Indian diaspora has made their mark in different nations: PM Modi during Mann Ki Baat

November 24th, 11:30 am

In the 116th episode of Mann Ki Baat, PM Modi discussed the significance of NCC Day, highlighting the growth of NCC cadets and their role in disaster relief. He emphasized youth empowerment for a developed India and spoke about the Viksit Bharat Young Leaders Dialogue. He also shared inspiring stories of youth helping senior citizens navigate digital platforms and the success of the Ek Ped Maa Ke Naam campaign.

309 ಕಿಮೀ ಉದ್ದದ ಹೊಸ ಮಾರ್ಗದ ಯೋಜನೆಗೆ ಕೇಂದ್ರ ಸಂಪುಟದ ಅನುಮೋದನೆ: ಎರಡು ಪ್ರಮುಖ ವಾಣಿಜ್ಯ ಕೇಂದ್ರಗಳಾದ ಮುಂಬೈ ಮತ್ತು ಇಂದೋರ್ ನಡುವೆ ದೂರ ಕಡಿಮೆಗೊಳಿಸುವ ರೈಲು ಸಂಪರ್ಕವನ್ನು ಒದಗಿಸಲಿದೆ

September 02nd, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು (ಸಿ.ಸಿ.ಇ.ಎ.), ಕೇಂದ್ರ ರೈಲ್ವೆ ಸಚಿವಾಲಯದ ಅಡಿಯಲ್ಲಿ ಒಟ್ಟು ರೂ. 18,036 ಕೋಟಿಗಳ (ಅಂದಾಜು) ಹೊಸ ರೈಲು ಮಾರ್ಗ ಯೋಜನೆಗೆ ಅನುಮೋದನೆ ನೀಡಿದೆ. ಪ್ರಸ್ತಾವಿತ ಹೊಸ ಮಾರ್ಗವು ಇಂದೋರ್ ಮತ್ತು ಮನ್ಮಾಡ್ ನಡುವೆ ನೇರ ರೈಲು ಸಂಪರ್ಕವನ್ನು ಒದಗಿಸುತ್ತದೆ ಮತ್ತು ಚಲನಶೀಲತೆಯನ್ನು ಸುಧಾರಿಸುತ್ತದೆ, ಭಾರತೀಯ ರೈಲ್ವೆಗೆ ವರ್ಧಿತ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆಯನ್ನು ಒದಗಿಸುತ್ತದೆ. ಈ ಯೋಜನೆಯು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿಯವರ ನವಭಾರತದ ದೃಷ್ಟಿಕೋನಕ್ಕೆ ಅನುಗುಣವಾಗಿದೆ, ಇದು ಈ ಪ್ರದೇಶದ ಜನರನ್ನು ಆತ್ಮನಿರ್ಭರ ಮಾಡುವ ಮೂಲಕ ಈ ಪ್ರದೇಶದಲ್ಲಿ ಸಮಗ್ರ ಅಭಿವೃದ್ಧಿಯ ಮೂಲಕ ಅವರುಗಳಿಗೆ ಉದ್ಯೋಗ/ಸ್ವಯಂ ಉದ್ಯೋಗಗಳಿಗೆ ಅವಕಾಶಗಳನ್ನು ಹೆಚ್ಚಿಸುತ್ತದೆ.

ಇಂದೋರ್ ನಲ್ಲಿ ನಡೆದ 'ಮಜ್ದೂರೂನ್ ಕಾ ಹಿಟ್ ಮಜ್ದೂರೂನ್ ಕೋ ಸಮರ್ಥ್' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡದ ಅನುವಾದ

December 25th, 12:30 pm

ಮೋಹನ್ ಯಾದವ್, ಮಧ್ಯಪ್ರದೇಶದ ಉತ್ಸಾಹಿ ಮುಖ್ಯಮಂತ್ರಿ; ಇಂದೋರ್ ನಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಲೋಕಸಭೆಯ ಮಾಜಿ ಸ್ಪೀಕರ್ ಸುಮಿತ್ರಾ ತಾಯ್; ನನ್ನ ಸಂಸದೀಯ ಸಹೋದ್ಯೋಗಿಗಳು; ಹೊಸ ವಿಧಾನಸಭೆಯಲ್ಲಿ ಆಯ್ಕೆಯಾದ ಶಾಸಕರು; ಇತರ ಗಣ್ಯರೇ, ಮತ್ತು ನನ್ನ ಪ್ರೀತಿಯ ಕಾರ್ಮಿಕ ಸಹೋದರ ಸಹೋದರಿಯರೇ!

