ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ ವ್ಯಕ್ತಪಡಿಸಿದ್ದಾರೆ

November 16th, 08:23 am

ಉತ್ತರ ಪ್ರದೇಶದ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಅಗ್ನಿ ಅವಘಡದಿಂದ ಉಂಟಾದ ಸಾವುನೋವಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ನೆರವು ನೀಡಲು ಮುಂದಾಗಿದೆ ಎಂದು ಹೇಳಿದ್ದಾರೆ.

'ಮನ್ ಕಿ ಬಾತ್' ಕೇಳುಗರು ಈ ಕಾರ್ಯಕ್ರಮದ ನಿಜವಾದ ನಿರೂಪಕರು: ಪ್ರಧಾನಿ ಮೋದಿ

September 29th, 11:30 am

ನನ್ನ ಪ್ರೀತಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ ನಾವೆಲ್ಲರೂ 'ಮನದ ಮಾತಿನ' ಮೂಲಕ ಒಗ್ಗೂಡುವ ಅವಕಾಶ ಲಭಿಸಿದೆ. ಇಂದಿನ ಈ ಕಂತು ನನ್ನನ್ನು ಬಹಳ ಭಾವುಕನನ್ನಾಗಿಸಲಿದೆ, ಅನೇಕ ಹಳೆಯ ನೆನಪುಗಳು ನನ್ನನ್ನು ಮುತ್ತಿವೆ - ಕಾರಣ ಏನೆಂದರೆ 'ಮನದ ಮಾತಿನ' ನಮ್ಮ ಈ ಪಯಣಕ್ಕೆ 10 ವರ್ಷಗಳು ತುಂಬುತ್ತಿದೆ. 10 ವರ್ಷಗಳ ಹಿಂದೆ ಅಕ್ಟೋಬರ್ 3 ರಂದು ವಿಜಯದಶಮಿಯ ದಿನದಂದು 'ಮನದ ಮಾತು’ ಪ್ರಾರಂಭವಾಗಿತ್ತು ಮತ್ತು ಈ ವರ್ಷ ಅಕ್ಟೋಬರ್ 3 ರಂದು 'ಮನದ ಮಾತಿಗೆ ' 10 ವರ್ಷತುಂಬುವ ಸಂದರ್ಭ ನವರಾತ್ರಿಯ ಮೊದಲ ದಿನವಾಗಿದೆ. 'ಮನದ ಮಾತಿನ’ ಈ ಸುದೀರ್ಘ ಪಯಣದಲ್ಲಿ ನಾನು ಎಂದೂ ಮರೆಯಲಾಗದ ಇಂತಹ ಹಲವಾರು ಮೈಲಿಗಲ್ಲುಗಳಿವೆ, ನಮ್ಮ ಈ ಪಯಣದಲ್ಲಿ ನಿರಂತರ ಸಹಯೋಗವನ್ನು ನೀಡಿದಂತಹ ' ಮನದ ಮಾತಿನ' ಕೋಟ್ಯಂತರ ಶ್ರೋತೃ ಬಾಂಧವರಿದ್ದಾರೆ. ದೇಶದ ಮೂಲೆ ಮೂಲೆಗಳಿಂದ ಅವರು ಮಾಹಿತಿಯನ್ನು ಒದಗಿಸಿದರು. ಮನದ ಮಾತಿನ ಶ್ರೋತೃಗಳೇ ಈ ಕಾರ್ಯಕ್ರಮದ ನಿಜವಾದ ರೂವಾರಿಗಳು. ಸಾಮಾನ್ಯವಾಗಿ ಎಲ್ಲಿಯವರೆಗೆ ರೋಚಕ ವಿಷಯಗಳನ್ನು ಮಾತನಾಡುವುದಿಲ್ಲವೋ, ನಕಾರಾತ್ಮಕ ವಿಷಯಗಳನ್ನು ಮಾತನಾಡುವುದಿಲ್ಲವೋ ಅಲ್ಲಿವರೆಗೆ ಅದು ಹೆಚ್ಚಿನ ಗಮನ ಸೆಳೆಯುವುದಿಲ್ಲ ಎನ್ನಲಾಗುತ್ತದೆ. ಆದರೆ ಮನದ ಮಾತು ದೇಶದ ಜನರು ಸಕಾರಾತ್ಮಕ ಮಾಹಿತಿಗಾಗಿ , ಎಷ್ಟು ಉತ್ಸುಕರಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಿದೆ. ಸಕಾರಾತ್ಮಕ ಮಾತು, ಪ್ರೇರಣಾತ್ಮಕ ಉದಾಹರಣೆಗಳು, ಸ್ಫೂರ್ತಿದಾಯಕ ಕಥೆಗಳು ಜನರಿಗೆ ಬಹಳ ಇಷ್ಟವಾಗುತ್ತವೆ. ಕೇವಲ ಮಳೆಹನಿಗಳನ್ನು ಮಾತ್ರ ಕುಡಿಯುವಂತಹ ಚಾತಕ ಪಕ್ಷಿಯಂತೆ ಜನರು ದೇಶದ ಸೌಲಭ್ಯಗಳ ಬಗ್ಗೆ, ಜನರ ಸಾಮೂಹಿಕ ಸಾಧನೆಗಳ ಬಗ್ಗೆ ಮನದ ಮಾತಿನ ಮೂಲಕ ಎಷ್ಟು ಹೆಮ್ಮೆಯಿಂದ ಕೇಳುತ್ತಾರೆ. ಮನದ ಮಾತಿನ 10 ವರ್ಷಗಳ ಪಯಣ ಎಷ್ಟು ಅದ್ಭುತವಾದ ಹಾರವನ್ನು ಸಿದ್ಧಗೊಳಿಸಿದೆ ಎಂದರೆ ಪ್ರತಿ ಸಂಚಿಕೆಯೊಂದಿಗೆ ಹೊಸ ಯಶೋಗಾಥೆಗಳು, ಹೊಸ ಕೀರ್ತಿವಂತರು ಮತ್ತು ಹೊಸ ವ್ಯಕ್ತಿತ್ವಗಳನ್ನು ಸೇರಿಸುತ್ತಾ ಸಾಗಿದೆ. ನಮ್ಮ ಸಮಾಜದಲ್ಲಿ ಸಾಮಾಜಿಕ ಹಿತದೃಷ್ಟಿಯ ಭಾವನೆಯಿಂದ ಯಾವುದೇ ಕೆಲಸ ಮಾಡಿದರೂ ಅವರಿಗೆ 'ಮನದ ಮಾತಿನ' ಮೂಲಕ ಗೌರವ ಲಭಿಸುತ್ತದೆ. 'ಮನದ ಮಾತಿ'ಗೆ ಬಂದ ಪತ್ರಗಳನ್ನು ನಾನು ಓದಿದಾಗ ನನ್ನ ಮನವೂ ಹೆಮ್ಮೆಯಿಂದ ಬೀಗುತ್ತದೆ. ನಮ್ಮ ದೇಶದಲ್ಲಿ ಅದೆಷ್ಟೋ ಪ್ರತಿಭಾವಂತರಿದ್ದಾರೆ, ಅವರು ತಮ್ಮ ಇಡೀ ಜೀವನವನ್ನು ಜನರ ನಿಸ್ವಾರ್ಥ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ. ಅವರ ಬಗ್ಗೆ ತಿಳಿಯುವುದು ನನ್ನಲ್ಲಿ ಹೊಸ ಶಕ್ತಿಯನ್ನು ತುಂಬುತ್ತದೆ. 'ಮನದ ಮಾತಿನ' ಈ ಸಂಪೂರ್ಣ ಪ್ರಕ್ರಿಯೆಯು ನನಗೆ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆಯುವಂತಿದೆ. ಮನದ ಮಾತಿನ ಪ್ರತಿ ವಿಷಯ, ಪ್ರತಿ ಘಟನೆ, ಪ್ರತಿ ಪತ್ರವನ್ನು ನೆನಪಿಸಿಕೊಂಡಾಗ, ನನಗೆ ಭಗವಂತನ ರೂಪದಲ್ಲಿರುವ ಜನತಾ ಜನಾರ್ದನನ ದರ್ಶನ ಪಡೆದಂತೆ ಭಾಸವಾಗುತ್ತದೆ.

ಉತ್ತರ ಪ್ರದೇಶದ ಝಾನ್ಸಿಯಲ್ಲಿ ನೀರಿನ ಸಂರಕ್ಷಣೆ ಮತ್ತು ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಪ್ರಯತ್ನಕ್ಕೆ ಪ್ರಧಾನಿ ಶ್ಲಾಘನೆ

September 05th, 10:09 pm

ಉತ್ತರ ಪ್ರದೇಶದ ಝಾನ್ಸಿಯಲ್ಲಿ ಜಲ ಸಂರಕ್ಷಣೆ ಮತ್ತು ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಾರ್ವಜನಿಕ ಸಹಭಾಗಿತ್ವದ ಮೂಲಕ ಮಾಡುತ್ತಿರುವ ಪ್ರಯತ್ನಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಈ ಉದಾತ್ತ ಕಾರ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬರನ್ನು ಅವರು ಅಭಿನಂದಿಸಿದ್ದಾರೆ.

India is now working with new thinking and approach: PM Modi in Bhopal, Madhya Pradesh

April 01st, 03:51 pm

PM Modi flagged off the Vande Bharat Express train between Bhopal and New Delhi at Rani Kamlapati Railway Station in Bhopal, Madhya Pradesh. The PM congratulated the people of Madhya Pradesh for getting their first Vande Bharat train. He said that the train will reduce the travel time between Delhi and Bhopal and will usher in many facilities and conveniences for the professionals and youth.

PM flags off Vande Bharat Express at Rani Kamalapati Station, Bhopal, Madhya Pradesh

April 01st, 03:30 pm

PM Modi flagged off the Vande Bharat Express train between Bhopal and New Delhi at Rani Kamlapati Railway Station in Bhopal, Madhya Pradesh. The PM congratulated the people of Madhya Pradesh for getting their first Vande Bharat train. He said that the train will reduce the travel time between Delhi and Bhopal and will usher in many facilities and conveniences for the professionals and youth.

ಝಾನ್ಸಿಯ ವಿಶ್ವ ದರ್ಜೆಯ ರೈಲು ನಿಲ್ದಾಣದಿಂದ ಝಾನ್ಸಿ ಮತ್ತು ಹತ್ತಿರದ ಪ್ರದೇಶಗಳಲ್ಲಿ ಪ್ರವಾಸೋದ್ಯಮ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಉತ್ತೇಜನ: ಪ್ರಧಾನಿ ನರೇಂದ್ರ ಮೋದಿ

March 26th, 10:54 am

ಉತ್ತರ ಪ್ರದೇಶದ ಝಾನ್ಸಿಯ ವಿಶ್ವ ದರ್ಜೆಯ ರೈಲು ನಿಲ್ದಾಣದಿಂದ ಝಾನ್ಸಿ ಮತ್ತು ಹತ್ತಿರದ ಪ್ರದೇಶಗಳಲ್ಲಿ ಪ್ರವಾಸೋದ್ಯಮ ಮತ್ತು ವಾಣಿಜ್ಯ ಚಟುವಟಿಕೆಗಳು ಹೆಚ್ಚಾಗಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಇದು ಭಾರತದಾದ್ಯಂತ ಆಧುನಿಕ ನಿಲ್ದಾಣಗಳನ್ನು ಹೊಂದುವ ಪ್ರಯತ್ನಗಳ ಅವಿಭಾಜ್ಯ ಅಂಗವಾಗಿದೆ ಎಂದು ಶ್ಲಾಘಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ್ತಿ‌ ಅಪ್ರತಿಮ ವೀರಮಹಿಳೆ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರ ಜಯಂತಿಯಂದು ಪ್ರಧಾನಿ ಅವರನ್ನು ಸ್ಮರಿಸಿದರು.

November 19th, 08:58 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಣಿ ಲಕ್ಷ್ಮೀಬಾಯಿ ಅವರ ಜಯಂತಿಯಂದು ಅವರನ್ನು ಸ್ಮರಿಸಿದ್ದಾರೆ. ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅಂತಹ ವೀರಮಹಿಳೆಯ ಧೈರ್ಯ ಮತ್ತು ನಮ್ಮ ದೇಶಕ್ಕೆ ನೀಡಿದ ಸ್ಮರಣೀಯ ಕೊಡುಗೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಫತೇಪುರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು

February 17th, 04:07 pm

ಮುಂಬರುವ ರಾಜ್ಯ ಚುನಾವಣೆಗೆ ಬಿಜೆಪಿ ಪರ ಪ್ರಚಾರ ಮಾಡಲು ಉತ್ತರ ಪ್ರದೇಶದ ಫತೇಪುರ್‌ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಾನು ಪಂಜಾಬ್‌ನಿಂದ ಬರುತ್ತಿದ್ದೇನೆ. ಪಂಜಾಬ್‌ನಲ್ಲಿ ಬಿಜೆಪಿಗೆ ಮತ ಹಾಕುವ ಮನಸ್ಥಿತಿ ಇದೆ. ಯುಪಿ ಚುನಾವಣೆಯ ಪ್ರತಿ ಹಂತವೂ ಬಿಜೆಪಿಗೆ ಮತ ಹಾಕುತ್ತಿದೆ. ಮಾರ್ಚ್ 10 ರಂದು ಹೋಳಿಗೆ ಮುನ್ನ ಉತ್ತರ ಪ್ರದೇಶದ ಜನರು ವಿಜಯೋತ್ಸವದ ವರ್ಣರಂಜಿತ ಆಚರಣೆಗಳನ್ನು ನಡೆಸಲು ತೀರ್ಮಾನಿಸಿದ್ದಾರೆ.

