ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ 2024 ರಲ್ಲಿ ಉದ್ಯಮ ದಿಗ್ಗಜರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದ ಶ್ಲಾಘನೆ
October 15th, 02:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪಂನಲ್ಲಿ ನಡೆದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ (ITU-WTSA) 2024 ರ ಸಂದರ್ಭದಲ್ಲಿ ಇಂಡಿಯಾ ಮೊಬೈಲ್ ಕಾಂಗ್ರೆಸ್ನ 8 ನೇ ಆವೃತ್ತಿಯನ್ನು ಉದ್ಘಾಟಿಸಿದರು. ಡಬ್ಲ್ಯು ಟಿ ಎಸ್ ಎ ಎಂಬುದು ಡಿಜಿಟಲ್ ತಂತ್ರಜ್ಞಾನಗಳಿಗಾಗಿನ ವಿಶ್ವ ಸಂಸ್ಥೆಯ ಏಜೆನ್ಸಿಯಾದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಪ್ರಮಾಣೀಕರಣ ಕಾರ್ಯಕ್ಕಾಗಿ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಆಯೋಜಿಸಲಾಗುವ ಆಡಳಿತ ಸಮ್ಮೇಳನವಾಗಿದೆ. ಇದೇ ಮೊದಲ ಬಾರಿಗೆ ಐಟಿಯು – ಡಬ್ಲ್ಯುಟಿಎಸ್ಎ ಅನ್ನು ಭಾರತ ಮತ್ತು ಏಷ್ಯಾ-ಪೆಸಿಫಿಕ್ನಲ್ಲಿ ಆಯೋಜಿಸಲಾಗಿದೆ. ಇದು ದೂರಸಂಪರ್ಕ, ಡಿಜಿಟಲ್ ಮತ್ತು ಐಸಿಟಿ ವಲಯಗಳನ್ನು ಪ್ರತಿನಿಧಿಸುತ್ತಿರುವ 190 ಕ್ಕೂ ಹೆಚ್ಚು ದೇಶಗಳ 3,000 ಕ್ಕೂ ಹೆಚ್ಚು ಉದ್ಯಮ ನಾಯಕರು, ನೀತಿ-ನಿರೂಪಕರು ಮತ್ತು ತಂತ್ರಜ್ಞಾನ ತಜ್ಞರನ್ನು ಒಟ್ಟುಗೂಡಿಸಿರುವ ಪ್ರಮುಖ ಜಾಗತಿಕ ಕಾರ್ಯಕ್ರಮವಾಗಿದೆ.ಐಟಿಯು- ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಅಸೆಂಬ್ಲಿ 2024 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
October 15th, 10:05 am
ನನ್ನ ಸಂಪುಟ (ಕ್ಯಾಬಿನೆಟ್) ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜೀ, ಚಂದ್ರಶೇಖರ್ ಜೀ, ಐಟಿಯು ಪ್ರಧಾನ ಕಾರ್ಯದರ್ಶಿ, ವಿವಿಧ ದೇಶಗಳ ಸಚಿವರು, ಭಾರತದ ವಿವಿಧ ರಾಜ್ಯಗಳ ಸಚಿವರು, ಉದ್ಯಮದ ಮುಖಂಡರು, ಟೆಲಿಕಾಂ ತಜ್ಞರು, ನವೋದ್ಯಮ ಜಗತ್ತಿನ ಯುವ ಉದ್ಯಮಿಗಳು, ಭಾರತ ಮತ್ತು ವಿದೇಶಗಳ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ,ನವದೆಹಲಿಯಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ -2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 15th, 10:00 am