​​​​​​​'ಕಾರ್ಮಿಕರ ಹಿತ, ಕಾರ್ಮಿಕರಿಗೆ ಸಮರ್ಪಿತ' ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ

December 25th, 12:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 'ಕಾರ್ಮಿಕರ ಹಿತ, ಕಾರ್ಮಿಕರಿಗೆ ಸಮರ್ಪಿತʼ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ʻಹುಕುಮ್‌ಚಂದ್ ಮಿಲ್ʼನ ಕಾರ್ಮಿಕರ ಬಾಕಿಗೆ ಸಂಬಂಧಿಸಿದ ಸುಮಾರು 224 ಕೋಟಿ ರೂ.ಗಳ ಚೆಕ್ ಅನ್ನು ಇಂದೋರ್‌ನ ʻಹುಕುಚ್‌ಚಂದ್ ಮಿಲ್‌ʼನ ಅಧಿಕೃತ ಲಿಕ್ವಿಡೇಟರ್ ಮತ್ತು ಕಾರ್ಮಿಕ ಒಕ್ಕೂಟದ ಮುಖ್ಯಸ್ಥರಿಗೆ ಹಸ್ತಾಂತರಿಸಿದರು. ʻಹುಕುಮ್‌ಚಂದ್ ಮಿಲ್‌ʼ ಕಾರ್ಮಿಕರ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳ ಇತ್ಯರ್ಥಕ್ಕೆ ಈ ಕಾರ್ಯಕ್ರಮವು ಸಾಕ್ಷಿಯಾಯಿತು. ಶ್ರೀ ಮೋದಿ ಅವರು ಖಾರ್ಗೋನ್ ಜಿಲ್ಲೆಯಲ್ಲಿ 60 ಮೆಗಾವ್ಯಾಟ್ ಸೌರ ವಿದ್ಯುತ್ ಸ್ಥಾವರಕ್ಕೂ ಶಂಕುಸ್ಥಾಪನೆ ನೆರವೇರಿಸಿದರು.

ಡಿಸೆಂಬರ್ 25ರಂದು 'ಮಜ್ದೂರೋನ್ ಕಾ ಹಿತ್ ಮಜ್ದೂರೋನ್ ಕೋ ಸಮರ್ಪಿತ್' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಭಾಗವಹಿಸಲಿದ್ದಾರೆ ಮತ್ತು ಹುಕುಮ್ ಚಂದ್ ಗಿರಣಿ ಕಾರ್ಮಿಕರ ಬಾಕಿಗೆ ಸಂಬಂಧಿಸಿದ ಚೆಕ್ ಹಸ್ತಾಂತರಿಸಲಿದ್ದಾರೆ

December 24th, 07:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಮಜ್ದೂರೋನ್ ಕಾ ಹಿತ್ ಮಜ್ದೂರೋನ್ ಕೋ ಸಮರ್ಪಿತ್ ' ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಮತ್ತು ಹುಕುಮ್ ಚಂದ್ ಮಿಲ್ ಕಾರ್ಮಿಕರ ಬಾಕಿಗೆ ಸಂಬಂಧಿಸಿದ ಸುಮಾರು 224 ಕೋಟಿ ರೂ.ಗಳ ಚೆಕ್ ಅನ್ನು ಇಂದೋರ್ ನ ಹುಕುಮ್ ಚಂದ್ ಮಿಲ್ ನ ಅಧಿಕೃತ ಲಿಕ್ವಿಡೇಟರ್ ಮತ್ತು ಕಾರ್ಮಿಕ ಒಕ್ಕೂಟದ ಮುಖ್ಯಸ್ಥರಿಗೆ 2023ರ ಡಿಸೆಂಬರ್ 25ರಂದು ಮಧ್ಯಾಹ್ನ 12 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಸ್ತಾಂತರಿಸಲಿದ್ದಾರೆ. ಈ ಕಾರ್ಯಕ್ರಮವು ಹುಕುಂ ಚಂದ್ ಗಿರಣಿ ಕಾರ್ಮಿಕರ ದೀರ್ಘಕಾಲದ ಬೇಡಿಕೆಗಳ ಇತ್ಯರ್ಥವನ್ನು ಸೂಚಿಸುತ್ತದೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಅಕ್ಟೋಬರ್ 5 ರಂದು ರಾಜಸ್ಥಾನ ಮತ್ತು ಮಧ್ಯಪ್ರದೇಶಕ್ಕೆ ಪ್ರಧಾನಿ ಭೇಟಿ

