ಭಾರತಕ್ಕೆ 297 ಪ್ರಾಚೀನ ವಸ್ತುಗಳನ್ನು ಮರಳಿಸಿದ ಅಮೆರಿಕಾ
September 22nd, 12:11 pm
ನಿಕಟ ದ್ವಿಪಕ್ಷೀಯ ಸಂಬಂಧಗಳಿಗೆ ಅನುಗುಣವಾಗಿ ಮತ್ತು ಹೆಚ್ಚಿನ ಸಾಂಸ್ಕೃತಿಕ ತಿಳಿವಳಿಕೆಯನ್ನು ಬೆಳೆಸಲು, ಅಮೆರಿಕಾದ ವಿದೇಶಾಂಗ ಇಲಾಖೆಯ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಬ್ಯೂರೋ ಮತ್ತು ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯದಡಿಯಲ್ಲಿ ಬರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ 2024ರ ಜುಲೈನಲ್ಲಿ ಸಾಂಸ್ಕೃತಿಕ ಆಸ್ತಿ ಒಪ್ಪಂದಕ್ಕೆ ಸಹಿ ಹಾಕಿವೆ. 2023ರ ಜೂನ್ ನಲ್ಲಿ ಅಧ್ಯಕ್ಷ ಜೈ ಬೈಡೆನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಭೆಯ ನಂತರ ನೀಡಿದ ಜಂಟಿ ಹೇಳಿಕೆಯಲ್ಲಿ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಲು ಸಹಕಾರ ವೃದ್ಧಿಸುವ ಬದ್ಧತೆಗಳನ್ನು ಘೋಷಿಸಲಾಗಿತ್ತು.ಫ್ಯಾಕ್ಟ್ ಶೀಟ್: 2024 ಕ್ವಾಡ್ ಲೀಡರ್ಸ್ ಶೃಂಗಸಭೆ
September 22nd, 12:06 pm
ಸೆಪ್ಟೆಂಬರ್ 21, 2024 ರಂದು, ಅಧ್ಯಕ್ಷ ಶ್ರೀ ಜೋಸೆಫ್ ಆರ್. ಬೈಡನ್, ಜೂನಿಯರ್ ಅವರು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಶ್ರೀ ಆಂಥೋನಿ ಅಲ್ಬನೀಸ್, ಜಪಾನ್ ನ ಪ್ರಧಾನಮಂತ್ರಿ ಶ್ರೀ ಕಿಶಿದಾ ಫ್ಯೂಮಿಯೊ ಮತ್ತು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಲವೇರ್ನ ವಿಲ್ಮಿಂಗ್ಟನ್ನಲ್ಲಿ ನಾಲ್ಕನೇ ಕ್ವಾಡ್ ನಾಯಕರುಗಳ ಶೃಂಗಸಭೆಗಾಗಿ ಸಭೆಸೇರಿದರು.ಜಂಟಿ ವಸ್ತುಸ್ಥಿತಿ ಪತ್ರ: ಸಮಗ್ರ ಮತ್ತು ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ ವಿಸ್ತರಿಸುವುದನ್ನು ಅಮೆರಿಕ ಮತ್ತು ಭಾರತ ಮುಂದುವರಿಸುತ್ತವೆ
September 22nd, 12:00 pm
21 ನೇ ಶತಮಾನದ ನಿರ್ಣಾಯಕ ಪಾಲುದಾರಿಕೆಯನ್ನು ವ್ಯಾಖ್ಯಾನಿಸುವ ಯುಎಸ್-ಭಾರತ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಸಹಭಾಗಿತ್ವವು ಜಾಗತಿಕ ಒಳಿತಿಗಾಗಿ ಸೇವೆ ಸಲ್ಲಿಸುವ ಮಹತ್ವಾಕಾಂಕ್ಷೆಯ ಕಾರ್ಯಸೂಚಿಯನ್ನು ನಿರ್ಣಾಯಕವಾಗಿ ತಲುಪಿಸುತ್ತಿದೆ ಎಂದು ಯುಎಸ್ ಅಧ್ಯಕ್ಷ ಜೋಸೆಫ್ ಆರ್ ಬೈಡನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ದೃಢಪಡಿಸಿದರು. ಅಮೆರಿಕ ಮತ್ತು ಭಾರತ ನಡುವೆ ಅಭೂತಪೂರ್ವ ಮಟ್ಟದ ವಿಶ್ವಾಸ ಮತ್ತು ಸಹಯೋಗ ಬೆಳೆದ ಐತಿಹಾಸಿಕ ಅವಧಿಯ ಬಗ್ಗೆ ನಾಯಕರು ಉಲ್ಲೇಖಿಸಿದರು. ನಮ್ಮ ದೇಶಗಳು ಹೆಚ್ಚು ಪರಿಪೂರ್ಣ ಒಕ್ಕೂಟಗಳಾಗಲು ಮತ್ತು ನಮ್ಮ ಹಂಚಿಕೆಯ ಭವಿಷ್ಯವನ್ನು ತಲುಪಲು ಪ್ರಯತ್ನಿಸುತ್ತಿರುವುದರಿಂದ ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಕಾನೂನಿನ ನಿಯಮ, ಮಾನವ ಹಕ್ಕುಗಳು, ಬಹುತ್ವ ಮತ್ತು ಎಲ್ಲರಿಗೂ ಸಮಾನ ಅವಕಾಶಗಳನ್ನು ಎತ್ತಿಹಿಡಿಯುವಲ್ಲಿ ಯುಎಸ್-ಭಾರತ ಪಾಲುದಾರಿಕೆಯು ಆಧಾರವಾಗಿರಬೇಕು ಎಂದು ನಾಯಕರು ದೃಢಪಡಿಸಿದರು. ಯುಎಸ್-ಭಾರತ ಪ್ರಮುಖ ರಕ್ಷಣಾ ಪಾಲುದಾರಿಕೆಯನ್ನು ಜಾಗತಿಕ ಭದ್ರತೆ ಮತ್ತು ಶಾಂತಿಯ ಆಧಾರಸ್ತಂಭವನ್ನಾಗಿ ಮಾಡಿದ ಪ್ರಗತಿಯನ್ನು ನಾಯಕರು ಶ್ಲಾಘಿಸಿದರು, ಕಾರ್ಯಾಚರಣೆಯಲ್ಲಿ ಸಮನ್ವಯದ ಹೆಚ್ಚಳ, ಮಾಹಿತಿ ಹಂಚಿಕೆ ಮತ್ತು ರಕ್ಷಣಾ ಕೈಗಾರಿಕಾ ನಾವೀನ್ಯತೆಯ ಪ್ರಯೋಜನಗಳನ್ನು ಎತ್ತಿ ತೋರಿಸಿದರು. ಅಧ್ಯಕ್ಷ ಬೈಡೆನ್ ಮತ್ತು ಪ್ರಧಾನಿ ಮೋದಿ ಅವರು ನಮ್ಮ ಜನರು, ನಮ್ಮ ನಾಗರಿಕ ಮತ್ತು ಖಾಸಗಿ ವಲಯಗಳು ಮತ್ತು ಆಳವಾದ ಬಂಧಗಳನ್ನು ರೂಪಿಸಲು ತಮ್ಮ ಸರ್ಕಾರಗಳ ದಣಿವರಿಯದ ಪ್ರಯತ್ನಗಳು ಮುಂಬರುವ ದಶಕಗಳಲ್ಲಿ ಯುಎಸ್-ಭಾರತ ಪಾಲುದಾರಿಕೆಯನ್ನು ಇನ್ನೂ ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲಿವೆ ಎಂಬ ಬಗ್ಗೆ ನಿರಂತರ ಆಶಾವಾದ ಮತ್ತು ಅತ್ಯಂತ ವಿಶ್ವಾಸವನ್ನು ವ್ಯಕ್ತಪಡಿಸಿದರು.ಆಸ್ಟ್ರೇಲಿಯಾ, ಭಾರತ, ಜಪಾನ್ ಮತ್ತು ಅಮೆರಿಕ ನಾಯಕರಿಂದ ವಿಲ್ಮಿಂಗ್ಟನ್ ಘೋಷಣೆ ಜಂಟಿ ಹೇಳಿಕೆ
September 22nd, 11:51 am
ಇಂದು, ನಾವು-ಆಸ್ಟ್ರೇಲಿಯದ ಪ್ರಧಾನಿ ಆಂಥೋನಿ ಅಲ್ಬನೀಸ್, ಭಾರತದ ಪ್ರಧಾನಿ ನರೇಂದ್ರ ಮೋದಿ, ಜಪಾನ್‌ನ ಪ್ರಧಾನಿ ಕಿಶಿದಾ ಫ್ಯೂಮಿಯೊ ಮತ್ತು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್. ಬಿಡೆನ್, ಅವರು ನಾಲ್ಕನೇ ಕ್ವಾಡ್ ನಾಯಕರ ಶೃಂಗಸಭೆ ಸಂದರ್ಭದಲ್ಲಿ ಭೇಟಿಯಾದರು. ವಿಲ್ಮಿಂಗ್ಟನ್‌ನ ಡೆಲವೇರ್‌ನಲ್ಲಿ ಅಧ್ಯಕ್ಷ ಬಿಡೆನ್ ಈ ಸಭೆಯನ್ನು ಆಯೋಜಿಸಿದ್ದರು.ಕ್ವಾಡ್ ನಾಯಕರ ಕ್ಯಾನ್ಸರ್ ಮೂನ್‌ಶಾಟ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