ನವದೆಹಲಿಯ ಭಾರತ್ ಮಂಟಪಂನಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ [ಡಬ್ಲ್ಯುಟಿಎಸ್ಎ] -2024 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ ನ 8ನೇ ಆವೃತ್ತಿಗೂ ಪ್ರಧಾನಮಂತ್ರಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನವನ್ನು ನಡೆದಾಡುತ್ತಾ ವೀಕ್ಷಿಸಿದರು.ಪ್ರಧಾನಮಂತ್ರಿಯವರು ಅಕ್ಟೋಬರ್ 15 ರಂದು ಐಟಿಯು ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಮ್ಮೇಳನ 2024 ಅನ್ನು ಉದ್ಘಾಟಿಸಲಿದ್ದಾರೆ
October 14th, 05:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 15 ರಂದು ಬೆಳಿಗ್ಗೆ 10 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಅಂತರರಾಷ್ಟ್ರೀಯ ದೂರಸಂಪರ್ಕ ಮಹಾಸಂಘ - ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಮ್ಮೇಳನ 2024 (ಡಬ್ಲ್ಯುಟಿಎಸ್ಎ) ಅನ್ನು ಉದ್ಘಾಟಿಸಲಿದ್ದಾರೆ.2024ರ ಜನವರಿ 2 - 3 ರಂದು ತಮಿಳುನಾಡು, ಲಕ್ಷದ್ವೀಪ ಮತ್ತು ಕೇರಳಕ್ಕೆ ಪ್ರಧಾನಿ ಮೋದಿ ಭೇಟಿ
December 31st, 12:56 pm
2024ರ ಜನವರಿ 2ರಂದು, ಬೆಳಗ್ಗೆ ಸುಮಾರು 10:30 ಗಂಟೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮಿಳುನಾಡಿನ ತಿರುಚಿರಾಪಳ್ಳಿಗೆ ತಲುಪುತ್ತಾರೆ. ತಿರುಚಿರಾಪಳ್ಳಿಯ ಭಾರತಿದಾಸನ್ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ತಿರುಚಿರಾಪಳ್ಳಿಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಉದ್ಘಾಟನೆ, ದೇಶಕ್ಕೆ ಸಮರ್ಪಣೆ ಮತ್ತು ವಿಮಾನಯಾನ, ರೈಲು, ರಸ್ತೆ, ತೈಲ ಮತ್ತು ಅನಿಲ, ಹಡಗು ಮತ್ತು ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ 19,850 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಗುಜರಾತ್ ನಲ್ಲಿ ಸ್ವಾಗತಕ್ಕೆ 20 ವರ್ಷ ತುಂಬಿದ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರ ಸಂವಾದ ಮತ್ತು ಭಾಷಣದ ಕನ್ನಡ ಅನುವಾದ
April 27th, 04:32 pm
ನೀವು ನನ್ನೊಂದಿಗೆ ನೇರವಾಗಿ ಸಂವಹನ ನಡೆಸುತ್ತೀರಿ. ಹಳೆಯ ಸಮಯದ ಸ್ನೇಹಿತರನ್ನು ಭೇಟಿಯಾಗಲು ನನಗೆ ಸಾಧ್ಯವಾಗಿರುವುದು ನನ್ನ ಸೌಭಾಗ್ಯ. ಮೊದಲು ಮಾತನಾಡಲು ಯಾರಿಗೆ ಅವಕಾಶ ಸಿಗುತ್ತದೆ ಎಂದು ನೋಡೋಣ.ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡೊರೀನ್ ಬೋಗ್ಡಾನ್- ಮಾರ್ಟಿನ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