October 04th, 09:14 am

ಬೆಳಗ್ಗೆ 11.15ರ ಹೊತ್ತಿಗೆ ಪ್ರಧಾನಿ ಅವರು ರಾಜಸ್ಥಾನದ ಜೋಧ್‌ಪುರದಲ್ಲಿ, ರಸ್ತೆ, ರೈಲು, ವಿಮಾನಯಾನ, ಆರೋಗ್ಯ ಮತ್ತು ಉನ್ನತ ಶಿಕ್ಷಣದಂತಹ ಕ್ಷೇತ್ರ ಸೇರಿದಂತೆ ಸುಮಾರು 5000 ಕೋಟಿ ರೂಪಾಯಿ ಮೊತ್ತದ ಬಹು-ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಕೆಲವು ಯೋಜನೆಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 3.30ರ ಸುಮಾರಿಗೆ ಪ್ರಧಾನಿ ಅವರು ಮಧ್ಯಪ್ರದೇಶದ ಜಬಲ್‌ಪುರವನ್ನು ತಲುಪಲಿದ್ದಾರೆ. ಅಲ್ಲಿ ಅವರು ರಸ್ತೆ, ರೈಲು, ಗ್ಯಾಸ್ ಪೈಪ್‌ಲೈನ್, ವಸತಿ ಮತ್ತು ಶುದ್ಧ ಕುಡಿಯುವ ನೀರು ಸೇರಿದಂತೆ ವಿವಿಧ ಕ್ಷೇತ್ರಗಳ 12,600 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ರಾಷ್ಟ್ರೀಯ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ.

ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

October 02nd, 09:07 pm

ಮುಖ್ಯಮಂತ್ರಿ ಶ್ರೀ ಶಿವರಾಜ್ ಸಿಂಗ್ ಚೌಹಾಣ್, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ನರೇಂದ್ರ ಸಿಂಗ್ ತೋಮರ್ ಜೀ, ವೀರೇಂದ್ರ ಕುಮಾರ್ ಜೀ, ಜ್ಯೋತಿರಾದಿತ್ಯ ಸಿಂಧಿಯಾ ಜೀ, ಇತರ ಎಲ್ಲಾ ಗಣ್ಯರು ಮತ್ತು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಇಲ್ಲಿಗೆ ಬಂದಿರುವ ನನ್ನ ಎಲ್ಲಾ ಕುಟುಂಬ ಸದಸ್ಯರೇ! ಗ್ವಾಲಿಯರ್ ನ ಈ ಐತಿಹಾಸಿಕ ಭೂಮಿಗೆ ನಾನು ನಮಸ್ಕರಿಸುತ್ತೇನೆ!

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಸುಮಾರು 19,260 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಣೆ

October 02nd, 03:53 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿಂದು ಸುಮಾರು 19,260 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಯೋಜನೆಗಳ ಪೈಕಿ ದೆಹಲಿ-ವಡೋದರಾ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ, ಪಿಎಂಎವೈ-ಗ್ರಾಮೀಣ ಯೋಜನೆ ಅಡಿ ನಿರ್ಮಿಸಲಾದ 2.2 ಲಕ್ಷ ಮನೆಗಳ ಗೃಹ ಪ್ರವೇಶ ಮತ್ತು ಪಿಎಂಎವೈ – ನಗರ ಯೋಜನೆ ಅಡಿ ನಿರ್ಮಿಸಲಾದ ಮನೆಗಳ ಲೋಕಾರ್ಪಣೆ, ಜಲಜೀವನ್ ಮಿಷನ್ ಯೋಜನೆಗಳಿಗೆ ಶಂಕುಸ್ಥಾಪನೆ, ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಅಡಿ 9 ಆರೋಗ್ಯ ಕೇಂದ್ರಗಳು, ಐಐಟಿ ಇಂದೋರ್‌ನ ಶೈಕ್ಷಣಿಕ ಕಟ್ಟಡದ ಸಮರ್ಪಣೆ ಮತ್ತು ಕ್ಯಾಂಪಸ್‌ನಲ್ಲಿ ಹಾಸ್ಟೆಲ್ ಮತ್ತು ಇತರ ಕಟ್ಟಡಗಳಿಗೆ ಶಂಕುಸ್ಥಾಪನೆ ಮತ್ತು ಇಂದೋರ್‌ನಲ್ಲಿ ಮಲ್ಟಿ-ಮೋಡಲ್ ಲಾಜಿಸ್ಟಿಕ್ಸ್ ಪಾರ್ಕ್ ಸೇರಿನೆ.