September 22nd, 06:25 am
ಈ ಪ್ರಮುಖ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ನಾನು ಅಧ್ಯಕ್ಷ ಬೈಡೆನ್ ಅವರನ್ನು ಅಭಿನಂದಿಸುತ್ತೇನೆ. ಇದು ಕೈಗೆಟುಕುವ, ಸುಲಭವಾಗಿ ಲಭ್ಯವಿರುವ ಮತ್ತು ಗುಣಮಟ್ಟದ ಆರೋಗ್ಯ ರಕ್ಷಣೆಗೆ ನಮ್ಮ ಹಂಚಿಕೆಯ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ, ನಾವು ಇಂಡೋ-ಪೆಸಿಫಿಕ್‌ಗಾಗಿ ಕ್ವಾಡ್ ಲಸಿಕೆ ಉಪಕ್ರಮ ವನ್ನು ಆರಂಭಿಸಿದ್ದೇವೆ. ಮತ್ತು ಕ್ವಾಡ್ ನಲ್ಲಿ ಗರ್ಭಕಂಠದ ಕ್ಯಾನ್ಸರ್ ನಂತಹ ಸವಾಲನ್ನು ಎದುರಿಸಲು ನಾವು ಒಟ್ಟಾಗಿ ನಿರ್ಧರಿಸಿರುವುದು ನನಗೆ ಸಂತೋಷ ತಂದಿದೆ.ಕ್ವಾಡ್ ಕ್ಯಾನ್ಸರ್ ಮೂನ್ ಶಾಟ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ
September 22nd, 06:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಲವೇರ್ ನ ವಿಲ್ಮಿಂಗ್ಟನ್ ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯ ಸಂದರ್ಭದಲ್ಲಿ ಅದ್ಯಕ್ಷರಾದ ಶ್ರೀ ಜೋಸೆಫ್ ಆರ್ ಬೈಡನ್ ಜೂನಿಯರ್ ಅವರು ಆಯೋಜಿಸಿದ್ದ ಕ್ವಾಡ್ ಕ್ಯಾನ್ಸರ್ ಮೂನ್ ಶಾಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.ಡೆಲಾವೇರ್ ನ ವಿಲ್ಮಿಂಗ್ಟನ್ ನಲ್ಲಿ ನಡೆದ ಆರನೇ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು
September 22nd, 05:21 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಸೆಪ್ಟೆಂಬರ್ 21ರಂದು ಡೆಲಾವೇರ್ ನ ವಿಲ್ಮಿಂಗ್ಟನ್ ನಲ್ಲಿ ನಡೆದ ಆರನೇ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಅಮೆರಿಕದ ಅಧ್ಯಕ್ಷ ಘನತೆವೆತ್ತ ಶ್ರೀ ಜೋಸೆಫ್ ಆರ್. ಬೈಡನ್, ಆಸ್ಟ್ರೇಲಿಯಾದ ಕಿರಿಯ ಪ್ರಧಾನಿ ಗೌರವಾನ್ವಿತ ಶ್ರೀ ಆಂಥೋನಿ ಅಲ್ಬನೀಸ್ ಮತ್ತು ಜಪಾನ್ ಪ್ರಧಾನಿ ಗೌರವಾನ್ವಿತ ಶ್ರೀ ಫ್ಯೂಮಿಯೊ ಕಿಶಿಡಾ ಅವರೂ ಭಾಗವಹಿಸಿದ್ದರು.ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆರಂಭಿಕ ಹೇಳಿಕೆಗಳ ಕನ್ನಡ ಅನುವಾದ
September 22nd, 02:30 am