ಕೊರೊನಾವೈರಸ್ ಮತ್ತು ಲಸಿಕೆಯನ್ನು ವಿರೋಧಿಸುವವರು ಅದರ ಬಗ್ಗೆ ಹೆದರುತ್ತಾರೆ: ಉತ್ತರ ಪ್ರದೇಶದ ಫತೇಪುರದಲ್ಲಿ ಪ್ರಧಾನಿ ಮೋದಿ

February 17th, 04:01 pm

ಮುಂಬರುವ ರಾಜ್ಯ ಚುನಾವಣೆಗೆ ಬಿಜೆಪಿ ಪರ ಪ್ರಚಾರ ಮಾಡಲು ಉತ್ತರ ಪ್ರದೇಶದ ಫತೇಪುರ್‌ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಾನು ಪಂಜಾಬ್‌ನಿಂದ ಬರುತ್ತಿದ್ದೇನೆ. ಪಂಜಾಬ್‌ನಲ್ಲಿ ಬಿಜೆಪಿಗೆ ಮತ ಹಾಕುವ ಮನಸ್ಥಿತಿ ಇದೆ. ಯುಪಿ ಚುನಾವಣೆಯ ಪ್ರತಿ ಹಂತವೂ ಬಿಜೆಪಿಗೆ ಮತ ಹಾಕುತ್ತಿದೆ. ಮಾರ್ಚ್ 10 ರಂದು ಹೋಳಿಗೆ ಮುನ್ನ ಉತ್ತರ ಪ್ರದೇಶದ ಜನರು ವಿಜಯೋತ್ಸವದ ವರ್ಣರಂಜಿತ ಆಚರಣೆಗಳನ್ನು ನಡೆಸಲು ತೀರ್ಮಾನಿಸಿದ್ದಾರೆ.

ಎನ್‌ಸಿಸಿ ದಿನದ ಅಂಗವಾಗಿ ಎನ್‌ಸಿಸಿ ಕೆಡೆಟ್ ಗಳಿಗೆ ಶುಭ ಕೋರಿದ ಪ್ರಧಾನಮಂತ್ರಿ

November 28th, 06:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎನ್‌ಸಿಸಿ ದಿನದ ಅಂಗವಾಗಿ ಎನ್‌ಸಿಸಿ ಕೆಡೆಟ್ ಗಳಿಗೆ ಶುಭ ಕೋರಿದ್ದಾರೆ. “ಭಾರತ ದೇಶಾದ್ಯಂತ ಇರುವ ಎನ್‌ಸಿಸಿ ಹಳೆಯ ವಿದ್ಯಾರ್ಥಿಗಳು ತಮ್ಮ ಬೆಂಬಲ ಮತ್ತು ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಎನ್‌ಸಿಸಿ ಹಳೆಯ ವಿದ್ಯಾರ್ಥಿಗಳ ಸಂಘವನ್ನು ಮತ್ತಷ್ಟು ಶ್ರೀಮಂತಗೊಳಿಸುವಂತೆ ಶ್ರೀ ನರೇಂದ್ರ ಮೋದಿ ಒತ್ತಾಯಿಸಿದ್ದಾರೆ.

ಇದು ಭಾರತದ ಬೆಳವಣಿಗೆಯ ಕಥೆಯ ತಿರುವು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

