ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಪ್ರಧಾನಿ ಮಂತ್ರಿ ಅವರಿಂದ ಉತ್ತರ
February 09th, 02:15 pm
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತ ಚರ್ಚೆಯಲ್ಲಿ ಭಾಗವಹಿಸುತ್ತಿರುವಾಗ, ನಾನು ಗೌರವಾನ್ವಿತ ರಾಷ್ಟ್ರಪತಿಗಳಿಗೆ ನನ್ನ ವಿನಮ್ರ ಕೃತಜ್ಞತೆಗಳನ್ನು ಸಲ್ಲಿಸುತ್ತಾ, ನಾನು ಅವರನ್ನು ಅಭಿನಂದಿಸುತ್ತೇನೆ. ಗೌರವಾನ್ವಿತ ಸಭಾಪತಿಗಳೆ, ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುವಾಗ, ಅವರು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ನೀಲನಕ್ಷೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ನಿರ್ಣಯಗಳಿಗೆ ಮಾರ್ಗಸೂಚಿಯನ್ನು ಪ್ರಸ್ತುತಪಡಿಸಿದ್ದಾರೆ.ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಮಂತ್ರಿಯವರ ಉತ್ತರ
February 09th, 02:00 pm
ಸಂಸತ್ತಿನಲ್ಲಿ ರಾಷ್ಟ್ರಪತಿಯವರು ಮಾಡಿದ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಉತ್ತರ ನೀಡಿದರು. “ಅಭಿವೃದ್ದಿ ಹೊಂದಿದ ಭಾರತ”ದ ದೃಷ್ಟಿಕೋನವನ್ನು ರಾಷ್ಟ್ರಪತಿ ಜೀ ಅವರು ತಮ್ಮ ಭಾಷಣದಲ್ಲಿ ಪ್ರತಿಬಿಂಬಿಸಿದ್ದು, ಅದಕ್ಕಾಗಿ ಪ್ರಧಾನಮಂತ್ರಿ ಅವರು ಧನ್ಯವಾದಗಳನ್ನು ಸಲ್ಲಿಸಿದರು.ಫೆಬ್ರವರಿ 14, ತಮಿಳುನಾಡು ಮತ್ತು ಕೇರಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
February 12th, 06:10 pm
2021ರ ಫೆಬ್ರವರಿ 14ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 11.15ರ ಸುಮಾರಿಗೆ ಪ್ರಧಾನಮಂತ್ರಿಯವರು ಚೆನ್ನೈನಲ್ಲಿ ಹಲವು ಪ್ರಮುಖ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಲೋಕಾರ್ಪಣೆಯನ್ನು ಮಾಡಲಿದ್ದಾರೆ ಮತ್ತು ಅರ್ಜುನ್ ಪ್ರಮುಖ ಯುದ್ಧ ಟ್ಯಾಂಕ್ (ಎಂ.ಕೆ. -1ಎ) ಅನ್ನು ಸೇನಾಪಡೆಗೆ ಹಸ್ತಾಂತರಿಸಲಿದ್ದಾರೆ. ಮಧ್ಯಾಹ್ನ 3.30ರವೇಳೆಗೆ ಪ್ರಧಾನಮಂತ್ರಿಯವರು, ಕೊಚ್ಚಿಯಲ್ಲಿ ವಿವಿಧ ಯೋಜನೆಗಳನ್ನು ಲೋಕಾರ್ಪಣೆ ಮಾಡಿ ಕೆಲವು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗಳು ಈ ರಾಜ್ಯಗಳ ಪ್ರಗತಿಯ ಪಥಕ್ಕೆ ಮಹತ್ವದ ವೇಗ ನೀಡಲಿವೆ ಮತ್ತು ಸಂಪೂರ್ಣ ಅಭಿವೃದ್ಧಿಯ ಸಾಮರ್ಥ್ಯಕ್ಕೆ ವೇಗ ನೀಡಲು ನೆರವಾಗಲಿವೆ.