March 24th, 08:28 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡೊರೀನ್ ಬೋಗ್ಡಾನ್- ಮಾರ್ಟಿನ್ ಅವರನ್ನು ಭೇಟಿ ಮಾಡಿದರು. ಉತ್ತಮ ಮತ್ತು ಸುಸ್ಥಿರ ಭೂ ಗ್ರಹಕ್ಕಾಗಿ ಡಿಜಿಟಲ್ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಕುರಿತು ಇಬ್ಬರೂ ಗಣ್ಯರು ವಿಸ್ತೃತ ಚರ್ಚೆ ನಡೆಸಿದರು.`ಐಟಿಯು’ ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 22nd, 03:34 pm
ಇಂದು ಬಹಳ ವಿಶೇಷ ಮತ್ತು ಪವಿತ್ರ ದಿನ. 'ಹಿಂದೂ ಕ್ಯಾಲೆಂಡರ್' ಹೊಸ ವರ್ಷ ಇಂದಿನಿಂದ ಪ್ರಾರಂಭವಾಗಿದೆ. ನಿಮ್ಮೆಲ್ಲರಿಗೂ ಮತ್ತು ಎಲ್ಲಾ ದೇಶವಾಸಿಗಳಿಗೆ ʻವಿಕ್ರಮ್ ಸಂವತ್ 2080ʼ ಶುಭಾಶಯಗಳನ್ನು ತಿಳಿಸಲು ಬಯಸುತ್ತೇನೆ. ನಮ್ಮ ವಿಶಾಲ ಮತ್ತು ವೈವಿಧ್ಯಮಯ ದೇಶದಲ್ಲಿ ಶತಮಾನಗಳಿಂದ ವಿಭಿನ್ನ ಕ್ಯಾಲೆಂಡರ್‌ಗಳು ಚಾಲ್ತಿಯಲ್ಲಿವೆ. ಕೊಲ್ಲಂ ಅವಧಿಯ ಮಲಯಾಳಂ ಕ್ಯಾಲೆಂಡರ್ ಇದೆ, ತಮಿಳು ಕ್ಯಾಲೆಂಡರ್ ಇದೆ, ಇದು ನೂರಾರು ವರ್ಷಗಳಿಂದ ಭಾರತಕ್ಕೆ ದಿನಾಂಕ ಮತ್ತು ಸಮಯವನ್ನು ತಿಳಿಸುತ್ತಿದೆ. ʻವಿಕ್ರಮ್ ಸಂವತ್ʼ ಕೂಡ 2080 ವರ್ಷಗಳ ಹಿಂದಿನಿಂದ ಇದೆ. ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಸ್ತುತ 2023 ಅನ್ನು ಸೂಚಿಸುತ್ತದೆ. ಆದರೆ ʻವಿಕ್ರಮ್ ಸಂವತ್ʼ ಅದಕ್ಕಿಂತಲೂ 57 ವರ್ಷಗಳ ಹಿಂದೆ ಪ್ರಾರಂಭವಾಯಿತು. ಈ ಶುಭ ದಿನದಂದು ದೂರಸಂಪರ್ಕ, ʻಐಸಿಟಿʼ ಮತ್ತು ಸಂಬಂಧಿತ ಆವಿಷ್ಕಾರಗಳಲ್ಲಿ ಹೊಸ ಆರಂಭ ಆಗುತ್ತಿರುವುದು ನನಗೆ ಸಂತೋಷ ತಂದಿದೆ. ಇಂದು ʻಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟʼ(ಐಟಿಯು) ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಲಾಯಿತು. ಇದಲ್ಲದೆ, ʻ6 ಜಿʼ ಪ್ರಯೋಗ ವೇದಿಕೆ (ಟೆಸ್ಟ್ ಬೆಡ್) ಅನ್ನು ಸಹ ಇಂದು ಪ್ರಾರಂಭಿಸಲಾಗಿದೆ. ಈ ತಂತ್ರಜ್ಞಾನಕ್ಕೆ ಸಂಬಂಧಿಸಿದ ನಮ್ಮ ʻವಿಷನ್ ಡಾಕ್ಯುಮೆಂಟ್ʼ ಅನ್ನು ಸಹ ಅನಾವರಣಗೊಳಿಸಲಾಗಿದೆ. ಇದು ಡಿಜಿಟಲ್ ಇಂಡಿಯಾದಲ್ಲಿ ಹೊಸ ಶಕ್ತಿಯನ್ನು ತರುವುದಲ್ಲದೆ, ದಕ್ಷಿಣ ಏಷ್ಯಾ ಮತ್ತು ಜಗತ್ತಿನ ದಕ್ಷಿದದ ದೇಶಗಳಿಗೆ ಪರಿಹಾರಗಳು ಮತ್ತು ನಾವೀನ್ಯತೆಗಳನ್ನು ಒದಗಿಸುತ್ತದೆ. ಇದು ಅನೇಕ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ, ವಿಶೇಷವಾಗಿ ನಮ್ಮ ಶಿಕ್ಷಣ ತಜ್ಞರು, ಆವಿಷ್ಕಾರಕರು, ನವೋದ್ಯಮಗಳು ಮತ್ತು ಉದ್ಯಮಕ್ಕೆ ಅವಕಾಶಗಳ ಮಹಾಪೂರವೇ ತೆರೆದುಕೊಳ್ಳಲಿದೆ.