November 28th, 11:30 am

ಇಂದು ಮತ್ತೊಮ್ಮೆ ನಾವು ಮನದ ಮಾತಿನಲ್ಲಿ ಒಗ್ಗೂಡುತ್ತಿದ್ದೇವೆ. 2 ದಿನಗಳ ನಂತರ ಡಿಸೆಂಬರ್ ತಿಂಗಳು ಆರಂಭವಾಗುತ್ತಿದೆ. ಡಿಸೆಂಬರ್ ಬರುತ್ತಿದ್ದಂತೆ ಮಾನಸಿಕವಾಗಿ ನಮಗೆ ಅಂತೂ ವರ್ಷ ಮುಗಿಯಿತು ಎಂದೆನ್ನಿಸುತ್ತದೆ. ಇದು ವರ್ಷದ ಕೊನೆಯ ಮಾಸವಾಗಿದೆ. ನವ ವರ್ಷಕ್ಕೆ ಹೊಸ ಯೋಜನೆಗಳನ್ನು ಹೆಣೆಯಲಾರಂಭಿಸುತ್ತೇವೆ. ಇದೇ ತಿಂಗಳು ನೌಕಾಪಡೆ ದಿನ ಮತ್ತು ಸಶಸ್ತ್ರ ಪಡೆಗಳ ಧ್ವಜ ದಿನವನ್ನೂ ದೇಶ ಆಚರಿಸುತ್ತದೆ. ಡಿಸೆಂಬರ್ 16 ರಂದು 1971 ನೇ ವರ್ಷದಲ್ಲಿ ನಡೆದ ಯುದ್ಧದ ಸ್ವರ್ಣ ಜಯಂತಿಯನ್ನು ದೇಶ ಆಚರಿಸುತ್ತಿದೆ ಎಂದು ನಮಗೆಲ್ಲ ತಿಳಿದಿದೆ. ನಾನು ಈ ಎಲ್ಲ ಸಂದರ್ಭಗಳಲ್ಲಿ ದೇಶದ ಸುರಕ್ಷತಾ ಬಲವನ್ನು ಸ್ಮರಿಸುತ್ತೇನೆ. ನಮ್ಮ ಯೋಧರನ್ನು ಸ್ಮರಿಸುತ್ತೇನೆ ಹಾಗೂ ವಿಶೇಷವಾಗಿ ಇಂಥ ಯೋಧರಿಗೆ ಜನ್ಮ ನೀಡಿದ ವೀರ ಮಾತೆಯರನ್ನು ಸ್ಮರಿಸುತ್ತೇನೆ. ಎಂದಿನಂತೆ ಈ ಬಾರಿಯೂ ನನಗೆ ನಮೋ ಆಪ್ ನಲ್ಲಿ ಮತ್ತು ಮೈ ಗೌ ನಲ್ಲಿ ನಿಮ್ಮ ಹಲವಾರು ಸಲಹೆ ಸೂಚನೆಗಳು ದೊರೆತಿವೆ. ನೀವು ನನ್ನನ್ನು ನಿಮ್ಮ ಕುಟುಂಬ ಸದಸ್ಯನಂತೆ ಪರಿಗಣಿಸಿ ಸುಖ ದುಖಃಗಳನ್ನು ಹಂಚಿಕೊಂಡಿದ್ದೀರಿ. ಇದರಲ್ಲಿ ಬಹಳಷ್ಟು ಯುವಜನತೆ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರೂ ಇದ್ದಾರೆ. ಮನದ ಮಾತಿನ ನಮ್ಮ ಈ ಕುಟುಂಬ ನಿರಂತರವಾಗಿ ವೃದ್ಧಿಸುತ್ತಿದೆ ಮತ್ತು ಮನಸ್ಸುಗಳು ಬೆರೆಯುತ್ತಿವೆ ಗುರಿಯೊಂದಿಗೂ ಬೆಸೆಯುತ್ತಿವೆ ಎಂದು ನನಗೆ ಬಹಳ ಸಂತೋಷವೆನಿಸುತ್ತದೆ. ಗಾಢವಾಗಿ ಬೇರೂರುತ್ತಿರುವ ನಮ್ಮ ಸಂಬಂಧಗಳು ನಮ್ಮ ನಡುವೆ ನಿರಂತರವಾಗಿ ಸಕಾರಾತ್ಮಕತೆಯನ್ನು ಪ್ರವಹಿಸುತ್ತಿವೆ.

ಉತ್ತರ ಪ್ರದೇಶದ ಝಾನ್ಸಿಯಲ್ಲಿ “ರಾಷ್ಟ್ರ ರಕ್ಷಾ ಸಮರ್ಪಣ ಪರ್ವ”ದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

November 19th, 05:39 pm

ಸ್ವಾತಂತ್ರ್ಯಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ ರಾಣಿ ಲಕ್ಷ್ಮೀಬಾಯಿ ಅವರ ನೆಲದ ಜನರಿಗೆ ನಾನು ಕೈಮುಗಿದು ನಮಸ್ಕರಿಸುತ್ತೇನೆ. ಝಾನ್ಸಿಯು ಸ್ವಾತಂತ್ರ್ಯದ ಜ್ವಾಲೆಯನ್ನು, ಕಿಡಿಯನ್ನು ಹಚ್ಚಿತು. ಈ ನೆಲದ ಪ್ರತಿಯೊಂದು ಕಣವೂ ವೀರತ್ವ ಮತ್ತು ದೇಶಪ್ರೇಮದಲ್ಲಿ ಮಿಂದೆದ್ದಿದೆ. ಝಾನ್ಸಿಯ ವೀರ ರಾಣಿ, ರಾಣಿ ಲಕ್ಷ್ಮೀಬಾಯಿ ಅವರಿಗೆ ನಾನು ವಂದಿಸುತ್ತೇನೆ.

