ಕಾಶಿ ಸಂಸದ್ ಸಾಂಸ್ಕೃತಿಕ ಮಹೋತ್ಸವ 2023 ರ ಸಮಾರೋಪ ಸಮಾರಂಭದಲ್ಲಿ ಮತ್ತು ವಾರಣಾಸಿಯಲ್ಲಿ ಅಟಲ್ ಆವಾಸಿಯಾ ವಿದ್ಯಾಲಯಗಳ ಸಮರ್ಪಣೆಯಲ್ಲಿ ಪ್ರಧಾನಮಂತ್ರಿ ಭಾಷಣದ ಕನ್ನಡ ಅನುವಾದ

September 23rd, 08:22 pm

ಭಗವಾನ್ ಶಿವನ ಆಶೀರ್ವಾದದಿಂದ, ಕಾಶಿಯ ಖ್ಯಾತಿ ಇಂದು ಹೊಸ ಎತ್ತರವನ್ನು ತಲುಪುತ್ತಿದೆ. ಜಿ 20 ಶೃಂಗಸಭೆಯ ಮೂಲಕ ಭಾರತವು ವಿಶ್ವ ವೇದಿಕೆಯಲ್ಲಿ ತನ್ನ ಧ್ವಜವನ್ನು ಎತ್ತರಕ್ಕೆ ಏರಿಸಿದೆ, ಆದರೆ ಕಾಶಿ ಬಗ್ಗೆ ಚರ್ಚೆ ವಿಶೇಷವಾಗಿದೆ. ಕಾಶಿಯ ಸೇವೆ, ಪರಿಮಳ, ಸಂಸ್ಕೃತಿ ಮತ್ತು ಸಂಗೀತ... ಜಿ 20 ಗೆ ಅತಿಥಿಯಾಗಿ ಕಾಶಿಗೆ ಬಂದ ಪ್ರತಿಯೊಬ್ಬರೂ ಅದನ್ನು ತಮ್ಮ ನೆನಪುಗಳಲ್ಲಿ ತಮ್ಮೊಂದಿಗೆ ತೆಗೆದುಕೊಂಡು ಹೋದರು. ಭಗವಾನ್ ಶಿವನ ಆಶೀರ್ವಾದದಿಂದಾಗಿ ಜಿ 20 ಯ ನಂಬಲಾಗದ ಯಶಸ್ಸು ಸಾಧ್ಯವಾಗಿದೆ ಎಂದು ನಾನು ನಂಬುತ್ತೇನೆ.

ಉತ್ತರ ಪ್ರದೇಶದ ವಾರಾಣಸಿಯಲ್ಲಿ ಕಾಶಿ ಸಂಸದ್ ಸಾಂಸ್ಕೃತಿಕ ಮಹೋತ್ಸವ 2023 ರ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ

September 23rd, 04:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯ ರುದ್ರಾಕ್ಷಿ ಅಂತಾರಾಷ್ಟ್ರೀಯ ಸಹಕಾರ ಮತ್ತು ಸಮಾವೇಶ ಕೇಂದ್ರದಲ್ಲಿ ಕಾಶಿ ಸಂಸದ್ ಸಾಂಸ್ಕೃತಿಕ ಮಹೋತ್ಸವ 2023 ರ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸುಮಾರು 1115 ಕೋಟಿ ರೂಪಾಯಿ ವೆಚ್ಚದಲ್ಲಿ ಉತ್ತರ ಪ್ರದೇಶದಾದ್ಯಂತ ನಿರ್ಮಿಸಲಾದ 16 ಅಟಲ್ ಅವಾಸಿಯ ವಿದ್ಯಾಲಯಗಳನ್ನು ಪ್ರಧಾನಿಯವರು ಉದ್ಘಾಟಿಸಿದರು. ಅವರು ಕಾಶಿ ಸಂಸದ್ ಖೇಲ್ ಪ್ರತಿಯೋಗಿತಾ ನೋಂದಣಿ ಪೋರ್ಟಲ್ ಗೆ ಚಾಲನೆ ನೀಡಿದರು. ಕಾಶಿ ಸಂಸದ್ ಸಾಂಸ್ಕೃತಿಕ ಮಹೋತ್ಸವದ ವಿಜೇತರಿಗೆ ಬಹುಮಾನ ವಿತರಿಸಿದರು. ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಮಂತ್ರಿಯವರು ಅಟಲ್ ಅವಾಸಿಯಾ ವಿದ್ಯಾಲಯಗಳ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಸೆಪ್ಟೆಂಬರ್ 23ರಂದು ವಾರಣಾಸಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿಗಳು

September 21st, 10:16 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಸೆಪ್ಟೆಂಬರ್ 23ರಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1:30ಕ್ಕೆ ಪ್ರಧಾನಮಂತ್ರಿಯವರು ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 3:15ಕ್ಕೆ ಪ್ರಧಾನಮಂತ್ರಿಯವರು `ರುದ್ರಾಕ್ಷಿ ಅಂತಾರಾಷ್ಟ್ರೀಯ ಸಹಕಾರ ಮತ್ತು ಸಮಾವೇಶ ಕೇಂದ್ರ’ಕ್ಕೆ ತಲುಪಲಿದ್ದು, `ಕಾಶಿ ಸಂಸದ್ ಸಾಂಸ್ಕೃತಿಕ ಮಹೋತ್ಸವ-2023’ರ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಉತ್ತರ ಪ್ರದೇಶದಾದ್ಯಂತ ನಿರ್ಮಿಸಲಾದ 16 ಅಟಲ್ ಆವಾಸಿಯಾ ವಿದ್ಯಾಲಯವನ್ನು ಉದ್ಘಾಟಿಸಲಿದ್ದಾರೆ.