ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
September 18th, 11:52 am
ನಮ್ಮ ದೇಶದ 75 ವರ್ಷಗಳ ಸಂಸದೀಯ ಪಯಣ ಮತ್ತು ಈ ಹಿನ್ನೆಲೆಯಲ್ಲಿ ಹೊಸ ಸದನವನ್ನು ಪ್ರವೇಶಿಸುವ ಮೊದಲು ಮತ್ತೊಮ್ಮೆ ಆ ಸ್ಪೂರ್ತಿದಾಯಕ ಕ್ಷಣಗಳನ್ನು ನೆನಪಿಸಿಕೊಳ್ಳಲು, ನಾವು ಒಟ್ಟಾಗಿ, ಈ ಐತಿಹಾಸಿಕ ಕಟ್ಟಡಕ್ಕೆ ವಿದಾಯ ಹೇಳುತ್ತಿದ್ದೇವೆ. ಸ್ವಾತಂತ್ರ್ಯದ ಮೊದಲು, ಈ ಸದನವನ್ನು ಇಂಪೀರಿಯಲ್ ಲೆಜಿಸ್ಲೇಟಿವ್ ಕೌನ್ಸಿಲ್ ಎಂದು ಕರೆಯಲಾಗುತ್ತಿತ್ತು. ಸ್ವಾತಂತ್ರ್ಯದ ನಂತರ ಇದನ್ನು ಸಂಸತ್ ಭವನ ಎಂದು ಕರೆಯಲಾಯಿತು. ಈ ಕಟ್ಟಡವನ್ನು ಕಟ್ಟುವ ನಿರ್ಧಾರವನ್ನು ವಿದೇಶಿ ಸಂಸದರು ಮಾಡಿರುವುದು ನಿಜ, ಆದರೆ ಈ ಕಟ್ಟಡದ ನಿರ್ಮಾಣಕ್ಕೆ ನನ್ನ ಸಹವರ್ತಿಗಳ ಬೆವರು ಸುರಿಸಲ್ಪಟ್ಟಿದೆ ಎಂದು ಹೆಮ್ಮೆಯಿಂದ ಹೇಳಲು ನಾವು ಎಂದಿಗೂ ಹಿಂಜರಿಯಲು ಸಾಧ್ಯವಿಲ್ಲ, ಇದರಲ್ಲಿ ನನ್ನ ಸಹೋದ್ಯೋಗಿಗಳ ಶ್ರಮವಿದೆ ಮತ್ತು ಹಣವನ್ನು ಕೂಡಾ ನನ್ನ ದೇಶದ ಜನರು ನೀಡಿದ್ದಾರೆ.ಸಂಸತ್ತಿನ ವಿಶೇಷ ಅಧಿವೇಶನ ಉದ್ದೇಶಿಸಿ ಲೋಕಸಭೆಯಲ್ಲಿ ಪ್ರಧಾನಿ ಭಾಷಣ
September 18th, 11:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿಂದು ಸಂಸತ್ತಿನ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದರು, ಈ ವಿಶೇಷ ಅಧಿವೇಶನ 2023ರ ಸೆಪ್ಟಂಬರ್ 18ರಿಂದ 22ರವರೆಗೆ ನಡೆಯಲಿದೆ.ಸಂಸತ್ತಿನ ವಿಶೇಷ ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಮಂತ್ರಿಯವರ ಭಾಷಣದ ಅನುವಾದ
September 18th, 10:15 am
ಚಂದ್ರಯಾನ-3 ಯಶಸ್ಸು ನಮ್ಮ ತ್ರಿವರ್ಣ ಧ್ವಜವನ್ನು ಮುಗಿಲೆತ್ತರಕ್ಕೆ ಹಾರಿಸಿದೆ. ಶಿವಶಕ್ತಿ ಪಾಯಿಂಟ್ ಹೊಸ ಸ್ಫೂರ್ತಿಯ ಕೇಂದ್ರವಾಗಿದೆ ಮತ್ತು ತಿರಂಗಾ ಪಾಯಿಂಟ್ ನಮ್ಮಲ್ಲಿ ಹೆಮ್ಮೆಯನ್ನು ತುಂಬುತ್ತದೆ. ಈ ರೀತಿಯ ಸಾಧನೆಗಳು ಜಗತ್ತಿನಲ್ಲಿ ಸಂಭವಿಸಿದಾಗ, ಅವುಗಳನ್ನು ಆಧುನಿಕತೆ, ವಿಜ್ಞಾನ ಮತ್ತು