ಕಾರ್ಯಕಾರ್ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 07th, 05:52 pm
ಕಾರ್ಯಕಾರ್(ಕಾರ್ಯಕರ್ತರು) ಸುವರ್ಣ ಮಹೋತ್ಸವದ ಶುಭ ಸಂದರ್ಭದಲ್ಲಿ ನಾನು ಭಗವಾನ್ ಸ್ವಾಮಿನಾರಾಯಣ ಅವರ ಪಾದಗಳಿಗೆ ತಲೆಬಾಗಿ ನಮಸ್ಕರಿಸುತ್ತೇನೆ. ಇಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರ 103ನೇ ಜನ್ಮದಿನ ಆಚರಿಸಲಾಗುತ್ತಿದೆ, ಅವರಿಗೂ ಸಹ ನಾನು ಗೌರವಪೂರ್ವಕವಾಗಿ ನಮಸ್ಕರಿಸುತ್ತೇನೆ, ಏಕೆಂದರೆ ಅವರು ದೈವಿಕ ಗುರು ಹರಿ ಪ್ರಗತ್ ಬ್ರಹ್ಮನ ಮೂರ್ತರೂಪವಾಗಿದ್ದರು. ಭಗವಾನ್ ಸ್ವಾಮಿನಾರಾಯಣ ಅವರ ಬೋಧನೆಗಳು ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ಅವರ ಸಂಕಲ್ಪಗಳು ಮತ್ತು ನಿರ್ಣಯಗಳು ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಅವರ ಅವಿರತ ಪ್ರಯತ್ನ ಮತ್ತು ಸಮರ್ಪಣೆಯ ಮೂಲಕ ಇಂದು ಸಾಕಾರಗೊಳ್ಳುತ್ತಿವೆ. 1 ಲಕ್ಷ ಸ್ವಯಂಸೇವಕರು, ಯುವಕರು ಮತ್ತು ಮಕ್ಕಳನ್ನು ಒಳಗೊಂಡ ಈ ಭವ್ಯವಾದ ಸಾಂಸ್ಕೃತಿಕ ಕಾರ್ಯಕ್ರಮವು ಬೀಜ, ಮರ ಮತ್ತು ಹಣ್ಣುಗಳ ಸಾರವನ್ನು ಸುಂದರವಾಗಿ ಪ್ರತಿನಿಧಿಸುತ್ತಿದೆ. ನಾನು ನಿಮ್ಮ ನಡುವೆ ದೈಹಿಕವಾಗಿ ಇರಲು ಸಾಧ್ಯವಾಗದಿದ್ದರೂ, ಈ ಘಟನೆಯ ಚೈತನ್ಯ ಮತ್ತು ಶಕ್ತಿಯನ್ನು ನನ್ನ ಹೃದಯದಲ್ಲಿ ಆಳವಾಗಿ ಅನುಭವಿಸುತ್ತೇನೆ. ಇಂತಹ ಭವ್ಯವಾದ ಮತ್ತು ದಿವ್ಯವಾದ ಆಚರಣೆಯನ್ನು ಆಯೋಜಿಸಿದ್ದಕ್ಕಾಗಿ ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಮತ್ತು ಎಲ್ಲಾ ಪೂಜ್ಯ ಸಾಧು ಸಂತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಅವರಿಗೆ ಅಪಾರ ಗೌರವದಿಂದ ನಮಸ್ಕರಿಸುತ್ತೇನೆ.ಅಹಮದಾಬಾದ್ನಲ್ಲಿ ಕಾರ್ಯಕರ್ತರ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
December 07th, 05:40 pm
ಅಹಮದಾಬಾದ್ನಲ್ಲಿ ಆಯೋಜಿತವಾಗಿದ್ದ ಕಾರ್ಯಕರ್ತರ ಸುವರ್ಣ ಮಹೋತ್ಸವವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಉದ್ದೇಶಿಸಿ ಭಾಷಣ ಮಾಡಿದರು. ಪರಮಪೂಜ್ಯ ಗುರು ಹರಿ ಮಹಂತ ಸ್ವಾಮಿ ಮಹಾರಾಜ್, ಪೂಜ್ಯ ಸಾಧು ಸಂತರು ಮತ್ತು ಸತ್ಸಂಗಿ ಕುಟುಂಬದ ಸದಸ್ಯರು ಮತ್ತು ಇತರೆ ಗಣ್ಯರು ಮತ್ತು ಪ್ರತಿನಿಧಿಗಳನ್ನು ಅವರು ಸ್ವಾಗತಿಸಿದರು. ಕಾರ್ಯಕರ್ತರ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಶ್ರೀ ಮೋದಿ ಅವರು ಭಗವಾನ್ ಸ್ವಾಮಿ ನಾರಾಯಣರ ಪಾದಗಳಿಗೆ ನಮಸ್ಕರಿಸಿ, ಇಂದು ಪ್ರಮುಖ್ ಸ್ವಾಮಿ ಮಹಾರಾಜರ 103ನೇ ಜನ್ಮದಿನವೂ ಆಗಿದೆ. ಭಗವಾನ್ ಸ್ವಾಮಿ ನಾರಾಯಣರ ಬೋಧನೆಗಳು, ಪ್ರಮುಖ ಸ್ವಾಮಿ ಮಹಾರಾಜರ ಸಂಕಲ್ಪಗಳು ಪರಮ ಪೂಜ್ಯ ಗುರು ಹರಿಮಹಂತ ಸ್ವಾಮಿ ಮಹಾರಾಜರ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಇಂದು ಫಲ ನೀಡುತ್ತಿವೆ. ಯುವಕರು ಮತ್ತು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಸುಮಾರು 1 ಲಕ್ಷ ಕಾರ್ಯಕರ್ತರು ಸೇರಿದಂತೆ ಇಂತಹ ಬೃಹತ್ ಕಾರ್ಯಕ್ರಮವನ್ನು ವೀಕ್ಷಿಸುತ್ತಿರುವುದು ಸಂತಸ ತಂದಿದೆ. ಸ್ಥಳದಲ್ಲಿ ದೈಹಿಕವಾಗಿ ಇಲ್ಲದಿದ್ದರೂ, ಈ ಕಾರ್ಯಕ್ರಮದ ಶಕ್ತಿಯನ್ನು ಅನುಭವಿಸಬಹುದಾಗಿದೆ. ಮಹಾರಥೋತ್ಸವದಲ್ಲಿ ಭಾಗಿಯಾಗಿರುವ ಪರಮಪೂಜ್ಯ ಗುರು ಹರಿಮಹಾಂತ ಸ್ವಾಮಿ ಮಹಾರಾಜರು, ಸಕಲ ಸಾಧು ಸಂತರಿಗೆ ಅವರು ಶುಭ ಕೋರಿದರು.