`ಐಟಿಯು’ ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಿದ ಪ್ರಧಾನಿ
March 22nd, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದಲ್ಲಿ ನೂತನ ʻಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟʼದ (ಐಟಿಯು) ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ʻಭಾರತ್ 6ಜಿʼ ವಿಷನ್ ಡಾಕ್ಯುಮೆಂಟ್ ಅನ್ನು ಅನಾವರಣಗೊಳಿಸಿದರು ಜೊತೆಗೆ ʻ6ಜಿʼ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಾಯೋಗಿಕ ವೇದಿಕೆಗೆ ಚಾಲನೆ ನೀಡಿದರು. 'ಕಾಲ್ ಬಿಫೋರ್ ಯು ಡಿಗ್' ಆ್ಯಪ್ ಅನ್ನು ಅವರು ಬಿಡುಗಡೆ ಮಾಡಿದರು. ʻಐಟಿಯುʼ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನಗಳಿಗಾಗಿ (ಐಸಿಟಿ) ವಿಶ್ವಸಂಸ್ಥೆಯ ವಿಶೇಷ ಸಂಸ್ಥೆಯಾಗಿದೆ. ಪ್ರದೇಶಿಕ ಕಚೇರಿ ಸ್ಥಾಪನೆಗಾಗಿ ಭಾರತವು ಮಾರ್ಚ್ 2022 ರಲ್ಲಿ ʻಐಟಿಯುʼನೊಂದಿಗೆ ಆತಿಥೇಯ ರಾಷ್ಟ್ರಗಳ ಒಪ್ಪಂದಕ್ಕೆ ಸಹಿ ಹಾಕಿತು. ಇದು ಭಾರತ, ನೇಪಾಳ, ಭೂತಾನ್, ಬಾಂಗ್ಲಾದೇಶ, ಶ್ರೀಲಂಕಾ, ಮಾಲ್ಡೀವ್ಸ್, ಅಫ್ಘಾನಿಸ್ತಾನ ಮತ್ತು ಇರಾನ್‌ಗೆ ಸೇವೆ ಸಲ್ಲಿಸಲಿದೆ, ರಾಷ್ಟ್ರಗಳ ನಡುವೆ ಸಮನ್ವಯವನ್ನು ಹೆಚ್ಚಿಸಲಿದೆ ಮತ್ತು ಈ ವಲಯದಲ್ಲಿ ಪರಸ್ಪರ ಲಾಭದಾಯಕ ಆರ್ಥಿಕ ಸಹಕಾರವನ್ನು ಉತ್ತೇಜಿಸುತ್ತದೆ.ಮಾರ್ಚ್ 22 ರಂದು ಐಟಿಯು ಪ್ರದೇಶ ಕಚೇರಿ ಮತ್ತು ನಾವೀನ್ಯತೆಯ ಕೇಂದ್ರ ಉದ್ಘಾಟಿಸಲಿರುವ ಪ್ರಧಾನಮಂತ್ರಿ
March 21st, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ವಿಜ್ಞಾನ ಭವನದಲ್ಲಿ 2023 ರ ಮಾರ್ಚ್ 22 ರ ಅಪರಾಹ್ನ 12.30 ಕ್ಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ದೂರ ಸಂಪರ್ಕ ಸಂಘದ [ಐಟಿಯು] ಪ್ರದೇಶ ಕಚೇರಿ ಮತ್ತು ಭಾರತದ ನಾವೀನ್ಯತೆಯ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅವರು “ಕಾಲ್ ಫಾರ್ ಯು ಡಿಗ್” ಆಪ್ ಲೋಕಾರ್ಪಣೆ ಮಾಡಲಿದ್ದು, ಇದೇ ಸಂದರ್ಭದಲ್ಲಿ ಸಮಾರಂಭ ಉದ್ದೇಶಿಸಿ ಮಾತನಾಡಲಿದ್ದಾರೆ.