ಶ್ರೀ ಗುರು ತೇಜ್ ಬಹದ್ದೂರ್ ಅವರ ಹುತಾತ್ಮ ದಿನದಂದು ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ
December 06th, 08:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರೀ ಗುರು ತೇಜ್ ಬಹದ್ದೂರ್ ಅವರ ಹುತಾತ್ಮ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ನ್ಯಾಯ, ಸಮಾನತೆ ಮತ್ತು ಮಾನವೀಯತೆಯ ರಕ್ಷಣೆಯ ಮೌಲ್ಯಗಳಿಗಾಗಿ ಶ್ರೀ ಗುರು ತೇಜ್ ಬಹದ್ದೂರ್ ಜೀ ಅವರ ಸಾಟಿಯಿಲ್ಲದ ಧೈರ್ಯ ಮತ್ತು ತ್ಯಾಗವನ್ನು ಸ್ಮರಿಸಿದರು.ಮೂರು ಹೊಸ ಕ್ರಿಮಿನಲ್ ಕಾನೂನುಗಳ ಯಶಸ್ವಿ ಅನುಷ್ಠಾನವನ್ನು ಚಂಡೀಗಢದಲ್ಲಿ ರಾಷ್ಟ್ರಕ್ಕೆ ಸಮರ್ಪಿಸಲಿರುವ ಪ್ರಧಾನಮಂತ್ರಿ ಮೋದಿ
December 02nd, 07:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೂರು ಪರಿವರ್ತಕ ಹೊಸ ಕ್ರಿಮಿನಲ್ ಕಾನೂನುಗಳಾದ - ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮಗಳ ಯಶಸ್ವಿ ಅನುಷ್ಠಾನವನ್ನು 2024ರ ಡಿಸೆಂಬರ್ 3 ರಂದು ಮಧ್ಯಾಹ್ನ 12 ಗಂಟೆಗೆ ಚಂಡೀಗಢದಲ್ಲಿ ದೇಶಕ್ಕೆ ಸಮರ್ಪಿಸಲಿದ್ದಾರೆ.ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ
August 31st, 10:30 am
ಈ ಸಮಾರಂಭವು ತುಂಬಾ ಗಂಭೀರವಾಗಿದೆ ಎಂದು ನನಗೆ ಅನಿಸುತ್ತದೆ. ಕೆಲ ದಿನಗಳ ಹಿಂದೆಯಷ್ಟೇ ರಾಜಸ್ಥಾನ ಹೈಕೋರ್ಟ್‌ನ ಪ್ಲಾಟಿನಂ ಜ್ಯೂಬಿಲಿ ಸಮಾರಂಭದಲ್ಲಿ ಭಾಗವಹಿಸಿದ್ದೆ ಮತ್ತು ಇಂದು ಸುಪ್ರೀಂ ಕೋರ್ಟ್‌ನ ಯಾತ್ರೆಯ 75ನೇ ವರ್ಷಾಚರಣೆಯ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನ ನಡೆಯುತ್ತಿದೆ. ಸುಪ್ರೀಂ ಕೋರ್ಟ್‌ನ 75 ವರ್ಷಗಳು ಕೇವಲ ಸಂಸ್ಥೆಯ ಪ್ರಯಾಣವಲ್ಲ; ಇದು ಭಾರತೀಯ ಸಂವಿಧಾನ ಮತ್ತು ಸಾಂವಿಧಾನಿಕ ಮೌಲ್ಯಗಳ ಪಯಣ! ಇದು ಪ್ರಜಾಪ್ರಭುತ್ವವಾಗಿ ಪಕ್ವಗೊಳ್ಳುತ್ತಿರುವ ಭಾರತದ ಪಯಣ! ಮತ್ತು ನಮ್ಮ ಸಂವಿಧಾನ ರಚನೆಕಾರರು ಮತ್ತು ನ್ಯಾಯಾಂಗದ ಅನೇಕ ಗಣ್ಯ ವ್ಯಕ್ತಿಗಳ ಕೊಡುಗೆಗಳು ಈ ಪ್ರಯಾಣದಲ್ಲಿ ಬಹಳ ಮಹತ್ವದ್ದಾಗಿದೆ. ಈ ಪ್ರಯಾಣವು ಲಕ್ಷಾಂತರ ನಾಗರಿಕರ ಕೊಡುಗೆಯನ್ನು ಒಳಗೊಂಡಿದೆ, ಅವರು ಪ್ರತಿ ಸಂದರ್ಭದಲ್ಲೂ ನ್ಯಾಯಾಂಗದಲ್ಲಿ ತಮ್ಮ ನಂಬಿಕೆಯನ್ನು ಅಚಲವಾಗಿ ಇಟ್ಟುಕೊಂಡಿದ್ದಾರೆ. ಭಾರತದ ಜನರು ಸುಪ್ರೀಂ ಕೋರ್ಟ್ ಅಥವಾ ನಮ್ಮ ನ್ಯಾಯಾಂಗವನ್ನು ಎಂದಿಗೂ ಅನುಮಾನಿಸಲಿಲ್ಲ. ಆದ್ದರಿಂದ, ಸುಪ್ರೀಂ ಕೋರ್ಟ್‌ನ ಈ 75 ವರ್ಷಗಳು ಪ್ರಜಾಪ್ರಭುತ್ವದ ತಾಯಿ ಎಂಬ ಭಾರತದ ಹೆಮ್ಮೆಯನ್ನು ಇನ್ನಷ್ಟು ಹೆಚ್ಚಿಸುತ್ತವೆ. ಸತ್ಯಮೇವ ಜಯತೇ, ನನೃತಂ (ಸತ್ಯವೇ ಜಯಿಸುತ್ತದೆ, ಸುಳ್ಳಲ್ಲ) ಎಂದು ಹೇಳುವ ನಮ್ಮ ಸಾಂಸ್ಕೃತಿಕ ಘೋಷಣೆಯನ್ನು ಇದು ಬಲಪಡಿಸುತ್ತದೆ. ರಾಷ್ಟ್ರವು 75 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿರುವಾಗ, ಇದು ಸಂವಿಧಾನದ 75 ನೇ ವಾರ್ಷಿಕೋತ್ಸವವನ್ನು ಗುರುತಿಸಲಿದೆ. ಆದ್ದರಿಂದ, ಈ ಕ್ಷಣದಲ್ಲಿ ಹೆಮ್ಮೆ, ವೈಭವ ಮತ್ತು ಸ್ಫೂರ್ತಿ ಇದೆ. ಈ ಸಂದರ್ಭದಲ್ಲಿ ನಾನು ಎಲ್ಲಾ ನ್ಯಾಯಶಾಸ್ತ್ರಜ್ಞರಿಗೆ ಮತ್ತು ಇಡೀ ರಾಷ್ಟ್ರಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಈ ಸಮಯದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಜಿಲ್ಲಾ ನ್ಯಾಯಾಂಗ ಸಮ್ಮೇಳನಕ್ಕೂ ನನ್ನ ಶುಭ ಹಾರೈಕೆಗಳು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದರು
August 31st, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿ ಅವರು ಭಾರತದ ಸರ್ವೋಚ್ಚ ನ್ಯಾಯಾಲಯದ ಸ್ಥಾಪನೆಯ 75ನೇ ವರ್ಷಾಚರಣೆಯ ಸ್ಮರಣಾರ್ಥ ಅಂಚೆ ಚೀಟಿ ಮತ್ತು ನಾಣ್ಯವನ್ನು ಅನಾವರಣಗೊಳಿಸಿದರು. ಭಾರತದ ಸರ್ವೋಚ್ಚ ನ್ಯಾಯಾಲಯವು ಆಯೋಜಿಸಿರುವ ಎರಡು ದಿನಗಳ ಸಮ್ಮೇಳನವು ಜಿಲ್ಲಾ ನ್ಯಾಯಾಂಗಕ್ಕೆ ಸಂಬಂಧಿಸಿದ ವಿಷಯಗಳಾದ ಮೂಲಸೌಕರ್ಯ ಮತ್ತು ಮಾನವ ಸಂಪನ್ಮೂಲ, ಎಲ್ಲರಿಗೂ ಅಂತರ್ಗತ ನ್ಯಾಯಾಲಯಗಳು, ನ್ಯಾಯಾಂಗ ಭದ್ರತೆ ಮತ್ತು ನ್ಯಾಯಾಂಗ ಸ್ವಾಸ್ಥ್ಯ, ಪ್ರಕರಣ ನಿರ್ವಹಣೆ ಮತ್ತು ನ್ಯಾಯಾಂಗ ತರಬೇತಿಯಂತಹ ವಿಷಯಗಳ ಬಗ್ಗೆ ಚರ್ಚಿಸಲು ಮತ್ತು ಚರ್ಚಿಸಲು ಐದು ಕೆಲಸದ ಅಧಿವೇಶನಗಳನ್ನು ಆಯೋಜಿಸುತ್ತದೆ.ಖ್ಯಾತ ವಕೀಲ ಫಾಲಿ ನಾರಿಮನ್ ಅವರ ನಿಧನಕ್ಕೆ ಪ್ರಧಾನಿ ಸಂತಾಪ
February 21st, 11:12 am
ಖ್ಯಾತ ವಕೀಲರಾದ ಶ್ರೀ ಫಾಲಿ ನಾರಿಮನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದರು.ಸೆಪ್ಟೆಂಬರ್ 23 ರಂದು ನವದೆಹಲಿಯಲ್ಲಿ 'ಅಂತಾರಾಷ್ಟ್ರೀಯ ವಕೀಲರ ಸಮ್ಮೇಳನ 2023' ಉದ್ಘಾಟಿಸಲಿರುವ ಪ್ರಧಾನಮಂತ್ರಿ
September 22nd, 02:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಸೆಪ್ಟೆಂಬರ್ 23ರಂದು ಬೆಳಗ್ಗೆ 10 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ' ಅಂತಾರಾಷ್ಟ್ರೀಯ ವಕೀಲರ ಸಮ್ಮೇಳನ 2023' ಅನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ರಿಪಬ್ಲಿಕ್ ಟಿವಿ ಕಾನ್‌ಕ್ಲೇವ್‌ನಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
April 26th, 08:01 pm
