ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಅಂತಾರಾಷ್ಟ್ರೀಯ ವಕೀಲರ ಸಮ್ಮೇಳನದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
September 23rd, 10:59 am
ಕಾನೂನು ಕ್ಷೇತ್ರದ ವಿಶ್ವಾದ್ಯಂತ ಹೆಸರಾಂತ ವ್ಯಕ್ತಿಗಳನ್ನು ಭೇಟಿಯಾಗುವುದು ಮತ್ತು ಅವರ ಉಪಸ್ಥಿತಿಯಲ್ಲಿರಲು ಅವಕಾಶವನ್ನು ಹೊಂದುವುದು ನನಗೆ ಸಂತೋಷಕರ ಅನುಭವವಾಗಿದೆ. ಭಾರತದ ಎಲ್ಲಾ ಭಾಗಗಳ ಜನರು ಇಂದು ಇಲ್ಲಿ ಇದ್ದಾರೆ. ಈ ಸಮ್ಮೇಳನಕ್ಕೆ ಇಂಗ್ಲೆಂಡಿನ ಲಾರ್ಡ್ ಚಾನ್ಸೆಲರ್ ಮತ್ತು ಇಂಗ್ಲೆಂಡಿನ ಬಾರ್ ಅಸೋಸಿಯೇಶನ್ಗಳ ಪ್ರತಿನಿಧಿಗಳೂ ನಮ್ಮ ನಡುವೆ ಇದ್ದಾರೆ. ಕಾಮನ್ವೆಲ್ತ್ ಮತ್ತು ಆಫ್ರಿಕನ್ ದೇಶಗಳ ಪ್ರತಿನಿಧಿಗಳು ಸಹ ಭಾಗವಹಿಸುತ್ತಿದ್ದಾರೆ. ಒಂದು ರೀತಿಯಲ್ಲಿ ಈ ಅಂತರಾಷ್ಟ್ರೀಯ ವಕೀಲರ ಸಮ್ಮೇಳನವು ‘ವಸುಧೈವ ಕುಟುಂಬಕಂ’ (ಜಗತ್ತೇ ಒಂದು ಕುಟುಂಬ) ಎಂಬ ಭಾರತದ ಭಾವನೆಯ ಪ್ರತೀಕವಾಗಿ ಪರಿಣಮಿಸಿದೆ. ಭಾರತದಲ್ಲಿ ನಡೆಯುವ ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಂದಿರುವ ಎಲ್ಲಾ ಅಂತಾರಾಷ್ಟ್ರೀಯ ಅತಿಥಿಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಈ ಕಾರ್ಯಕ್ರಮವನ್ನು ಆಯೋಜಿಸುವ ಜವಾಬ್ದಾರಿಯನ್ನು ಹೊತ್ತು ಉತ್ತಮವಾಗಿ ನಿರ್ವಹಿಸುತ್ತಿರುವ ಬಾರ್ ಕೌನ್ಸಿಲ್ ಆಫ್ ಇಂಡಿಯಾಕ್ಕೆ ನಾನು ಮನಃಪೂರ್ವಕವಾಗಿ ವಿಶೇಷ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ನವದೆಹಲಿಯಲ್ಲಿ ‘ಅಂತಾರಾಷ್ಟ್ರೀಯ ವಕೀಲರ ಸಮ್ಮೇಳನ 2023’ ಉದ್ಘಾಟಿಸಿದ ಪ್ರಧಾನಿ
September 23rd, 10:29 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ 'ಅಂತಾರಾಷ್ಟ್ರೀಯ ವಕೀಲರ ಸಮ್ಮೇಳನ 2023' ಉದ್ಘಾಟಿಸಿದರು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಾಮುಖ್ಯತೆಯ ವಿವಿಧ ಕಾನೂನು ವಿಷಯಗಳ ಕುರಿತು ಅರ್ಥಪೂರ್ಣ ಸಂವಾದ ಮತ್ತು ಚರ್ಚೆಗೆ ವೇದಿಕೆಯಾಗಿ ಕಾರ್ಯ ನಿರ್ವಹಿಸಲು ಸಮ್ಮೇಳನವು ಉದ್ದೇಶಿಸಿದೆ. ಇದು ವಿಚಾರಗಳು ಮತ್ತು ಅನುಭವಗಳ ವಿನಿಮಯವನ್ನು ಉತ್ತೇಜಿಸುತ್ತದೆ. ಅಲ್ಲದೆ, ಅಂತಾರಾಷ್ಟ್ರೀಯ ಸಹಕಾರ ಮತ್ತು ಕಾನೂನು ಸಮಸ್ಯೆಗಳ ತಿಳುವಳಿಕೆಯನ್ನು ಬಲಪಡಿಸುತ್ತದೆ.