ಏಷ್ಯನ್ ಗೇಮ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳೊಂದಿಗಿನ ಸಂವಾದದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 10th, 06:25 pm
1951ರಲ್ಲಿ ಇದೇ ಕ್ರೀಡಾಂಗಣದಲ್ಲಿ ಮೊದಲ ಏಷ್ಯನ್ ಗೇಮ್ಸ್ ನಡೆದದ್ದು ಎಂತಹ ಅದ್ಭುತ ಕಾಕತಾಳೀಯ. ಇಂದು, ನೀವು ತೋರಿಸಿದ ಧೈರ್ಯ, ನೀವು ಮಾಡಿದ ಪ್ರಯತ್ನಗಳು ಮತ್ತು ನೀವು ತಂದ ಫಲಿತಾಂಶಗಳಿಂದಾಗಿ, ದೇಶದ ಪ್ರತಿಯೊಂದು ಮೂಲೆಯಲ್ಲೂ ಸಂಭ್ರಮದ ವಾತಾವರಣವಿದೆ. ನೀವು 100 ಪದಕಗಳ ಸಂಖ್ಯೆಯನ್ನು ದಾಟಲು ಹಗಲು ರಾತ್ರಿ ಶ್ರಮಿಸಿದ್ದೀರಿ. ಏಷ್ಯನ್ ಗೇಮ್ಸ್ ನಲ್ಲಿ ನಿಮ್ಮಂತಹ ಎಲ್ಲಾ ಕ್ರೀಡಾಪಟುಗಳ ಪ್ರದರ್ಶನದಿಂದಾಗಿ ಇಡೀ ದೇಶ ಹೆಮ್ಮೆ ಪಡುತ್ತಿದೆ.ಏಷ್ಯಾ ಕ್ರೀಡಾಕೂಟ 2022 ರಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳ ತಂಡವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ
October 10th, 06:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಮೇಜರ್ ಧ್ಯಾನ್ ಚಂದ್ ಕ್ರೀಡಾಂಗಣದಲ್ಲಿ ಏಷ್ಯಾ ಕ್ರೀಡಾಕೂಟ 2022 ರಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳ ತಂಡವನ್ನು ಉದ್ದೇಶಿಸಿ ಮಾತನಾಡಿದರು. ಅವರು ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದರು. ಭಾರತವು 2022ರ ಏಷ್ಯಾ ಕ್ರೀಡಾಕೂಟದಲ್ಲಿ 28 ಚಿನ್ನದ ಪದಕಗಳು ಸೇರಿದಂತೆ 107 ಪದಕಗಳನ್ನು ಗೆದ್ದುಕೊಂಡಿದೆ, ಕಾಂಟಿನೆಂಟಲ್ ಮಲ್ಟಿ-ಸ್ಪೋರ್ಟ್ ಕ್ರೀಡಾಕೂಟದಲ್ಲಿ ಗೆದ್ದ ಒಟ್ಟು ಪದಕಗಳ ಸಂಖ್ಯೆಯ ಪ್ರಕಾರ ಇದು ಅತ್ಯುತ್ತಮ ಸಾಧನೆಯಾಗಿದೆ.ʻಜಿ-20 ಯೂನಿವರ್ಸಿಟಿ ಕನೆಕ್ಟ್ʼ ಫಿನಾಲೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
September 26th, 04:12 pm
ದೇಶದ ವಿವಿಧ ವಿಶ್ವವಿದ್ಯಾಲಯಗಳೇ, ಉಪಕುಲಪತಿಗಳೇ, ಪ್ರಾಧ್ಯಾಪಕರೇ, ವಿವಿಧ ಸಂಸ್ಥೆಗಳ ಪ್ರತಿನಿಧಿಗಳೇ ಮತ್ತು ನನ್ನ ಯುವ ಸ್ನೇಹಿತರೇ! ʻಭಾರತ್ ಮಂಟಪಂʼನಲ್ಲಿ ಇದ್ದುದ್ದಕ್ಕಿಂತ ಹೆಚ್ಚಿನ ಜನರು ಇಂದು ಆನ್‌ಲೈನ್ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ. ನಾನು 'ಜಿ -20 ಯೂನಿವರ್ಸಿಟಿ ಕನೆಕ್ಟ್' ಕಾರ್ಯಕ್ರಮಕ್ಕೆ ಎಲ್ಲರನ್ನೂ ಸ್ವಾಗತಿಸುತ್ತೇನೆ ಮತ್ತು ಎಲ್ಲಾ ಯುವಕರನ್ನು ಅಭಿನಂದಿಸುತ್ತೇನೆ.