ಮಧ್ಯಪ್ರದೇಶದ ಬಿನಾದಲ್ಲಿ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

September 14th, 12:15 pm

ಮಧ್ಯಪ್ರದೇಶದ ಮುಖ್ಯಮಂತ್ರಿ ಶ್ರೀ ಶಿವರಾಜ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಹರ್ದೀಪ್ ಸಿಂಗ್ ಪುರಿ ಅವರೇ, ಮಧ್ಯಪ್ರದೇಶದ ಇತರ ಸಚಿವರೇ, ಸಂಸತ್ ಸದಸ್ಯರೇ, ಶಾಸಕರೇ ಮತ್ತು ನನ್ನ ಪ್ರೀತಿಯ ಕುಟುಂಬ ಸದಸ್ಯರೇ!

​​​​​​​ಮಧ್ಯಪ್ರದೇಶದ ಬೀನಾದಲ್ಲಿ 50,700 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ

September 14th, 11:38 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಬಿನಾದಲ್ಲಿ 50,700 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದರು. ಬೀನಾದಲ್ಲಿ ಪೆಟ್ರೋ ಕೆಮಿಕಲ್ಸ್‌ ಸಂಸ್ಕರಣಾ ಘಟಕವನ್ನು [ಬಿಪಿಸಿಎಲ್]ವನ್ನು 49,000 ಸಾವಿರ ಕೋಟಿ ರೂಪಾಯಿ ಮೊತ್ತದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ನರ್ಮದಾಪುರಂ ವಿದ್ಯುತ್‌ ಮತ್ತು ನವೀಕೃತ ಇಂಧನ ಉತ್ಪಾದನಾ ವಲಯ ಮತ್ತು ರಾತಲಂನಲ್ಲಿ ಬೃಹತ್ ಕೈಗಾರಿಕಾ ಪಾರ್ಕ್‌ ಗೆ ಶಿಲಾನ್ಯಾಸ ಇಂದೋರ್‌ ನಲ್ಲಿ ಎರಡು ಮಾಹಿತಿ ತಂತ್ರಜ್ಞಾನ ಪಾರ್ಕ್‌ ಮತ್ತು ರಾಜ್ಯದ ವಿವಿಧೆಡೆ ಆರು ಹೊಸ ಕೈಗಾರಿಕಾ ಪಾರ್ಕ್‌ ಗಳಿಗೆ ಪ್ರಧಾನಮಂತ್ರಿ ಅವರು ಶಂಕು ಸ್ಥಾಪನೆ ನೆರವೇರಿಸಿದರು.

​​​​​​​ʻಜಿ-20 ಕಾರ್ಮಿಕ ಮತ್ತು ಉದ್ಯೋಗ ಸಚಿವರ ಸಭೆʼಯಲ್ಲಿ ಪ್ರಧಾನ ಮಂತ್ರಿಯವರ ವೀಡಿಯೊ ಸಂದೇಶದ ಪಠ್ಯ