ಅರ್ನಾಬ್ ಗೋಸ್ವಾಮಿ ಅವರೇ, ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಎಲ್ಲಾ ಸಹೋದ್ಯೋಗಿಗಳೇ, ದೇಶ ಮತ್ತು ವಿದೇಶಗಳಲ್ಲಿನ ರಿಪಬ್ಲಿಕ್ ಟಿವಿಯ ಎಲ್ಲಾ ವೀಕ್ಷಕರೇ, ಮಹಿಳೆಯರೇ ಮತ್ತು ಮಹನೀಯರೇ! ನಾನು ಮೊದಲು, ನನ್ನ ಬಾಲ್ಯದಲ್ಲಿ ಕೇಳಿದ ಒಂದು ಹಾಸ್ಯ ಪ್ರಸಂಗವನ್ನು ಹೇಳಲು ಬಯಸುತ್ತೇನೆ. ʼಒಬ್ಬ ಪ್ರಾಧ್ಯಾಪಕರು ಇದ್ದರು, ಅವರ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಳು, ಜೀವನದಿಂದ ಬೇಸತ್ತಿದ್ದೇನೆ, ಇನ್ನು ಮುಂದೆ ಬದುಕಲು ಬಯಸುವುದಿಲ್ಲ ಎಂದು ಬರೆದ ಪತ್ರವಿತ್ತು. ಏನಾದರು ಕುಡಿದು ಕಂಕರಿಯಾ ಕೆರೆಗೆ ಹಾರಿ ಸಾಯುತ್ತೇನೆ ಎಂದು ಆಕೆ ಬರೆದಿದ್ದಳು. ಮರುದಿನ ಬೆಳಿಗ್ಗೆ, ತನ್ನ ಮಗಳು ಮನೆಯಲ್ಲಿ ಇಲ್ಲದಿರುವುದು ಪ್ರಾಧ್ಯಾಪಕರಿಗೆ ತಿಳಿಯಿತು. ಅವರು ಅವಳ ಕೋಣೆಗೆ ಹೋಗಿ ನೋಡದಾಗ ಪತ್ರ ಸಿಕ್ಕಿತು. ಪತ್ರವನ್ನು ಓದಿದ ಅವರಿಗೆ ತುಂಬಾ ಕೋಪ ಬಂತು. ‘ನಾನು ಪ್ರೊಫೆಸರ್ ಆಗಿದ್ದೇನೆ, ನಾನು ಇಷ್ಟು ವರ್ಷ ಕಷ್ಟಪಟ್ಟು ಕೆಲಸ ಮಾಡಿದ್ದೇನೆ ಮತ್ತು ಆತ್ಮಹತ್ಯೆ ಪತ್ರದಲ್ಲಿ ಅವಳು ಕಂಕಾರಿಯಾ ಕಾಗುಣಿತವನ್ನು ತಪ್ಪಾಗಿ ಬರೆದಿದ್ದಾಳೆ.’ ಅರ್ನಾಬ್ ಉತ್ತಮ ಹಿಂದಿ ಮಾತನಾಡಲು ಪ್ರಾರಂಭಿಸಿದ್ದಕ್ಕಾಗಿ ನನಗೆ ಸಂತೋಷವಾಗಿದೆ. ಅವರು ಏನು ಮಾತುನಾಡುತ್ತಿದ್ದಾರೆ ಎಂದು ನಾನು ಕೇಳಿಸಿಕೊಳ್ಳಲಿಲ್ಲ, ಆದರೆ ಅವರ ಹಿಂದಿ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಗಮನಿಸುತ್ತಿದ್ದೆ. ಬಹುಶಃ, ಮುಂಬೈನಲ್ಲಿ ವಾಸಿಸಿದ ನಂತರ ನಿಮ್ಮ ಹಿಂದಿ ಸುಧಾರಿಸಿದೆ.ನವದೆಹಲಿಯಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಪ್ರಧಾನಿ ಭಾಷಣ
April 26th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್‌ನಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಭಾಷಣ ಮಾಡಿದರು.No dearth of political will to take action against corruption in the country: PM Modi
April 03rd, 03:50 pm
PM Modi inaugurated Diamond Jubilee Celebrations of CBI in Delhi. The PM made it clear that today there was no dearth of political will to take action against corruption in the country and asked officers to take action without hesitation against the corrupt, however powerful. He asked them not to be deterred by the history of the power of the corrupt and the ecosystem created by them to tarnish the investigative agencies.PM inaugurates Diamond Jubilee Celebrations of Central Bureau of Investigation in New Delhi
