ಇಂಟರ್‌ನ್ಯಾಶನಲ್ ಮ್ಯೂಸಿಯಂ ಎಕ್ಸ್‌ಪೋ-2023 ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
May 18th, 11:00 am
ನನ್ನ ಸಂಪುಟ ಸಹೋದ್ಯೋಗಿಗಳಾದ ಜಿ. ಕಿಶನ್ ರೆಡ್ಡಿ ಜಿ, ಮೀನಾಕ್ಷಿ ಲೇಖಿ ಜಿ ಮತ್ತು ಅರ್ಜುನ್ ರಾಮ್ ಮೇಘವಾಲ್ ಜಿ, ಲೌವ್ರೆ ಮ್ಯೂಸಿಯಂ ನಿರ್ದೇಶಕ ಮ್ಯಾನುಯೆಲ್ ರಬಾಟೆ ಜಿ, ವಿಶ್ವದ ವಿವಿಧ ದೇಶಗಳ ಅತಿಥಿಗಳು, ಗಣ್ಯರು, ಮಹಿಳೆಯರು ಮತ್ತು ಮಹನಿಯರೆ! ನಾನು ನಿಮಗೆಲ್ಲರಿಗೂ ಅಂತಾರಾಷ್ಟ್ರೀಯ ಮ್ಯೂಸಿಯಂ ದಿನದ ಶುಭಾಶಯಗಳನ್ನು ಕೋರುತ್ತೇನೆ. ಮ್ಯೂಸಿಯಂ ಲೋಕದ ದಿಗ್ಗಜರು ಇಂದು ಇಲ್ಲಿ ಸೇರಿದ್ದಾರೆ. ಇಂದಿನ ಸಂದರ್ಭವೂ ವಿಶೇಷವಾಗಿದೆ, ಏಕೆಂದರೆ ಭಾರತವು ಸ್ವಾತಂತ್ರ್ಯದ 75 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಅಮೃತ ಮಹೋತ್ಸವ ಆಚರಿಸುತ್ತಿದೆ.ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ಎಕ್ಸ್ ಪೋ 2023 ಉದ್ಘಾಟಿಸಿದ ಪ್ರಧಾನಮಂತ್ರಿ
May 18th, 10:58 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ಎಕ್ಸ್ ಪೋ 2023 ಅನ್ನು ಉದ್ಘಾಟಿಸಿದರು. ಉತ್ತರ ಮತ್ತು ದಕ್ಷಿಣ ಬ್ಲಾಕ್ ಗಳಲ್ಲಿ ಮುಂಬರುವ ರಾಷ್ಟ್ರೀಯ ವಸ್ತುಸಂಗ್ರಹಾಲಯದ ವರ್ಚುವಲ್ ವಾಕ್ ಥ್ರೋವನ್ನು ಅವರು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ಟೆಕ್ನೋ ಮೇಳ, ಸಂರಕ್ಷಣಾ ಪ್ರಯೋಗಾಲಯ ಮತ್ತು ವಸ್ತುಪ್ರದರ್ಶನಗಳಲ್ಲಿ ವಾಕ್ ಥ್ರೂ ನಡೆಸಿದರು. 'ವಸ್ತುಸಂಗ್ರಹಾಲಯಗಳು, ಸುಸ್ಥಿರತೆ ಮತ್ತು ಯೋಗಕ್ಷೇಮ' ಎಂಬ ಈ ವರ್ಷದ ಧ್ಯೇಯವಾಕ್ಯದೊಂದಿಗೆ ಆಜಾದಿ ಕಾ ಅಮೃತ ಮಹೋತ್ಸವದ ಭಾಗವಾಗಿ 47 ನೇ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನವನ್ನು ಆಚರಿಸಲು ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ಎಕ್ಸ್ ಪೋವನ್ನು ಆಯೋಜಿಸಲಾಗಿದೆ.