July 21st, 09:06 am

ನಿಮ್ಮ ಕಾರ್ಯಪಡೆಯು ಪ್ರಮುಖ ಆರ್ಥಿಕ ಮತ್ತು ಸಾಮಾಜಿಕ ಅಂಶಗಳಲ್ಲಿ ಒಂದಾದ ಉದ್ಯೋಗದ ಬಗ್ಗೆ ಚರ್ಚಿಸುತ್ತಿದೆ. ನಾವು ಉದ್ಯೋಗ ಕ್ಷೇತ್ರದಲ್ಲಿನ ಕೆಲವು ಮಹತ್ತರ ಬದಲಾವಣೆಗಳ ಹಾದಿಯಲ್ಲಿದ್ದೇವೆ. ಈ ಕ್ಷಿಪ್ರ ಬದಲಾವಣೆಗಳನ್ನು ಪರಿಹರಿಸಲು ನಾವು ಸ್ಪಂದನಶೀಲ ಮತ್ತು ಪರಿಣಾಮಕಾರಿ ಕಾರ್ಯತಂತ್ರಗಳನ್ನು ಸಿದ್ಧಪಡಿಸಬೇಕಾಗಿದೆ. ನಾಲ್ಕನೇ ಕೈಗಾರಿಕಾ ಕ್ರಾಂತಿಯ ಈ ಯುಗದಲ್ಲಿ, ತಂತ್ರಜ್ಞಾನವು ಉದ್ಯೋಗದ ಮೂಲ ಚಾಲಕ ಶಕ್ತಿಯಾಗಿದ್ದು, ಅದು ಹಾಗೆಯೇ ಮುಂದುವರಿಯುತ್ತದೆ. ಕಳೆದ ಬಾರಿ ತಂತ್ರಜ್ಞಾನ-ನೇತೃತ್ವದ ಪರಿವರ್ತನೆಯ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ತಂತ್ರಜ್ಞಾನ ಆಧರಿತ ಉದ್ಯೋಗಗಳನ್ನು ಸೃಷ್ಟಿಸಿದ ಅನುಭವವನ್ನು ಹೊಂದಿರುವ ದೇಶದಲ್ಲಿ ಈ ಸಭೆ ನಡೆಯುತ್ತಿರುವುದು ನಮ್ಮ ಅದೃಷ್ಟ. ನಿಮ್ಮ ಆತಿಥೇಯ ನಗರವಾದ ಇಂದೋರ್ ಅಂತಹ ರೂಪಾಂತರಗಳ ಹೊಸ ಅಲೆಯನ್ನು ಮುನ್ನಡೆಸುವ ಅನೇಕ ನವೋದ್ಯಮಗಳಿಗೆ ನೆಲೆಯಾಗಿದೆ.

ಜಿ-20 ಕಾರ್ಮಿಕ ಮತ್ತು ಉದ್ಯೋಗ ಸಚಿವರ ಸಮಾವೇಶ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

July 21st, 09:05 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಇಂದೋರ್‌ನಲ್ಲಿಂದು ಜಿ-20 ಕಾರ್ಮಿಕ ಮತ್ತು ಉದ್ಯೋಗ ಸಚಿವರ ಸಮಾವೇಶ ಉದ್ದೇಶಿಸಿ ವೀಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದರು.

ವಂದೇ ಭಾರತ್ 5 ರೈಲುಗಳಿಗೆ ಪ್ರಧಾನ ಮಂತ್ರಿ ಹಸಿರು ನಿಶಾನೆ

June 27th, 10:17 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಭೋಪಾಲ್‌ನ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಐದು ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ವಂದೇ ಭಾರತ್ ಐದು ರೈಲುಗಳೆಂದರೆ, ಭೋಪಾಲ್(ರಾಣಿ ಕಮಲಾಪತಿ) - ಇಂದೋರ್ ವಂದೇ ಭಾರತ್ ಎಕ್ಸ್‌ಪ್ರೆಸ್; ಭೋಪಾಲ್(ರಾಣಿ ಕಮಲಾಪತಿ) - ಜಬಲ್ಪುರ್ ವಂದೇ ಭಾರತ್ ಎಕ್ಸ್‌ಪ್ರೆಸ್; ರಾಂಚಿ - ಪಾಟ್ನಾ ವಂದೇ ಭಾರತ್ ಎಕ್ಸ್‌ಪ್ರೆಸ್; ಧಾರವಾಡ - ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಗೋವಾ (ಮಡ್ಗಾಂವ್) - ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳ ಪ್ರಧಾನಿ ಭೇಟಿಯ ಸಂದರ್ಭದಲ್ಲಿ ನೀಡಿದ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

June 01st, 12:00 pm

ಗೌರವಾನ್ವಿತ ಪ್ರಧಾನ ಮಂತ್ರಿ 'ಪ್ರಚಂಡ' ಜೀ, ಎರಡೂ ನಿಯೋಗಗಳ ಸದಸ್ಯರೇ, ಮಾಧ್ಯಮದ ನಮ್ಮ ಸ್ನೇಹಿತರೇ,

ಇಂದೋರ್ ದುರಂತದಲ್ಲಿ ಮೃತಪಟ್ಟವರಿಗೆ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ

March 30th, 07:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದೋರ್ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ಪರಿಹಾರ ಘೋಷಿಸಿದ್ದಾರೆ.

ಇಂದೋರ್ ನಲ್ಲಿ ಸಂಭವಿಸಿದ ದುರ್ಘಟನೆಯ ಬಗ್ಗೆ ಪ್ರಧಾನಮಂತ್ರಿಯವರು ನೋವು ವ್ಯಕ್ತಪಡಿಸಿದ್ದಾರೆ

March 30th, 02:42 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದೋರ್ ನಲ್ಲಿ ಸಂಭವಿಸಿದ ದುರ್ಘಟನೆಯ ಬಗ್ಗೆ ನೋವು ವ್ಯಕ್ತಪಡಿಸಿದ್ದಾರೆ. ಶ್ರೀ ಮೋದಿ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು.