ತಂತ್ರಜ್ಞಾನದ ಜೊತೆಯಲ್ಲಿ ತಾಳೆ ಹಾಕಿ ನೋಡಲಾಗುತ್ತದೆ. ಮತ್ತು ಈ ಸಾಮರ್ಥ್ಯವನ್ನು ಜಗತ್ತಿಗೆ ಪ್ರದರ್ಶಿಸಿದಾಗ, ಅದು ಭಾರತದ ಮನೆ ಬಾಗಿಲಿಗೆ ಹಲವಾರು ಸಾಧ್ಯತೆಗಳು ಮತ್ತು ಅವಕಾಶಗಳನ್ನು ತರುತ್ತದೆ. G20ನ ಅಭೂತಪೂರ್ವ ಯಶಸ್ಸು, 60ಕ್ಕೂ ಹೆಚ್ಚು ಸ್ಥಳಗಳಲ್ಲಿ ಪ್ರಪಂಚದಾದ್ಯಂತದ ನಾಯಕರನ್ನು ಸ್ವಾಗತಿಸುವುದು, ಬುದ್ದಿಮತ್ತೆ ಸೆಷನ್ ಗಳು, ನಿಜವಾದ ಉತ್ಸಾಹದಲ್ಲಿ ಒಕ್ಕೂಟ ರಚನೆಯ ಜೀವಂತ ಅನುಭವ, G20 ಸ್ವತಃ ನಮ್ಮ ವೈವಿಧ್ಯತೆ ಮತ್ತು ಅನನ್ಯತೆಯ ಆಚರಣೆಯಾಗಿದೆ. ಜಿ20 ರೊಳಗೆ ಜಾಗತಿಕ ದಕ್ಷಿಣದ ಧ್ವನಿಯಾಗಿ ಭಾರತವು ಸದಾ ಹೆಮ್ಮೆಪಡುತ್ತದೆ. ಆಫ್ರಿಕನ್ ಯೂನಿಯನ್ ಗೆ ಶಾಶ್ವತ ಸದಸ್ಯತ್ವ ಮತ್ತು ಸರ್ವಾನುಮತದ G20 ಘೋಷಣೆಯಂತಹ ಬೆಳವಣಿಗೆಗಳು ಭಾರತಕ್ಕೆ ಉಜ್ವಲ ಭವಿಷ್ಯದ ಅವಕಾಶ ಒದಗಿಸುತ್ತದೆ.ರಾಷ್ಟ್ರಕ್ಕೆ ಯಶೋಭೂಮಿ ಸಮರ್ಪಣೆ ಮತ್ತು ವಿಶ್ವಕರ್ಮ ಯೋಜನೆಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 17th, 06:08 pm
ಕೇಂದ್ರ ಸಚಿವ ಸಂಪುಟದ ನನ್ನ ಎಲ್ಲಾ ಸಹೋದ್ಯೋಗಿಗಳೆ, ದೇಶದ ಮೂಲೆ ಮೂಲೆಗಳಿಂದ ಆಗಮಿಸಿ, ಈ ಭವ್ಯ ಕಟ್ಟಡದಲ್ಲಿ ಸೇರಿರುವ ಆತ್ಮೀಯ ಸಹೋದರ ಸಹೋದರಿಯರೆ, 70ಕ್ಕಿಂತ ಹೆಚ್ಚಿನ ನಗರಗಳಿಂದ ಈ ಕಾರ್ಯಕ್ರಮಕ್ಕೆ ಸೇರಿರುವ ನನ್ನ ಸಹನಾಗರಿಕರೆ, ಇತರೆ ಗಣ್ಯ ಅತಿಥಿಗಳೆ ಮತ್ತು ನನ್ನ ಕುಟುಂಬ ಸದಸ್ಯರೆ!ನವದೆಹಲಿಯಲ್ಲಿ ಭಾರತ ಅಂತಾರಾಷ್ಟ್ರೀಯ ಸಮಾವೇಶ ಮತ್ತು ಪ್ರದರ್ಶನ ಕೇಂದ್ರ - ‘ಯಶೋಭೂಮಿ’ ಮೊದಲನೇ ಹಂತವನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ
September 17th, 12:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ದ್ವಾರಕಾದಲ್ಲಿ ಭಾರತ ಅಂತಾರಾಷ್ಟ್ರೀಯ ಸಮಾವೇಶ ಮತ್ತು ಪ್ರದರ್ಶನ ಕೇಂದ್ರ (ಇಂಡಿಯಾ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಮತ್ತು ಎಕ್ಸ್ಪೋ ಸೆಂಟರ್) - ‘ಯಶೋಭೂಮಿ’ಯ ಮೊದಲನೇ ಹಂತವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. 