ಉತ್ತರ ಪ್ರದೇಶದ ಝಾನ್ಸಿಯಲ್ಲಿ ಆಯೋಜಿಸಿದ ರಾಷ್ಟ್ರ ರಕ್ಷಾ ಸಮರ್ಪಣ್‌ ಪರ್ವ್‌ದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ

November 19th, 05:38 pm

ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರ ರಕ್ಷಾ ಸಂಪರ್ಪಣ ಪರ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮವನ್ನು ಉತ್ತರ ಪ್ರದೇಶದ ಝಾನ್ಸಿಯಲ್ಲಿ ಆಯೋಜಿಸಲಾಗಿತ್ತು. ದೇಶದ ಭದ್ರತಾಪಡೆಗಳಿಗೆ ಹೊಸ ಯೋಜನೆಗಳನ್ನು ಘೋಷಿಸುತ್ತ, ಝಾನ್ಸಿಯ ಕೋಟೆ ಆವರಣದಲ್ಲಿ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ಹೊಸ ಹೆಜ್ಜೆಗಳ ಕುರಿತು ಮಾತನಾಡಿದರು. ಎನ್‌ಸಿಸಿಯ ಹಳೆಯ ವಿದ್ಯಾರ್ಥಿಗಳ ಸಂಘವನ್ನು ಆರಂಭಿಸುವುದೂ ಇವುಗಳಲ್ಲಿ ಒಂದಾಗಿತ್ತು. ಪ್ರಧಾನಿ ನರೇಂದ್ರಮೋದಿ ಅವರು ಈ ಸಂಘಕ್ಕೆ ತಾವೇ ಮೊದಲ ಸದಸ್ಯರಾಗಿ ಹೆಸರು ನೊಂದಾಯಿಸಿದರು. ಎನ್‌ಸಿಸಿ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಸಿಮ್ಯುಲೆಷನ್‌ ತರಬೇತಿ ಕಾರ್ಯಕ್ರಮದ ಆರಂಭವನ್ನು ಘೋಷಿಸಲಾಯಿತು. ಸಮರ ವೀರರಿಗೆ ಹುತಾತ್ಮರಾದವರಿಗೆ ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ನಮನ ಸಲ್ಲಿಸಲು ಕಿಯಾಸ್ಕ್‌ ಅನ್ನು ಸಮರ್ಪಿಸಲಾಯಿತು. ರಾಷ್ಟ್ರೀಯ ಸಮರ ಸ್ಮರಣೆಯ ಮೊಬೈಲ್‌ ಆ್ಯಪ್‌ ಅನ್ನು ಆರಂಭಿಸಲಾಯಿತು. ಡಿಆರ್‌ಡಿಒ ವಿನ್ಯಾಸಗೊಳಿಸಿರುವ, ಅಭಿವೃದ್ಧಿ ಪಡಿಸಿರುವ ವಿದ್ಯುನ್ಮಾನ ಸಮರ ಸ್ಯೂಟ್‌ ಶಕ್ತಿ ಅನ್ನು ಭಾರತೀಯ ನೌಕೆಗಳಿಗೆ ನೀಡಲಾಯಿತು. ಹಗುರ ಸಮರ ಹೆಲಿಕಾಪ್ಟರ್‌, ಡ್ರೋನ್‌ಗಳನ್ನು ಸಮರ್ಪಿಸಲಾಯಿತು. ಉತ್ತರ ಪ್ರದೇಶದ ಕೈಗಾರಿಕಾ ಕಾರಿಡಾರ್‌ನಲ್ಲಿರುವ ಭಾರತ್‌ ಡೈನಾಮಿಕ್ಸ್‌ ಲಿಮಿಟೆಡ್‌ಗೆ 400 ಕೋಟಿ ಮೌಲ್ಯದ ನೂತನ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿದರು.

ಉತ್ತರ ಪ್ರದೇಶದ ಮಹೋಬಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಲೋಕಾರ್ಪಣೆಗೊಳಿಸಿ ಪ್ರಧಾನ ಮಂತ್ರಿ ಅವರ ಭಾಷಣ