April 03rd, 12:00 pm
PM Modi inaugurated Diamond Jubilee Celebrations of CBI in Delhi. The PM made it clear that today there was no dearth of political will to take action against corruption in the country and asked officers to take action without hesitation against the corrupt, however powerful. He asked them not to be deterred by the history of the power of the corrupt and the ecosystem created by them to tarnish the investigative agencies.ಕಾನೂನು ಸಚಿವರು ಹಾಗೂ ಕಾನೂನು ಕಾರ್ಯದರ್ಶಿಗಳ ಅಖಿಲ ಭಾರತ ಸಮ್ಮೇಳನ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಗಳ ಭಾಷಣ
October 15th, 12:42 pm
ಎಲ್ಲ ರಾಜ್ಯಗಳ ಕಾನೂನು ಸಚಿವರು ಹಾಗೂ ಕಾನೂನು ಕಾರ್ಯದರ್ಶಿಗಳ ಮಹತ್ವದ ಸಭೆಯು ರಾಷ್ಟ್ರದ ಪ್ರತಿಷ್ಠಿತ ಏಕತಾ ಪ್ರತಿಮೆಯಿರುವ ನಗರದಲ್ಲಿ ನಡೆಯುತ್ತಿರುವುದು ಅದರ ಹಿರಿಮೆಯನ್ನು ಹೆಚ್ಚಿಸಿದೆ. ರಾಷ್ಟ್ರವು ಸ್ವಾತಂತ್ರ‍್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಹೊತ್ತಿನಲ್ಲಿ ಸರ್ದಾರ್ ಪಟೇಲ್ ಅವರ ಸಾರ್ಜಜನಿಕ ಹಿತಾಸಕ್ತಿಯ ಸ್ಫೂರ್ತಿಯು ನಮ್ಮನ್ನು ಸರಿದಾರಿಯಲ್ಲಿ ಕರೆದೊಯ್ಯುವುದು ಮಾತ್ರವಲ್ಲದೆ, ನಮ್ಮ ಗುರಿಗಳನ್ನು ತಲುಪಲು ಸಹಕಾರಿಯಾಗಲಿದೆ.‘‘ ಗುಜರಾತ್‌ನ ಏಕ್ತಾ ನಗರದಲ್ಲಿ ಕಾನೂನು ಸಚಿವರು ಮತ್ತು ಕಾನೂನು ಕಾರ್ಯದರ್ಶಿಗಳ ಅಖಿಲ ಭಾರತ ಸಮಾವೇಶದ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಪ್ರಧಾನಮಂತ್ರಿ ಭಾಷಣ’’
October 15th, 12:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ ಕಾನೂನು ಸಚಿವರು ಮತ್ತು ಕಾನೂನು ಕಾರ್ಯದರ್ಶಿಗಳ ಅಖಿಲ ಭಾರತ ಸಮ್ಮೇಳನದ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು.'Ease of Justice' is important in Amrit Yatra of the country: PM Modi
July 30th, 10:01 am
PM Modi addressed the inaugural session of the First All India District Legal Services Authorities Meet. The Prime Minister said, This is the time of Azadi Ka Amrit Kaal. This is the time for the resolutions that will take the country to new heights in the next 25 years. Like Ease of Doing Business and Ease of Living, Ease of Justice is equally important in this Amrit Yatra of the country.PM addresses inaugural session of First All India District Legal Services Authorities Meet