'ಯಶೋಭೂಮಿ' ಭವ್ಯವಾದ ಸಮಾವೇಶ ಕೇಂದ್ರ, ಬಹು ಪ್ರದರ್ಶನ ಸಭಾಂಗಣಗಳು ಮತ್ತು ಇತರ ಸೌಲಭ್ಯಗಳನ್ನು ಹೊಂದಿದೆ. ಪ್ರಧಾನಿಯವರು ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಕರಕುಶಲಿಗಳಿಗಾಗಿ ‘ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ’ಗೆ ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ಪಿಎಂ ವಿಶ್ವಕರ್ಮ ಲೋಗೋ, ಘೋಷವಾಕ್ಯ ಮತ್ತು ಪೋರ್ಟಲ್ ಅನ್ನು ಸಹ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅವರು ನಿರ್ದಿಷ್ಟವಾಗಿ ರೂಪಿಸಿದ ಸ್ಟಾಂಪ್ ಶೀಟ್, ಟೂಲ್ ಕಿಟ್ ಇ-ಪುಸ್ತಕ ಮತ್ತು ವಿಡಿಯೋವನ್ನು ಬಿಡುಗಡೆ ಮಾಡಿದರು. ಪ್ರಧಾನಮಂತ್ರಿಯವರು 18 ಫಲಾನುಭವಿಗಳಿಗೆ ವಿಶ್ವಕರ್ಮ ಪ್ರಮಾಣಪತ್ರಗಳನ್ನು ವಿತರಿಸಿದರು.ಸೆಪ್ಟೆಂಬರ್ 17 ರಂದು ಪ್ರಧಾನಮಂತ್ರಿಯವರಿಂದ ರಾಷ್ಟ್ರಕ್ಕೆ ನವದೆಹಲಿಯ ದ್ವಾರಕಾದಲ್ಲಿ 'ಯಶೋಭೂಮಿ' ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಮತ್ತು ಎಕ್ಸ್ಪೋ ಸೆಂಟರ್ ನ 1 ನೇ ಹಂತದ ಸಮರ್ಪಣೆ
September 15th, 04:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 17ನೇ ಸೆಪ್ಟೆಂಬರ್ 2023 ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ದ್ವಾರಕಾದಲ್ಲಿ ‘ಯಶೋಭೂಮಿʼ ಎಂದು ಹೆಸರಿಡಲ್ಪಟ್ಟ ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಮತ್ತು ಎಕ್ಸ್ಪೋ ಸೆಂಟರ್ (ಐಐಸಿಸಿ) 1 ನೇ ಹಂತವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ದ್ವಾರಕಾ ಸೆಕ್ಟರ್ 21 ರಿಂದ ಹೊಸ ಮೆಟ್ರೋ ನಿಲ್ದಾಣ 'ಯಶೋಭೂಮಿ ದ್ವಾರಕಾ ಸೆಕ್ಟರ್ 25' ವರೆಗೆ ದೆಹಲಿ ಏರ್ಪೋರ್ಟ್ ಮೆಟ್ರೋ ಎಕ್ಸ್ಪ್ರೆಸ್ ಲೈನ್ನ ವಿಸ್ತರಣೆಯನ್ನು ಸಹ ಪ್ರಧಾನಮಂತ್ರಿಯವರು ಉದ್ಘಾಟಿಸಲಿದ್ದಾರೆ.