ನನ್ನ ಮೂರನೇ ಅವಧಿಯ ಆರಂಭದಲ್ಲಿ, ನನ್ನ ಸ್ನೇಹಿತರೊಂದಿಗೆ ಇಂದಿನ ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸಲು ನನಗೆ ತುಂಬಾ ಸಂತೋಷವಾಗಿದೆ. ಕ್ವಾಡ್ ನ 20 ನೇ ವಾರ್ಷಿಕೋತ್ಸವವನ್ನು ಆಚರಿಸಲು ಅಧ್ಯಕ್ಷ ಬೈಡನ್ ಅವರ ಸ್ವಂತ ನಗರ ವಿಲ್ಮಿಂಗ್ಟನ್ ಗಿಂತ ಉತ್ತಮ ಸ್ಥಳವಿಲ್ಲ. ಆಮ್ಟ್ರಾಕ್ ಜೋ ಆಗಿ, ನೀವು ಈ ನಗರ ಮತ್ತು ಡೆಲಾವೇರ್ ನೊಂದಿಗೆ ಸಂಬಂಧ ಹೊಂದಿದ್ದೀರಿ, ನೀವು ಕ್ವಾಡ್ ನೊಂದಿಗೆ ಇದೇ ರೀತಿಯ ಬಂಧವನ್ನು ಬೆಳೆಸಿದ್ದೀರಿ.ಪ್ರಧಾನಮಂತ್ರಿ ಅವರು ಡೆಲಾವೇರ್ ನ ವಿಲ್ಮಿಂಗ್ಟನ್ ನಲ್ಲಿ ಅಮೆರಿಕ ಅಧ್ಯಕ್ಷರನ್ನು ಭೇಟಿ ಮಾಡಿದರು
September 22nd, 02:02 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆಲಾವೇರ್ ನಲ್ಲಿ ನಡೆದ ಕ್ವಾಡ್ ಶೃಂಗಸಭೆಯ ಸಂದರ್ಭದಲ್ಲಿ ಅಮೆರಿಕದ ಅಧ್ಯಕ್ಷ ಘನತೆವೆತ್ತ ಶ್ರೀ ಜೋಸೆಫ್ ಬೈಡನ್ ಅವರನ್ನು ಭೇಟಿ ಮಾಡಿದರು. ವಿಶೇಷವಾಗಿ, ಅಧ್ಯಕ್ಷ ಬೈಡನ್ ವಿಲ್ಮಿಂಗ್ಟನ್ನಲ್ಲಿರುವ ತಮ್ಮ ಮನೆಯಲ್ಲಿ ಸಭೆಯನ್ನು ಆಯೋಜಿಸಿದ್ದರು.ಫಿಲಡೆಲ್ಫಿಯಾಕ್ಕೆ ಆಗಮಿಸಿದ ಪ್ರಧಾನಿ ಮೋದಿ
September 21st, 09:16 pm
ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಫಿಲಡೆಲ್ಫಿಯಾಗೆ ಆಗಮಿಸಿದ್ದಾರೆ. ಅವರಿಗೆ ಭಾರತೀಯ ವಲಸಿಗರು ಹೃದಯಸ್ಪರ್ಶಿ ಸ್ವಾಗತವನ್ನು ನೀಡಿದರು. ಪ್ರಧಾನಮಂತ್ರಿಯವರ ಪ್ರವಾಸದಲ್ಲಿ ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರೊಂದಿಗಿನ ದ್ವಿಪಕ್ಷೀಯ ಸಭೆ ಮತ್ತು ಕ್ವಾಡ್ ನಾಯಕರ ಶೃಂಗಸಭೆಯು ಡೆಲವೇರ್ನ ವಿಲ್ಮಿಂಗ್ಟನ್ನಲ್ಲಿ ನಡೆಯಲಿದೆ.ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾಕ್ಕೆ ಭೇಟಿ ನೀಡುವ ಮುನ್ನ ಪ್ರಧಾನ ಮಂತ್ರಿಯವರ ನಿರ್ಗಮನ ಹೇಳಿಕೆ
September 21st, 04:15 am
ಯುಎನ್ ಜನರಲ್ ಅಸೆಂಬ್ಲಿಯಲ್ಲಿ ಭವಿಷ್ಯದ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದೇನೆ.ಪ್ರಧಾನಿ ಮೋದಿ ಸೆಪ್ಟೆಂಬರ್ 21 ರಿಂದ 23 ರವರೆಗೆ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾಗೆ ಭೇಟಿ ನೀಡಲಿದ್ದಾರೆ
September 19th, 03:07 pm