ಜಿ-20 ವಿಶ್ವವಿದ್ಯಾಲಯ ಸಂಪರ್ಕ ಅಂತಿಮ(ಯೂನಿವರ್ಸಿಟಿ ಕನೆಕ್ಟ್ ಫಿನಾಲೆ) ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 26th, 04:11 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ್ ಮಂಟಪದಲ್ಲಿಂದು ಜಿ-20 ವಿಶ್ವವಿದ್ಯಾಲಯ ಸಂಪರ್ಕ ಕಲ್ಪಿಸುವ ಅಂತಿಮ(ಯುನಿವರ್ಸಿಟಿ ಕನೆಕ್ಟ್ ಫಿನಾಲೆ) ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಿದರು. ಜಿ-20 ವಿಶ್ವವಿದ್ಯಾಲಯ ಸಂಪರ್ಕ ಉಪಕ್ರಮವನ್ನು ಭಾರತದ ಯುವಜನರಲ್ಲಿ ಭಾರತದ ಅಧ್ಯಕ್ಷತೆಯ ಜಿ-20 ಶೃಂಗಸಭೆಯ ಬಗ್ಗೆ ತಿಳುವಳಿಕೆ ಮೂಡಿಸಲು ಮತ್ತು ವಿವಿಧ ಜಿ-20 ಕಾರ್ಯಕ್ರಮಗಳಲ್ಲಿ ಅವರ ಭಾಗವಹಿಸುವಿಕೆ ಹೆಚ್ಚಿಸುವ ಉದ್ದೇಶದಿಂದ ಆಯೋಜಿಸಲಾಗಿದೆ. ಪ್ರಧಾನ ಮಂತ್ರಿ ಅವರು ಈ ಸಂದರ್ಭದಲ್ಲಿ 4 ಪ್ರಕಟಣೆಗಳನ್ನು ಬಿಡುಗಡೆ ಮಾಡಿದರು. ಅವುಗಳೆಂದರೆ ದಿ ಗ್ರ್ಯಾಂಡ್ ಸಕ್ಸಸ್ ಆಫ್ ಜಿ-20 ಭಾರತ್ ಪ್ರೆಸಿಡೆನ್ಸಿ: ದೂರದೃಷ್ಟಿಯ ನಾಯಕತ್ವ, ಅಂತರ್ಗತ ಕಾರ್ಯವಿಧಾನ; ಭಾರತದ ಜಿ-20 ಪ್ರೆಸಿಡೆನ್ಸಿ: ವಸುಧೈವ ಕುಟುಂಬಕಂ; ಜಿ-20 ವಿಶ್ವವಿದ್ಯಾಲಯ ಸಂಪರ್ಕ ಕಾರ್ಯಕ್ರಮದ ಸಂಕಲನ; ಮತ್ತು ಜಿ-20ರಲ್ಲಿ ಭಾರತೀಯ ಸಂಸ್ಕೃತಿಯ ಪ್ರದರ್ಶನ.ಕಾಶಿ ಸಂಸದ್ ಸಾಂಸ್ಕೃತಿಕ ಮಹೋತ್ಸವ 2023 ರ ಸಮಾರೋಪ ಸಮಾರಂಭದಲ್ಲಿ ಮತ್ತು ವಾರಣಾಸಿಯಲ್ಲಿ ಅಟಲ್ ಆವಾಸಿಯಾ ವಿದ್ಯಾಲಯಗಳ ಸಮರ್ಪಣೆಯಲ್ಲಿ ಪ್ರಧಾನಮಂತ್ರಿ ಭಾಷಣದ ಕನ್ನಡ ಅನುವಾದ
September 23rd, 08:22 pm
ಭಗವಾನ್ ಶಿವನ ಆಶೀರ್ವಾದದಿಂದ, ಕಾಶಿಯ ಖ್ಯಾತಿ ಇಂದು ಹೊಸ ಎತ್ತರವನ್ನು ತಲುಪುತ್ತಿದೆ. ಜಿ 20 ಶೃಂಗಸಭೆಯ ಮೂಲಕ ಭಾರತವು ವಿಶ್ವ ವೇದಿಕೆಯಲ್ಲಿ ತನ್ನ ಧ್ವಜವನ್ನು ಎತ್ತರಕ್ಕೆ ಏರಿಸಿದೆ, ಆದರೆ ಕಾಶಿ ಬಗ್ಗೆ ಚರ್ಚೆ ವಿಶೇಷವಾಗಿದೆ. ಕಾಶಿಯ ಸೇವೆ, ಪರಿಮಳ, ಸಂಸ್ಕೃತಿ ಮತ್ತು ಸಂಗೀತ... ಜಿ 20 ಗೆ ಅತಿಥಿಯಾಗಿ ಕಾಶಿಗೆ ಬಂದ ಪ್ರತಿಯೊಬ್ಬರೂ ಅದನ್ನು ತಮ್ಮ ನೆನಪುಗಳಲ್ಲಿ ತಮ್ಮೊಂದಿಗೆ ತೆಗೆದುಕೊಂಡು ಹೋದರು. ಭಗವಾನ್ ಶಿವನ ಆಶೀರ್ವಾದದಿಂದಾಗಿ ಜಿ 20 ಯ ನಂಬಲಾಗದ ಯಶಸ್ಸು ಸಾಧ್ಯವಾಗಿದೆ ಎಂದು ನಾನು ನಂಬುತ್ತೇನೆ.ಉತ್ತರ ಪ್ರದೇಶದ ವಾರಾಣಸಿಯಲ್ಲಿ ಕಾಶಿ ಸಂಸದ್ ಸಾಂಸ್ಕೃತಿಕ ಮಹೋತ್ಸವ 2023 ರ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ
