ಸೆಪ್ಟೆಂಬರ್ 23ರಂದು ವಾರಣಾಸಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿಗಳು
September 21st, 10:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಸೆಪ್ಟೆಂಬರ್ 23ರಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1:30ಕ್ಕೆ ಪ್ರಧಾನಮಂತ್ರಿಯವರು ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 3:15ಕ್ಕೆ ಪ್ರಧಾನಮಂತ್ರಿಯವರು `ರುದ್ರಾಕ್ಷಿ ಅಂತಾರಾಷ್ಟ್ರೀಯ ಸಹಕಾರ ಮತ್ತು ಸಮಾವೇಶ ಕೇಂದ್ರ’ಕ್ಕೆ ತಲುಪಲಿದ್ದು, `ಕಾಶಿ ಸಂಸದ್ ಸಾಂಸ್ಕೃತಿಕ ಮಹೋತ್ಸವ-2023’ರ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಉತ್ತರ ಪ್ರದೇಶದಾದ್ಯಂತ ನಿರ್ಮಿಸಲಾದ 16 ಅಟಲ್ ಆವಾಸಿಯಾ ವಿದ್ಯಾಲಯವನ್ನು ಉದ್ಘಾಟಿಸಲಿದ್ದಾರೆ.ವಾರಾಣಸಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿ, ಪ್ರಧಾನಮಂತ್ರಿ ಭಾಷಣದ ಪೂರ್ಣ ಪಠ್ಯ
July 14th, 06:28 pm
ಈ ಸಂದರ್ಭದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ವಾರಣಾಸಿ ನಗರವನ್ನು ಸ್ಮಾರ್ಟ್ ಸಿಟಿ ಆಗಿ ರೂಪಾಂತರಗೊಳಿಸಲು ಕೆಲಸ ಪೂರ್ಣ ರೀತಿಯಲ್ಲಿ ನಡೆಯುತ್ತಿದೆ ಎಂದು ಮೋದಿ ಹೇಳಿದ್ದಾರೆ. ಇಂಟಿಗ್ರೇಟೆಡ್ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ನ ಕೆಲಸದ ಜೊತೆಗೆ ಹತ್ತು ಇತರ ಯೋಜನೆಗಳನ್ನು ಶೀಘ್ರವಾಗಿ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು, ಇದು ಪ್ರದೇಶದ ಜನರ ಜೀವನವನ್ನು ಮಾರ್ಪಡಿಸುವುದು ಮಾತ್ರವಲ್ಲದೆ ಆದರೆ ಯುವಕರಿಗೆ ಉದ್ಯೋಗಾವಕಾಶಗಳನ್ನು ರಚಿಸಲಾಗುತ್ತಿದೆ .ವಾರಾಣಸಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
July 14th, 06:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಾರಾಣಸಿಯಲ್ಲಿ ಒಟ್ಟಾರೆ 900 ಕೋಟಿ ರೂಪಾಯಿ ಮೌಲ್ಯದ ಮಹತ್ವದ ಯೋಜನೆಗಳಿಗೆ ಶಂಕುಸ್ಥಾಪನೆ ಅಥವಾ ಚಾಲನೆ ನೀಡಿದರು. ಉದ್ಘಾಟನೆಯಾದ ಯೋಜನೆಗಳಲ್ಲಿ ವಾರಾಣಸಿ ನಗರ ಅನಿಲ ವಿತರಣಾ ಯೋಜನೆ ಮತ್ತು ವಾರಾಣಸಿ – ಬಲ್ಲಿಯಾ ಮೆಮು ರೈಲು ಯೋಜನೆಯೂ ಸೇರಿತ್ತು. ಪಂಚಕೋಶಿ ಪರಿಕ್ರಮ ಮಾರ್ಗ, ಸ್ಮಾರ್ಟ್ ಸಿಟಿ ಮತ್ತು ನಮಾಮಿ ಗಂಗೆ ಯೋಜನೆಗಳ ಅಡಿಯಲ್ಲಿ ವಿವಿಧ ಯೋಜನೆಗಳಿಗೆ ಅವರು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ವಾರಾಣಸಿಯಲ್ಲಿ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರಕ್ಕೂ ಶಿಲಾನ್ಯಾಸ ನೆರವೇರಿಸಿದರು.