November 19th, 02:06 pm

ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್ ಜೀ, ಉತ್ತರ ಪ್ರದೇಶದ ಜನಪ್ರಿಯ ಕರ್ಮಯೋಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೀ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ಗಜೇಂದ್ರ ಸಿಂಗ್ ಶೆಖಾವತ್ ಜೀ, ಉತ್ತರ ಪ್ರದೇಶ ಸರಕಾರದ ಸಚಿವರಾದ ಡಾ. ಮಹೇಂದ್ರ ಸಿಂಗ್ ಜೀ, ಮತ್ತು ಜಿ.ಎಸ್. ದೇಶಮುಖ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿಯಾಗಿರುವ ಆರ್.ಕೆ.ಸಿಂಗ್ ಪಟೇಲ್ ಜೀ, ಮತ್ತು ಶ್ರೀ ಪುಷ್ಪೇಂದ್ರ ಸಿಂಗ್ ಜೀ, ಉತ್ತರ ಪ್ರದೇಶ ವಿಧಾನ ಪರಿಷತ್ತಿನ ಮತ್ತು ವಿಧಾನ ಸಭೆಯ ಸಹೋದ್ಯೋಗಿಗಳಾದ ಶ್ರೀ ಸ್ವತಂತ್ರ ದೇವ್ ಸಿಂಗ್ ಜೀ, ಮತ್ತು ಶ್ರೀ ರಾಕೇಶ್ ಗೋಸ್ವಾಮೀ ಜೀ, ಇತರ ಜನಪ್ರತಿನಿಧಿಗಳೇ ಮತ್ತು ಇಲ್ಲಿ ಹಾಜರಿರುವ ನನ್ನ ಪ್ರೀತಿಯ ಸಹೋದರರೇ ಮತ್ತು ಸಹೋದರಿಯರೇ!

ಉತ್ತರ ಪ್ರದೇಶದ ಮಹೋಬಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ

November 19th, 02:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಮಹೋಬಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಯೋಜನೆಗಳು ಈ ಪ್ರದೇಶದ ನೀರಿನ ಕೊರತೆಯ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುತ್ತವೆ ಮತ್ತು ರೈತರ ಬಹು ನಿರೀಕ್ಷಿತ ಪರಿಹಾರವನ್ನು ಒದಗಿಸುತ್ತವೆ. ಈ ಯೋಜನೆಗಳಲ್ಲಿ ಅರ್ಜುನ್ ಸಹಾಯಕ್ ಯೋಜನೆ, ರತೌಲಿ ಅಣೆಕಟ್ಟೆ ಯೋಜನೆ, ಭಹೋನಿ ಅಣೆಕಟ್ಟು ಯೋಜನೆ ಮತ್ತು ಮಜ್ಗಾಂವ್-ಚಿಲ್ಲಿ ತುಂತುರು ನೀರಾವರಿ ಯೋಜನೆ ಸೇರಿವೆ. ಈ ಯೋಜನೆಗಳ ಒಟ್ಟು ವೆಚ್ಚವು 3250 ಕೋಟಿ ರೂ.ಗಳಿಗಿಂತ ಹೆಚ್ಚಾಗಿದೆ ಮತ್ತು ಅವುಗಳ ಕಾರ್ಯಾಚರಣೆಯು ಮಹೋಬಾ, ಹಮೀರ್ ಪುರ್, ಬಾಂಡಾ ಮತ್ತು ಲಲಿತಪುರ ಜಿಲ್ಲೆಗಳಲ್ಲಿ ಸುಮಾರು 65೦೦೦ ಹೆಕ್ಟೇರ್ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸುತ್ತದೆ, ಇದರಿಂದ ಈ ಪ್ರದೇಶದ ಲಕ್ಷಾಂತರ ರೈತರಿಗೆ ಪ್ರಯೋಜನಕಾರಿಯಾಗಿದೆ. ಈ ಯೋಜನೆಗಳು ಈ ಪ್ರದೇಶಕ್ಕೆ ಕುಡಿಯುವ ನೀರನ್ನು ಸಹ ಒದಗಿಸುತ್ತವೆ. ರಾಜ್ಯಪಾಲರಾದ ಶ್ರೀಮತಿ ಆನಂದೀ ಬೆನ್ ಪಟೇಲ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ರಾಜ್ಯ ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಅಲಿಘರ್ ನಲ್ಲಿ ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾನಿಲಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

September 14th, 12:01 pm

ಉತ್ತರ ಪ್ರದೇಶ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್ ಜೀ, ಉತ್ತರ ಪ್ರದೇಶದ ಜನಪ್ರಿಯ ಮತ್ತು ಉತ್ಸಾಹೀ, ಸಿಡಿಗುಂಡಿನಂತಹ ಮಾತಿನ ಮುಖ್ಯಮಂತ್ರಿ, ಯೋಗಿ ಆದಿತ್ಯನಾಥ ಜೀ, ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಜೀ, ಉತ್ತರ ಪ್ರದೇಶ ಸರಕಾರದ ಸಚಿವರೇ, ಇತರ ಸಂಸತ್ ಸದಸ್ಯರೇ, ಶಾಸಕರೇ ಮತ್ತು ಅಲಿಘರ್ ನ ನನ್ನ ಪ್ರೀತಿಯ ಸಹೋದರರೇ ಮತ್ತು ಸಹೋದರಿಯರೇ,

ಅಲಿಗಢದಲ್ಲಿ ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ

September 14th, 11:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಲಿಗಢದಲ್ಲಿ ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಉತ್ತರ ಪ್ರದೇಶ ರಕ್ಷಣಾ ಕೈಗಾರಿಕಾ ಕಾರಿಡಾರ್‌ನ ಅಲಿಗಢ ನೋಡ್‌ ಮತ್ತು ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯದ ಪ್ರದರ್ಶನ ಮಾದರಿಗಳನ್ನೂ ಅವರು ವೀಕ್ಷಿಸಿದರು.