2024 ರ ಸೆಪ್ಟೆಂಬರ್ 21-23 ರ ಅವಧಿಯಲ್ಲಿ ಪ್ರಧಾನಿ ಮೋದಿ ಯುಎಸ್‌ಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಡೆಲವೇರ್‌ನ ವಿಲ್ಮಿಂಗ್‌ಟನ್‌ನಲ್ಲಿ ನಡೆಯಲಿರುವ ನಾಲ್ಕನೇ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ಸೆಪ್ಟೆಂಬರ್ 23 ರಂದು ನ್ಯೂಯಾರ್ಕ್‌ನಲ್ಲಿ ನಡೆಯುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಧಾನಮಂತ್ರಿಯವರು ‘ಭವಿಷ್ಯದ ಶೃಂಗಸಭೆ’ಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಅಧ್ಯಕ್ಷರಾದ ಬೈಡನ್ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತುಕತೆ
August 26th, 10:03 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಮೆರಿಕದ ಅಧ್ಯಕ್ಷ ಘನತೆವೆತ್ತ ಶ್ರೀ ಜೋಸೆಫ್ ಆರ್. ಬೈಡನ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೊಂದಿಗೆ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಾತುಕತೆ
June 17th, 07:44 pm
ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ (ಎನ್ ಎಸ್ ಎ) ಶ್ರೀ.ಜೇಕ್ ಸಲಾವನ್ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದರು.ಪುನರಾಯ್ಕೆಯಾದ ಪ್ರಧಾನಿ ನರೇಂದ್ರ ಮೋದಿಗೆ ಅಧ್ಯಕ್ಷ ಬೈಡನ್ ಅಭಿನಂದನೆ
June 05th, 11:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಮೆರಿಕದ ಅಧ್ಯಕ್ಷ ಗೌರವಾನ್ವಿತ ಶ್ರೀ ಜೋಸೆಫ್ ಆರ್ ಬೈಡನ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ಯು.ಎಸ್. ರಾಜ್ಯ ಕಾರ್ಯದರ್ಶಿ ಮತ್ತು ರಕ್ಷಣಾ ಕಾರ್ಯದರ್ಶಿಗಳನ್ನು ಬರಮಾಡಿಕೊಂಡ ಪ್ರಧಾನಮಂತ್ರಿ
November 10th, 08:04 pm
ಯು.ಎಸ್. ರಾಜ್ಯ ಕಾರ್ಯದರ್ಶಿ ಘನತೆವೆತ್ತ ಶ್ರೀ ಆಂಟೋನಿ ಬ್ಲಿಂಕನ್ ಮತ್ತು ರಕ್ಷಣಾ ಕಾರ್ಯದರ್ಶಿ ಘನತೆವೆತ್ತ ಶ್ರೀ ಲಾಯ್ಡ್ ಆಸ್ಟಿನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಜಾಗತಿಕ ಮೂಲಸೌಕರ್ಯ ಮತ್ತು ಹೂಡಿಕೆ (ಪಿಜಿಐಐ) ಮತ್ತು ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ (ಐಎಂಇಸಿ) ಪಾಲುದಾರಿಕೆ