ಮಧ್ಯಪ್ರದೇಶದ ಇಂದೋರ್‌ ನಲ್ಲಿ ಜರುಗಿದ 17ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶದಲ್ಲಿ ಸನ್ಮಾನ್ಯ ಪ್ರಧಾನಮಂತ್ರಿಯವರು ಮಾಡಿದ ಹಿಂದಿ ಭಾಷಣದ ಕನ್ನಡ ಅವತರಣಿಕೆ

January 09th, 12:00 pm

ನಿಮ್ಮೆಲ್ಲರಿಗೂ 2023 ರ ಶುಭಾಶಯಗಳು. ಪ್ರವಾಸಿ ಭಾರತೀಯ ದಿವಸ್ ಸಮಾವೇಶವು ಸುಮಾರು ನಾಲ್ಕು ವರ್ಷಗಳ ನಂತರ ಮತ್ತೊಮ್ಮೆ ಅದರ ಮೂಲ ರೂಪದಲ್ಲಿ ಮತ್ತು ಅದರ ಎಲ್ಲಾ ವೈಭವದೊಂದಿಗೆ ನಡೆಯುತ್ತಿದೆ. ವರ್ಷಗಳ ನಂತರ ಪ್ರೀತಿಪಾತ್ರರೊಂದಿಗಿನ ಮುಖಾಮುಖಿ ಭೇಟಿಯು ತನ್ನದೇ ಆದ ವಿಶಿಷ್ಟ ಸಂತೋಷವನ್ನು ಹೊಂದಿದೆ ಮತ್ತು ಅದರ ಪ್ರಾಮುಖ್ಯತೆಯನ್ನು ಹೊಂದಿದೆ. 130 ಕೋಟಿ ಭಾರತೀಯರ ಪರವಾಗಿ ನಾನು ನಿಮ್ಮೆಲ್ಲರನ್ನು ಶುಭಾಶಯ ಕೋರುತ್ತೇನೆ ಮತ್ತು ಸ್ವಾಗತಿಸುತ್ತೇನೆ.

​​​​​​​ಮಧ್ಯಪ್ರದೇಶದ ಇಂದೋರ್‌ನಲ್ಲಿ 17ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶ ಉದ್ಘಾಟಿಸಿದ ಪ್ರಧಾನಮಂತ್ರಿ

January 09th, 11:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಇಂದೋರ್‌ನಲ್ಲಿ 17 ನೇ ಪ್ರವಾಸಿ ಭಾರತೀಯ ದಿನ ಸಮಾವೇಶವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿ ಅವರು ‘ಸುರಕ್ಷಿತ್ ಜಾಯೇನ್, ಪ್ರಶಿಕ್ಷಿತ್ ಜಾಯೇನ್’ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು ಮತ್ತು ‘ಆಜಾದಿ ಕಾ ಅಮೃತ್ ಮಹೋತ್ಸವ - ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಅನಿವಾಸಿ ಭಾರತೀಯರ ಕೊಡುಗೆ’ ವಿಷಯದ ಕುರಿತು ಮೊಟ್ಟಮೊದಲ ಡಿಜಿಟಲ್ ಪಿಬಿಡಿ ಪ್ರದರ್ಶನವನ್ನು ಉದ್ಘಾಟಿಸಿದರು.

ಇಂದೋರ್ ನಲ್ಲಿ ನಾಳೆ ಪ್ರವಾಸಿ ಭಾರತೀಯ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಿ ನರೇಂದ್ರ ಮೋದಿ

January 08th, 05:54 pm

ಪ್ರಧಾನಿ ನರೇಂದ್ರ ಮೋದಿಯವರು ನಾಳೆ ಇಂದೋರ್ ನಗರಕ್ಕೆ ಭೇಟಿ ನೀಡಲಿದ್ದು, 'ಪ್ರವಾಸಿ ಭಾರತೀಯ ದಿನ' ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Vision of self-reliant India embodies the spirit of global good: PM Modi in Indonesia

November 15th, 04:01 pm

PM Modi interacted with members of Indian diaspora and Friends of India in Bali, Indonesia. He highlighted the close cultural and civilizational linkages between India and Indonesia. He referred to the age old tradition of Bali Jatra” to highlight the enduring cultural and trade connect between the two countries.