July 30th, 10:00 am
PM Modi addressed the inaugural session of the First All India District Legal Services Authorities Meet. The Prime Minister said, This is the time of Azadi Ka Amrit Kaal. This is the time for the resolutions that will take the country to new heights in the next 25 years. Like Ease of Doing Business and Ease of Living, Ease of Justice is equally important in this Amrit Yatra of the country.ಶ್ರೀ ಹರ್ಮೋಹನ್ ಸಿಂಗ್ ಯಾದವ್ ಅವರ 10ನೇ ಪುಣ್ಯತಿಥಿಯಂದು ಪ್ರಧಾನ ಮಂತ್ರಿಯವರು ಮಾಡಿದ ಭಾಷಣದ ಇಂಗ್ಲಿಷ್ ಅವತರಣಿಕೆ
July 25th, 04:31 pm
ದಿವಂಗತ ಹರ್ಮೋಹನ್ ಸಿಂಗ್ ಯಾದವ್ ಅವರ ಪುಣ್ಯತಿಥಿಯಂದು ಅವರಿಗೆ ನಾನು ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. ಈ ಕಾರ್ಯಕ್ರಮಕ್ಕೆ ನನ್ನನ್ನು ತುಂಬಾ ಪ್ರೀತಿಯಿಂದ ಆಹ್ವಾನಿಸಿದ್ದಕ್ಕಾಗಿ ನಾನು ಸುಖರಾಮ್ ಜೀ ಅವರಿಗೆ ಆಭಾರಿಯಾಗಿದ್ದೇನೆ. ಇದಲ್ಲದೆ, ನಿಮ್ಮೆಲ್ಲರ ನಡುವೆ ಇರುವುದಕ್ಕಾಗಿ ಈ ಕಾರ್ಯಕ್ರಮಕ್ಕಾಗಿ ಕಾನ್ಪುರಕ್ಕೆ ಬರಬೇಕೆಂಬುದು ನನ್ನ ಬಯಕೆಯಾಗಿತ್ತು. ಆದರೆ ಇಂದು, ನಮ್ಮ ದೇಶದ ಪ್ರಜಾಪ್ರಭುತ್ವಕ್ಕೆ ಸಂಬಂಧಿಸಿದ ಒಂದು ದೊಡ್ಡ ಕಾರ್ಯಕ್ರಮ ನಡೆಯುವ ಸಂದರ್ಭವಾಗಿದೆ. ಇಂದು ನಮ್ಮ ಹೊಸ ರಾಷ್ಟ್ರಪತಿಗಳು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸ್ವಾತಂತ್ರ್ಯಾನಂತರ ಇದೇ ಮೊದಲ ಬಾರಿಗೆ ಬುಡಕಟ್ಟು ಸಮಾಜದ ಮಹಿಳಾ ರಾಷ್ಟ್ರಪತಿ ಅವರು ದೇಶದ ನಾಯಕತ್ವವನ್ನು ವಹಿಸುತ್ತಿದ್ದಾರೆ. ಇದು ನಮ್ಮ ಪ್ರಜಾಪ್ರಭುತ್ವದ ಶಕ್ತಿ ಮತ್ತು ಒಳಗೊಳ್ಳುವಿಕೆಯ ಜೀವಂತ ಉದಾಹರಣೆಯಾಗಿದೆ. ಈ ಸಂದರ್ಭದಲ್ಲಿ ಇಂದು ದಿಲ್ಲಿಯಲ್ಲಿ ವಿವಿಧ ಪ್ರಮುಖ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಸಾಂವಿಧಾನಿಕ ಬಾಧ್ಯತೆಗಳಿಗಾಗಿ ನಾನು ದೆಹಲಿಯಲ್ಲಿ ಇರುವುದು ಅನಿವಾರ್ಯ ಮತ್ತು ಅಗತ್ಯವೂ ಆಗಿದೆ. ಆದ್ದರಿಂದ, ನಾನು ಇಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನಿಮ್ಮೊಂದಿಗೆ ಸೇರುತ್ತಿದ್ದೇನೆ.ದಿವಂಗತ ಶ್ರೀ ಹರ್ಮೋಹನ್ ಸಿಂಗ್ ಯಾದವ್ ಅವರ 10ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಷಣ
July 25th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಾಜಿ ಸಂಸದ, ವಿಧಾನ ಪರಿಷತ್ ಸದಸ್ಯ, ಶಾಸಕಮತ್ತು ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಹಾಗೂ ಯಾದವ ಸಮುದಾಯದ ಅತ್ಯಂತ ಪ್ರಭಾವೀ ವ್ಯಕ್ತಿ ಮತ್ತು ನಾಯಕರಾದ ದಿವಂಗತ ಶ್ರೀ ಹರ್ಮೋಹನ್ ಸಿಂಗ್ ಯಾದವ್ ಅವರ 10ನೇ ಪುಣ್ಯತಿಥಿಯ ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು.ಭಾಯಿ ತಾರು ಸಿಂಗ್ ಜೀ ಅವರ ಜಯಂತಿಯಂದು ಅವರನ್ನು ಸ್ಮರಿಸಿದ ಪ್ರಧಾನಿ
October 09th, 03:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಯಿ ತಾರು ಸಿಂಗ್ ಜೀ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಸುಬ್ರಮಣ್ಯ ಭಾರತಿ ಅವರ 100ನೇ ಪುಣ್ಯತಿಥಿ; ಪ್ರಧಾನ ಮಂತ್ರಿ ಅವರಿಂದ ಗೌರವ ನಮನ
September 11th, 11:06 pm
ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ, ವಿದ್ವಾಂಸ ಮತ್ತು ಮಹಾಕವಿ ಸುಬ್ರಮಣ್ಯ ಭಾರತಿ ಅವರ 100ನೇ ಪುಣ್ಯತಿಥಿ ಅಂಗವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.ಸಂಸತ್ತಿನ ಉಭಯ ಸದನಗಳಲ್ಲಿ ಸಂವಿಧಾನದ 127ನೇ ತಿದ್ದುಪಡಿ ವಿಧೇಯಕ-2021 ಅಂಗೀಕಾರ; ಪ್ರಧಾನ ಮಂತ್ರಿ ಶ್ಲಾಘನೆ
August 11th, 11:00 pm
ಸಂಸತ್ತಿನ ಉಭಯ ಸದನಗಳಲ್ಲಿ ಸಂವಿಧಾನದ 127ನೇ ತಿದ್ದುಪಡಿ ವಿಧೇಯಕ-2021 ಅಂಗೀಕಾರವಾಗಿರುವುದು ದೇಶದ ಪಾಲಿಗೆ ಐತಿಹಾಸಿಕ ಕ್ಷಣ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ.PM Modi addresses public meetings at West Bengal’s Bardhaman, Kalyani and Barasat
April 12th, 11:59 am
PM Modi addressed three mega rallies in West Bengal’s Bardhaman, Kalyani and Barasat today. Speaking at the first rally the PM said, “Two things are very popular here- rice and mihi dana. In Bardhaman, everything is sweet. Then tell me why Didi doesn't like Mihi Dana. Didi's bitterness, her anger is increasing every day because in half of West Bengal's polls, TMC is wiped out. People of Bengal hit so many fours and sixes that BJP has completed century in four phases of assembly polls.”