ಸೆಪ್ಟಂಬರ್ 14ರಂದು ಆಲಿಘಡ್ ನಲ್ಲಿ ರಾಜಾ ಮಹೇಂದ್ರ ಸಿಂಗ್ ರಾಜ್ಯ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

September 13th, 11:20 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಸೆಪ್ಟಂಬರ್ 14ರಂದು ಮಧ್ಯಾಹ್ನ 12 ಗಂಟೆಗೆ ಉತ್ತರ ಪ್ರದೇಶದ ಆಲಿಘಡ್ ನಲ್ಲಿ ರಾಜ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ಆನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ, ಪ್ರಧಾನಮಂತ್ರಿ ಅವರು ಉತ್ತರ ಪ್ರದೇಶದ ರಕ್ಷಣಾ ಕೈಗಾರಿಕಾ ಕಾರಿಡಾರ್ ಮತ್ತು ರಾಜ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯದ ಆಲಿಘಡ್ ವಿಭಾಗದ ಪ್ರದರ್ಶನ ಮಾದರಿಗಳಿಗೆ ಭೇಟಿ ನೀಡಲಿದ್ದಾರೆ.

ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ ಮಹಾನ್ ವ್ಯಕ್ತಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಮಂತ್ರಿ

March 12th, 03:21 pm

ಸ್ವಾತಂತ್ರ್ಯ ಆಂದೋಲನದ ಎಲ್ಲಾ ಚಳವಳಿಗಳು, ದಂಗೆ, ಹೋರಾಟ ಮತ್ತು ಹೋರಾಟಗಾರರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದ ಯಶೋಗಾಥೆಯಲ್ಲಿ ಸರಿಯಾಗಿ ಗುರುತಿಸಲಾಗದ ಚಳವಳಿ, ಹೋರಾಟಗಳು ಮತ್ತು ವ್ಯಕ್ತಿತ್ವಗಳಿಗೆ ಅವರು ವಿಶೇಷ ಗೌರವ ಸಲ್ಲಿಸಿದರು. ಅಹಮದಾಬಾದ್ ನ ಸಾಬರಮತಿ ಆಶ್ರಮದಲ್ಲಿಂದು “ ಸ್ವಾತಂತ್ರ್ಯದ ಅಮೃತ ಮಹೋತ್ಸವ “ಭಾರತ@75” ಉದ್ಘಾಟಿಸಿ ಅವರು ಮಾತನಾಡಿದರು.

“ಅಜಾದಿ ಕಾ ಅಮೃತ್ ಮಹೋತ್ಸವ್” ಪೂರ್ವಭಾವೀ ಕಾರ್ಯಕ್ರಮಗಳ ಉದ್ಘಾಟನಾ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

March 12th, 10:31 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮದಾಬಾದ್ ನ ಸಾಬರಮತಿ ಆಶ್ರಮದಿಂದ ಪಾದಯಾತ್ರೆಗೆ ಹಸಿರು ನಿಶಾನೆ ತೋರಿ, (ಭಾರತ@75), ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭದ ಪೂರ್ವಭಾವಿ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಅವರು ಭಾರತ@75 ಆಚರಣೆ ಕುರಿತ ವಿವಿಧ ಇತರ ಸಾಂಸ್ಕೃತಿಕ ಮತ್ತು ಡಿಜಿಟಲ್ ಉಪಕ್ರಮಗಳನ್ನೂ ಉದ್ಘಾಟಿಸಿದರು. ಗುಜರಾತ್ ರಾಜ್ಯಪಾಲ ಶ್ರೀ ಆಚಾರ್ಯ ದೇವವ್ರತ್, ಕೇಂದ್ರ ಸಂಸ್ಕೃತಿ ಖಾತೆ ರಾಜ್ಯ ಸಚಿವ (ಸ್ವತಂತ್ರ ನಿರ್ವಹಣೆ) ಶ್ರೀ ಪ್ರಹ್ಲಾದ ಸಿಂಗ್ ಪಟೇಲ್, ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.