September 23rd, 04:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯ ರುದ್ರಾಕ್ಷಿ ಅಂತಾರಾಷ್ಟ್ರೀಯ ಸಹಕಾರ ಮತ್ತು ಸಮಾವೇಶ ಕೇಂದ್ರದಲ್ಲಿ ಕಾಶಿ ಸಂಸದ್ ಸಾಂಸ್ಕೃತಿಕ ಮಹೋತ್ಸವ 2023 ರ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸುಮಾರು 1115 ಕೋಟಿ ರೂಪಾಯಿ ವೆಚ್ಚದಲ್ಲಿ ಉತ್ತರ ಪ್ರದೇಶದಾದ್ಯಂತ ನಿರ್ಮಿಸಲಾದ 16 ಅಟಲ್ ಅವಾಸಿಯ ವಿದ್ಯಾಲಯಗಳನ್ನು ಪ್ರಧಾನಿಯವರು ಉದ್ಘಾಟಿಸಿದರು. ಅವರು ಕಾಶಿ ಸಂಸದ್ ಖೇಲ್ ಪ್ರತಿಯೋಗಿತಾ ನೋಂದಣಿ ಪೋರ್ಟಲ್ ಗೆ ಚಾಲನೆ ನೀಡಿದರು. ಕಾಶಿ ಸಂಸದ್ ಸಾಂಸ್ಕೃತಿಕ ಮಹೋತ್ಸವದ ವಿಜೇತರಿಗೆ ಬಹುಮಾನ ವಿತರಿಸಿದರು. ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಮಂತ್ರಿಯವರು ಅಟಲ್ ಅವಾಸಿಯಾ ವಿದ್ಯಾಲಯಗಳ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.ବାରଣାସୀରେ ଅନ୍ତର୍ଜାତୀୟ କ୍ରିକେଟ ଷ୍ଟାଡିୟମର ଶିଳାନ୍ୟାସ ସମାରୋହରେ ପ୍ରଧାନମନ୍ତ୍ରୀଙ୍କ ଅଭିଭାଷଣ
September 23rd, 02:11 pm
ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಉತ್ತರ ಪ್ರದೇಶ ಸರ್ಕಾರದ ಎಲ್ಲಾ ಸಚಿವರುಗಳೇ, ಪ್ರತಿನಿಧಿಗಳೇ, ಕ್ರೀಡಾ ಜಗತ್ತಿನ ಗಣ್ಯ ಅತಿಥಿಗಳೇ ಮತ್ತು ಕಾಶಿಯ ನನ್ನ ಪ್ರೀತಿಯ ಕುಟುಂಬ ಸದಸ್ಯರೇ!ಉತ್ತರ ಪ್ರದೇಶದ ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ
September 23rd, 02:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಾರಾಣಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಸುಮಾರು 30 ಎಕರೆಗೂ ಹೆಚ್ಚು ಪ್ರದೇಶದಲ್ಲಿ ವ್ಯಾಪಿಸಿರುವ ಆಧುನಿಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು ವಾರಣಾಸಿಯ ಗಂಜಾರಿ, ರಜತಲಾಬ್ ನಲ್ಲಿ ಸುಮಾರು 450 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.ಸೆಪ್ಟೆಂಬರ್ 23ರಂದು ವಾರಣಾಸಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿಗಳು
September 21st, 10:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಸೆಪ್ಟೆಂಬರ್ 23ರಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1:30ಕ್ಕೆ ಪ್ರಧಾನಮಂತ್ರಿಯವರು ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 3:15ಕ್ಕೆ ಪ್ರಧಾನಮಂತ್ರಿಯವರು `ರುದ್ರಾಕ್ಷಿ ಅಂತಾರಾಷ್ಟ್ರೀಯ ಸಹಕಾರ ಮತ್ತು ಸಮಾವೇಶ ಕೇಂದ್ರ’ಕ್ಕೆ ತಲುಪಲಿದ್ದು, `ಕಾಶಿ ಸಂಸದ್ ಸಾಂಸ್ಕೃತಿಕ ಮಹೋತ್ಸವ-2023’ರ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಉತ್ತರ ಪ್ರದೇಶದಾದ್ಯಂತ ನಿರ್ಮಿಸಲಾದ 16 ಅಟಲ್ ಆವಾಸಿಯಾ ವಿದ್ಯಾಲಯವನ್ನು ಉದ್ಘಾಟಿಸಲಿದ್ದಾರೆ.