ನಗಳನ್ನು ಪೆಸಿಫಿಕ್ ಗೆ ವಿಸ್ತರಿಸಲು ಸಿದ್ಧರಿದ್ದೇವೆ.