September 09th, 09:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಗೌರವಾನ್ವಿತ ಶ್ರೀ ಜೋ ಬೈಡನ್ ಅವರು 2023 ರ ಸೆಪ್ಟೆಂಬರ್ 9 ರಂದು ನವದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯ ಹೊರತಾಗಿ ಜಾಗತಿಕ ಮೂಲಸೌಕರ್ಯ ಮತ್ತು ಹೂಡಿಕೆ (ಪಿಜಿಐಐ) ಮತ್ತು ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ (ಐಎಂಇಸಿ) ಕುರಿತ ವಿಶೇಷ ಕಾರ್ಯಕ್ರಮದ ಸಹ ಅಧ್ಯಕ್ಷತೆ ವಹಿಸಿದ್ದರು.ಜಾಗತಿಕ ಮೂಲಸೌಕರ್ಯ ಹೂಡಿಕೆಯ ಪಾಲುದಾರಿಕೆ (PGII) ಮತ್ತು ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ ಕುರಿತ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಹೇಳಿಕೆಗಳು
September 09th, 09:27 pm
ಈ ವಿಶೇಷ ಕಾರ್ಯಕ್ರಮಕ್ಕಾಗಿ ನಾನು ನಿಮ್ಮೆಲ್ಲರಿಗೂ ಆತ್ಮೀಯ ಮತ್ತು ಹೃತ್ಪೂರ್ವಕ ಸ್ವಾಗತವನ್ನು ಕೋರುತ್ತೇನೆ. ನನ್ನ ಸ್ನೇಹಿತ ಅಮೆರಿಕ ಅಧ್ಯಕ್ಷ ಬಿಡೆನ್ ಅವರೊಂದಿಗೆ ಈ ಕಾರ್ಯಕ್ರಮದ ಸಹ-ಅಧ್ಯಕ್ಷರಾಗಲು ನಾನು ಸಂತಸಪಡುತ್ತೇನೆ. ಇಂದು, ನಾವೆಲ್ಲರೂ ಮಹತ್ವದ ಮತ್ತು ಐತಿಹಾಸಿಕ ಒಪ್ಪಂದವನ್ನು ಅಂಗೀಕರಿಸಿರುವುದನ್ನು ನೋಡಿದ್ದೇವೆ. ಮುಂಬರುವ ಸಮಯದಲ್ಲಿ, ಇದು ಭಾರತ, ಪಶ್ಚಿಮ ಏಷ್ಯಾ ಮತ್ತು ಯುರೋಪ್ ನಡುವೆ ಆರ್ಥಿಕ ಏಕೀಕರಣದ ಪರಿಣಾಮಕಾರಿ ಮಾಧ್ಯಮವಾಗಲಿದೆ.ಭಾರತ ಮತ್ತು ಅಮೆರಿಕದ ಜಂಟಿ ಹೇಳಿಕೆ
September 08th, 11:18 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್ ಬೈಡನ್ ಜೂನಿಯರ್ ಅವರನ್ನು ಭಾರತಕ್ಕೆ ಸ್ವಾಗತಿಸಿದರು, ಭಾರತ ಮತ್ತು ಅಮೆರಿಕ ನಡುವಿನ ನಿಕಟ ಮತ್ತು ಶಾಶ್ವತ ಪಾಲುದಾರಿಕೆಯನ್ನು ಪುನರುಚ್ಚರಿಸಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಐತಿಹಾಸಿಕ ಜೂನ್ 2023ರ ವಾಷಿಂಗ್ಟನ್ ಭೇಟಿಯ ಸಾಧನೆಗಳನ್ನು ಕಾರ್ಯಗತಗೊಳಿಸುವಲ್ಲಿ ಆಗಿರುವ ಗಣನೀಯ ಪ್ರಗತಿಯ ಬಗ್ಗೆ ಉಭಯ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷರಾದ ಬಿಡೆನ್ ಅವರನ್ನು ಭೇಟಿ ಮಾಡಿದರು
September 08th, 09:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷರಾದ ಶ್ರೀ ಜೋಸೆಫ್ ಆರ್. ಬಿಡೆನ್ ಇಂದು ನವದೆಹಲಿಯಲ್ಲಿ. ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿರುವ ಅಧ್ಯಕ್ಷ ಬಿಡೆನ್, 2023 ಸೆಪ್ಟೆಂಬರ್ 9 ಮತ್ತು 10ರಂದು ನವದೆಹಲಿಯಲ್ಲಿ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.