ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ 2024 ರಲ್ಲಿ ಉದ್ಯಮ ದಿಗ್ಗಜರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದ ಶ್ಲಾಘನೆ
October 15th, 02:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪಂನಲ್ಲಿ ನಡೆದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ (ITU-WTSA) 2024 ರ ಸಂದರ್ಭದಲ್ಲಿ ಇಂಡಿಯಾ ಮೊಬೈಲ್ ಕಾಂಗ್ರೆಸ್ನ 8 ನೇ ಆವೃತ್ತಿಯನ್ನು ಉದ್ಘಾಟಿಸಿದರು. ಡಬ್ಲ್ಯು ಟಿ ಎಸ್ ಎ ಎಂಬುದು ಡಿಜಿಟಲ್ ತಂತ್ರಜ್ಞಾನಗಳಿಗಾಗಿನ ವಿಶ್ವ ಸಂಸ್ಥೆಯ ಏಜೆನ್ಸಿಯಾದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಪ್ರಮಾಣೀಕರಣ ಕಾರ್ಯಕ್ಕಾಗಿ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಆಯೋಜಿಸಲಾಗುವ ಆಡಳಿತ ಸಮ್ಮೇಳನವಾಗಿದೆ. ಇದೇ ಮೊದಲ ಬಾರಿಗೆ ಐಟಿಯು – ಡಬ್ಲ್ಯುಟಿಎಸ್ಎ ಅನ್ನು ಭಾರತ ಮತ್ತು ಏಷ್ಯಾ-ಪೆಸಿಫಿಕ್ನಲ್ಲಿ ಆಯೋಜಿಸಲಾಗಿದೆ. ಇದು ದೂರಸಂಪರ್ಕ, ಡಿಜಿಟಲ್ ಮತ್ತು ಐಸಿಟಿ ವಲಯಗಳನ್ನು ಪ್ರತಿನಿಧಿಸುತ್ತಿರುವ 190 ಕ್ಕೂ ಹೆಚ್ಚು ದೇಶಗಳ 3,000 ಕ್ಕೂ ಹೆಚ್ಚು ಉದ್ಯಮ ನಾಯಕರು, ನೀತಿ-ನಿರೂಪಕರು ಮತ್ತು ತಂತ್ರಜ್ಞಾನ ತಜ್ಞರನ್ನು ಒಟ್ಟುಗೂಡಿಸಿರುವ ಪ್ರಮುಖ ಜಾಗತಿಕ ಕಾರ್ಯಕ್ರಮವಾಗಿದೆ.ಐಟಿಯು- ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಅಸೆಂಬ್ಲಿ 2024 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
October 15th, 10:05 am
ನನ್ನ ಸಂಪುಟ (ಕ್ಯಾಬಿನೆಟ್) ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜೀ, ಚಂದ್ರಶೇಖರ್ ಜೀ, ಐಟಿಯು ಪ್ರಧಾನ ಕಾರ್ಯದರ್ಶಿ, ವಿವಿಧ ದೇಶಗಳ ಸಚಿವರು, ಭಾರತದ ವಿವಿಧ ರಾಜ್ಯಗಳ ಸಚಿವರು, ಉದ್ಯಮದ ಮುಖಂಡರು, ಟೆಲಿಕಾಂ ತಜ್ಞರು, ನವೋದ್ಯಮ ಜಗತ್ತಿನ ಯುವ ಉದ್ಯಮಿಗಳು, ಭಾರತ ಮತ್ತು ವಿದೇಶಗಳ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ,ನವದೆಹಲಿಯಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ -2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 15th, 10:00 am
ನವದೆಹಲಿಯ ಭಾರತ್ ಮಂಟಪಂನಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ [ಡಬ್ಲ್ಯುಟಿಎಸ್ಎ] -2024 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ ನ 8ನೇ ಆವೃತ್ತಿಗೂ ಪ್ರಧಾನಮಂತ್ರಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನವನ್ನು ನಡೆದಾಡುತ್ತಾ ವೀಕ್ಷಿಸಿದರು.